< 시편 12 >

1 (다윗의 시. 영장으로 스미닛에 맞춘 노래) 여호와여, 도우소서 경건한 자가 끊어지며 충실한 자가 인생 중에 없어지도소이다
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಮಂದರಸ್ಥಾಯಿಯೊಡನೆ ಹಾಡತಕ್ಕದ್ದು; ದಾವೀದನ ಕೀರ್ತನೆ. ಯೆಹೋವನೇ, ರಕ್ಷಿಸು; ಭಕ್ತರು ಮುಗಿದು ಹೋಗಿದ್ದಾರೆ. ಜನರೊಳಗೆ ನಂಬಿಗಸ್ತರನ್ನು ಕಾಣುವುದೇ ಇಲ್ಲ.
2 저희가 이웃에게 각기 거짓말을 말함이여 아첨하는 입술과 두 마음으로 말하는도다
ಪ್ರತಿಯೊಬ್ಬರು ನೆರೆಯವರೊಡನೆ ಸುಳ್ಳನ್ನಾಡುತ್ತಾರೆ, ಅವರು ವಂಚನೆಯ ತುಟಿಗಳಿಂದ ಹೊರಗೊಂದು ಒಳಗೊಂದು ಮಾತನಾಡುತ್ತಾರೆ.
3 여호와께서 모든 아첨하는 입술과 자랑하는 혀를 끊으시리니
ಯೆಹೋವನು ವಂಚನೆಯ ತುಟಿಗಳನ್ನೂ, ಬಡಾಯಿ ನಾಲಿಗೆಯನ್ನೂ ಕಡಿದುಬಿಡಲಿ.
4 저희가 말하기를 우리의 혀로 이길지라 우리 입술은 우리 것이니 우리를 주관할 자 누구리요 함이로다
ಅವರು, “ನಮ್ಮ ಮಾತುಗಳಿಗೆ ತಡೆಯಿಲ್ಲವಲ್ಲಾ; ನಮ್ಮ ತುಟಿಗಳು ನಮ್ಮವೇ; ನಮಗೆ ಒಡೆಯನು ಯಾರು?” ಎಂದು ಹೇಳಿಕೊಳ್ಳುತ್ತಾರಲ್ಲಾ.
5 여호와의 말씀에 가련한 자의 눌림과 궁핍한 자의 탄식을 인하여 내가 이제 일어나 저를 그 원하는 안전 지대에 두리라 하시도다
ಯೆಹೋವನು, “ಕುಗ್ಗಿದವರ ಬಾಧೆಯನ್ನು ನೋಡಿದ್ದೇನೆ; ಗತಿಯಿಲ್ಲದವರ ನರಳುವಿಕೆಯು ನನಗೆ ಕೇಳಿಸಿತು. ಈಗ ಎದ್ದು ಬಂದು ಅವರ ಇಷ್ಟಾರ್ಥವನ್ನು ನೆರವೇರಿಸುವೆನು. ಅವರು ಬಯಸಿದಂತೆ ಅವರನ್ನು ಸುರಕ್ಷಿತವಾಗಿ ಇರಿಸುವೆನು” ಎಂದು ಹೇಳುತ್ತಾನೆ.
6 여호와의 말씀은 순결함이여 흙 도가니에 일곱번 단련한 은 같도다
ಯೆಹೋವನ ಮಾತುಗಳು ಯಥಾರ್ಥವಾದವುಗಳೇ; ಅವು ಏಳು ಸಾರಿ ಪುಟಕ್ಕೆ ಹಾಕಿದ ಚೊಕ್ಕ ಬೆಳ್ಳಿಯೋಪಾದಿಯಲ್ಲಿವೆ.
7 여호와여, 저희를 지키사 이 세대로부터 영영토록 보존하시리이다
ಜನರಲ್ಲಿ ಎಲ್ಲೆಲ್ಲೂ ನೀಚರೇ ತುಂಬಿಕೊಂಡಿದ್ದರೂ, ಜನರೊಳಗೆ ದುಷ್ಟತ್ವ ಆಳ್ವಿಕೆಗೆ ಬಂದಿದ್ದರೂ,
8 비루함이 인생 중에 높아지는 때에 악인이 처처에 횡행하는도다
ಯೆಹೋವನೇ, ನೀನು ನಮ್ಮನ್ನು ನೋಡಿದ್ದಿ, ನೀನು ನಿನ್ನ ಭಕ್ತರನ್ನು ದುಷ್ಟರಿಂದ ಸದಾಕಾಲವೂ ತಪ್ಪಿಸಿ ಕಾಪಾಡುವಿ.

< 시편 12 >