< 창세기 40 >

1 그 후에 애굽 왕의 술 맡은 자와 떡굽는 자가 그 주 애굽 왕에게 범죄한지라
ಈ ಸಂಗತಿಗಳಾದ ಮೇಲೆ ಐಗುಪ್ತ ದೇಶದ ಅರಸನಾದ ಫರೋಹನಿಗೆ ಪಾನಗಳನ್ನು ಕೊಡುವವನೂ, ಆಹಾರಗಳನ್ನು ಮಾಡಿ ಕೊಡುವವನೂ ತಮ್ಮ ಅರಸನಿಗೆ ವಿರೋಧವಾಗಿ ಅಪರಾಧ ಮಾಡಿದರು.
2 바로가 그 두 관원장 곧 술 맡은 관원장과 떡 굽는 관원장에게 노하여
ಫರೋಹನು ಆ ಇಬ್ಬರು ಉದ್ಯೋಗಸ್ಥರ ಮೇಲೆ, ಅಂದರೆ ಪಾನದಾಯಕರಲ್ಲಿ ಮುಖ್ಯಸ್ಥನ ಮೇಲೆಯೂ ಅಡಿಗೆ ಭಟ್ಟರಲ್ಲಿ ಮುಖ್ಯಸ್ಥನ ಮೇಲೆಯೂ ಕೋಪಿಸಿಕೊಂಡು,
3 그들을 시위대장의 집 안에 있는 옥에 가두니 곧 요셉의 갇힌 곳이라
ಅವರನ್ನು ಮೈಗಾವಲಿನವರ ಅಧಿಪತಿಯ ಮನೆಯೊಳಗೆ ಕಾವಲಲ್ಲಿರಿಸಿದನು. ಅದು ಯೋಸೇಫನು ಬಂಧಿಯಾಗಿದ್ದ ಸೆರೆಮನೆಯಾಗಿತ್ತು
4 시위대장이 요셉으로 그들에게 수종하게 하매 요셉이 그들을 섬겼더라 그들이 갇힌지 수일이라
ಸೆರೆಮನೆಯ ಅಧಿಪತಿಯು ಯೋಸೇಫನನ್ನು ಅವರ ಉಪಚಾರಕ್ಕೆ ನೇಮಿಸಿದ್ದರಿಂದ ಯೋಸೇಫನು ಅವರಿಗೆ ಸೇವೆ ಮಾಡುವವನಾದನು. ಹೀಗೆ ಅವರು ಕೆಲವು ಕಾಲ ಸೆರೆಯಲ್ಲಿದ್ದರು.
5 옥에 갇힌 애굽 왕의 술 맡은 자와 떡 굽는 자 두 사람이 하룻밤에 꿈을 꾸니 각기 몽조가 다르더라
ಐಗುಪ್ತ ಅರಸನು ಸೆರೆಯಲ್ಲಿ ಹಾಕಿಸಿದ್ದ ಪಾನದಾಯಕನಿಗೂ, ಅಡಿಗೆ ಭಟ್ಟನಿಗೂ, ಒಂದೇ ರಾತ್ರಿ ಕನಸುಬಿತ್ತು. ಅವರವರ ಕನಸಿಗೆ ಬೇರೆ ಬೇರೆ ಅರ್ಥವಿತ್ತು.
6 아침에 요셉이 들어가 보니 그들에게 근심 빛이 있는지라
ಬೆಳಿಗ್ಗೆ ಯೋಸೇಫನು ಅವರ ಬಳಿಗೆ ಬಂದಾಗ ಅವರು ಬಹು ಚಿಂತೆಯುಳ್ಳವರಾಗಿ ಕಾಣಿಸಿದರು.
7 요셉이 그 주인의 집에 자기와 함께 갇힌 바로의 관원장에게 묻되 당신들이 오늘 어찌하여 근심 빛이 있나이까?
ಅದನ್ನು ಅವನು ನೋಡಿ, “ನಿಮ್ಮ ಮುಖವು ಈ ಹೊತ್ತು ಏಕೆ ಕಳೆಗುಂದಿದೆ?” ಎಂದು ತನ್ನ ದಣಿಯ ಮನೆಯೊಳಗೆ ತನ್ನೊಂದಿಗೆ ಕಾವಲಲ್ಲಿದ್ದ ಫರೋಹನ ಉದ್ಯೋಗಸ್ಥರನ್ನು ಕೇಳಿದನು.
8 그들이 그에게 이르되 `우리가 꿈을 꾸었으나 이를 해석할 자가 없도다' 요셉이 그들에게 이르되 `해석은 하나님께 있지 아니하나이까? 청컨대 내게 고하소서'
ಅವರು ಅವನಿಗೆ, “ನಮಗೆ ಕನಸುಬಿತ್ತು. ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ” ಎಂದು ಹೇಳಲು ಯೋಸೇಫನು ಅವರಿಗೆ, “ಕನಸುಗಳ ಅರ್ಥವು ದೇವರಿಂದ ದೊರಕಬಹುದಲ್ಲವೇ? ದಯಮಾಡಿ ನಿಮ್ಮ ಕನಸನ್ನು ನನಗೆ ತಿಳಿಸಿರಿ” ಎಂದು ಹೇಳಿದನು.
9 술 맡은 관원장이 그 꿈을 요셉에게 말하여 가로되 `내가 꿈에 보니 내 앞에 포도나무가 있는데
ಆಗ ಪಾನದಾಯಕರಲ್ಲಿ ಮುಖ್ಯಸ್ಥನು ಯೋಸೇಫನಿಗೆ, “ನನ್ನ ಕನಸಿನಲ್ಲಿ ಒಂದು ದ್ರಾಕ್ಷಾಲತೆಯನ್ನು ನನ್ನ ಮುಂದೆ ಕಂಡೆನು.
10 그 나무에 세 가지가 있고 싹이 나서 꽃이 피고 포도송이가 익었고
೧೦ಅದಕ್ಕೆ ಮೂರು ದ್ರಾಕ್ಷಾಲತೆಯ ಕೊಂಬೆಗಳಿದ್ದವು. ಅದು ಚಿಗುರುತ್ತಲೇ ಹೂವುಗಳನ್ನು ಬಿಟ್ಟಿತು; ಆ ಹೂವುಗಳು ಗೊಂಚಲುಗಳಾಗಿ ಹಣ್ಣಾದವು.
11 내 손에 바로의 잔이 있기로 내가 포도를 따서 그 즙을 바로의 잔에 짜서 그 잔을 바로의 손에 드렸노라'
೧೧ಫರೋಹನ ಪಾನಪಾತ್ರೆಯು ನನ್ನ ಕೈಯಲ್ಲಿದ್ದದರಿಂದ ನಾನು ಆ ದ್ರಾಕ್ಷಿಯ ಗೊಂಚಲುಗಳನ್ನು ಕೊಯ್ದು ಪಾತ್ರೆಯಲ್ಲಿ ಹಿಂಡಿ ಪಾತ್ರೆಯನ್ನು ಫರೋಹನ ಕೈಗೆ ಒಪ್ಪಿಸಿದೆನು” ಎಂದು ಹೇಳಿದನು.
12 요셉이 그에게 이르되 `그 해석이 이러하니 세 가지는 사흘이라
೧೨ಅದಕ್ಕೆ ಯೋಸೇಫನು, “ಆ ಕನಸಿನ ಅರ್ಥವೇನೆಂದರೆ, ಆ ಮೂರು ದ್ರಾಕ್ಷಾಲತೆಯ ಕೊಂಬೆಗಳೇ ಮೂರು ದಿನಗಳು.
13 지금부터 사흘 안에 바로가 당신의 머리를 들고 당신의 전직을 회복하리니 당신이 이왕에 술 맡은 자가 되었을 때에 하던것 같이 바로의 잔을 그 손에 받들게 되리이다
೧೩ಈ ಹೊತ್ತಿಗೆ ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನನ್ನು ಮೇಲಕ್ಕೆ ಎತ್ತಿ, ನಿನ್ನ ಉದ್ಯೋಗಕ್ಕೆ ಪುನಃ ನಿನ್ನನ್ನು ನೇಮಿಸುವನು. ನೀನು ಮೊದಲು ಫರೋಹನ ಪಾನದಾಯಕನಾಗಿದ್ದು ಅವನ ಕೈಗೆ ಪಾನಪಾತ್ರೆಯನ್ನು ಒಪ್ಪಿಸುತ್ತಿದ್ದಂತೆಯೇ ಮುಂದೆಯೂ ಒಪ್ಪಿಸುವಿ.
14 당신이 득의하거든 나를 생각하고 내게 은혜를 베풀어서 내 사정을 바로에게 고하여 이 집에서 나를 건져내소서
೧೪ಆದರೆ ನೀನು ಸುಖದಿಂದಿರುವಾಗ ನನ್ನನ್ನು ಜ್ಞಾಪಕಮಾಡಿಕೊಂಡು ನನಗೆ ದಯೆ ತೋರಿಸಿ ಫರೋಹನಿಗೆ ನನ್ನ ಸಂಗತಿಯನ್ನು ತಿಳಿಸಿ ನನ್ನನ್ನು ಈ ಸೆರೆಯಿಂದ ಬಿಡಿಸಬೇಕು.
15 나는 히브리 땅에서 끌려온 자요 여기서도 옥에 갇힐 일은 행치 아니하였나이다'
೧೫ಏಕೆಂದರೆ ನಾನು ಇಬ್ರಿಯ ದೇಶದವನು. ಕೆಲವರು ನನ್ನನ್ನು ಕದ್ದು ಈ ದೇಶಕ್ಕೆ ತಂದರು. ಇಲ್ಲಿಯೂ ನಾನು ಯಾವ ತಪ್ಪು ಮಾಡದೆ ಸೆರೆಯಲ್ಲಿ ಬಿದ್ದಿರುವೆನು” ಅಂದನು.
16 떡 굽는 관원장이 그 해석이 길함을 보고 요셉에게 이르되 `나도 꿈에 보니 흰 떡 세 광주리가 내 머리에 있고
೧೬ಅವನು ಹೇಳಿದ ಅರ್ಥವು ಶುಭಕರವಾದದ್ದೆಂದು ಅಡಿಗೆಭಟ್ಟರಲ್ಲಿ ಮುಖ್ಯಸ್ಥನು ತಿಳಿದು ಯೋಸೇಫನಿಗೆ, ನಾನೂ ಕಂಡ ಕನಸನ್ನು ಹೇಳುತ್ತೇನೆ ಕೇಳು, “ನನಗೆ ಬಿದ್ದ ಕನಸಿನಲ್ಲಿ ಸೊಗಸಾದ ರೊಟ್ಟಿ ಪದಾರ್ಥಗಳು ತುಂಬಿದ್ದ ಮೂರು ಪುಟ್ಟಿಗಳು ನನ್ನ ತಲೆಯ ಮೇಲಿದ್ದವು.
17 그 윗광주리에 바로를 위하여 만든 각종 구운 식물이 있는데 새들이 내 머리의 광주리에서 그것을 먹더라'
೧೭ಮೇಲಿನ ಪುಟ್ಟಿಯಲ್ಲಿ ಫರೋಹನಿಗೋಸ್ಕರ ಎಲ್ಲಾ ವಿಧವಾದ ರೊಟ್ಟಿ ಪದಾರ್ಥಗಳು ಇದ್ದವು. ಪಕ್ಷಿಗಳು ಬಂದು ಅವುಗಳನ್ನು ನನ್ನ ತಲೆಯ ಮೇಲಿದ್ದ ಪುಟ್ಟಿಯೊಳಗಿಂದಲೇ ತಿಂದುಹಾಕಿದವು” ಎಂದು ಹೇಳಿದನು.
18 요셉이 대답하여 가로되 `그 해석은 이러하니 세 광주리는 사흘이라
೧೮ಅದಕ್ಕೆ ಯೋಸೇಫನು, “ನಿನ್ನ ಕನಸಿನ ಅರ್ಥವೇನೆಂದರೆ, ಆ ಮೂರು ಪುಟ್ಟಿಗಳೇ ಮೂರು ದಿನಗಳು.
19 지금부터 사흘 안에 바로가 당신의 머리를 끊고 당신을 나무에 달리니 새들이 당신의 고기를 뜯어 먹으리이다' 하더니
೧೯ಈ ಹೊತ್ತಿಗೆ ಮೂರು ದಿನಗಳೊಳಗೆ ಫರೋಹನು ನಿನ್ನ ತಲೆಯನ್ನು ತೆಗೆಸುವನು, ನಿನ್ನನ್ನು ಮರಕ್ಕೆ ತೂಗು ಹಾಕಿಸುವನು, ಪಕ್ಷಿಗಳು ಬಂದು ನಿನ್ನ ಮಾಂಸವನ್ನು ತಿಂದುಬಿಡುವವು” ಎಂದನು.
20 제 삼일은 바로의 탄일이라 바로가 모든 신하를 위하여 잔치할때에 술 맡은 관원장과 떡 굽는 관원장으로 머리를 그 신하 중에 들게 하니라
೨೦ಮೂರನೆಯ ದಿನದಲ್ಲಿ ಫರೋಹನ ಜನ್ಮ ದಿನವಾದುದರಿಂದ ಅವನು ತನ್ನ ಸೇವಕರೆಲ್ಲರಿಗೆ ಔತಣವನ್ನು ಮಾಡಿಸಿ ಮುಖ್ಯಪಾನದಾಯಕನನ್ನೂ ಮತ್ತು ಮುಖ್ಯ ಅಡಿಗೆಭಟ್ಟನನ್ನು ಬಿಡಿಸಿ ಸೇವಕರ ಮಧ್ಯದಲ್ಲಿ ನಿಲ್ಲಿಸಿದನು.
21 바로의 술 맡은 관원장은 전직을 회복하매 그가 잔을 바로의 손에 받들어 드렸고
೨೧ಪಾನದಾಯಕರ ಮುಖ್ಯಸ್ಥನನ್ನು ಪುನಃ ಅವನ ಉದ್ಯೋಗಕ್ಕೆ ನೇಮಿಸಿದನು. ಅವನು ಪಾನ ಪಾತ್ರೆಯನ್ನು ಫರೋಹನ ಕೈಗೆ ಕೊಡುವವನಾದನು.
22 떡 굽는 관원장은 매여 달리니 요셉이 그들에게 해석함과 같이 되었으나
೨೨ಆದರೆ ಮುಖ್ಯ ಅಡಿಗೆಭಟ್ಟನನ್ನು ಫರೋಹನು ಗಲ್ಲಿಗೆ ಹಾಕಿಸಿದನು. ಹೀಗೆ ಯೋಸೇಫನು ಹೇಳಿದಂತೆಯೇ ಆಯಿತು.
23 술 맡은 관원장이 요셉을 기억지 않고 잊었더라
೨೩ಆದಾಗ್ಯೂ ಮುಖ್ಯಪಾನದಾಯಕನು ಯೋಸೇಫನನ್ನು ನೆನಪುಮಾಡಿಕೊಳ್ಳದೆ ಅವನನ್ನು ಮರೆತುಬಿಟ್ಟನು.

< 창세기 40 >