< 이사야 12 >
1 그 날에 네가 말하기를 여호와여 주께서 전에는 내게 노하셨사오나 이제는 그 노가 쉬었고 또 나를 안위하시오니 내가 주께 감사하겠나이다 할 것이니라
೧ಆ ದಿನದಲ್ಲಿ ನೀನು ಹೇಳುವುದೇನೆಂದರೆ, “ಯೆಹೋವನೇ ನಾನು ನಿನಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀನು ನನ್ನ ಮೇಲೆ ಕೋಪಗೊಂಡಿದ್ದರೂ ಆ ನಿನ್ನ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತದೆ.
2 보라 하나님은 나의 구원이시라 내가 의뢰하고 두려움이 없으리니 주 여호와는 나의 힘이시며 나의 노래시며 나의 구원이심이라
೨ಇಗೋ, ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸವಿಡುವೆನು; ಯೆಹೋವನೇ ನನ್ನ ಬಲವೂ, ಕೀರ್ತನೆಯೂ ಆತನೇ, ನನಗೆ ರಕ್ಷಣೆಯೂ ಆಗಿದ್ದಾನೆ.”
3 그러므로 너희가 기쁨으로 구원의 우물들에서 물을 길으리로다
೩ಮತ್ತು ರಕ್ಷಣೆಯೆಂಬ ಬಾವಿಗಳಿಂದ ಉಲ್ಲಾಸದೊಡನೆ ನೀವು ನೀರನ್ನು ಸೇದುವಿರಿ.
4 그 날에 너희가 또 말하기를 여호와께 감사하라 그 이름을 부르며 그 행하심을 만국 중에 선포하며 그 이름이 높다 하라
೪ಆ ದಿನದಲ್ಲಿ ನೀವು ಹೇಳುವುದೇನೆಂದರೆ, “ಯೆಹೋವನಿಗೆ ಕೃತಜ್ಞತಾ ಸ್ತುತಿಮಾಡಿರಿ, ಆತನ ನಾಮದ ಮಹತ್ವವನ್ನು ವರ್ಣಿಸಿರಿ, ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಿಪಡಿಸಿರಿ, ಆತನ ನಾಮವು ಉನ್ನತೋನ್ನತ ಎಂದು ಜ್ಞಾಪಕಪಡಿಸಿರಿ.
5 여호와를 찬송할 것은 극히 아름다운 일을 하셨음이니 온 세계에 알게 할지어다
೫ಯೆಹೋವನನ್ನು ಗಾನದಿಂದ ಸ್ತುತಿಸಿರಿ; ಆತನು ಮಹಿಮೆಯ ಕಾರ್ಯಗಳನ್ನು ಮಾಡಿದ್ದಾನೆ; ಇದು ಭೂಮಂಡಲದಲ್ಲೆಲ್ಲಾ ತಿಳಿದಿರಲಿ.
6 시온의 거민아 소리를 높여 부르라 이스라엘의 거룩하신 자가 너희 중에서 크심이니라 할 것이니라
೬ಚೀಯೋನಿನ ನಿವಾಸಿಗಳೇ, ಉತ್ಸಾಹ ಧ್ವನಿಮಾಡಿರಿ; ಜಯಘೋಷಮಾಡಿರಿ. ಇಸ್ರಾಯೇಲರ ಪರಿಶುದ್ಧನು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ” ಎಂಬುದೇ.