< 에스겔 44 >
1 그가 나를 데리고 성소 동향한 바깥문에 돌아오시니 그 문이 닫히었더라
ಆಮೇಲೆ ಅವನು ನನ್ನನ್ನು ಪೂರ್ವದಿಕ್ಕಿಗೆ ಅಭಿಮುಖವಾದ ಹೊರಗಿನ ಪರಿಶುದ್ಧಸ್ಥಳದ ಬಾಗಿಲಿನ ಮಾರ್ಗವಾಗಿ ಮತ್ತೆ ಬರಮಾಡಿದನು. ಅದು ಮುಚ್ಚಿತ್ತು.
2 여호와께서 내게 이르시되 이 문은 닫고 다시 열지 못할지니 아무 사람도 그리로 들어 오지 못할 것은 이스라엘 하나님 나 여호와가 그리로 들어 왔음이라 그러므로 닫아 둘지니라
ಆಮೇಲೆ ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಈ ಬಾಗಿಲು ಮುಚ್ಚೇ ಇರಬೇಕು. ಇದು ತೆರೆಯಬಾರದು. ಯಾವ ಮನುಷ್ಯನೂ ಇದರಿಂದ ಪ್ರವೇಶಿಸಬಾರದು. ಏಕೆಂದರೆ ಇಸ್ರಾಯೇಲರ ಯೆಹೋವ ದೇವರು ಇದರಿಂದ ಪ್ರವೇಶಿಸಿದ್ದಾರೆ. ಆದ್ದರಿಂದ ಇದು ಮುಚ್ಚಿರಬೇಕು.
3 왕은 왕인 까닭에 안 길로 이 문 현관으로 들어와서 거기 앉아서 나 여호와 앞에서 음식을 먹고 그 길로 나갈 것이니라
ಇದು ಪ್ರಭುವಿಗಾಗಿ ಇದೆ; ಪ್ರಭುವು ಅವರೊಳಗೆ ಕುಳಿತುಕೊಂಡು, ಯೆಹೋವ ದೇವರ ಮುಂದೆ ರೊಟ್ಟಿಯನ್ನು ತಿನ್ನಬೇಕು. ಆತನು ಆ ಬಾಗಿಲಿನ ಪಡಸಾಲೆಯ ಮೂಲಕ ಪ್ರವೇಶಿಸಿ ಅದೇ ಮಾರ್ಗವಾಗಿ ಹೊರಗೆ ಹೋಗಬೇಕು.”
4 그가 또 나를 데리고 북문을 통하여 전 앞에 이르시기로 내가 보니 여호와의 영광이 여호와의 전에 가득한지라 내가 얼굴을 땅에 대고 엎드린대
ಆಮೇಲೆ ಅವನು ನನ್ನನ್ನು ಉತ್ತರದ ಬಾಗಿಲಿನ ಮಾರ್ಗವಾಗಿ ಆಲಯದ ಮುಂದೆ ಕರೆದುಕೊಂಡು ಹೋದನು. ನಾನು ನೋಡಿದೆ ಯೆಹೋವ ದೇವರ ಮಹಿಮೆಯು ಯೆಹೋವ ದೇವರ ಆಲಯವನ್ನು ತುಂಬಿಕೊಂಡಿತು, ನಾನು ಬೋರಲು ಬಿದ್ದೆನು.
5 여호와께서 내게 이르시되 인자야 너는 전심으로 주목하여 내가 네게 말하는바 여호와의 전의 모든 규례와 모든 율례를 귀로 듣고 또 전의 입구와 성소의 출구를 전심으로 주의하고
ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ, “ಮನುಷ್ಯಪುತ್ರನೇ, ಯೆಹೋವ ದೇವರ ಆಲಯದ ಸಕಲ ನೇಮನಿಷ್ಠೆಗಳ ವಿಷಯವಾಗಿಯೂ ನಿಯಮದ ವಿಷಯವಾಗಿಯೂ ನಾನು ನಿನಗೆ ಹೇಳುವುದನ್ನೆಲ್ಲಾ ನೀನು ಕಿವಿಯಾರೆ ಕೇಳಿ, ಕಣ್ಣಾರೆ ಕಂಡು ಮನದಟ್ಟು ಮಾಡಿಕೋ. ಆಲಯದೊಳಗಿನ ಪ್ರವೇಶವನ್ನೂ ಪರಿಶುದ್ಧಸ್ಥಳದ ಪ್ರತಿಯೊಂದು ಹಾದುಹೋಗುಗಳನ್ನೂ ಗಮನಿಸು.
6 너는 패역한 자 곧 이스라엘 족속에게 이르기를 주 여호와의 말씀이 이스라엘 족속아 너희의 모든 가증한 일이 족하니라
ತಿರುಗಿಬೀಳುವ ಇಸ್ರಾಯೇಲನ ಮನೆತನದವರಿಗೆ ನೀನು ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಸ್ರಾಯೇಲಿನ ಮನೆತನದವರೇ, ನೀವು ನಿಮ್ಮ ಎಲ್ಲಾ ಅಸಹ್ಯಗಳನ್ನು ಸಾಕುಮಾಡಿರಿ.
7 대저 너희가 마음과 몸에 할례 받지 아니한 이방인을 데려오고 떡과 기름과 피를 드릴 때에 그들로 내 성소 안에 있게 하여 내 전을 더럽히므로 너희의 모든 가증한 일 외에 그들이 내 언약을 위반케 하는 것이 되었으며
ಅವುಗಳಲ್ಲಿ ನೀವು ನನ್ನ ರೊಟ್ಟಿಯನ್ನೂ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವಾಗ ನಿಮ್ಮ ಎಲ್ಲಾ ಅಸಹ್ಯಗಳಿಗೋಸ್ಕರ ನನ್ನ ಒಡಂಬಡಿಕೆಯನ್ನು ಮೀರುವಂಥ ಹೃದಯದಲ್ಲಿಯೂ ಶರೀರದಲ್ಲಿಯೂ ಸುನ್ನತಿಯಿಲ್ಲದಂಥ ಪರಕೀಯರನ್ನು ನನ್ನ ಪರಿಶುದ್ಧ ಸ್ಥಳಕ್ಕೆ ಕರೆತಂದು ನನ್ನ ಆಲಯವನ್ನು ಅಪವಿತ್ರಪಡಿಸಿದಿರಿ.
8 너희가 내 성물의 직분을 지키지 아니하고 내 성소에 사람을 두어 너희 직분을 대신 지키게 하였느니라
ನೀವು ನನ್ನ ಪರಿಶುದ್ಧ ವಸ್ತುಗಳನ್ನು ಕಾಯಲಿಲ್ಲ, ಬದಲಿಗೆ ಅನ್ಯದೇಶೀಯರನ್ನು ನನ್ನ ಪರಿಶುದ್ಧ ಸ್ಥಳದಲ್ಲಿ ನನ್ನ ವಸ್ತುಗಳ ಮೇಲೆ ಪಾರುಪತ್ಯಗಾರರನ್ನಾಗಿ ನೇಮಿಸಿದಿರಿ.
9 나 주 여호와가 말하노라 이스라엘 족속 중에 있는 이방인 중에 마음과 몸이 할례를 받지 아니한 이방인은 내 성소에 들어오지 못하리라
ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಹೃದಯದಲ್ಲಿಯೂ ಶರೀರದಲ್ಲಿಯೂ ಸುನ್ನತಿಯಿಲ್ಲದ ಯಾವೊಬ್ಬ ಪರಕೀಯನೂ ಇಸ್ರಾಯೇಲರೊಳಗಿರುವ ಯಾವೊಬ್ಬ ಅಪರಿಚಿತನೂ ನನ್ನ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಬಾರದು.
10 이스라엘 족속이 그릇하여 나를 떠날 때에 레위 사람도 그릇하여 그 우상을 좇아 나를 멀리 떠났으니 그 죄악을 담당하리라
“‘ಇಸ್ರಾಯೇಲರು ತಪ್ಪಿಸಿಕೊಂಡು ನನ್ನಿಂದ ಅಗಲಿ, ತಮ್ಮ ವಿಗ್ರಹಗಳ ಕಡೆಗೆ ತಿರುಗಿಕೊಂಡ ವೇಳೆಯಲ್ಲಿ ನನಗೆ ದೂರವಾಗಿ ಹೋದ ಲೇವಿಯರೂ ಸಹ ತಮ್ಮ ಪಾಪಗಳನ್ನು ಹೊರುವರು.
11 그러나 그들이 내 성소에서 수종들어 전문을 맡을 것이며 전에서 수종들어 백성의 번제의 희생과 및 다른 희생을 잡아 앞에 서서 수종들게 되리라
ಆದರೂ ಅವರು ನನ್ನ ಪರಿಶುದ್ಧ ಸ್ಥಳದಲ್ಲಿ ಸೇವಿಸುವವರಾಗಿರುವರು. ಆಲಯದ ಬಾಗಿಲುಗಳ ಮೇಲ್ವಿಚಾರವನ್ನು ಹೊಂದಿ ಆಲಯಕ್ಕೆ ಸೇವೆಮಾಡುವರು. ಅವರು ಜನರಿಗೋಸ್ಕರ ದಹನಬಲಿಯನ್ನೂ ಸಮಾಧಾನ ಬಲಿಯನ್ನೂ ಮಾಡಿ ಅವರಿಗೆ ಸೇವೆ ಮಾಡುವ ಹಾಗೆ ಅವರ ಮುಂದೆ ನಿಲ್ಲುವರು.
12 나 주 여호와가 말하노라 그들이 전에 백성을 위하여 그 우상 앞에서 수종들어서 이스라엘 족속으로 죄악에 거치게 하였으므로 내가 내 손을 들어 쳐서 그들로 그 죄악을 담당하여
ಆದರೆ ಅವರು ತಮ್ಮ ವಿಗ್ರಹಗಳ ಮುಂದೆ ಜನರಿಗಾಗಿ ಸೇವೆಮಾಡಿ ಇಸ್ರಾಯೇಲಿನ ಮನೆತನದವರಿಗೆ ಪಾಪದ ಆತಂಕವಾದದ್ದರಿಂದ, ನಾನು ಅವರಿಗೆ ವಿರುದ್ಧವಾಗಿ ನನ್ನ ಕೈಯನ್ನು ಚಾಚಿದ್ದೇನೆ. ಅವರು ತಮ್ಮ ಪಾಪವನ್ನು ಹೊರುವರೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
13 내게 가까이 나아와 제사장의 직분을 행치 못하게 하며 또 내 성물 곧 지성물에 가까이 오지 못하게 하리니 그들이 자기의 수욕과 그 행한바 가증한 일을 담당하리라
ಅವರು ಯಾಜಕರಾಗಿ ನನ್ನನ್ನು ಸಮೀಪಿಸದೆ ಮಹಾಪರಿಶುದ್ಧ ಸ್ಥಳದಲ್ಲಿ ನನ್ನ ಪರಿಶುದ್ಧವಾದವುಗಳಲ್ಲಿ ಒಂದನ್ನಾದರೂ ಸಮೀಪಿಸದೆ, ತಮ್ಮ ನಾಚಿಕೆಯನ್ನೂ ತಾವು ಮಾಡಿದ ಅಸಹ್ಯಗಳನ್ನೂ ಹೊರುವರು.
14 그러나 내가 그들을 세워 전을 수직하게 하고 전에 모든 수종드는 일과 그 가운데서 행하는 모든 일을 맡기리라
ಆದರೆ ನಾನು ಅವರನ್ನು ಆಲಯದ ಎಲ್ಲಾ ಸೇವೆಗೋಸ್ಕರವೂ ಅದರಲ್ಲಿ ಮಾಡುವಂತಹ ಎಲ್ಲವುಗಳಿಗೋಸ್ಕರವೂ ಆಲಯದ ಕಾರ್ಯಗಳನ್ನು ನೋಡಿಕೊಳ್ಳುವವರನ್ನಾಗಿ ಮಾಡುವೆನು.
15 이스라엘 족속이 그릇하여 나를 떠날 때에 사독의 자손 레위 사람 제사장들은 내 성소의 직분을 지켰은즉 그들은 내게 가까이 나아와 수종을 들되 내 앞에 서서 기름과 피를 내게 드릴지니라 나 주 여호와의 말이니라
“‘ಆದರೆ ಇಸ್ರಾಯೇಲರು ನನ್ನನ್ನು ಬಿಟ್ಟುಹೋದಾಗ ನನ್ನ ಪರಿಶುದ್ಧಸ್ಥಳದ ಕಾಯಿದೆಯನ್ನು ಪಾಲಿಸಿದ ಚಾದೋಕನ ಮಕ್ಕಳಾಗಿರುವ ಲೇವಿಯರಾದ ಯಾಜಕರೂ ಇವರು ನನಗೆ ಸೇವೆಮಾಡುವಂತೆ ನನ್ನ ಸಮೀಪಕ್ಕೆ ಬಂದು, ನನ್ನ ಮುಂದೆ ನಿಂತು, ನನಗೆ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವರೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
16 그들이 내 성소에 들어오며 또 내 상에 가까이 나아와 내게 수종들어 나의 맡긴 직분을 지키되
ಇವರು ಮಾತ್ರ ನನ್ನ ಪರಿಶುದ್ಧ ಸ್ಥಳವನ್ನು ಪ್ರವೇಶಿಸಿ, ಇವರು ಮಾತ್ರ ನನಗೆ ಸೇವೆ ಮಾಡುವುದಕ್ಕಾಗಿ ನನ್ನ ಮೇಜಿನ ಬಳಿಗೆ ಬರುವರು ಮತ್ತು ನನಗೆ ಕಾವಲುಗಾರರಾಗಿ ಸೇವೆ ಸಲ್ಲಿಸಬೇಕು.
17 그들이 안 뜰 문에 들어올 때에나 안뜰 문과 전 안에서 수종들 때에는 양털 옷을 입지 말고 가는 베 옷을 입을 것이니
“‘ಅವರು ಒಳಗಿನ ಅಂಗಳಗಳ ಬಾಗಿಲನ್ನು ಪ್ರವೇಶಿಸುವಾಗ ನಾರಿನ ವಸ್ತ್ರಗಳನ್ನು ಧರಿಸಿಕೊಳ್ಳಬೇಕು. ಅವರು ಒಳಗಿನ ಅಂಗಳದ ಬಾಗಿಲುಗಳಲ್ಲಿಯೂ ಒಳಗಡೆಯೂ ಸೇವಿಸುತ್ತಿರುವಾಗ ಅವರ ಮೇಲೆ ಉಣ್ಣೆಯ ಉಡುಪೂ ಇರಕೂಡದು.
18 가는 베 관을 머리에 쓰며 가는 베 바지를 입고 땀 나게 하는 것으로 허리를 동이지 말 것이며
ಅವರ ತಲೆಗಳ ಮೇಲೆ ನಾರಿನ ಮುಂಡಾಸಗಳೂ, ಅವರ ಸೊಂಟಗಳ ಮೇಲೆ ನಾರಿನ ಒಳಉಡುಪುಗಳೂ ಇರಬೇಕು. ಅವರು ಬೆವರು ಬರುವಂಥವುಗಳನ್ನು ಕಟ್ಟಿಕೊಳ್ಳಬಾರದು.
19 그들이 바깥 뜰 백성에게로 나갈 때에는 수종드는 옷을 벗어 거룩한 방에 두고 다른 옷을 입을지니 이는 그 옷으로 백성을 거룩케 할까 함이니라
ಇದಲ್ಲದೆ ಅವರು ಹೊರಗಿನ ಅಂಗಳಕ್ಕೆ ತೀರಾ ಹೊರಗಿನ ಅಂಗಳಕ್ಕೆ ಜನರ ಬಳಿಗೆ ಹೋಗುವಾಗ ತಾವು ಸೇವೆಮಾಡಿದ ತಮ್ಮ ವಸ್ತ್ರಗಳನ್ನು ತೆಗೆದು ಪರಿಶುದ್ಧ ಕೊಠಡಿಗಳಲ್ಲಿ ಇಟ್ಟು ಬೇರೆ ವಸ್ತ್ರಗಳನ್ನು ಧರಿಸಿಕೊಳ್ಳಬೇಕು. ತಮ್ಮ ವಸ್ತ್ರಗಳಿಂದ ಜನರನ್ನು ಪರಿಶುದ್ಧಗೊಳಿಸಬಾರದು.
20 그들은 또 머리털을 밀지도 말며 머리털을 길게 자라게도 말고 그 머리털을 깎기만 할 것이며
“‘ಅವರು ತಮ್ಮ ತಲೆಗಳನ್ನು ಬೋಳಿಸಿಕೊಳ್ಳದೆ ಉದ್ದಕೂದಲನ್ನು ಬೆಳೆಸದೆ ತಮ್ಮ ತಲೆ ಕೂದಲುಗಳನ್ನು ಕತ್ತರಿಸಬೇಕು.
21 아무 제사장이든지 안 뜰에 들어갈 때에는 포도주를 마시지 말 것이며
ಯಾವ ಯಾಜಕನೇ ಆಗಲಿ, ಒಳಗಿನ ಅಂಗಳದಲ್ಲಿ ಪ್ರವೇಶಿಸುವಾಗ ದ್ರಾಕ್ಷಾರಸವನ್ನು ಕುಡಿಯಬಾರದು.
22 과부나 이혼한 여인에게 장가 들지 말고 오직 이스라엘 족속의 처녀나 혹시 제사장의 과부에게 장가 들 것이며
ಯಾಜಕರು ವಿಧವೆಯನ್ನಾಗಲಿ ಗಂಡನಿಂದ ಬಿಡಲಾದವಳನ್ನಾಗಲಿ ಮದುವೆಯಾಗಬಾರದು; ಆದರೆ ಇಸ್ರಾಯೇಲ್ ಸಂತಾನದ ಕನ್ಯೆಯನ್ನಾಗಲಿ, ಯಾಜಕನ ವಿಧವೆಯನ್ನಾಗಲಿ ಮದುವೆಮಾಡಿಕೊಳ್ಳಲಿ.
23 내 백성에게 거룩한 것과 속된 것의 구별을 가르치며 부정한 것과 정한 것을 분별하게 할 것이며
ಅವರು ನನ್ನ ಜನರಿಗೆ ಪರಿಶುದ್ಧವಾದದ್ದಕ್ಕೂ ಅಪವಿತ್ರವಾದದ್ದಕ್ಕೂ ಇರುವ ವ್ಯತ್ಯಾಸವನ್ನು ಬೋಧಿಸಿ, ಅವರಿಗೆ ಶುದ್ಧಾಶುದ್ಧ ವ್ಯತ್ಯಾಸವನ್ನೂ ವಿವರಿಸಬೇಕು.
24 송사하는 일을 재판하되 내 규례대로 재판할 것이며 내 모든 정한 절기에는 내 법도와 율례를 지킬 것이며 또 내 안식일을 거룩케 하며
“‘ವ್ಯಾಜ್ಯವಾಗುವಾಗ ಅದನ್ನು ತೀರಿಸಲು ಯಾಜಕರು ನನ್ನ ನ್ಯಾಯಾನುಸಾರವಾಗಿ ನ್ಯಾಯಾಧಿಪತಿಗಳಾಗಿ ನ್ಯಾಯತೀರಿಸಲಿ. ಅವರು ನನ್ನ ತೀರ್ಪುಗಳನ್ನೂ, ನನ್ನ ನಿಯಮಗಳನ್ನೂ ನಾನು ನೇಮಿಸಿದ ಹಬ್ಬಗಳಲ್ಲಿಯೂ ನನ್ನ ಸಬ್ಬತ್ ದಿನಗಳಲ್ಲಿಯೂ ಪರಿಶುದ್ಧವಾಗಿ ಪಾಲಿಸಬೇಕು.
25 시체를 가까이하여 스스로 더럽히지 못할 것이로되 부모나 자녀나 형제나 시집 가지 아니한 자매를 위하여는 더럽힐 수 있으며
“‘ಯಾಜಕರು ಸತ್ತ ಮನುಷ್ಯರ ಬಳಿಗೆ ಬಂದು ಅಶುದ್ಧರಾಗಬಾರದು. ಆದರೆ ತಂದೆತಾಯಿ, ಮಗ, ಮಗಳು, ಸಹೋದರ, ಗಂಡನಿಲ್ಲದ ಸಹೋದರಿ, ಇವರಿಗೋಸ್ಕರ ಅವರು ಅಶುದ್ಧರಾಗಬಹುದು.
26 이런 자는 스스로 정결케 한 후에 칠일을 더 지낼 것이요
ಅವನು ಶುದ್ಧನಾದ ಮೇಲೆ ಅವನಿಗೆ ಏಳು ದಿವಸಗಳನ್ನು ಪ್ರತ್ಯೇಕಿಸಬೇಕು.
27 성소에 수종들려 하여 안 뜰과 성소에 들어갈 때에는 속죄제를 드릴지니라 나 주 여호와의 말이니라
ಅವನು ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವುದಕ್ಕೋಸ್ಕರ ಒಳಗಿನ ಅಂಗಳದ ಪರಿಶುದ್ಧ ಸ್ಥಳಕ್ಕೆ ಬರುವ ದಿನದಲ್ಲಿ ತನ್ನ ಪಾಪ ಪರಿಹಾರಕ ಬಲಿಯನ್ನು ಅರ್ಪಿಸಬೇಕೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
28 그들은 기업이 있으리니 내가 곧 그 기업이라 너희는 이스라엘 가운데서 그들에게 산업을 주지 말라 나는 그 산업이 됨이니라
“‘ಅದು ಅವರಿಗೆ ಬಾಧ್ಯತೆಯಾಗಿರುವುದು; ನಾನೇ ಅವರಿಗೆ ಬಾಧ್ಯನಾಗಿರುವೆನು. ನೀವು ಇಸ್ರಾಯೇಲಿನಲ್ಲಿ ಅವರಿಗೆ ಸ್ವಾಸ್ತ್ಯವನ್ನು ಕೊಡಬಾರದು. ಏಕೆಂದರೆ ನಾನೇ ಅವರಿಗೆ ಸ್ವಾಸ್ತ್ಯವಾಗಿರುವೆನು.
29 그들은 소제와 속죄제와 속건제의 제물을 먹을지니 이스라엘 중에서 구별하여 드리는 물건을 다 그들에게 돌리며
ಧಾನ್ಯ ಸಮರ್ಪಣೆಯನ್ನು ದೋಷಪರಿಹಾರ ಬಲಿಯನ್ನೂ ಪ್ರಾಯಶ್ಚಿತ್ತ ಬಲಿಯನ್ನೂ ಅವರು ತಿನ್ನಬೇಕು. ಇಸ್ರಾಯೇಲಿನಲ್ಲಿ ಯೆಹೋವ ದೇವರಿಗೆ ಪ್ರತಿಷ್ಠೆ ಮಾಡಿದ್ದೆಲ್ಲವೂ ಅವರಿಗೆ ಸಲ್ಲಬೇಕು.
30 또 각종 처음 익은 열매와 너희 모든 예물 중에 각종 거제 제물을 다 제사장에게 돌리고 너희가 또 첫 밀가루를 제사장에게 주어 그들로 네 집에 복이 임하도록 하게 하라
ಇದಲ್ಲದೆ ಎಲ್ಲಾ ಪ್ರಥಮ ಫಲಗಳಲ್ಲಿ ಉತ್ಕೃಷ್ಟವಾದದ್ದೂ ನೀವು ನನಗೆ ಪ್ರತ್ಯೇಕಿಸಿ ಸಮರ್ಪಿಸಿದ ಎಲ್ಲಾ ಪದಾರ್ಥಗಳು ಯಾಜಕನದ್ದಾಗಬೇಕು. ನಿಮ್ಮ ಮನೆಯು ಆಶೀರ್ವಾದಕ್ಕೆ ನೆಲೆಯಾಗುವಂತೆ ನೀವು ಮೊದಲನೆಯ ಹಿಟ್ಟನ್ನು ನೀವು ಯಾಜಕರಿಗೆ ಕೊಡತಕ್ಕದ್ದು.
31 무릇 새나 육축의 스스로 죽은 것이나 찢긴 것은 다 제사장이 먹지 못할 것이니라
ಯಾಜಕರು ತಾನಾಗಿ ಸತ್ತುಬಿದ್ದ ಅಥವಾ ಕಾಡುಮೃಗದಿಂದ ಕೊಲ್ಲಲಾದ ಪಕ್ಷಿಯನ್ನಾಗಲಿ, ಪ್ರಾಣಿಯನ್ನಾಗಲಿ ತಿನ್ನಬಾರದು.