< 야고보서 2 >
1 내 형제들아 영광의 주 곧 우리 주 예수 그리스도를 믿는 믿음을 너희가 받았으니 사람을 외모로 취하지 말라
೧ನನ್ನ ಸಹೋದರರೇ, ಮಹಿಮೆಯುಳ್ಳ ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಪಕ್ಷಪಾತಿಗಳಾಗಿರಬಾರದು.
2 만일 너희 회당에 금가락지를 끼고 아름다운 옷을 입은 사람이 들어오고 또 더러운 옷을 입은 가난한 사람이 들어올 때에
೨ಹೇಗೆಂದರೆ ಒಬ್ಬ ಮನುಷ್ಯನು ಚಿನ್ನದ ಉಂಗುರಗಳನ್ನು ಮತ್ತು ಉತ್ತಮವಾದ ವಸ್ತ್ರಗಳನ್ನೂ ಹಾಕಿಕೊಂಡು ನಿಮ್ಮ ಸಭೆಯೊಳಗೆ ಬಂದಾಗ ಮತ್ತು ಒಬ್ಬ ಬಡ ಮನುಷ್ಯನು ಕೊಳಕು ಬಟ್ಟೆಗಳನ್ನು ಧರಿಸಿಕೊಂಡು ಬಂದಾಗ,
3 너희가 아름다운 옷을 입은 자를 돌아보아 가로되 여기 좋은 자리에 앉으소서 하고 또 가난한 자에게 이르되 너는 거기 섰든지 내 발등상 아래에 앉으라 하면
೩ನೀವು ಉತ್ತಮವಾದ ವಸ್ತ್ರಗಳನ್ನು ಧರಿಸಿಕೊಂಡು ಬಂದಿರುವವನನ್ನು ಗೌರವದಿಂದ ನೋಡಿ ಅವನಿಗೆ “ನೀವು ಇಲ್ಲಿ ಈ ಗೌರವ ಆಸನದಲ್ಲಿ ಕುಳಿತುಕೊಳ್ಳಿರಿ” ಎಂತಲೂ, ಆ ಬಡ ಮನುಷ್ಯನಿಗೆ “ನೀನು ಅಲ್ಲಿ ನಿಂತುಕೋ” ಇಲ್ಲವೇ “ಇಲ್ಲಿ ನನ್ನ ಕಾಲ್ಮಣೆಯ ಬಳಿ ಕುಳಿತುಕೋ” ಎಂತಲೂ ಹೇಳಿದರೆ,
4 너희끼리 서로 구별하며 악한 생각으로 판단하는 자가 되는 것이 아니냐
೪ನೀವು ನಿಮ್ಮ ನಿಮ್ಮಲ್ಲಿ ಭೇದಭಾವ ಮಾಡುವವರಾಗಿದ್ದು, ತಾರತಮ್ಯ ಆಲೋಚನೆಗಳಂತೆ ನಡೆಯುವ ನಿರ್ಧಾರ ಮಾಡುವವರಾಗಿರುತ್ತೀರಿ ಅಲ್ಲವೇ?
5 내 사랑하는 형제들아 들을지어다 하나님이 세상에 대하여는 가난한 자를 택하사 믿음에 부요하게 하시고 또 자기를 사랑하는 자들에게 약속하신 나라를 유업으로 받게 아니하셨느냐
೫ನನ್ನ ಪ್ರಿಯ ಸಹೋದರರೇ, ಕೇಳಿರಿ ದೇವರು ಈ ಲೋಕದಲ್ಲಿನ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ, ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
6 너희는 도리어 가난한 자를 괄시하였도다 부자는 너희를 압제하며 법정으로 끌고 가지 아니하느냐?
೬ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನದ ಮುಂದೆ ಎಳೆದುಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?
7 저희는 너희에게 대하여 일컫는 바 그 아름다운 이름을 훼방하지 아니하느냐?
೭ನೀವು ಕರೆಯಲ್ಪಟ್ಟ ಆ ಶ್ರೇಷ್ಠವಾದ ನಾಮವನ್ನು ದೂಷಿಸುವವರು ಅವರಲ್ಲವೋ?
8 너희가 만일 경에 기록한 대로 네 이웃 사랑하기를 네 몸과 같이 하라 하신 최고한 법을 지키면 잘하는 것이거니와
೮ಆದರೂ ಧರ್ಮಶಾಸ್ತ್ರಕ್ಕೆ ಸರಿಯಾಗಿ “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು” ಎಂಬ ರಾಜಾಜ್ಞೆಯನ್ನು ನೆರವೇರಿಸುವವರಾದರೆ, ನೀವು ಒಳ್ಳೆಯದನ್ನೇ ಮಾಡುವವರಾಗಿರುವಿರಿ.
9 만일 너희가 외모로 사람을 취하면 죄를 짓는 것이니 율법이 너희를 범죄자로 정하리라
೯ಒಂದು ವೇಳೆ ಅದನ್ನು ಬಿಟ್ಟು ನೀವು ಪಕ್ಷಪಾತಿಗಳಾಗಿದ್ದರೆ ಪಾಪಮಾಡುವವರಾಗಿದ್ದು ಅಪರಾಧಿಗಳೆಂದು ಧರ್ಮಶಾಸ್ತ್ರದ ಪ್ರಕಾರ ತೀರ್ಮಾನಿಸಲ್ಪಡುತ್ತೀರಿ.
10 누구든지 온 율법을 지키다가 그 하나에 거치면 모두 범한자가 되나니
೧೦ಏಕೆಂದರೆ ಯಾರಾದರೂ ಧರ್ಮಶಾಸ್ತ್ರವನ್ನೆಲ್ಲಾ ಕೈಕೊಂಡು ನಡೆದು ಅದರಲ್ಲಿ ಒಂದೇ ಒಂದು ವಿಷಯದಲ್ಲಿ ತಪ್ಪಿದರೆ ಅಂಥವರು ಎಲ್ಲಾ ವಿಷಯಗಳಲ್ಲಿಯೂ ಅಪರಾಧಿಯಾಗಿರುತ್ತಾರೆ.
11 간음하지 말라 하신 이가 또한 살인하지 말라 하셨은즉 네가 비록 간음하지 아니하여도 살인하면 율법을 범한 자가 되느니라
೧೧ಏಕೆಂದರೆ ವ್ಯಭಿಚಾರ ಮಾಡಬಾರದೆಂದು ಹೇಳಿದವನೇ ನರಹತ್ಯ ಮಾಡಬಾರದೆಂತಲೂ ಹೇಳಿದನು. ಆದಕಾರಣ ನೀನು ವ್ಯಭಿಚಾರಮಾಡದೆ ಇದ್ದರೂ ನರಹತ್ಯ ಮಾಡಿದರೆ ಧರ್ಮಶಾಸ್ತ್ರವನ್ನು ಮೀರಿದವನಾಗಿರುತ್ತಿ.
12 너희는 자유의 율법대로 심판받을 자처럼 말도 하고 행하기도 하라
೧೨ನೀವು ಬಿಡುಗಡೆಯನ್ನುಂಟು ಮಾಡುವ ಧರ್ಮಶಾಸ್ತ್ರದ ಪ್ರಕಾರ ತೀರ್ಪುಹೊಂದುವವರಿಗೆ ತಕ್ಕಂತೆ ಮಾತನಾಡಿರಿ ಮತ್ತು ವಿಧೇಯರಾಗಿರಿ.
13 긍휼을 행하지 아니하는 자에게는 긍휼없는 심판이 있으리라 긍휼은 심판을 이기고 자랑하느니라
೧೩ಏಕೆಂದರೆ ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವುದಿಲ್ಲ. ಕರುಣೆಯು ನ್ಯಾಯತೀರ್ಪಿನ ಮೇಲೆ ಜಯ ಹೊಂದುತ್ತದೆ.
14 내 형제들아! 만일 사람이 믿음이 있노라 하고 행함이 없으면 무슨 이익이 있으리요 그 믿음이 능히 자기를 구원하겠느냐
೧೪ನನ್ನ ಸಹೋದರರೇ, ಒಬ್ಬನು ತನಗೆ ನಂಬಿಕೆಯುಂಟೆಂದು ಹೇಳಿಕೊಂಡು ತಕ್ಕ ಕ್ರಿಯೆಗಳಿಲ್ಲದವನಾಗಿದ್ದರೆ ಪ್ರಯೋಜನವೇನು? ಅಂಥ ನಂಬಿಕೆಯು ಅವನನ್ನು ರಕ್ಷಿಸುವುದೋ?
15 만일 형제나 자매가 헐벗고 일용할 양식이 없는데
೧೫ನಿಮ್ಮಲ್ಲಿ ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಉಡಲು ಬಟ್ಟೆಯೂ ಮತ್ತು ದಿನನಿತ್ಯದ ಆಹಾರವೂ ಅಗತ್ಯವಾಗಿರುವಾಗ,
16 너희 중에 누구든지 그에게 이르되 평안히 가라, 더웁게 하라, 배 부르게 하라 하며 그 몸에 쓸 것을 주지 아니하면 무슨 이익이 있으리요
೧೬ನಿಮ್ಮಲ್ಲಿ ಒಬ್ಬನು ಅವರಿಗೆ ದೈಹಿಕ ಅವಶ್ಯಕತೆಗಳನ್ನು ಪೂರೈಸದೆ “ಸಮಾಧಾನದಿಂದ ಹೋಗಿರಿ, ಬೆಚ್ಚಗೆ ಬೆಂಕಿಕಾಯಿಸಿಕೊಳ್ಳಿ, ಹೊಟ್ಟೆ ತುಂಬಾ ಊಟಮಾಡಿ” ಎಂದು ಹೇಳಿದರೆ ಪ್ರಯೋಜನವೇನು?
17 이와 같이 행함이 없는 믿음은 그 자체가 죽은 것이라
೧೭ಹಾಗೆಯೇ ಕ್ರಿಯೆಗಳಿಲ್ಲದ ನಂಬಿಕೆಯು ನಿರ್ಜೀವವಾದದು.
18 혹이 가로되 너는 믿음이 있고 나는 행함이 있으니 행함이 없는 네 믿음을 내게 보이라 나는 행함으로 내 믿음을 네게 보이리라
೧೮ಆದರೂ ಒಬ್ಬನು; “ನಿನಗೆ ನಂಬಿಕೆಯುಂಟು ಮತ್ತು ನನಗೆ ಕ್ರಿಯೆಗಳುಂಟು” ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆಯನ್ನು ನನಗೆ ತೋರಿಸು. ನಾನು ನನ್ನ ಕ್ರಿಯೆಗಳ ಮುಖಾಂತರ ನನ್ನ ನಂಬಿಕೆಯನ್ನು ತೋರಿಸುತ್ತೇನೆ ಎಂದು ಹೇಳುವನಲ್ಲವೇ.
19 네가 하나님은 한 분이신 줄을 믿느냐? 잘하는도다 귀신들도 믿고 떠느니라
೧೯ದೇವರು ಒಬ್ಬನೇ ಎಂದು ನೀನು ನಂಬುತ್ತೀ; ಹಾಗೆ ನಂಬುವುದು ಸರಿ. ಆದರೆ ದೆವ್ವಗಳು ಸಹ ಹಾಗೆಯೇ ನಂಬಿ ಹೆದರಿ ನಡುಗುತ್ತವೆ.
20 아아, 허탄한 사람아! 행함이 없는 믿음이 헛것인 줄 알고자 하느냐?
೨೦ಅವಿವೇಕಿಯೇ, ಕ್ರಿಯೆಗಳಿಲ್ಲದ ನಂಬಿಕೆಯು ವ್ಯರ್ಥವಾದದ್ದು ಎಂದು ನಿನಗೆ ಸಾಬಿತುಪಡಿಸಬೇಕೋ?
21 우리 조상 아브라함이 그 아들 이삭을 제단에 드릴 때에 행함으로 의롭다 하심을 받은 것이 아니냐?
೨೧ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಯಜ್ಞವೇದಿಯ ಮೇಲೆ ಅರ್ಪಿಸಿದಾಗ ನೀತಿವಂತನೆಂಬ ನಿರ್ಣಯವನ್ನು ಹೊಂದಿದ್ದು ನಂಬಿಕೆಯ ಕ್ರಿಯೆಗಳಿಂದಲ್ಲವೇ?
22 네가 보거니와 믿음이 그의 행함과 함께 일하고 행함으로 믿음이 온전케 되었느니라
೨೨ಅವನ ನಂಬಿಕೆಯು ಕ್ರಿಯೆಗಳೊಂದಿಗೆ ಕಾರ್ಯಮಾಡಿತ್ತು ಮತ್ತು ಆ ಕ್ರಿಯೆಗಳಿಂದಲೇ ಅವನ ನಂಬಿಕೆಯ ಉದ್ದೇಶವು ನೆರವೇರಿತು ಎಂದು ಕಾಣುತ್ತೇವಲ್ಲಾ.
23 이에 경에 이른 바 아브라함이 하나님을 믿으니 이것을 의로 여기셨다는 말씀이 응하였고 그는 하나님의 벗이라 칭함을 받았나니
೨೩“ಅಬ್ರಹಾಮನು ದೇವರನ್ನು ನಂಬಿದನು ಮತ್ತು ಆ ನಂಬಿಕೆ ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು” ಎಂಬ ಧರ್ಮಶಾಸ್ತ್ರದ ಮಾತು ಹೀಗೆ ನೆರವೇರಿತು. ಆದ್ದರಿಂದ ಅಬ್ರಹಾಮನು ದೇವರ ಸ್ನೇಹಿತನೆಂದು ಕರೆಯಲ್ಪಟ್ಟನು.
24 이로 보건대 사람이 행함으로 의롭다 하심을 받고 믿음으로만 아니니라
೨೪ಆದುದರಿಂದ ಮನುಷ್ಯನು, ಕ್ರಿಯೆಗಳಿಂದ ನೀತಿವಂತನೆಂದು ನಿರ್ಣಯಿಸಲ್ಪಡುತ್ತಾನೆ ಹೊರತು ಬರೀ ನಂಬಿಕೆಯಿಂದಲ್ಲ ಎಂದು ನೋಡುತ್ತೀರಿ.
25 또 이와 같이 기생 라합이 사자를 접대하여 다른 길로 나가게 할때에 행함으로 의롭다 하심을 받은 것이 아니냐?
೨೫ಅದೇ ರೀತಿಯಾಗಿ ವೇಶ್ಯೆಯಾದ ರಾಹಾಬಳು ಗೂಢಚಾರರನ್ನು ತನ್ನ ಮನೆಯಲ್ಲಿ ಸೇರಿಸಿಕೊಂಡು, ಬೇರೆ ದಾರಿಯಿಂದ ಅವರನ್ನು ಕಳುಹಿಸಿದ ಕ್ರಿಯೆಗಳಿಂದಲೇ ನೀತಿವಂತಳೆಂಬ, ನಿರ್ಣಯವನ್ನು ಹೊಂದಿದಳಲ್ಲವೇ?
26 영혼 없는 몸이 죽은 것같이 행함이 없는 믿음은 죽은 것이니라
೨೬ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದಾಗಿದೆ.