< 마가복음 15 >
1 새벽에 대제사장들이 즉시 장로들과 서기관들 곧 온 공회로 더불어 의논하고 예수를 결박하여 끌고 가서 빌라도에게 넘겨 주니
೧ಬೆಳಗಾದ ಕೂಡಲೆ ಮುಖ್ಯಯಾಜಕರೂ, ಹಿರಿಯರೂ, ಶಾಸ್ತ್ರಿಗಳೂ, ಹಿರೀಸಭೆಯ ಸದಸ್ಯರೆಲ್ಲರೂ ಒಟ್ಟುಗೂಡಿ ಆಲೋಚನೆ ಮಾಡಿಕೊಂಡು ಯೇಸುವನ್ನು ಕಟ್ಟಿಸಿ ಕರೆದುಕೊಂಡು ಹೋಗಿ ಪಿಲಾತನಿಗೆ ಒಪ್ಪಿಸಿದರು.
2 빌라도가 묻되 `네가 유대인의 왕이냐?' 예수께서 대답하여 가라사대 `네 말이 옳도다' 하시매
೨ಪಿಲಾತನು ಆತನನ್ನು, “ನೀನು ಯೆಹೂದ್ಯರ ಅರಸನೋ” ಎಂದು ಕೇಳಲು ಆತನು, “ನೀನೇ ಹೇಳಿದ್ದೀ” ಎಂದು ಉತ್ತರಕೊಟ್ಟನು.
೩ಮುಖ್ಯಯಾಜಕರು ಆತನ ಮೇಲೆ ತುಂಬಾ ದೂರು ಹೇಳುತ್ತಿದ್ದರು.
4 빌라도가 또 물어 가로되 `아무 대답도 없느냐? 저희가 얼마나 많은 것으로 너를 고소하는가 보라' 하되
೪ಆಗ ಪಿಲಾತನು ಪುನಃ ಯೇಸುವನ್ನು, “ನೀನು ಏನೂ ಉತ್ತರಕೊಡುವುದಿಲ್ಲವೇ? ಇವರು ನಿನ್ನ ಮೇಲೆ ತುಂಬಾ ದೂರುಗಳನ್ನು ಹೇಳುತ್ತಿದ್ದಾರೆ ನೋಡು” ಎಂದು ಹೇಳಿದನು.
5 예수께서 다시 아무 말씀도 대답지 아니하시니 빌라도가 기이히 여기더라
೫ಆದರೆ ಯೇಸು ಏನೂ ಉತ್ತರಕೊಡಲಿಲ್ಲ. ಅದನ್ನು ನೋಡಿ ಪಿಲಾತನು ಆಶ್ಚರ್ಯಪಟ್ಟನು.
6 명절을 당하면 백성의 구하는 대로 죄수 하나를 놓아 주는 전례가 있더니
೬ಪ್ರತಿ ಪಸ್ಕಹಬ್ಬದಲ್ಲಿ ಜನರು ಬೇಡಿದ ಒಬ್ಬ ಸೆರೆಯಾಳನ್ನು ಬಿಡುಗಡೆ ಮಾಡುವುದು ಪಿಲಾತನ ಅಧಿಕಾರಕ್ಕೆ ಸೇರಿದ ಪದ್ಧತಿಯಾಗಿತ್ತು.
7 민란을 꾸미고 이 민란에 살인하고 포박된 자 중에 바라바라 하는 자가 있는지라
೭ಅಲ್ಲಿ ಬರಬ್ಬನೆಂಬುವನೊಬ್ಬನಿದ್ದನು; ಇವನನ್ನು ದಂಗೆಯಲ್ಲಿ ಕೊಲೆ ಮಾಡಿದ ದಂಗೆಗಾರರೊಂದಿಗೆ ಬಂಧಿಸಿದ್ದರು.
8 무리가 나아가서 전례대로 하여 주기를 구한대
೮ಜನರು ಪಿಲಾತನ ಬಳಿಗೆ ಹೋಗಿ, ನೀನು ನಮಗೆ ಮಾಡುತ್ತಾ ಬಂದ ಪದ್ಧತಿಯ ಪ್ರಕಾರ ಮಾಡು ಎಂದು ಕೇಳಿಕೊಳ್ಳುತ್ತಿದ್ದರು.
9 빌라도가 대답하여 가로되 `너희는 내가 유대인의 왕을 너희에게 놓아주기를 원하느냐?' 하니
೯ಮುಖ್ಯಯಾಜಕರು ಅಸೂಯೆಯಿಂದ ಯೇಸುವನ್ನು ಒಪ್ಪಿಸಿಕೊಟ್ಟಿದ್ದಾರೆಂದು ಪಿಲಾತನು ಗ್ರಹಿಸಿಕೊಂಡು, “ನಾನು ಯೆಹೂದ್ಯರ ಅರಸನನ್ನು ನಿಮಗೆ ಬಿಟ್ಟುಕೊಡಬೇಕನ್ನುತ್ತಿರೋ?” ಎಂದು ಅವರನ್ನು ಕೇಳಿದನು.
10 이는 저가 대제사장들이 시기로 예수를 넘겨 준 줄 앎이러라
೧೦
11 그러나 대제사장들이 무리를 충동하여 도리어 바라바를 놓아 달라 하게 하니
೧೧ಆದರೆ ಮುಖ್ಯಯಾಜಕರು, ಬರಬ್ಬನನ್ನೇ ಬಿಟ್ಟುಕೊಡಬೇಕೆಂದು ಬೇಡಿಕೊಳ್ಳಿರಿ ಎಂಬುದಾಗಿ ಜನರನ್ನು ಪ್ರೇರೇಪಿಸಿದರು.
12 빌라도가 또 대답하여 가로되 `그러면 너희가 유대인의 왕이라 하는 이는 내가 어떻게 하랴?'
೧೨ಅದಕ್ಕೆ ಪಿಲಾತನು ತಿರುಗಿ ಅವರನ್ನು, “ಹಾಗಾದರೆ ನೀವು ಹೇಳುವ ಯೆಹೂದ್ಯರ ಅರಸನನ್ನು ನಾನೇನು ಮಾಡಲಿ?” ಎಂದು ಕೇಳಿದನು.
13 저희가 다시 소리지르되 `저를 십자가에 못 박게 하소서'
೧೩ಅವರು, “ಅವನನ್ನು ಶಿಲುಬೆಗೆ ಹಾಕಿಸು” ಎಂದು ಮತ್ತಷ್ಟು ಕೂಗಿಕೊಂಡರು.
14 빌라도가 가로되 `어찜이뇨 무슨 악한 일을 하였느냐?' 하니 더욱 소리지르되 `십자가에 못 박게 하소서' 하는지라
೧೪ಪಿಲಾತನು, “ಏಕೆ? ಇವನು ಏನು ಅಪರಾಧ ಮಾಡಿದ್ದಾನೆ?” ಅಂದನು. ಆದರೆ ಅವರು, “ಅವನನ್ನು ಶಿಲುಬೆಗೆ ಹಾಕಿಸು” ಎಂದು ಇನ್ನೂ ಹೆಚ್ಚಾಗಿ ಆರ್ಭಟಿಸಿ ಕೂಗಿಕೊಂಡರು.
15 빌라도가 무리에게 만족을 주고자 하여 바라바는 놓아 주고 예수는 채찍질하고 십자가에 못 박히게 넘겨주니라
೧೫ಅದಕ್ಕೆ ಪಿಲಾತನು ಜನಸಮೂಹವನ್ನು ಮೆಚ್ಚಿಸಬೇಕೆಂದು ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ, ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿದನು.
16 군병들이 예수를 끌고 브라이도리온이라는 뜰 안으로 들어가서 온 군대를 모으고
೧೬ಸಿಪಾಯಿಗಳು ಆತನನ್ನು ಅಧಿಪತಿಯ ಅರಮನೆಯ ಅಂಗಳದೊಳಗೆ ಕರೆದುಕೊಂಡು ಹೋಗಿ, ತಮ್ಮ ಪಡೆಯನ್ನೆಲ್ಲವನ್ನೂ ಒಟ್ಟಿಗೆ ಸೇರಿಸಿಕೊಂಡರು.
17 예수에게 자색 옷을 입히고 가시 면류관을 엮어 씌우고
೧೭ಯೇಸುವಿಗೆ ನಸುಗೆಂಪು ಮೇಲಂಗಿಯನ್ನು ಹೊದಿಸಿ ಮುಳ್ಳಿನ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟರು.
18 예(禮)하여 가로되 `유대인의 왕이여 평안할지어다' 하고
೧೮ಅನಂತರ, “ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ” ಎಂದು ಆತನಿಗೆ ಅಪಹಾಸ್ಯಮಾಡಿ ವಂದಿಸಿದರು.
19 갈대로 그의 머리를 치며 침을 뱉으며 꿇어 절하더라
೧೯ಬೆತ್ತದಿಂದ ಆತನ ತಲೆಯ ಮೇಲೆ ಹೊಡೆದು, ಆತನ ಮೇಲೆ ಉಗುಳಿ, ಆತನ ಮುಂದೆ ಮೊಣಕಾಲೂರಿ ನಮಸ್ಕರಿಸಿದರು.
20 희롱을 다한 후 자색 옷을 벗기고 도로 그의 옷을 입히고 십자가에 못 박으려고 끌고 나가니라
೨೦ಹೀಗೆ ಆತನನ್ನು ಪರಿಹಾಸ್ಯ ಮಾಡಿದ ಮೇಲೆ ಆ ನಸುಗೆಂಪು ಮೇಲಂಗಿಯನ್ನು ತೆಗೆದು ಆತನ ಬಟ್ಟೆಗಳನ್ನು ಆತನಿಗೆ ತೊಡಿಸಿ ಆತನನ್ನು ಶಿಲುಬೆಗೆ ಹಾಕುವುದಕ್ಕೆ ತೆಗೆದುಕೊಂಡು ಹೋದರು.
21 마침 알렉산더와 루포의 아비인 구레네 사람 시몬이 시골로서 와서 지나가는데 저희가 그를 억지로 같이 가게 하여 예수의 십자가를 지우고
೨೧ಆಗ ಹೊಲದಿಂದ ಹೊರಟು ಆ ಮಾರ್ಗವಾಗಿ ಬರುತ್ತಿದ್ದ ಒಬ್ಬನನ್ನು ಆತನ ಶಿಲುಬೆಯನ್ನು ಹೊರುವುದಕ್ಕೆ ಒತ್ತಾಯಪಡಿಸಿದರು. ಅವನು ಯಾರೆಂದರೆ, ಅಲೆಕ್ಸಾಂದ್ರ ಹಾಗೂ ರೂಫ ಎಂಬುವರ ತಂದೆಯಾದ ಕುರೇನೆ ಪಟ್ಟಣದ ಸೀಮೋನನು.
22 예수를 끌고 골고다라 하는 곳(번역하면 해골의 곳)에 이르러
೨೨ಬಳಿಕ ಆತನನ್ನು ‘ಗೊಲ್ಗೊಥಾ’ ಎಂಬ ಸ್ಥಳಕ್ಕೆ ಕರೆದುಕೊಂಡು ಬಂದರು. ‘ಗೊಲ್ಗೊಥಾ’ ಅಂದರೆ “ತಲೆಬುರುಡೆಗಳು ಇರುವ ಸ್ಥಳ” ಎಂದರ್ಥ.
23 몰약을 탄 포도주를 주었으나 예수께서 받지 아니하시니라
೨೩ಅಲ್ಲಿ ಆತನಿಗೆ ರಕ್ತಬೋಳ ಬೆರಸಿದ ದ್ರಾಕ್ಷಾರಸವನ್ನು ಕೊಟ್ಟರು; ಆದರೆ ಆತನು ಅದನ್ನು ಕುಡಿಯಲಿಲ್ಲ.
24 십자가에 못 박고 그 옷을 나눌새 누가 어느 것을 얻을까 하여 제비를 뽑더라
೨೪ಅವರು ಆತನನ್ನು ಶಿಲುಬೆಗೆ ಹಾಕಿ ಆತನ ಬಟ್ಟೆಗಳಲ್ಲಿ ಯಾವುದು ಯಾರಿಗೆ ಸಿಗಬೇಕೆಂದು ಚೀಟು ಹಾಕಿ ಪಾಲುಮಾಡಿಕೊಂಡರು.
25 때가 제 삼시가 되어 십자가에 못 박으니라
೨೫ಆತನನ್ನು ಶಿಲುಬೆಗೆ ಹಾಕುವಾಗ ಬೆಳಿಗ್ಗೆ ಒಂಭತ್ತು ಗಂಟೆಯಾಗಿತ್ತು.
26 그 위에 있는 죄 패에 유대인의 왕이라 썼고
೨೬“ಈತನು ಯೆಹೂದ್ಯರ ಅರಸನು” ಎಂದು ಆತನ ಮೇಲೆ ಹೊರಿಸಿದ್ದ ದೋಷಾರೋಪಣೆಯನ್ನು, ಶಿಲುಬೆಯ ಮೇಲೆ ಬರೆಯಲಾಗಿತ್ತು.
27 강도 둘을 예수와 함께 십자가에 못 박으니 하나는 그의 우편에 하나는 좌편에 있더라
೨೭ಅದಲ್ಲದೆ ಇಬ್ಬರು ಕಳ್ಳರನ್ನು ತಂದು ಒಬ್ಬನನ್ನು ಆತನ ಬಲಗಡೆಯಲ್ಲಿ ಮತ್ತೊಬ್ಬನನ್ನು ಎಡಗಡೆಯಲ್ಲಿ ಆತನ ಸಂಗಡ ಶಿಲುಬೆಗೆ ಹಾಕಿದರು.
೨೮ಆತನು ಅಧರ್ಮಿಗಳ ಸಂಗಡ ಎಣಿಸಲ್ಪಟ್ಟನು ಎಂಬ ಶಾಸ್ತ್ರವಚನವು ಹೀಗೆ ನೆರವೇರಿತು. ಅಲ್ಲಿ ಹಾದುಹೋಗುವವರು ತಲೆ ಆಲ್ಲಾಡಿಸಿ “ಆಹಾ, ದೇವಾಲಯವನ್ನು ಕೆಡವಿ ಮೂರು ದಿನದಲ್ಲಿ ಪುನಃ ಕಟ್ಟುವವನೇ,
29 지나가는 자들은 자기 머리를 흔들며 예수를 모욕하여 가로되 `아하, 성전을 헐고 사흘에 짓는 자여
೨೯
30 네가 너를 구원하여 십자가에서 내려 오라' 하고
೩೦ಶಿಲುಬೆಯಿಂದ ಇಳಿದು ನಿನ್ನನ್ನು ರಕ್ಷಿಸಿಕೋ” ಎಂದು ಆತನನ್ನು ಅಪಹಾಸ್ಯ ಮಾಡಿದರು.
31 그와 같이 대제사장들도 서기관들과 함께 희롱하며 서로 말하되 `저가 남은 구원하였으되 자기는 구원할 수 없도다
೩೧ಅದೇ ಮೇರೆಗೆ ಮುಖ್ಯಯಾಜಕರೂ ಶಾಸ್ತ್ರಿಗಳೂ, “ಅವನು ಮತ್ತೊಬ್ಬರನ್ನು ರಕ್ಷಿಸಿದನು; ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.
32 이스라엘의 왕 그리스도가 지금 십자가에서 내려와 우리로 보고 믿게 할지어다' 하며 함께 십자가에 못박힌 자들도 예수를 욕하더라
೩೨ಇಸ್ರಾಯೇಲರ ಅರಸನಾದ ಈ ಕ್ರಿಸ್ತನು ಈಗ ಶಿಲುಬೆಯಿಂದ ಇಳಿದು ಬರಲಿ; ಇಳಿದು ಬಂದರೆ ನಾವು ನೋಡಿ ನಂಬುತ್ತೇವೆ” ಎಂದು ತಮ್ಮತಮ್ಮೊಳಗೆ ಅಣಕಿಸುತ್ತಾ ಮಾತನಾಡುತ್ತಿದ್ದರು. ಆತನೊಂದಿಗೆ ಶಿಲುಬೆಗೆ ಹಾಕಲ್ಪಟ್ಟವರು ಸಹ ಆತನನ್ನು ನಿಂದಿಸುತ್ತಿದ್ದರು.
33 제 육시가 되매 온 땅에 어두움이 임하여 제 구시까지 계속하더니
೩೩ಹನ್ನೆರಡು ಗಂಟೆಯಿಂದ ಮೂರು ಗಂಟೆಯ ತನಕ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು.
34 제 구시에 예수께서 크게 소리지르시되 `엘리 엘리 라마 사박다니!' 하시니 이를 번역하면 [나의 하나님 나의 하나님 어찌하여 나를 버리셨나이까?] 하는 뜻이라
೩೪ಮೂರು ಗಂಟೆಗೆ ಯೇಸು, “ಎಲೋಹಿ, ಎಲೋಹಿ, ಲಮಾಸಬಕ್ತಾನೀ?” ಅಂದರೆ “ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ?” ಎಂದು ಮಹಾಧ್ವನಿಯಿಂದ ಕೂಗಿದನು.
35 곁에 섰던 자 중 어떤 이들이 듣고 가로되 `보라 엘리야를 부른다' 하고
೩೫ಹತ್ತಿರ ನಿಂತಿದ್ದವರಲ್ಲಿ ಕೆಲವರು ಅದನ್ನು ಕೇಳಿ, “ನೋಡಿರಿ, ಆತನು ಎಲೀಯನನ್ನು ಕರೆಯುತ್ತಾನೆ” ಅಂದರು.
36 한사람이 달려가서 해융에 신포도주를 머금게 하여 갈대에 꿰어 마시우고 가로되 `가만 두어라 엘리야가 와서 저를 내려 주나 보자' 하더라
೩೬ಆಗ ಒಬ್ಬನು ಓಡಿಹೋಗಿ ಸ್ಪಂಜಿನಿಂದ ಹುಳಿ ದ್ರಾಕ್ಷಾರಸವನ್ನು ತುಂಬಿ ಕೋಲಿನ ತುದಿಗೆ ಸಿಕ್ಕಿಸಿ, “ಇವನನ್ನು ಶಿಲುಬೆಯಿಂದ ಬಿಡುಗಡೆ ಮಾಡಿ ಇಳಿಸುವುದಕ್ಕೆ ಎಲೀಯನು ಬರುವನೋ, ಏನೋ ಕಾದು ನೋಡೋಣ” ಎಂದು ಹೇಳಿ ಅದನ್ನು ಕುಡಿಯುವುದಕ್ಕೆ ಆತನಿಗೆ ಕೊಟ್ಟನು.
೩೭ಆದರೆ ಯೇಸು ಮಹಾಧ್ವನಿಯಿಂದ ಕೂಗಿ ಪ್ರಾಣ ಬಿಟ್ಟನು.
38 이에 성소 휘장이 위로부터 아래까지 찢어져 둘이 되니라
೩೮ಆಗ ದೇವಾಲಯದ ತೆರೆಯು ಮೇಲಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು.
39 예수를 향하여 섰던 백부장이 그렇게 운명하심을 보고 가로되 `이 사람은 진실로 하나님의 아들이었도다' 하더라
೩೯ಯೇಸು ಹೀಗೆ ಪ್ರಾಣಬಿಟ್ಟದ್ದನ್ನು ಎದುರಿಗೆ ನಿಂತು ನೋಡುತ್ತಿದ್ದ ಶತಾಧಿಪತಿಯು, “ನಿಜವಾಗಿ ಈ ಮನುಷ್ಯನು ದೇವಕುಮಾರನೇ” ಅಂದನು.
40 멀리서 바라보는 여자들도 있는데 그 중에 막달라 마리아와 또 작은 야고보와 요세의 어머니 마리아와 또 살로메가 있었으니
೪೦ಇದಲ್ಲದೆ ಅಲ್ಲಿ ಸ್ತ್ರೀಯರು ಸಹ ದೂರದಿಂದ ನೋಡುತ್ತಿದ್ದರು. ಅವರಲ್ಲಿ, ಆತನು ಗಲಿಲಾಯದಲ್ಲಿದ್ದಾಗ ಆತನನ್ನು ಹಿಂಬಾಲಿಸಿ ಸೇವೆಮಾಡುತ್ತಿದ್ದವರಾದ ಮಗ್ದಲದ ಮರಿಯಳು, ಚಿಕ್ಕ ಯಾಕೋಬನ ಮತ್ತು ಯೋಸೆಯನ ತಾಯಿಯಾದ ಮರಿಯಳು, ಸಲೋಮೆ ಎಂಬುವರು ಹಾಗೂ ಆತನ ಸಂಗಡ ಯೆರೂಸಲೇಮಿಗೆ ಬಂದಿದ್ದ ಇನ್ನೂ ಅನೇಕ ಸ್ತ್ರೀಯರು ಇದ್ದರು.
41 이들은 예수께서 갈릴리에 계실 때에 좇아 섬기던 자요 또 이 외에도 예수와 함께 예루살렘에 올라온 여자가 많이 있었더라
೪೧
42 이 날은 예비일 곧 안식일 전날이므로 저물었을 때에
೪೨ಆಗಲೇ ಸಂಜೆಯಾಗಿತ್ತು; ಮತ್ತು ಆ ದಿನವು ‘ಸಿದ್ಧತೆಯ’ ದಿನ, ಅಂದರೆ ಸಬ್ಬತ್ ದಿನದ ಹಿಂದಿನ ದಿನವಾಗಿತ್ತು.
43 아리마대 사람 요셉이 와서 당돌히 빌라도에게 들어가 예수의 시체를 달라 하니 이 사람은 존귀한 공회원이요 하나님의 나라를 기다리는 자라
೪೩ಹೀಗಿರಲಾಗಿ ಅರಿಮಥಾಯದ ಯೋಸೇಫನೆಂಬುವನು ಅಲ್ಲಿಗೆ ಬಂದನು. ಅವನು ಯೆಹೂದ್ಯರ ಹಿರೀಸಭೆಯ ಗೌರವಸ್ಥನಾದ ಸದ್ಯಸನೂ, ದೇವರ ರಾಜ್ಯವನ್ನು ಎದುರುನೋಡುತ್ತಿದ್ದವನು ಆಗಿದ್ದನು. ಅವನು ಧೈರ್ಯದಿಂದ ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹವನ್ನು ತನಗೆ ಕೊಡಿಸಬೇಕೆಂದು ಬೇಡಿಕೊಂಡನು.
44 빌라도는 예수께서 벌써 죽었을까 하고 이상히 여겨 백부장을 불러 죽은지 오래냐? 묻고
೪೪ಪಿಲಾತನು, ಅವನು ಇಷ್ಟು ಬೇಗ ಸತ್ತು ಹೋದನೋ ಎಂದು ಹೇಳಿ ಆಶ್ಚರ್ಯಪಟ್ಟು ಶತಾಧಿಪತಿಯನ್ನು ಕರೆಸಿ, ಅವನು ಆಗಲೇ ಸತ್ತನೋ ಎಂದು ಅವನನ್ನು ಕೇಳಿದನು.
45 백부장에게 알아 본 후에 요셉에게 시체를 내어 주는지라
೪೫ಆತನು ಸತ್ತದ್ದನ್ನು ಶತಾಧಿಪತಿಯಿಂದ ತಿಳಿದುಕೊಂಡು ಅವನ ಪಾರ್ಥಿವ ಶರೀರವನ್ನು ಯೋಸೇಫನಿಗೆ ಕೊಡಿಸಿದನು.
46 요셉이 세마포를 사고 예수를 내려다가 이것으로 싸서 바위 속에 판 무덤에 넣어 두고 돌을 굴려 무덤 문에 놓으매
೪೬ಯೋಸೇಫನು ನಾರುಮಡಿಯನ್ನು ಕೊಂಡುತಂದು ಯೇಸುವನ್ನು ಶಿಲುಬೆಯಿಂದ ಇಳಿಸಿ ನಾರುಮಡಿಯಲ್ಲಿ ಸುತ್ತಿ ಬಂಡೆಯಲ್ಲಿ ಕೊರೆದಿದ್ದ ಸಮಾಧಿಯಲ್ಲಿಟ್ಟು ಸಮಾಧಿಯ ಬಾಗಿಲಿಗೆ ಕಲ್ಲನ್ನು ಉರುಳಿಸಿದನು.
47 때에 막달라 마리아와 요세의 어머니 마리아가 예수 둔 곳을 보더라
೪೭ಮಗ್ದಲದ ಮರಿಯಳೂ ಮತ್ತು ಯೋಸೆಯನ ತಾಯಿ ಮರಿಯಳೂ ಯೇಸುವನ್ನಿಟ್ಟಿದ್ದ ಸ್ಥಳವನ್ನು ನೋಡಿದರು.