< 욥기 18 >

1 수아 사람 빌닷이 대답하여 가로되
ಆಗ ಶೂಹ್ಯನಾದ ಬಿಲ್ದದನು ಉತ್ತರಕೊಟ್ಟು ಹೀಗೆಂದನು:
2 너희가 어느 때까지 말을 찾겠느냐 깨달으라 그 후에야 우리가 말하리라
“ಯೋಬನೇ, ಈ ಮಾತುಗಳನ್ನು ನೀನು ಯಾವಾಗ ಕೊನೆಗೊಳಿಸುತ್ತೀ? ವಿವೇಕಿಯಾಗು, ಆಮೇಲೆ ಮಾತನಾಡೋಣ.
3 어찌하여 우리를 짐승으로 여기며 부정하게 보느냐
ನಮ್ಮನ್ನು ಮೃಗಗಳೆಂದು ಎಣಿಸಿರುವೆಯಾ? ನಿನ್ನ ದೃಷ್ಟಿಯಲ್ಲಿ ನಾವು ದಡ್ಡರೋ?
4 너 분하여 스스로 찢는 자야 너를 위하여 땅이 버림을 당하겠느냐 바위가 그 자리에서 옮기겠느냐
ಕೋಪದಿಂದ ನಿನ್ನನ್ನು ನೀನೇ ಸೀಳಿಕೊಳ್ಳುವೆಯಾ? ನಿನ್ನ ನಿಮಿತ್ತ ಭೂಮಿ ಹಾಳಾಗಬೇಕೋ? ಬಂಡೆಯು ತನ್ನ ಸ್ಥಳದಿಂದ ತೊಲಗಬೇಕೋ?
5 악인의 빛은 꺼지고 그 불꽃은 빛나지 않을 것이요
“ಹೌದು, ನಿಶ್ಚಯವಾಗಿ ದುಷ್ಟರ ಬೆಳಕು ಆರಿಹೋಗುವುದು; ಅವನ ಬಾಳಿನ ಬೆಂಕಿಯ ಜ್ವಾಲೆಯು ಉರಿಯದೆ ಹೋಗುವುದು.
6 그 장막 안의 빛은 어두워지고 그 위의 등불은 꺼질 것이요
ಅವನ ಗುಡಾರದಲ್ಲಿ ಬೆಳಕು ಕತ್ತಲಾಗುವುದು; ಅವನ ಮೇಲಣ ತೂಗು ದೀಪವು ಆರಿಹೋಗುವುದು.
7 그 강한 걸음이 곤하여지고 그 베푼 꾀에 스스로 빠질 것이니
ಅವನ ಬಲವುಳ್ಳ ಹೆಜ್ಜೆಗಳು ದುರ್ಬಲಗೊಳ್ಳುವುದು; ಅವನ ಯೋಜನೆಗಳೇ ಅವನನ್ನು ಕೆಡವಿಹಾಕುವವು.
8 이는 그 발이 스스로 그물에 들어가고 얽는 줄을 밟음이며
ಏಕೆಂದರೆ ದುಷ್ಟನು ತನ್ನ ಹೆಜ್ಜೆಗಳಿಂದಲೇ ಬಲೆಯಲ್ಲಿ ಬೀಳುವನು; ಅವನು ಕುಣಿಯಲ್ಲಿ ಬಿದ್ದು ಅಲೆದಾಡುವನು.
9 그 발뒤꿈치는 창애에 치이고 그 몸은 올무에 얽힐 것이며
ಬೋನು ಅವನ ಹಿಮ್ಮಡಿಯನ್ನು ಹಿಡಿದುಕೊಳ್ಳುವುದು; ಉರುಳು ಅವನನ್ನು ಬಿಗಿಯಾಗಿ ಹಿಡಿದಿಟ್ಟುಕೊಳ್ಳುವುದು.
10 그를 동일 줄이 땅에 숨겼고 그를 빠뜨릴 함정이 길에 베풀렸으며
ನೆಲದ ಮೇಲೆ ಪಾಶವೂ, ದಾರಿಯಲ್ಲಿ ಜಾಲವೂ ಅವನಿಗೆ ಹೊಂಚಿಕೊಂಡಿರುವುವು.
11 무서운 것이 사방에서 그를 놀래고 그 뒤를 쫓아올 것이며
ಸುತ್ತಲೂ ದಿಗಿಲುಗಳು ಅವನನ್ನು ಹೆದರಿಸಿ, ಅವನ ಕಾಲುಗಳನ್ನು ಓಡುವಂತೆ ಮಾಡುವುವು.
12 그 힘은 기근을 인하여 쇠하고 그 곁에는 재앙이 기다릴 것이며
ಅವನ ಬಲವು ಕುಸಿಯುವುದು; ವಿನಾಶವು ಅವನ ಬೀಳುವಿಕೆಗಾಗಿ ಸಿದ್ಧವಾಗಿರುವುದು.
13 그의 백체가 먹히리니 곧 사망의 장자가 그 지체를 먹을 것이며
ಅದು ಅವನ ಚರ್ಮದ ಬಲವನ್ನು ತಿಂದುಬಿಡುವುದು; ಮರಣದ ಚೊಚ್ಚಲತನವು ಅವನ ಅಂಗಾಂಗಗಳನ್ನು ನುಂಗಿಬಿಡುವುದು.
14 그가 그 의뢰하던 장막에서 뽑혀서 무서움의 왕에게로 잡혀가고
ಅವನು ಭದ್ರತೆಯ ಗುಡಾರದಿಂದ ಹೊರಬೀಳುವನು. ಅವನು ಭಯಂಕರ ಅರಸನ ಬಳಿಗೆ ಸಾಗಬೇಕಾಗುವುದು.
15 그에게 속하지 않은 자가 그 장막에 거하리니 유황이 그 처소에 뿌려질 것이며
ಬೆಂಕಿಯು ಅವನ ಮನೆಯನ್ನು ಸುಡುವುದು; ಅವನ ಮನೆಯ ಮೇಲೆ ಗಂಧಕವನ್ನು ಎರಚಲಾಗುವುದು.
16 아래서는 그 뿌리가 마르고 위에서는 그 가지가 찍힐 것이며
ಬುಡದಿಂದ ಅವನ ಬೇರುಗಳು ಒಣಗುವುವು; ಮೇಲಿನಿಂದ ಅವನ ರೆಂಬೆಯು ಬಾಡುವುದು.
17 그의 기념이 땅에서 없어지고 그의 이름이 거리에서 전함이 없을것이며
ಅವನ ಸ್ಮರಣೆಯು ಭೂಮಿಯಿಂದ ಅಳಿದುಹೋಗುವುದು; ನಾಡಿನಲ್ಲಿ ಅವನ ಹೆಸರು ಇಲ್ಲದೆ ಹೋಗುವುದು.
18 그는 광명 중에서 흑암으로 몰려 들어가며 세상에서 쫓겨날 것이며
ಬೆಳಕಿನಿಂದ ಅವನನ್ನು ಕತ್ತಲೆಗೆ ದಬ್ಬಲಾಗುವುದು; ಅವನು ಲೋಕದಿಂದ ಬಹಿಷ್ಕರಿಸಲಾಗುವನು.
19 그는 그 백성 가운데서 아들도 없고 손자도 없을 것이며 그의 거하던 곳에는 한 사람도 남은 자가 없을 것이라
ಅವನ ಜನರಲ್ಲಿ ಅವನಿಗೆ ಮಗನೂ, ಮೊಮ್ಮಗನೂ ಇರುವುದಿಲ್ಲ, ಅವನು ವಾಸಿಸಿದ ಸ್ಥಳದಲ್ಲಿ ಯಾರೂ ಉಳಿಯುವುದಿಲ್ಲ.
20 그의 날을 인하여 뒤에 오는 자가 앞선 자의 두려워 하던 것 같이 놀라리라
ಪಶ್ಚಿಮ ಜನರು ಅವನ ಸ್ಥಿತಿಯನ್ನು ನೋಡಿ ಆಶ್ಚರ್ಯಪಡುವರು; ಪೂರ್ವದ ಕಡೆಯವರನ್ನು ದಿಗಿಲು ಹಿಡಿಯುವುದು.
21 불의한 자의 집이 이러하고 하나님을 알지 못하는 자의 처소도 그러하니라
ನಿಶ್ಚಯವಾಗಿ ದುಷ್ಟರ ನೆಲೆಯು ಹೀಗೆಯೇ ಇರುವುದು; ದೇವರನ್ನು ಅರಿಯದವನ ಸ್ಥಿತಿ ಇದೇ.”

< 욥기 18 >