< 시편 13 >

1 (다윗의 시. 영장으로 한 노래) 여호와여, 어느 때까지니이까 나를 영영히 잊으시나이까 주의 얼굴을 나에게서 언제까지 숨기시겠나이까
ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ದಾವೀದನ ಕೀರ್ತನೆ. ಯೆಹೋವ ದೇವರೇ, ಎಷ್ಟರವರೆಗೆ ನನ್ನನ್ನು ಮರೆಯುವಿರಿ? ಎಂದೆಂದಿಗೂ ನನ್ನನ್ನು ಮರೆಯುವಿರೋ? ಎಷ್ಟರವರೆಗೆ ನಿಮ್ಮ ಮುಖವನ್ನು ನನ್ನಿಂದ ಮರೆಮಾಡುವಿರಿ?
2 내가 나의 영혼에 경영하고 종일토록 마음에 근심하기를 어느 때까지 하오며 내 원수가 나를 쳐서 자긍하기를 어느 때까지 하리이까
ಇನ್ನೆಷ್ಟರವರೆಗೆ ನನ್ನ ಆಲೋಚನೆಗಳೊಂದಿಗೆ ನಾನು ಹೋರಾಡುತ್ತಿರಬೇಕು? ದಿನನಿತ್ಯವು ನಾನು ನನ್ನ ಹೃದಯದಲ್ಲಿ ನೊಂದಿರಬೇಕೆ? ಇನ್ನೆಷ್ಟರವರೆಗೆ ನನ್ನ ಶತ್ರುವು ನನ್ನ ಮೇಲೆ ಜಯ ಹೊಂದಿರಬೇಕು?
3 여호와 내 하나님이여, 나를 생각하사 응답하시고 나의 눈을 밝히소서 두렵건대 내가 사망의 잠을 잘까 하오며
ನನ್ನ ದೇವರಾದ ಯೆಹೋವ ದೇವರೇ, ನನ್ನನ್ನು ನೋಡಿ ನನಗೆ ಸದುತ್ತರ ಕೊಡಿರಿ. ನನಗೆ ಮರಣ ನಿದ್ರೆ ಉಂಟಾಗದಂತೆ ನನ್ನ ಕಣ್ಣುಗಳನ್ನು ಬೆಳಗಿಸಿರಿ.
4 두렵건대 나의 원수가 이르기를 내가 저를 이기었다 할까 하오며 내가 요동될 때에 나의 대적들이 기뻐할까 하나이다
“ನಾನು ಅವನನ್ನು ಸೋಲಿಸಿದ್ದೇನೆ,” ಎಂದು ನನ್ನ ಶತ್ರು ಹೇಳದಿರಲಿ, ನಾನು ಬೀಳುವಾಗ ನನ್ನ ಶತ್ರುಗಳು ಆನಂದಿಸದಿರಲಿ.
5 나는 오직 주의 인자하심을 의뢰하였사오니 내 마음은 주의 구원을 기뻐하리이다
ನಾನಾದರೋ ನಿಮ್ಮ ಒಡಂಬಡಿಕೆಯ ಪ್ರೀತಿಯಲ್ಲಿ ಭರವಸೆ ಇಟ್ಟಿದ್ದೇನೆ. ನಿಮ್ಮ ರಕ್ಷಣೆಯಲ್ಲಿ ನನ್ನ ಹೃದಯವು ಉಲ್ಲಾಸಪಡುವುದು.
6 내가 여호와를 찬송하리니 이는 나를 후대하심이로다
ನಾನು ಯೆಹೋವ ದೇವರಿಗೆ ಸ್ತುತಿ ಹಾಡುವೆನು, ಏಕೆಂದರೆ ಅವರು ನನಗೆ ಒಳ್ಳೆಯವರಾಗಿದ್ದಾರೆ.

< 시편 13 >