< 히브리서 1 >

1 옛적에 선지자들로 여러 부분과 여러 모양으로 우리 조상들에게 말씀하신 하나님이
ದೇವರು ಪುರಾತನ ಕಾಲದಲ್ಲಿ ನಮ್ಮ ಪೂರ್ವಿಕರ ಸಂಗಡ ಪ್ರವಾದಿಗಳ ಮುಖಾಂತರ ಹಲವಾರು ವಿಧದಲ್ಲಿ, ಅನೇಕಸಾರಿ ಮಾತನಾಡಿದ್ದಾನೆ.
2 이 모든 날 마지막에 아들로 우리에게 말씀하셨으니 이 아들을 만유의 후사로 세우시고 또 저로 말미암아 모든 세계를 지으셨느니라 (aiōn g165)
ಆದರೆ ಈ ಅಂತ್ಯ ದಿನಗಳಲ್ಲಿ ನಮ್ಮ ಸಂಗಡ ಮಗನ ಮುಖಾಂತರ ಮಾತನಾಡಿದ್ದಾನೆ. ಆತನನ್ನು ಎಲ್ಲದಕ್ಕೂ ಬಾಧ್ಯಸ್ಥನನ್ನಾಗಿ ನೇಮಿಸಿದನು ಮತ್ತು ಆತನ ಮೂಲಕವೇ ಇಡೀ ವಿಶ್ವವನ್ನು ಉಂಟುಮಾಡಿದನು. (aiōn g165)
3 이는 하나님의 영광의 광채시요 그 본체의 형상이시라 그의 능력의 말씀으로 만물을 붙드시며 죄를 정결케 하는 일을 하시고 높은 곳에 계신 위엄의 우편에 앉으셨느니라
ಈತನು ದೇವರ ಮಹಿಮೆಯ ಪ್ರಕಾಶವೂ, ಆತನ ವ್ಯಕ್ತಿತ್ವದ ಪ್ರತಿರೂಪವೂ, ತನ್ನ ಶಕ್ತಿಯುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ಶುದ್ಧಿಮಾಡಿ, ಉನ್ನತದಲ್ಲಿರುವ ಮಹೋನ್ನತನಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.
4 저가 천사보다 얼마큼 뛰어남은 저희보다 더욱 아름다운 이름을 기업으로 얻으심이니
ಈತನು ದೇವದೂತರಿಗಿಂತಲೂ ಉನ್ನತನಾಗಿದ್ದು. ಅವರಿಗಿಂತ ಅತಿ ಶ್ರೇಷ್ಠವಾದ ಹೆಸರನ್ನು ಬಾಧ್ಯವಾಗಿ ಹೊಂದಿದನು.
5 하나님께서 어느 때에 천사 중 누구에게 네가 내 아들이라 오늘날 내가 너를 낳았다 하셨으며 또 다시 나는 그에게 아버지가 되고 그는 내게 아들이 되리라 하셨느뇨
ಹೇಗೆಂದರೆ, ದೇವರು ತನ್ನ ದೇವದೂತರೊಳಗೆ ಯಾರಿಗಾದರೂ ಎಂದಾದರೂ ಈ ರೀತಿಯಾಗಿ ಹೇಳಿದ್ದುಂಟೋ?, “ನೀನು ನನ್ನ ಮಗನು, ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.” “ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು.”
6 또 맏아들을 이끌어 세상에 다시 들어오게 하실 때에 하나님의 모든 천사가 저에게 경배할지어다 말씀하시며
ಇದಲ್ಲದೆ ದೇವರು ತನ್ನ ಚೊಚ್ಚಲು ಮಗನನ್ನು ಭೂಲೋಕಕ್ಕೆ ತಿರುಗಿ ಬರಮಾಡುವಾಗ “ದೇವದೂತರೆಲ್ಲರೂ ಆತನನ್ನು ಆರಾಧಿಸಬೇಕು” ಎಂದು ಆಜ್ಞಾಪಿಸಿದ್ದಾನೆ.
7 또 천사들에 관하여는 그는 그의 천사들을 바람으로, 그의 사역자들을 불꽃으로 삼으시느니라 하셨으되
ದೇವದೂತರ ವಿಷಯದಲ್ಲಿ, “ದೇವರು ತನ್ನ ದೂತರನ್ನು ಗಾಳಿಯನ್ನಾಗಿಯೂ, ತನ್ನ ಸೇವಕರನ್ನು ಅಗ್ನಿಜ್ವಾಲೆಯನ್ನಾಗಿಯೂ ಮಾಡುತ್ತಾನೆ” ಎಂದು ಹೇಳಿದ್ದಾನೆ.
8 아들에 관하여는 하나님이여! 주의 보좌가 영영하며 주의 나라의 홀은 공평한 홀이니이다 (aiōn g165)
ಆದರೆ ಮಗನ ವಿಷಯದಲ್ಲಿಯಾದರೋ, “ದೇವರೇ ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು. ನೀತಿದಂಡವೇ ನಿನ್ನ ರಾಜದಂಡವಾಗಿದೆ. (aiōn g165)
9 네가 의를 사랑하고 불법을 미워하였으니 그러므로 하나님 곧 너의 하나님이 즐거움의 기름을 네게 주어 네 동류들보다 승하게 하셨도다 하였고
ನೀನು ನೀತಿಯನ್ನು ಪ್ರೀತಿಸಿದ್ದೀ ಮತ್ತು ಅನ್ಯಾಯವನ್ನು ದ್ವೇಷಿಸಿದ್ದೀ. ಆದುದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ ಅಧಿಕವಾಗಿ ಪರಮಾನಂದ ತೈಲದಿಂದ ಅಭಿಷೇಕಿಸಿದ್ದಾನೆ” ಎಂದು ಹೇಳಿದ್ದಾನೆ.
10 또 주여! 태초에 주께서 땅의 기초를 두셨으며 하늘도 주의 손으로 지으신 바라
೧೦“ಕರ್ತನೇ ಆದಿಯಲ್ಲಿ ನೀನು ಭೂಮಿಗೆ ಅಸ್ತಿವಾರವನ್ನು ಹಾಕಿದ್ದೀ. ಆಕಾಶವು ನಿನ್ನ ಕೈಕೆಲಸವಾಗಿದೆ,
11 그것들은 멸망할 것이나 오직 주는 영존할 것이요 그것들은 다 옷과 같이 낡아지리니
೧೧ಅವು ನಾಶವಾಗುವವು. ಆದರೆ ನೀನು ಶಾಶ್ವತವಾಗಿರುತ್ತೀ. ಅವೆಲ್ಲವೂ ವಸ್ತ್ರದಂತೆ ಹಳೆಯದಾಗುವವು.
12 의복처럼 갈아 입을 것이요 그것들이 옷과 같이 변할 것이나 주는 여전 하여 연대가 다함이 없으리라 하였으나
೧೨ಅವುಗಳನ್ನು ಮೇಲಂಗಿಯಂತೆ ಮಡಿಸುತ್ತೀ ಮತ್ತು ಅವು ವಸ್ತ್ರದಂತೆ ಬದಲಾಗುವವು. ನೀನಾದರೂ ಅನನ್ಯನು. ನಿನ್ನ ವರ್ಷಗಳಿಗೆ ಅಂತ್ಯವೇ ಇಲ್ಲ” ಎಂತಲೂ ಹೇಳುತ್ತಾನೆ.
13 어느 때에 천사 중 누구에게 내가 네 원수로 네 발등상 되게 하기까지 너는 내 우편에 앉았으라 하셨느뇨
೧೩ಆದರೆ ಯಾವ ದೇವದೂತನಿಗಾದರೂ ದೇವರು, “ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವನ್ನಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂಬುದಾಗಿ ಎಂದಾದರೂ ಹೇಳಿದ್ದಾನೋ?
14 모든 천사들은 부리는 영으로서 구원 얻을 후사들을 위하여 섬기라고 보내심이 아니뇨
೧೪ಈ ಎಲ್ಲಾ ದೇವದೂತರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಟ್ಟ ಸೇವಕಾತ್ಮಗಳಲ್ಲವೋ?

< 히브리서 1 >