< 시편 125 >

1 (성전에 올라가는 노래) 여호와를 의뢰하는 자는 시온산이 요동치 아니하고 영원히 있음같도다
ಯಾತ್ರಾ ಗೀತೆ. ಯೆಹೋವ ದೇವರಲ್ಲಿ ಭರವಸವಿಡುವವರು ಚೀಯೋನ್ ಪರ್ವತದ ಹಾಗಿದ್ದಾರೆ; ಆ ಪರ್ವತವು ಯುಗಯುಗಕ್ಕೂ ಕದಲದೆ ಇರುವುದು.
2 산들이 예루살렘을 두름과 같이 여호와께서 그 백성을 지금부터 영원까지 두르시리로다
ಯೆರೂಸಲೇಮಿನ ಸುತ್ತಲೂ ಬೆಟ್ಟಗಳಿರುವಂತೆ, ಯೆಹೋವ ದೇವರು ಈಗಿನಿಂದ ಯುಗಯುಗಕ್ಕೂ ತಮ್ಮ ಜನರ ಸುತ್ತಲೂ ಇದ್ದಾರೆ.
3 악인의 권세가 의인의 업에 미치지 못하리니 이는 의인으로 죄악에 손을 대지 않게 함이로다
ನೀತಿವಂತರು ತಮ್ಮ ಕೈಗಳನ್ನು ಅನ್ಯಾಯಕ್ಕೆ ಚಾಚದ ಹಾಗೆ, ದುಷ್ಟನ ಕೋಲು ನೀತಿವಂತರ ಸ್ವಾಸ್ತ್ಯದ ಮೇಲೆ ನೆಲೆಯಾಗಿರುವುದಿಲ್ಲ.
4 여호와여, 선인에게와 마음이 정직한 자에게 선을 행하소서
ಯೆಹೋವ ದೇವರೇ, ಒಳ್ಳೆಯವರಿಗೂ, ಯಥಾರ್ಥ ಹೃದಯವುಳ್ಳವರಿಗೂ ಒಳ್ಳೆಯದನ್ನು ಮಾಡುತ್ತಾರೆ.
5 자기의 굽은 길로 치우치는 자를 여호와께서 죄악을 짓는 자와 함께 다니게 하시리로다 이스라엘에게는 평강이 있을지어다!
ಆದರೆ ಡೊಂಕು ಮಾರ್ಗಗಳಲ್ಲಿ ತಿರುಗುವವರನ್ನು, ದುಷ್ಟರ ಸಂಗಡ ದೇವರು ತೊಲಗಿಸಲಿ. ಇಸ್ರಾಯೇಲರ ಮೇಲೆ ಸಮಾಧಾನವಿರಲಿ.

< 시편 125 >