< 마가복음 2 >
1 수일 후에 예수께서 다시 가버나움에 들어가시니 집에 계신 소문이 들린지라
೧ಕೆಲವು ದಿನಗಳಾದ ಮೇಲೆ ಯೇಸು ಕಪೆರ್ನೌಮಿಗೆ ಹಿಂತಿರುಗಿ ಬಂದನು. ಆತನು ಮನೆಯಲ್ಲಿದ್ದಾನೆಂಬ ವರ್ತಮಾನವು ಜನರಲ್ಲಿ ಹಬ್ಬಿತ್ತು.
2 많은 사람이 모여서 문 앞에라도 용신할 수 없게 되었는데 예수께서 저희에게 도를 말씀하시더니
೨ಆಗ ಬಹು ಜನರು ಅಲ್ಲಿ ಕೂಡಿಬಂದಿದ್ದರಿಂದ ಬಾಗಿಲಿನ ಬಳಿಯಲ್ಲಿಯೂ ಕೂಡ ಸ್ಥಳವಿರಲಿಲ್ಲ. ಯೇಸು ಅವರಿಗೆ ದೇವರ ವಾಕ್ಯವನ್ನು ಹೇಳುತ್ತಿದ್ದನು.
3 사람들이 한 중풍병자를 네 사람에게 메워 가지고 예수께로 올새
೩ಅಷ್ಟರಲ್ಲಿ ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ತಂದರು; ನಾಲ್ಕು ಮಂದಿಯು ಆತನನ್ನು ಹೊತ್ತುಕೊಂಡಿದರು.
4 무리를 인하여 예수께 데려갈 수 없으므로 그 계신 곳의 지붕을 뜯어 구멍을 내고 중풍병자의 누운 상을 달아내리니
೪ಜನರು ಗುಂಪಾಗಿದ್ದುದರಿಂದ ಅವರು ಆತನ ಹತ್ತಿರಕ್ಕೆ ಬರಲು ಸಾಧ್ಯವಾಗದೆ ಆತನು ನಿಂತ ಸ್ಥಳಕ್ಕೆ ಸರಿಯಾಗಿ ಮನೆಯ ಮೇಲ್ಛಾವಣಿಯನ್ನು ತೆರೆದು ಕಿಂಡಿಯೊಂದನ್ನು ಮಾಡಿ ಪಾರ್ಶ್ವವಾಯು ರೋಗಿಯನ್ನು ಮಲಗಿದ್ದ ಹಾಸಿಗೆಯ ಸಮೇತ ಕೆಳಗಿಳಿಸಿದರು.
5 예수께서 저희의 믿음을 보시고 중풍환자에게 이르시되 `소자야 네 죄사함을 받았느니라' 하시니
೫ಯೇಸು ಅವರ ನಂಬಿಕೆಯನ್ನು ನೋಡಿ ಆ ಪಾರ್ಶ್ವವಾಯು ರೋಗಿಗೆ, “ಮಗನೇ, ನಿನ್ನಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು.
6 어떤 서기관들이 거기 앉아서 마음에 의논하기를
೬ಆದರೆ ಶಾಸ್ತ್ರಿಗಳಲ್ಲಿ ಕೆಲವರು ಅಲ್ಲಿ ಕುಳಿತುಕೊಂಡಿದ್ದು;
7 `이 사람이 어찌 이렇게 말하는가 참람하도다 오직 하나님 한 분외에는 누가 능히 죄를 사하겠느냐?'
೭“ಈತನು ಯಾಕೆ ಹೀಗೆ ಮಾತನಾಡುತ್ತಾನೆ? ಇದು ದೇವದೂಷಣೆ. ದೇವರೊಬ್ಬನೇ ಹೊರತು ಮತ್ತಾರು ಪಾಪಗಳನ್ನು ಕ್ಷಮಿಸಬಲ್ಲರು?” ಎಂದು ತಮ್ಮ ಮನಸ್ಸಿನಲ್ಲಿ ಆಲೋಚಿಸಿಕೊಳ್ಳುತ್ತಿದ್ದರು.
8 저희가 속으로 이렇게 의논하는 줄을 예수께서 곧 중심에 아시고 이르시되 `어찌하여 이것을 마음에 의논하느냐?
೮ಹೀಗೆ ಆಲೋಚಿಸಿಕೊಳ್ಳುತ್ತಿದ್ದುದನ್ನು ಕೂಡಲೆ ಯೇಸು ತನ್ನ ಆತ್ಮದಲ್ಲಿ ತಿಳಿದುಕೊಂಡು ಅವರಿಗೆ, “ನೀವು ನಿಮ್ಮ ಮನಸ್ಸಿನಲ್ಲಿ ಯಾಕೆ ಹೀಗೆ ಯೋಚಿಸುತ್ತೀರಿ?
9 중풍병자에게 네 죄 사함을 받았느니라 하는 말과 일어나 네 상을 가지고 걸어가라 하는 말이 어느 것이 쉽겠느냐?
೯ಯಾವುದು ಸುಲಭ? ಪಾರ್ಶ್ವವಾಯು ರೋಗಿಗೆ ‘ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅನ್ನುವುದೋ’ ಅಥವಾ ‘ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ’ ಅನ್ನುವುದೋ?
10 그러나 인자가 땅에서 죄를 사하는 권세가 있는 줄을 너희로 알게 하려 하노라' 하시고 중풍병자에게 말씀하시되
೧೦ಆದರೆ ಪಾಪಗಳನ್ನು ಕ್ಷಮಿಸಿಬಿಡುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದನ್ನು ನೀವು ತಿಳಿಯಬೇಕು” ಎಂದು ಹೇಳಿ ಪಾರ್ಶ್ವವಾಯು ರೋಗಿಯನ್ನು ನೋಡಿ
11 `내가 네게 이르노니 일어나 네 상을 가지고 집으로 가라!' 하시니
೧೧“ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಿನ್ನ ಮನೆಗೆ ಹೋಗೆಂದು ನಿನಗೆ ಹೇಳುತ್ತೇನೆ” ಅಂದನು.
12 그가 일어나 곧 상을 가지고 모든 사람 앞에서 나가거늘 저희가 다 놀라 영광을 하나님께 돌리며 가로되 `우리가 이런 일을 도무지 보지 못하였다' 하더라
೧೨ಅವನು ಕೂಡಲೆ ಎದ್ದು ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟುಹೋದನು. ಅದನ್ನು ನೋಡಿದವರೆಲ್ಲರು ಆಶ್ಚರ್ಯಚಕಿತರಾದರು, “ಇದುವರೆಗೆ ನಾವು ಇಂಥದನ್ನು ಎಂದಿಗೂ ನೋಡಿದ್ದೇ” ಇಲ್ಲವೆಂದು ಹೇಳುತ್ತಾ ದೇವರಿಗೆ ಮಹಿಮೆ ಸಲ್ಲಿಸಿದರು.
13 예수께서 다시 바닷가에 나가시매 무리가 다 나아왔거늘 예수께서 저희를 가르치시니라
೧೩ಯೇಸು ಹೊರಟು ತಿರುಗಿ ಸಮುದ್ರದ ಬಳಿಗೆ ಹೋದನು. ಜನರು ಗುಂಪಾಗಿ ಆತನ ಬಳಿಗೆ ಬಂದಾಗ ಆತನು ಅವರಿಗೆ ಉಪದೇಶ ಮಾಡಿದನು.
14 또 지나가시다가 알패오의 아들 레위가 세관에 앉아 있는것을 보시고 저에게 이르시되 `나를 좇으라!' 하시니 일어나 좇으니라
೧೪ಆತನು ಅಲ್ಲಿಂದ ಹೋಗುತ್ತಿರುವಾಗ ಸುಂಕ ವಸೂಲಿಮಾಡುವ ಸ್ಥಳದಲ್ಲಿ ಕುಳಿತಿದ್ದ ಅಲ್ಫಾಯನ ಮಗನಾದ ಲೇವಿಯನ್ನು ನೋಡಿ, “ನನ್ನನ್ನು ಹಿಂಬಾಲಿಸು” ಎಂದು ಅವನನ್ನು ಕರೆಯಲು, ಅವನು ಎದ್ದು ಯೇಸುವನ್ನು ಹಿಂಬಾಲಿಸಿದನು.
15 그의 집에 앉아 잡수실때에 많은 세리와 죄인들이 예수와 그 제자들과 함께 앉았으니 이는 저희가 많이 있어서 예수를 좇음이러라
೧೫ಅನಂತರ ಯೇಸುವು ಆ ಲೇವಿಯನ ಮನೆಯೊಳಗೆ ಊಟಮಾಡುತ್ತಿರುವಾಗ, ಬಹು ಮಂದಿ ಸುಂಕದವರೂ, ಪಾಪಿಗಳೂ ಯೇಸುವಿನ ಮತ್ತು ಆತನ ಶಿಷ್ಯರ ಸಂಗಡ ಊಟಕ್ಕೆ ಕುಳಿತುಕೊಂಡರು. ಇಂಥವರಲ್ಲಿ ಬಹು ಮಂದಿ ಯೇಸುವನ್ನು ಹಿಂಬಾಲಿಸಿದವರಾಗಿದ್ದರು.
16 바리새인의 서기관들이 예수께서 죄인과 세리들과 함께 잡수시는 것을 보고 그 제자들에게 이르되 어찌하여 세리와 죄인들과 함께 먹는가
೧೬ಫರಿಸಾಯರಾದ ಶಾಸ್ತ್ರಿಗಳು ಆತನು ಪಾಪಿಗಳ ಮತ್ತು ಸುಂಕದವರ ಸಂಗಡ ಊಟ ಮಾಡುವುದನ್ನು ಕಂಡು ಆತನ ಶಿಷ್ಯರಿಗೆ, “ಈತನು ಸುಂಕದವರ ಮತ್ತು ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?” ಎಂದು ಕೇಳಿದರು.
17 예수께서 들으시고 저희에게 이르시되 `건강한 자에게는 의원이 쓸데없고 병든 자에게라야 쓸데 있느니라 내가 의원을 부르러 온것이 아니요 죄인을 부르러 왔노라' 하시니라
೧೭ಯೇಸು ಅದನ್ನು ಕೇಳಿ ಅವರಿಗೆ, “ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ; ಕ್ಷೇಮವಿಲ್ಲದವರಿಗೆ ಬೇಕು. ನಾನು ನೀತಿವಂತರನ್ನು ಕರೆಯುವುದಕ್ಕೆ ಬಂದಾತನಲ್ಲ, ಪಾಪಿಗಳನ್ನು ಕರೆಯುವುದಕ್ಕೆ ಬಂದವನು” ಅಂದನು.
18 요한의 제자들과 바리새인들이 금식하고 있는지라 혹이 예수께 와서 말하되 `요한의 제자들과 바리새인의 제자들은 금식하는데 어찌하여 당신의 제자들은 금식하지 아니하나이까?'
೧೮ಯೋಹಾನನ ಶಿಷ್ಯರೂ ಫರಿಸಾಯರೂ ಉಪವಾಸ ಮಾಡುತ್ತಿದ್ದರು. ಅವರು ಆತನ ಬಳಿಗೆ ಬಂದು ಯೋಹಾನನ ಶಿಷ್ಯರೂ ಫರಿಸಾಯರೂ ಉಪವಾಸಮಾಡುತ್ತಾರಲ್ಲಾ? “ನಿನ್ನ ಶಿಷ್ಯರು ಏಕೆ ಉಪವಾಸಮಾಡುವುದಿಲ್ಲ?” ಎಂದು ಕೇಳಿದರು.
19 예수께서 저희에게 이르시되 `혼인집 손님들이 신랑과 함께 있을때에 금식할 수 있느냐 신랑과 함께 있을 동안에는 금식할 수 없나니
೧೯ಅದಕ್ಕೆ ಯೇಸು ಅವರಿಗೆ, “ಮದುವೆಯ ಜನರು ತಮ್ಮ ಸಂಗಡ ಮದಲಿಂಗನು ಇರುವಲ್ಲಿ ಉಪವಾಸಮಾಡುವುದುಂಟೇ? ಮದಲಿಂಗನು ತಮ್ಮ ಸಂಗಡ ಇರುವ ತನಕ ಅವರು ಉಪವಾಸ ಮಾಡಲಾರರು.
20 그러나 신랑을 빼앗길 날이 이르리니 그 날에는 금식할 것이니라
೨೦ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಂಡು ಹೋಗುವ ಕಾಲ ಬರುತ್ತದೆ. ಆ ಕಾಲದಲ್ಲಿ ಅವರು ಉಪವಾಸ ಮಾಡುವರು.
21 생베 조각을 낡은 옷에 붙이는 자가 없나니 만일 그렇게 하면 기운 새것이 낡은 그것을 당기어 해어짐이 더하게 되느니라
೨೧“ಯಾರೂ ಹೊಸ ಬಟ್ಟೆಯ ತುಂಡನ್ನು ಹಳೆಯ ವಸ್ತ್ರಕ್ಕೆ ತ್ಯಾಪೆ ಹಚ್ಚುವುದಿಲ್ಲ. ಹಚ್ಚಿದರೆ ಆ ಹೊಸ ತ್ಯಾಪೆಯು ಹಳೆಯ ವಸ್ತ್ರವನ್ನು ಹಿಂಜುವುದರಿಂದ ಹರಕು ಹೆಚ್ಚಾಗುತ್ತದೆ.
22 새 포도주를 낡은 가죽부대에 넣는 자가 없나니 만일 그렇게 하면 새 포도주가 부대를 터뜨려 포도주와 부대를 버리게 되리라 오직 새 포도주는 새 부대에 넣느니라' 하시니라
೨೨ಮತ್ತು ಹಳೆಯಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕಿಡುವುದಿಲ್ಲ, ಹಾಕಿದರೆ ಆ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ದ್ರಾಕ್ಷಾರಸವು ಮತ್ತು ಬುದ್ದಲಿಗಳು ಎರಡೂ ನಾಶವಾಗುವವು. ಆದುದರಿಂದ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು” ಎಂದು ಹೇಳಿದನು.
23 안식일에 예수께서 밀밭 사이로 지나가실새 그 제자들이 길을 열며 이삭을 자르니
೨೩ಯೇಸು ಸಬ್ಬತ್ ದಿನದಲ್ಲಿ ಪೈರಿನ ಹೊಲಗಳನ್ನು ಹಾದುಹೋಗುತ್ತಿರುವಾಗ, ಆತನ ಶಿಷ್ಯರು ತೆನೆಗಳನ್ನು ಮುರಿದು ತಿಂದರು.
24 바리새인들이 예수께 말하되 `보시오 저희가 어찌하여 안식일에 하지 못할 일을 하나이까?'
೨೪ಫರಿಸಾಯರು ಆತನನ್ನು, “ನೋಡು, ಇವರು ಸಬ್ಬತ್ ದಿನದಲ್ಲಿ ಧರ್ಮಸಮ್ಮತವಲ್ಲದ್ದನ್ನು ಏಕೆ ಮಾಡುತ್ತಾರೆ?” ಎಂದು ಕೇಳಿದರು.
25 예수께서 가라사대 `다윗이 자기와 및 함께 한 자들이 핍절되어 시장할 때에 한 일을 읽지 못하였느냐?
೨೫ಆಗ ಯೇಸು ಅವರಿಗೆ, “ದಾವೀದನು ತಾನೂ ತನ್ನ ಸಂಗಡ ಇದ್ದವರೂ ಆಹಾರವಿಲ್ಲದೆ ಹಸಿದಾಗ ಏನು ಮಾಡಿದನೆಂಬುದನ್ನು ನೀವು ಎಂದಾದರೂ ಓದಲಿಲ್ಲವೋ?
26 그가 아비아달 대제사장 때에 하나님의 전에 들어가서 제사장 외에는 먹지 못하는 진설병을 먹고 함께 한자들에게도 주지 아니하였느냐?
೨೬ಅವನು ಮಹಾಯಾಜಕನಾದ ಅಬಿಯಾತರನ ಕಾಲದಲ್ಲಿ ದೇವಮಂದಿರದೊಳಕ್ಕೆ ಹೋಗಿ ಯಾಜಕರು ಹೊರತು ಮತ್ತಾರೂ ತಿನ್ನಬಾರದ ನೈವೇದ್ಯದ ರೊಟ್ಟಿಗಳನ್ನು ತಾನು ತಿಂದು ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲಾ?” ಎಂದು ನುಡಿಯುತ್ತಾ,
27 또 가라사대 안식일은 사람을 위하여 있는 것이요 사람이 안식일을 위하여 있는 것이 아니니
೨೭“ಸಬ್ಬತ್ ದಿನವು ಮನುಷ್ಯರಿಗೋಸ್ಕರ ಮಾಡಲಾಯಿತೇ ಹೊರತು ಮನುಷ್ಯರನ್ನು ಸಬ್ಬತ್ ದಿನಕ್ಕಾಗಿ ಮಾಡಲಿಲ್ಲ.
28 이러므로 인자는 안식일에도 주인이니라!'
೨೮ಹೀಗಿರಲಾಗಿ ಮನುಷ್ಯಕುಮಾರನು ಸಬ್ಬತ್ ದಿನಕ್ಕೂ ಒಡೆಯನಾಗಿದ್ದಾನೆ” ಎಂದು ಯೇಸು ಹೇಳಿದನು.