< 히브리서 12 >

1 이러므로 우리에게 구름같이 둘러싼 허다한 증인들이 있으니 모든 무거운 것과 얽매이기 쉬운 죄를 벗어 버리고 인내로써 우리 앞에 당한 경주를 경주하며
ಆದಕಾರಣ ಇಷ್ಟು ಸಾಕ್ಷಿಗಳ ದೊಡ್ಡ ಗುಂಪು ಮೇಘದಂತೆ ನಮ್ಮ ಸುತ್ತಲು ಇರುವುದರಿಂದ ನಮಗೆ ಅಭ್ಯಂತರಪಡಿಸುವ ಎಲ್ಲಾ ಭಾರವನ್ನೂ, ಸುಲಭವಾಗಿ ಮುತ್ತಿಕೊಳ್ಳುವ ಪಾಪವನ್ನು ಸಹ ನಾವು ತೆಗೆದಿಟ್ಟು, ನಂಬಿಕೆಯನ್ನು ಹುಟ್ಟಿಸುವಾತನೂ ಅದನ್ನು ಪರಿಪೂರ್ಣಗೊಳಿಸುವಾತನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸಹನೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅಪಮಾನವನ್ನು ಅಲಕ್ಷ್ಯಮಾಡಿ, ಶಿಲುಬೆಯ ಮರಣವನ್ನು ಸಹಿಸಿಕೊಂಡು, ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನನಾಗಿದ್ದಾನೆ.
2 믿음의 주요 또 온전케 하시는 이인 예수를 바라보자 저는 그 앞에 있는 즐거움을 위하여 십자가를 참으사 부끄러움을 개의치 아니하시더니 하나님 보좌 우편에 앉으셨느니라
3 너희가 피곤하여 낙심치 않기 위하여 죄인들의 이같이 자기에게 거역한 일을 참으신 자를 생각하라
ನೀವು ಮನಗುಂದಿದವರಾಗಿ ಬೇಸರಗೊಳ್ಳದಂತೆ ಯೇಸುವನ್ನು ಕುರಿತು ಯೋಚಿಸಿರಿ. ಆತನು ಪಾಪಿಗಳಿಂದ ಎಷ್ಟೋ ವಿರೋಧವನ್ನು ಸಹಿಸಿಕೊಂಡನು.
4 너희가 죄와 싸우되 아직 피흘리기 까지는 대항치 아니하고
ನೀವು ಪಾಪಕ್ಕೆ ವಿರೋಧವಾಗಿ ಹೋರಾಡುವುದರಲ್ಲಿ ರಕ್ತವನ್ನು ಸುರಿಸುವಷ್ಟು ಹೋರಾಡಲಿಲ್ಲವಲ್ಲ.
5 또 아들들에게 권하는 것같이 너희에게 권면하신 말씀을 잊었도다 일렀으되 내 아들아! 주의 징계하심을 경히 여기지 말며 그에게 꾸지람을 받을 때에 낙심하지 말라
ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತುಗಳನ್ನು ಮರೆತುಬಿಟ್ಟಿದ್ದೀರೋ? ಅದೇನೆಂದರೆ, “ನನ್ನ ಮಗನೇ, ಕರ್ತನ ಶಿಕ್ಷೆಯನ್ನು ಕಡೆಗಣಿಸಬೇಡ. ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ.”
6 주께서 그 사랑하시는 자를 징계 하시고 그의 받으시는 이들마다 채찍질 하심이니라 하였으니
ಏಕೆಂದರೆ ಕರ್ತನು ಯಾರನ್ನು ಪ್ರೀತಿಸುತ್ತಾನೋ ಅವರನ್ನು ಶಿಕ್ಷಿಸುತ್ತಾನೆ. ತಾನು ಮಗನಂತೆ ಸ್ವೀಕರಿಸುವ ಪ್ರತಿಯೊಬ್ಬನನ್ನು ದಂಡಿಸುತ್ತಾನೆ ಎಂಬುದಾಗಿದೆ.
7 너희가 참음은 징계를 받기 위함이라 하나님이 아들과 같이 너희를 대우하시나니 어찌 아비가 징계하지 않는 아들이 있으리요
ನಿಮ್ಮ ಶಿಸ್ತಿಗಾಗಿಯೇ, ನಿಮಗೆ ಶಿಕ್ಷೆಯಾಗುತ್ತದೆಂದು ಅದನ್ನು ಸಹಿಸಿಕೊಳ್ಳಿರಿ. ದೇವರು ನಿಮ್ಮನ್ನು ಮಕ್ಕಳೆಂದು ನಡೆಸುತ್ತಾನೆ. ಯಾಕೆಂದರೆ ತಂದೆಯಿಂದ ಶಿಕ್ಷೆ ಹೊಂದದ ಮಗನೆಲ್ಲಿದ್ದಾನೆ?
8 징계는 다 받는 것이거늘 너희에게 없으면 사생자요 참 아들이 아니니라
ಎಲ್ಲರೂ ಪಾಲುಗಾರರಬೇಕಾದ ಶಿಕ್ಷೆಯು ನಿಮಗುಂಟಾಗದಿದ್ದರೆ ನೀವು ಹಾದರದಿಂದ ಹುಟ್ಟಿದವರೇ ಹೊರತು ಆತನ ಮಕ್ಕಳಲ್ಲ.
9 또 우리 육체의 아버지가 우리를 징계하여도 공경하였거늘 하물며 모든 영의 아버지께 더욱 복종하여 살려 하지 않겠느냐
ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದ ಲೌಕಿಕ ತಂದೆಗಳನ್ನು ನಾವು ಸನ್ಮಾನಿಸಿತ್ತೇವಲ್ಲ. ನಮ್ಮ ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಹೆಚ್ಚಾಗಿ ಅಧೀನರಾಗಿ ಜೀವಿಸಬೇಕಲ್ಲವೇ?
10 저희는 잠시 자기의 뜻대로 우리를 징계하였거니와 오직 하나님은 우리의 유익을 위하여 그의 거룩하심에 참예케 하시느니라
೧೦ನಮ್ಮ ಲೌಕಿಕ ತಂದೆಗಳು ಮನಸ್ಸಿಗೆ ಸರಿದೋರಿದಂತೆ ಕೆಲವು ಕಾಲ ಮಾತ್ರ ನಮ್ಮನ್ನು ಶಿಕ್ಷಿಸಿದರು. ಆದರೆ ದೇವರು ತನ್ನ ಪರಿಶುದ್ಧತೆಯಲ್ಲಿ ನಾವು ಪಾಲುಗಾರರಾಗಬೇಕೆಂದು ನಮ್ಮ ಹಿತಕ್ಕಾಗಿಯೇ ಶಿಕ್ಷಿಸುತ್ತಾನೆ.
11 무릇 징계가 당시에는 즐거워 보이지 않고 슬퍼 보이나 후에 그로 말미암아 연달한 자에게는 의의 평강한 열매를 맺나니
೧೧ಯಾವ ಶಿಕ್ಷೆಯಾದರೂ ತತ್ಕಾಲಕ್ಕೆ ಸಂತೋಷಕರವಾಗಿ ತೋರದೆ, ದುಃಖಕರವಾಗಿ ತೋರುತ್ತದೆ. ಆದರೆ ಶಿಸ್ತಿನ ಅಭ್ಯಾಸವನ್ನು ಹೊಂದಿದವರು, ಮುಂದೆ ಸಮಾಧಾನವುಳ್ಳ ನೀತಿಯ ಫಲವನ್ನು ಪಡೆಯುತ್ತಾರೆ.
12 그러므로 피곤한 손과 연약한 무릎을 일으켜 세우고
೧೨ಆದುದ್ದರಿಂದ ಜೋಲುಬಿದ್ದ ಕೈಗಳನ್ನೂ ಮತ್ತು ನಡುಗುವ ಮೊಣಕಾಲುಗಳನ್ನೂ ಬಲಪಡಿಸಿರಿ.
13 너희 발을 위하여 곧은 길을 만들어 저는 다리로 하여금 어그러지지 않고 고침을 받게 하라
೧೩ನಿಮ್ಮ ಪಾದಗಳಿಗೆ ನೇರವಾದ ದಾರಿಯನ್ನು ಮಾಡಿಕೊಳ್ಳಿರಿ. ಹೀಗೆ ಮಾಡಿದರೆ ಕುಂಟುವ ಕಾಲು ಉಳುಕಿ ಹೋಗದೇ ವಾಸಿಯಾಗುವುದು.
14 모든 사람으로 더불어 화평함과 거룩함을 좆으라 이것이 없이는 아무도 주를 보지 못하리라
೧೪ಎಲ್ಲರೊಂದಿಗೆ ಸಮಾಧಾನದಿಂದ ಜೀವಿಸಲು ಮತ್ತು ಪರಿಶುದ್ಧರಾಗಿರಲು ಪ್ರಯತ್ನಮಾಡಿರಿ. ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವುದಿಲ್ಲ.
15 너희는 돌아보아 하나님 은혜에 이르지 못하는 자가 있는가 두려워 하고 또 쓴 뿌리가 나서 괴롭게 하고 많은 사람이 이로 말미암아 더러움을 입을까 두려워하고
೧೫ನಿಮ್ಮಲ್ಲಿ ಯಾವನೂ ದೇವರ ಕೃಪೆಯಿಂದ ತಪ್ಪಿ ಹಿಂಜಾರಿ ಹೋಗದಂತೆಯೂ, ಯಾವ ಕಹಿಯಾದ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಅನೇಕರನ್ನು ಮಲಿನಪಡಿಸದಂತೆ ನೋಡಿಕೊಳ್ಳಿರಿ.
16 음행하는 자와 혹 한 그릇 식물을 위하여 장자의 명분을 판 에서와 같이 망령된 자가 있을까 두려워 하라
೧೬ಯಾವ ಜಾರನಾಗಲಿ, ಏಸಾವನಂಥ ಪ್ರಾಪಂಚಿಕನಾಗಲಿ ನಿಮ್ಮಲ್ಲಿ ಇರದಂತೆ ಜಾಗ್ರತೆ ವಹಿಸಿಕೊಳ್ಳಿರಿ. ಆ ಏಸಾವನು ಒಂದೇ ಒಂದು ಊಟಕ್ಕೋಸ್ಕರ ತನ್ನ ಚೊಚ್ಚಲುತನದ ಹಕ್ಕನ್ನು ಮಾರಿಬಿಟ್ಟನು.
17 너희의 아는 바와 같이 저가 그 후에 축복을 기업으로 받으려고 눈물을 흘리며 구하되 버린 바가 되어 회개할 기회를 얻지 못하였느니라
೧೭ಅನಂತರದಲ್ಲಿ ತನ್ನ ತಂದೆಯ ಆಶೀರ್ವಾದವನ್ನು ಬಾಧ್ಯವಾಗಿ ಹೊಂದಬೇಕೆಂದು ಕಣ್ಣೀರು ಸುರಿಸುತ್ತಾ ಬೇಡಿಕೊಂಡರೂ, ಪಶ್ಚಾತ್ತಾಪಕ್ಕೆ ಮಾರ್ಗವಿಲ್ಲದೆ ನಿರಾಕರಿಸಲ್ಪಟ್ಟನೆಂದು ನೀವು ಬಲ್ಲವರಾಗಿದ್ದೀರಿ.
18 너희의 이른 곳은 만질 만한 불 붙는 산과 흑운과 흑암과 폭풍과
೧೮ನೀವು ಮುಟ್ಟಬಹುದಾದ ಮತ್ತು ಬೆಂಕಿ ಹೊತ್ತಿದಂಥ ಬೆಟ್ಟಕ್ಕೂ, ಕಾರ್ಮೋಡ, ಕಗ್ಗತ್ತಲೆ, ಬಿರುಗಾಳಿ, ತುತ್ತೂರಿಯ ಶಬ್ದ, ಮಾತುಗಳ ಧ್ವನಿ ಎಂಬಿವುಗಳ ಬಳಿಗಲ್ಲ ನೀವು ಬಂದಿರುವುದು. ಆ ಧ್ವನಿಯನ್ನು ಕೇಳಿದವರು ಇನ್ನೆಂದಿಗೂ ಆ ಧ್ವನಿ ತಮ್ಮೊಂದಿಗೆ ಮಾತನಾಡುವುದೇ ಬೇಡವೆಂದು ಕೇಳಿಕೊಂಡರು.
19 나팔소리와 말하는 소리가 아니라 그 소리를 듣는 자들은 더 말씀하지 아니하시기를 구하였으니
೧೯
20 이는 짐승이라도 산에 이르거든 돌로 침을 당하리라 하신 명을 저희가 견디지 못함이라
೨೦ಏಕೆಂದರೆ, “ಒಂದು ಮೃಗವಾದರೂ ಬೆಟ್ಟವನ್ನು ಮುಟ್ಟಿದರೆ ಅದನ್ನು ಕಲ್ಲೆಸೆದು ಕೊಲ್ಲಬೇಕೆಂಬ” ವಿಧಿಯನ್ನು ಅವರಿಂದ ತಾಳಲಾಗಲಿಲ್ಲ.
21 그 보이는 바가 이렇듯이 무섭기로 모세도 이르되 내가 심히 두렵고 떨린다 하였으나
೨೧ಇದಲ್ಲದೆ ಆ ದೃಶ್ಯವು ಅತಿ ಭಯಾನಕವಾಗಿದ್ದದರಿಂದ ಮೋಶೆಯು, “ನಾನು ಹೆದರಿ, ನಡುಗುತ್ತಿದ್ದೇನೆ” ಎಂದು ಹೇಳಿದನು.
22 그러나 너희가 이른 곳은 시온산과 살아계신 하나님의 도성인 하늘의 예루살렘과 천만 천사와
೨೨ಆದರೆ ನೀವು ಚೀಯೋನ್ ಪರ್ವತಕ್ಕೂ, ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ, ಉತ್ಸವ ಸಂಘದಲ್ಲಿ ಕೂಡಿರುವ ಕೋಟ್ಯಾನುಕೋಟಿ ದೇವದೂತರ ಬಳಿಗೂ,
23 하늘에 기록한 장자들의 총회와 교회와 만민의 심판자이신 하나님과 및 온전케 된 의인의 영들과
೨೩ಪರಲೋಕದಲ್ಲಿ ಹೆಸರು ಬರೆಸಿಕೊಂಡಿರುವ ಚೊಚ್ಚಲ ಮಕ್ಕಳ ಸಭೆಗೂ, ಎಲ್ಲರಿಗೆ ನ್ಯಾಯಾಧಿಪತಿಯಾಗಿರುವ ದೇವರ ಬಳಿಗೂ, ಪರಿಪೂರ್ಣರಾಗಿರುವ ನೀತಿವಂತರ ಆತ್ಮಗಳ ಬಳಿಗೂ,
24 새 언약의 중보이신 예수와 및 아벨의 피보다 더 낫게 말하는 뿌린 피니라
೨೪ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ, ಹೇಬೆಲನ ರಕ್ತಕ್ಕಿಂತ ಉತ್ತಮವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.
25 너희는 삼가 말하신 자를 거역하지 말라 땅에서 경고하신 자를 거역한 저희가 피하지 못하였거든 하물며 하늘로 좇아 경고하신 자를 배반하는 우리일까 보냐
೨೫ಮಾತನಾಡುತ್ತಿರುವಾತನನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ದೈವೋಕ್ತಿಗಳನ್ನಾಡಿದವನನ್ನು ಅಸಡ್ಡೆಮಾಡಿದವರು ದಂಡನೆಗೆ ತಪ್ಪಿಸಿಕೊಳ್ಳಲಾಗದಿದ್ದರೆ, ಪರಲೋಕದಿಂದ ಮಾತನಾಡುವಾತನನ್ನು ಬಿಟ್ಟು ದೂರವಾಗಿ ನಾವು ಹೋದರೆ ದಂಡನೆಯಿಂದ ಹೇಗೆ ತಪ್ಪಿಸಿಕೊಂಡೆವು?
26 그 때에는 그 소리가 땅을 진동하였거니와 이제는 약속하여 가라사대 내가 또 한 번 땅만 아니라 하늘도 진동하리라 하셨느니라
೨೬ಆತನ ಧ್ವನಿಯು ಆಗ ಭೂಮಿಯನ್ನು ಕದಲಿಸಿತು. ಈಗಲಾದರೋ ಆತನು, “ಇನ್ನೊಂದೇ ಸಾರಿ ನಾನು ಭೂಮಿಯನ್ನು ಮಾತ್ರವಲ್ಲದೆ ಪರಲೋಕವನ್ನೂ ಕದಲಿಸುತ್ತೇನೆ” ಎಂದು ವಾಗ್ದಾನಮಾಡಿ ಹೇಳಿದ್ದಾನೆ.
27 이 또 한 번이라 하심은 진동치 아니하는 것을 영존케 하기 위하여 진동할 것들 곧 만든 것들의 변동될 것을 나타내심이니라
೨೭“ಇನ್ನೊಂದೇ ಸಾರಿ,” ಎಂಬ ಈ ಮಾತನ್ನು ಯೋಚಿಸಿದರೆ, ಕದಲಿಸಿರುವ ವಸ್ತುಗಳು ನಿರ್ಮಿತವಾದವುಗಳಾದ್ದರಿಂದ ತೆಗೆದುಹಾಕಲ್ಪಡುತ್ತವೆಂಬುದು ಸ್ಪಷ್ಟವಾಗುತ್ತದೆ. ಆಗ, ಕದಲಿಸದೇ ಇರುವ ವಸ್ತುಗಳು ಸ್ಥಿರವಾಗಿ ನಿಲ್ಲುವವು.
28 그러므로 우리가 진동치 못할 나라를 받았은즉 은혜를 받자 이로말미암아 경건함과 두려움으로 하나님을 기쁘시게 섬길지니
೨೮ಆದ್ದರಿಂದ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆದುಕೊಳ್ಳುವವರಾದ ನಾವು ಕೃತಜ್ಞತೆಯುಳ್ಳವರಾಗಿ, ಆತನಿಗೆ ಸಮರ್ಪಕವಾದ ಆರಾಧನೆಯನ್ನು ಭಕ್ತಿಯಿಂದಲೂ ಮತ್ತು ಭಯದಿಂದಲೂ ಮಾಡೋಣ.
29 우리 하나님은 소멸하는 불이심이니라
೨೯ಏಕೆಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.

< 히브리서 12 >