< 시편 112 >

1 할렐루야! 여호와를 경외하며 그 계명을 크게 즐거워하는 자는 복이 있도다
ಯೆಹೋವನಿಗೆ ಸ್ತೋತ್ರ! ಯಾರು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ, ಆತನ ಆಜ್ಞೆಗಳಲ್ಲಿ ಅತ್ಯಾನಂದಪಡುವನೋ ಅವನೇ ಧನ್ಯನು.
2 그 후손이 땅에서 강성함이여 정직자의 후대가 복이 있으리로다
ಅವನ ಸಂತಾನವು ಲೋಕದಲ್ಲಿ ಬಲಿಷ್ಠವಾಗುವುದು; ನೀತಿವಂತನ ವಂಶವು ಶುಭಹೊಂದುವುದು.
3 부요와 재물이 그 집에 있음이여 그 의가 영원히 있으리로다
ಅವನ ಮನೆಯಲ್ಲಿ ಸಿರಿಸಂಪತ್ತುಗಳು ಇರುವವು; ಅವನ ನೀತಿಯು ಸದಾಕಾಲವೂ ಫಲಿಸುತ್ತಿರುವುದು.
4 정직한 자에게는 흑암 중에 빛이 일어나나니 그는 어질고 자비하고 의로운 자로다
ಯಥಾರ್ಥರಿಗೆ ಕತ್ತಲೆಯಲ್ಲಿಯೂ ಜ್ಯೋತಿ ಮೂಡುವುದು; ದಯೆಯೂ, ಕನಿಕರವೂ, ನೀತಿಯುಳ್ಳ ದೇವರೇ ಆ ಜ್ಯೋತಿ.
5 은혜를 베풀며 꾸이는 자는 잘 되나니 그 일을 공의로 하리로다
ದಯಾಳುವಾಗಿ ಧನಸಹಾಯ ಮಾಡುವವನೂ, ತನ್ನ ಕಾರ್ಯಗಳನ್ನು ನೀತಿಯಿಂದ ನಡೆಸುವವನೂ ಭಾಗ್ಯವಂತನು.
6 저가 영영히 요동치 아니함이여 의인은 영원히 기념하게 되리로다
ಅವನು ಎಂದಿಗೂ ಕದಲುವುದಿಲ್ಲ; ನೀತಿವಂತನನ್ನು ಯಾವಾಗಲೂ ಸ್ಮರಿಸುವರು.
7 그는 흉한 소식을 두려워 아니함이여, 여호와를 의뢰하고 그 마음을 굳게 정하였도다
ಅವನಿಗೆ ಕೆಟ್ಟ ಸುದ್ದಿಯ ಭಯವಿರುವುದಿಲ್ಲ; ಯೆಹೋವನಲ್ಲಿ ಭರವಸವಿಟ್ಟಿರುವುದರಿಂದ, ಅವನ ಮನಸ್ಸು ಸ್ಥಿರವಾಗಿರುವುದು.
8 그 마음이 견고하여 두려워 아니할 것이라 그 대적의 받는 보응을 필경 보리로다
ದುಷ್ಟರಿಗಾಗುವ ಶಿಕ್ಷೆಯನ್ನು ಕಣ್ಣಾರೆ ಕಾಣುವೆನೆಂಬ ಭರವಸೆ ಇರುವುದರಿಂದ ಅವನ ಮನಸ್ಸು ದೃಢವಾಗಿದೆ, ಹೆದರುವುದಿಲ್ಲ.
9 저가 재물을 흩어 빈궁한 자에게 주었으니 그 의가 영원히 있고 그 뿔이 영화로이 들리리로다
ಬಡವರಿಗೆ ಉದಾರವಾಗಿ ಕೊಡುತ್ತಾನೆ; ಅವನ ನೀತಿಯ ಫಲವು ಸದಾಕಾಲವೂ ಇರುವುದು. ಮಹಿಮೆಯೊಡನೆ ಅವನ ಕೊಂಬು ಎತ್ತಲ್ಪಡುವುದು.
10 악인은 이를 보고 한하여 이를 갈면서 소멸하리니 악인의 소욕은 멸망하리로다
೧೦ದುಷ್ಟನು ನೋಡಿ ವ್ಯಥೆಪಡುವನು; ಅವನು ಹಲ್ಲುಕಡಿಯುತ್ತಾ ನಾಶವಾಗುವನು. ದುಷ್ಟರ ನಿರೀಕ್ಷೆಯು ಭಂಗವಾಗುವುದು.

< 시편 112 >