< 호세아 3 >
1 여호와께서 내게 이르시되 이스라엘 자손이 다른 신을 섬기고 건포도 떡을 즐길지라도 여호와가 저희를 사랑하나니 너는 또 가서 타인에게 연애를 받아 음부된 그 여인을 사랑하라 하시기로
೧ಯೆಹೋವನು ನನಗೆ, “ನೀನು ಅನ್ಯದೇವತೆಗಳ ಕಡೆಗೆ ತಿರುಗಿಕೊಂಡು, ದೀಪದ್ರಾಕ್ಷೆಯ ಅಡೆಗಳನ್ನು ಪ್ರೀತಿಸುವ ಇಸ್ರಾಯೇಲರನ್ನು ಯೆಹೋವನು ಪ್ರೀತಿಸುವ ಪ್ರಕಾರ, ನೀನು ಜಾರನಿಗೆ ಪ್ರಿಯಳೂ, ವ್ಯಭಿಚಾರಾಸಕ್ತಳೂ ಆದ ಹೆಂಗಸನ್ನು ಪ್ರೀತಿಸುತ್ತಾ ಬಾ” ಎಂದು ಅಪ್ಪಣೆ ಕೊಟ್ಟನು.
2 내가 은 열 다섯 개와 보리 한 호멜 반으로 나를 위하여 저를 사고
೨ಆಗ ನಾನು ಹದಿನೈದು ಬೆಳ್ಳಿ ನಾಣ್ಯಗಳನ್ನೂ ಮತ್ತು ಒಂದುವರೆ ಹೋಮೆರ್ ಜವೆಗೋದಿಯನ್ನೂ ಕೊಟ್ಟು ಅವಳನ್ನು ಕೊಂಡುಕೊಂಡೆನು.
3 저에게 이르기를 너는 많은 날 동안 나와 함께 지내고 행음하지 말며 다른 남자를 좇지 말라 나도 네게 그리하리라 하였노라
೩ನಾನು ಅವಳಿಗೆ, “ನನಗಾಗಿ ಬಹು ದಿನಗಳು ತಾಳಿಕೊಂಡಿರು; ವ್ಯಭಿಚಾರ ಮಾಡಬೇಡ, ಯಾರೊಂದಿಗೂ ವ್ಯಭಿಚಾರಮಾಡಬೇಡ. ನಾನು ಸಹ ನಿನ್ನವನೇ, ನಿನ್ನ ಸಂಗಡ ವಾಸಿಸುವೆನು” ಎಂದು ಹೇಳಿದೆನು.
4 이스라엘 자손들이 많은 날 동안 왕도 없고, 군도 없고, 제사도 없고, 주상도 없고, 에봇도 없고, 드라빔도 없이 지내다가
೪ಇದರಂತೆ ರಾಜಮುಖಂಡ, ಯಜ್ಞ, ಸ್ತಂಭ, ಏಫೋದು, ವಿಗ್ರಹಗಳಿಲ್ಲದೆ ಇಸ್ರಾಯೇಲರು ಬಹಳ ದಿನಗಳು ತಾಳಿಕೊಂಡಿರುವರು.
5 그 후에 저희가 돌아와서 그 하나님 여호와와 그 왕 다윗을 구하고 말일에는 경외하므로 여호와께로와 그 은총으로 나아가리라
೫ಅನಂತರ ಅವರು ತಮ್ಮ ದೇವರಾದ ಯೆಹೋವನನ್ನೂ ಮತ್ತು ತಮ್ಮ ರಾಜನಾದ ದಾವೀದನನ್ನೂ ಪುನಃ ಆಶ್ರಯಿಸುವರು. ಹೌದು, ಅಂತ್ಯಕಾಲದಲ್ಲಿ ಯೆಹೋವನನ್ನೂ, ಆತನ ದಯೆಯನ್ನೂ ಭಯಭಕ್ತಿಯಿಂದ ಪಡೆಯುವರು.