< 민수기 15 >

1 여호와께서 모세에게 일러 가라사대
ಯೆಹೋವ ದೇವರು ಮೋಶೆಗೆ,
2 이스라엘 자손에게 고하여 그들에게 이르라 너희가 내게 주어 거하게 할 땅에 들어가서
“ಇಸ್ರಾಯೇಲರ ಸಂಗಡ ಮಾತನಾಡಿ ಅವರಿಗೆ, ‘ನಾನು ನಿಮಗೆ ಕೊಡುವ ನಿಮ್ಮ ನಿವಾಸಗಳ ದೇಶಕ್ಕೆ ಬಂದಾಗ,
3 여호와께 화제나 번제나 서원을 갚는 제나 낙헌제나 정한 절기제에 소나 양으로 여호와께 향기롭게 드릴 때에는
ಯೆಹೋವ ದೇವರಿಗೆ ಪಶುಗಳಿಂದಾದರೂ ಕುರಿಗಳಿಂದಾದರೂ ಸುವಾಸನೆಯನ್ನುಂಟುಮಾಡುವ ದಹನಬಲಿಯಾಗಲಿ, ಹರಕೆಯನ್ನು ಈಡೇರಿಸುವ ಬಲಿಯನ್ನಾಗಲಿ, ಉಚಿತವಾದ ಸಮರ್ಪಣೆಯಾಗಲಿ, ನಿಮ್ಮ ಪವಿತ್ರ ಹಬ್ಬಗಳಲ್ಲಿಯಾಗಲಿ ಯೆಹೋವ ದೇವರಿಗೆ ಬೆಂಕಿಯಿಂದ ಅರ್ಪಿಸಲಾಗಲಿ.
4 그 예물을 드리는 자는 고운 가루 에바 십분지 일에 기름 한 힌의 사분지 일을 섞어 여호와께 소제로 드릴 것이며
ಅದರೊಂದಿಗೆ ಯೆಹೋವ ದೇವರಿಗೆ ತನ್ನ ಬಲಿಯನ್ನು ಅರ್ಪಿಸುವಾಗ ಧಾನ್ಯ ಅರ್ಪಣೆಗಾಗಿ ಸುಮಾರು ಒಂದುವರೆ ಕಿಲೋಗ್ರಾಂ ಗೋಧಿ ಹಿಟ್ಟನ್ನು ಒಂದು ಲೀಟರ್ ಓಲಿವ್ ಎಣ್ಣೆಗೆ ಬೆರೆಸಲಾಗುತ್ತದೆ.
5 번제나 다른 제사로 드리는 제물이 어린 양이면 전제로 포도주 한 힌의 사분 일을 예비할 것이요
ಪಾನದ ಅರ್ಪಣೆಗಾಗಿ ದಹನಬಲಿಯ ಸಂಗಡ ಒಂದು ಕುರಿಗೋಸ್ಕರ ಒಂದು ಲೀಟರ್ ದ್ರಾಕ್ಷಾರಸವನ್ನು ಅರ್ಪಿಸಬೇಕು.
6 수양이면 소제로 고운 가루 한 에바 십분지 이에 기름 한 힌의 삼분지 일을 섞어 예비하고
“‘ಟಗರನ್ನು ಅರ್ಪಿಸುವಾಗ ಅದರೊಂದಿಗೆ ಧಾನ್ಯ ಅರ್ಪಣೆಗಾಗಿ ಸುಮಾರು ಒಂದೂವರೆ ಲೀಟರ್ ಓಲಿವ್ ಎಣ್ಣೆ ಬೆರೆಸಿದ ಮೂರು ಕಿಲೋಗ್ರಾಂ ನಯವಾದ ಹಿಟ್ಟನ್ನು ನೀನು ಸಿದ್ಧಮಾಡಬೇಕು.
7 전제로 포도주 한 힌의 삼분지 일을 드려 여호와 앞에 향기롭게 할 것이요
ಪಾನದ ಸಮರ್ಪಣೆಯಾಗಿ ಯೆಹೋವ ದೇವರಿಗೆ ಸುವಾಸನೆಗಾಗಿ ಒಂದು ಲೀಟರ್ ದ್ರಾಕ್ಷಾರಸವನ್ನು ಅರ್ಪಿಸಬೇಕು.
8 번제로나 서원을 갚는 제로나 화목제로 수송아지를 예비하여 여호와께 드릴 때에는
“‘ನೀನು ಯೆಹೋವ ದೇವರಿಗೆ ದಹನಬಲಿಗಾಗಿ ಇಲ್ಲವೆ ಪ್ರಮಾಣವನ್ನು ಈಡೇರಿಸುವ ಬಲಿಗಾಗಿ ಇಲ್ಲವೆ ಸಮಾಧಾನದ ಬಲಿಗಳಿಗಾಗಿ ಹೋರಿಯನ್ನು ನೀನು ಸಿದ್ಧಮಾಡುವಾಗ,
9 소제로 고운 가루 한 에바 십분지 삼에 기름 반 힌을 섞어 그 수송아지와 함께 드리고
ನೀವು ಆ ಹೋರಿಯೊಂದಿಗೆ ಧಾನ್ಯ ಸಮರ್ಪಣೆಯಾಗಿ ಸುಮಾರು ಎರಡು ಲೀಟರ್ ಓಲಿವ್ ಎಣ್ಣೆ ಬೆರೆಸಿದ ಐದು ಕಿಲೋಗ್ರಾಂ ಗೋಧಿ ಹಿಟ್ಟನ್ನು ಅರ್ಪಿಸಬೇಕು.
10 전제로 포도주 반 힌을 드려 여호와 앞에 향기로운 화제를 삼을지니라
ಇದಲ್ಲದೆ, ಪಾನದ್ರವ್ಯಕ್ಕಾಗಿ ಒಂದುವರೆ ಲೀಟರ್ ದ್ರಾಕ್ಷಾರಸವನ್ನು ಸಮರ್ಪಿಸಬೇಕು. ಇದು ಯೆಹೋವ ದೇವರಿಗೆ ಸುವಾಸನೆಯಾದ ದಹನಬಲಿಯಾಗುವುದು.
11 수송아지나 수양이나 어린 수양이나 어린 염소에는 그 마리 수마다 이 위와 같이 행하되
ಹೀಗೆ ಒಂದು ಹೋರಿ, ಟಗರು, ಕುರಿಮರಿ, ಮೇಕೆ, ಇವುಗಳಲ್ಲಿ ಪ್ರತಿಯೊಂದು ಬಲಿಪ್ರಾಣಿಯ ಸಂಗಡ ಈ ಪ್ರಕಾರ ಮಾಡತಕ್ಕದ್ದು.
12 너희 예비하는 수효를 따라 각기 수효에 맞게 하라
ನೀವು ಸಿದ್ಧಪಡಿಸಿದ ಬಲಿಗಳ ಲೆಕ್ಕದ ಪ್ರಕಾರ ನೀವು ಒಂದೊಂದನ್ನು ಅದರ ಲೆಕ್ಕದ ಪ್ರಕಾರ ಮಾಡತಕ್ಕದ್ದು.
13 무릇 본토 소생이 여호와께 향기로운 화제를 드릴 때에는 이 법대로 할 것이요
“‘ಯೆಹೋವ ದೇವರಿಗೆ ಸುಗಂಧದ ದಹನಬಲಿಯನ್ನು ಅರ್ಪಿಸುವಾಗ ಸ್ಥಳೀಯ ಮೂಲದ ಇಸ್ರಾಯೇಲರೆಲ್ಲರೂ ಇವುಗಳನ್ನು ಈ ರೀತಿಯಾಗಿಯೇ ಮಾಡಬೇಕು.
14 너희 중에 우거하는 타국인이나 너희 중에 대대로 있는 자가 누구든지 여호와께 향기로운 화제를 드릴 때에는 너희 하는대로 그도 그리할 것이라
ನಿಮ್ಮ ಸಂಗಡ ಪ್ರಯಾಣ ಮಾಡುವ ಪರದೇಶಿಯಾಗಲಿ ಇಲ್ಲವೆ ನಿಮ್ಮ ಮುಂದಿನ ಸಂತತಿಯವರ ಸಂಗಡ ಇರುವವನಾಗಲಿ, ಯೆಹೋವ ದೇವರಿಗೆ ಸುಗಂಧದ ದಹನಬಲಿಯನ್ನು ಸಮರ್ಪಿಸಿದಾಗ, ನೀವು ಹೇಗೆ ಮಾಡುತ್ತೀರೋ ಹಾಗೆಯೇ ಅವನು ಮಾಡಲಿ.
15 회중 곧 너희나 우거하는 타국인이나 한 율례니 너희의 대대로 영원한 율례라 너희의 어떠한 대로 타국인도 여호와 앞에 그러하리라
ನಿಮಗೂ ನಿಮ್ಮ ಕೂಡ ಪ್ರಯಾಣ ಮಾಡುವ ಪರಕೀಯನಿಗೂ ಒಂದೇ ಕಟ್ಟಳೆ ಇರಬೇಕು. ಯೆಹೋವ ದೇವರ ಎದುರಿನಲ್ಲಿ ನೀವು ಇರುವ ಪ್ರಕಾರ ಪರಕೀಯನೂ ಇರಬೇಕು.
16 너희나 너희 중에 우거하는 타국인이나 한 법도, 한 규례니라
ನಿಮಗೂ, ನಿಮ್ಮ ಕೂಡ ಪ್ರಯಾಣ ಮಾಡುವ ಪರಕೀಯನಿಗೂ ಒಂದೇ ಪ್ರಮಾಣವೂ ಒಂದೇ ನ್ಯಾಯವೂ ಇರಬೇಕು,’” ಎಂದರು.
17 여호와께서 모세에게 일러 가라사대
ಯೆಹೋವ ದೇವರು ಮೋಶೆಗೆ,
18 이스라엘 자손에게 고하여 이르라 너희가 나의 인도하는 땅에 들어가거든
“ಇಸ್ರಾಯೇಲರ ಸಂಗಡ ಮಾತನಾಡಿ ಅವರಿಗೆ: ‘ನಾನು ನಿಮ್ಮನ್ನು ಕರೆದುಕೊಂಡುಹೋಗುವ ದೇಶಕ್ಕೆ ನೀವು ಸೇರಿದನಂತರ,
19 그 땅의 양식을 먹을 때에 여호와께 거제를 드리되
ಆ ದೇಶದ ಆಹಾರವನ್ನು ತಿನ್ನುವಾಗ, ನೀವು ಅದರಲ್ಲಿ ಸ್ವಲ್ಪವನ್ನು ಯೆಹೋವ ದೇವರಿಗೆ ಕಾಣಿಕೆಯಾಗಿ ಅರ್ಪಿಸಬೇಕು.
20 너희의 처음 익은 곡식 가루 떡을 거제로 타작 마당의 거제같이 들어 드리라
ನೀವು ಕಣದಲ್ಲಿರುವ ಗೋಧಿಯಲ್ಲಿ ಪ್ರಥಮ ಫಲವನ್ನು ಕಾಣಿಕೆಯಾಗಿ ಅರ್ಪಿಸುವಂತೆ ಕಣಕದಿಂದ ಮಾಡುವ ನಿಮ್ಮ ಪ್ರಥಮ ಬೀಸಿದ ಹಿಟ್ಟಿನ ರೊಟ್ಟಿಯನ್ನು ಸಮರ್ಪಿಸಬೇಕು.
21 너희의 처음 익은 곡식 가루 떡을 대대에 여호와께 거제로 드릴지니라
ನೀವು ಮತ್ತು ನಿಮ್ಮ ಸಂತತಿಯವರು ನಿಮ್ಮ ಕಣದಿಂದ ಮಾಡಿದ ಪ್ರಥಮ ರೊಟ್ಟಿಯನ್ನು ಯೆಹೋವ ದೇವರಿಗೆ ಸಮರ್ಪಿಸಬೇಕು.
22 너희가 그릇 범죄하여 여호와가 모세에게 말한 이 모든 명령을 지키지 못하되
“‘ನೀವು ತಪ್ಪಿ ಯೆಹೋವ ದೇವರು ಮೋಶೆಗೆ ಹೇಳಿದ ಈ ಸಕಲ ಆಜ್ಞೆಗಳ ಪ್ರಕಾರ ಮಾಡದಿದ್ದರೆ,
23 곧 여호와가 모세로 너희에게 명한 모든 것을 여호와가 명한 날부터 이후 너희의 대대에 지키지 못하여
ನಿಮಗೆ ಆಜ್ಞೆಗಳನ್ನು ಕೊಟ್ಟ ದಿವಸ ಮೊದಲುಗೊಂಡು, ನಿಮ್ಮ ಸಂತತಿಗಳವರೆಗೂ ಯೆಹೋವ ದೇವರು ಮೋಶೆಯ ಕೈಯಿಂದ ನಿಮಗೆ ಆಜ್ಞಾಪಿಸಿದ ಪ್ರಕಾರ ನೀವು ಮಾಡದೆ ಹೋದರೆ,
24 회중이 부지중에 그릇 범죄하였거든 온 회중은 수송아지 하나를 여호와께 향기로운 화제로 드리고 규례대로 그 소제와 전제를 드리고 수염소 하나를 속죄제로 드릴 것이라
ಅದು ಸಭೆಗೆ ತಿಳಿಯದೆ ತಪ್ಪು ಆಗಿರುವ ಪಕ್ಷದಲ್ಲಿ, ಸಭೆಯು ಯೆಹೋವ ದೇವರಿಗೆ ಸುವಾಸನೆಯಾದ ದಹನಬಲಿಗಾಗಿ ಒಂದು ಎಳೆಯ ಹೋರಿಯನ್ನು ಕ್ರಮದ ಪ್ರಕಾರ ಅದರ ಧಾನ್ಯ ಸಮರ್ಪಣೆಯನ್ನೂ, ಪಾನದ ಸಮರ್ಪಣೆಯನ್ನೂ, ಪಾಪ ಪರಿಹಾರಕ ಬಲಿಯಾಗಿ ಮೇಕೆಗಳಿಂದ ಒಂದು ಹೋತವನ್ನೂ ಅರ್ಪಿಸಬೇಕು.
25 제사장이 이스라엘 자손의 온 회중을 위하여 속죄하면 그들이 사함을 얻으리니 이는 그릇 범죄함이며 또 그 그릇 범죄함을 인하여 예물 곧 화제와 속죄제를 여호와께 드렸음이라
ಯಾಜಕನು ಇಸ್ರಾಯೇಲರ ಸಮಸ್ತ ಸಭೆಗೋಸ್ಕರ ಅವರಿಗೆ ಕ್ಷಮೆಯಾಗುವ ಹಾಗೆ ಪ್ರಾಯಶ್ಚಿತ್ತ ಮಾಡಬೇಕು. ಏಕೆಂದರೆ ಅದು ತಿಳಿಯದೆ ಮಾಡಲಾಗಿತ್ತು. ಆದರೂ ಅವರು ಯೆಹೋವ ದೇವರಿಗೆ ದಹನಬಲಿಯಾಗಿ ತಮ್ಮ ಸಮರ್ಪಣೆಯನ್ನೂ, ತಮ್ಮ ತಪ್ಪಿಗೋಸ್ಕರ ಪಾಪ ಪರಿಹಾರಕ ಬಲಿಯನ್ನೂ ಯೆಹೋವ ದೇವರ ಮುಂದೆ ತರಬೇಕು.
26 이스라엘 자손의 온 회중과 그들 중에 우거하는 타국인도 사함을 얻을 것은 온 백성이 그릇 범죄하였음이니라
ಆಗ ಇಸ್ರಾಯೇಲರ ಸಮಸ್ತ ಸಮೂಹದವರಿಗೂ, ಅವರೊಳಗೆ ಪರಕೀಯನಾಗಿ ಪ್ರವಾಸಿಯಾಗಿರುವವನಿಗೂ ಅದು ಕ್ಷಮಾಪಣೆಯಾಗುವುದು. ಏಕೆಂದರೆ ಎಲ್ಲರೂ ತಿಳುವಳಿಕೆ ಇಲ್ಲದವರಾಗಿದ್ದರು.
27 만일 한 사람이 그릇 범죄하거든 일년 된 암염소로 속죄제를 드릴 것이요
“‘ಯಾವನಾದರೂ ಒಬ್ಬನು ತಿಳಿಯದೆ ಪಾಪ ಮಾಡುವುದಾದರೆ, ಪಾಪ ಪರಿಹಾರಕ ಬಲಿಗಾಗಿ ಒಂದು ವರ್ಷದ ಮೇಕೆಯನ್ನು ತರಬೇಕು.
28 제사장은 그 그릇 범죄한 사람이 그릇하여 여호와 앞에 얻은 죄를 위하여 속죄하여 그 죄를 속할지니 그리하면 사함을 얻으리라!
ತಿಳಿಯದೆ ಪಾಪ ಮಾಡಿದವನಿಗೋಸ್ಕರ ಯಾಜಕನು ಯೆಹೋವ ದೇವರ ಮುಂದೆ ಪ್ರಾಯಶ್ಚಿತ್ತ ಮಾಡಬೇಕು. ಅದು ಪಾಪಕ್ಷಮಾಪಣೆಯಾಗುವ ಹಾಗೆ ಅದಕ್ಕೋಸ್ಕರ ಪ್ರಾಯಶ್ಚಿತ್ತ ಮಾಡಬೇಕು.
29 이스라엘 자손 중 본토 소생이든지 그들 중에 우거하는 타국인이든지 무릇 그릇 범죄한 자에게 대한 법이 동일하거니와
ಸ್ಥಳೀಯ ಮೂಲದ ಇಸ್ರಾಯೇಲರಿಗೂ ಅವರಲ್ಲಿ ಪ್ರವಾಸಿಯಾಗಿರುವ ಪರಕೀಯನಿಗೂ ತಿಳಿಯದೆ ಪಾಪಮಾಡಿದವನಿಗೂ ಒಂದೇ ನಿಯಮ ಇರಬೇಕು.
30 본토 소생이든지 타국인이든지 무릇 짐짓 무엇을 행하면 여호와를 훼방하는 자니 그 백성 중에서 끊쳐질 것이라
“‘ಯಾವನಾದರೂ ಅಂದರೆ ದೇಶದಲ್ಲಿ ಹುಟ್ಟಿದವನಾಗಲಿ, ಪರಕೀಯನಾಗಲಿ ಬೇಕೆಂದು ಪಾಪಮಾಡಿದರೆ, ಅವನು ಯೆಹೋವ ದೇವರನ್ನು ನಿಂದಿಸಿದ್ದಾನೆ. ಆ ಮನುಷ್ಯನನ್ನು ಸ್ವಜನರಿಂದ ತೆಗೆದುಹಾಕಬೇಕು.
31 그런 사람은 여호와의 말씀을 멸시하고 그 명령을 파괴하였은즉 그 죄악이 자기에게로 돌아가서 온전히 끊쳐지리라
ಅವನು ಯೆಹೋವ ದೇವರ ವಾಕ್ಯವನ್ನು ಅವಮಾನ ಮಾಡಿ, ಅವರ ಆಜ್ಞೆಗಳನ್ನು ಮೀರಿದ್ದರಿಂದ, ಆ ಮನುಷ್ಯನನ್ನು ನಿಶ್ಚಯವಾಗಿ ತೆಗೆದುಹಾಕಬೇಕು. ಅವನ ಅಕ್ರಮವು ಅವನ ಮೇಲೆ ಇರುವುದು,’” ಎಂದರು.
32 이스라엘 자손이 광야에 거할 때에 안식일에 어떤 사람이 나무하는 것을 발견한지라
ಇಸ್ರಾಯೇಲರು ಮರುಭೂಮಿಯಲ್ಲಿದ್ದಾಗ, ಅವರು ಸಬ್ಬತ್ ದಿನದಲ್ಲಿ ಸೌದೆಯನ್ನು ಕೂಡಿಸುವ ಒಬ್ಬನನ್ನು ಕಂಡರು.
33 그 나무하는 자를 발견한 자들이 그를 모세와 아론과 온 회중의 앞으로 끌어 왔으나
ಆಗ ಸೌದೆ ಕೂಡಿಸುವುದನ್ನು ಕಂಡುಕೊಂಡವರು ಅವನನ್ನು ಮೋಶೆ ಆರೋನರ ಬಳಿಗೆ ಮತ್ತು ಸಮಸ್ತ ಸಮುದಾಯದ ಬಳಿಗೆ ತಂದು,
34 어떻게 처치할는지 지시하심을 받지 못한 고로 가두었더니
ಅವನಿಗೆ ಏನು ಮಾಡಬೇಕೆಂದು ಸ್ಪಷ್ಟವಾಗಿ ತಿಳಿಯದ ಕಾರಣ, ಅವನನ್ನು ಕಾವಲಲ್ಲಿ ಇಟ್ಟರು.
35 여호와께서 모세에게 이르시되 그 사람을 반드시 죽일지니 온 회중이 진 밖에서 돌로 그를 칠지니라
ಆಗ ಯೆಹೋವ ದೇವರು ಮೋಶೆಗೆ, “ಆ ಮನುಷ್ಯನು ಖಂಡಿತವಾಗಿಯೂ ಸಾಯಲೇಬೇಕು, ಸಭೆಯೆಲ್ಲಾ ಪಾಳೆಯದ ಹೊರಗೆ ಅವನನ್ನು ಕಲ್ಲೆಸೆದು ಕೊಲ್ಲಬೇಕು,” ಎಂದರು.
36 온 회중이 곧 그를 진 밖으로 끌어내어 돌로 그를 쳐 죽여서 여호와께서 모세에게 명하신 대로 하니라
ಆಗ ಸಮೂಹದವರೆಲ್ಲಾ ಅವನನ್ನು ಪಾಳೆಯದ ಹೊರಗೆ ತೆಗೆದುಕೊಂಡುಹೋಗಿ, ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆ ಅವನನ್ನು ಕಲ್ಲೆಸೆದು ಕೊಂದರು.
37 여호와께서 모세에게 일러 가라사대
ಯೆಹೋವ ದೇವರು ಮೋಶೆಗೆ,
38 이스라엘 자손에게 명하여 그들의 대대로 그 옷단 귀에 술을 만들고 청색 끈을 그 귀의 술에 더하라
“ನೀನು ಇಸ್ರಾಯೇಲರಿಗೆ ಮಾತನಾಡಿ ಅವರಿಗೆ ಹೇಳಬೇಕಾದದ್ದೇನೆಂದರೆ: ‘ಅವರು ತಮ್ಮ ತಲತಲಾಂತರಗಳಲ್ಲಿ ತಮ್ಮ ವಸ್ತ್ರಗಳ ಸೆರಗುಗಳ ಅಂಚಿನಲ್ಲಿ ಗೊಂಡೆಗಳನ್ನು ಮಾಡಿಕೊಳ್ಳಬೇಕು. ಸೆರಗಿನ ಗೊಂಡೆಗಳ ಮೇಲೆ ನೀಲಿ ದಾರವನ್ನು ಹಾಕಬೇಕು.
39 이 술은 너희로 보고 여호와의 모든 계명을 기억하여 준행하고 너희로 방종(放縱)케 하는 자기의 마음과 눈의 욕심을 좇지 않게 하기 위함이라
ಅದನ್ನು ನೀವು ಗೊಂಡೆಯಾಗಿ ಇಟ್ಟುಕೊಂಡು, ಅದನ್ನು ನೋಡುವಾಗ, ಯೆಹೋವ ದೇವರ ಸಕಲ ಆಜ್ಞೆಗಳನ್ನು ನೆನಸಿ ಅವುಗಳ ಪ್ರಕಾರಮಾಡಿ, ನಿಮ್ಮ ಹೃದಯ ಹಾಗೂ ಇಚ್ಛೆಗನುಸಾರ ನಿಮ್ಮ ಕಣ್ಣುಗಳು ಜಾರತ್ವ ಮಾಡುವಂತೆ ಹಿಂಬಾಲಿಸದೆ ಇರುವಿರಿ.
40 그리하면 너희가 나의 모든 계명을 기억하고 준행하여 너희의 하나님 앞에 거룩하리라
ನೀವು ನನ್ನ ಆಜ್ಞೆಗಳನ್ನೆಲ್ಲಾ ನೆನಸಿ, ಅವುಗಳ ಪ್ರಕಾರಮಾಡಿ, ನಿಮ್ಮ ದೇವರಿಗೆ ಪ್ರತಿಷ್ಠಿತರಾಗಿರಬೇಕು.
41 나는 너희의 하나님이 되려 하여 너희를 애굽 땅에서 인도하여 낸 여호와 너희 하나님이니라 나는 여호와 너희 하나님이니라!
ನಾನು ನಿಮ್ಮ ದೇವರಾಗುವದಕ್ಕೆ ನಿಮ್ಮನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ತಂದ ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.’”

< 민수기 15 >