< 시편 137 >
1 우리가 바벨론의 여러 강변 거기 앉아서 시온을 기억하며 울었도다
೧ನಾವು ಬಾಬೆಲ್ ದೇಶದ ನದಿಗಳ ಬಳಿಯಲ್ಲಿ ಕುಳಿತುಕೊಂಡು, ಚೀಯೋನನ್ನು ನೆನಪುಮಾಡಿಕೊಂಡು ಅತ್ತೆವು.
2 그 중의 버드나무에 우리가 우리의 수금을 걸었나니
೨ಆ ದೇಶದ ನೀರವಂಜಿ ಮರಗಳಿಗೆ ನಮ್ಮ ಕಿನ್ನರಿಗಳನ್ನು ತೂಗುಹಾಕಿದೆವು.
3 이는 우리를 사로잡은 자가 거기서 우리에게 노래를 청하며 우리를 황폐케 한 자가 기쁨을 청하고 자기들을 위하여 시온노래 중 하나를 노래하라 함이로다
೩ನಮ್ಮನ್ನು ಸೆರೆಹಿಡಿದು ಪೀಡಿಸುತ್ತಿದ್ದವರು ನಮಗೆ, “ಚೀಯೋನಿನ ಗೀತೆಗಳಲ್ಲಿ ಒಂದನ್ನು ನಮ್ಮ ವಿನೋದಕ್ಕಾಗಿ ಹಾಡಿರಿ” ಎಂದು ಹೇಳುತ್ತಿದ್ದರು.
4 우리가 이방에 있어서 어찌 여호와의 노래를 부를꼬
೪ನಾವು ಪರದೇಶದಲ್ಲಿ ಯೆಹೋವನ ಗೀತೆಗಳನ್ನು ಹಾಡುವುದು ಹೇಗೆ?
5 예루살렘아! 내가 너를 잊을진대 내 오른손이 그 재주를 잊을지로다
೫ಯೆರೂಸಲೇಮೇ, ನಾನು ನಿನ್ನನ್ನು ಮರೆತುಬಿಟ್ಟರೆ ನನ್ನ ಬಲಗೈಯು ತನ್ನ ಕೌಶಲ್ಯವನ್ನು ಮರೆತು ಹೋಗಲಿ.
6 내가 예루살렘을 기억지 아니하거나 내가 너를 나의 제일 즐거워하는 것보다 지나치게 아니할진대 내 혀가 내 입천장에 붙을지로다
೬ಯೆರೂಸಲೇಮೇ, ನಾನು ನಿನ್ನನ್ನು ನೆನಪು ಮಾಡಿಕೊಳ್ಳದಿದ್ದರೆ, ಎಲ್ಲಾದಕ್ಕಿಂತ ಹೆಚ್ಚಾಗಿ ನಾನು ನಿನ್ನಲ್ಲಿ ಆನಂದಿಸದಿದ್ದರೆ, ನನ್ನ ನಾಲಿಗೆಯು ಸೇದಿಹೋಗಲಿ.
7 여호와여, 예루살렘이 해 받던 날을 기억하시고 에돔 자손을 치소서 저희 말이 훼파하라, 훼파하라 그 기초까지 훼파하라 하였나이다
೭ಯೆಹೋವನೇ, ಎದೋಮ್ಯರ ಹಾನಿಗಾಗಿ, ಯೆರೂಸಲೇಮಿನ ನಾಶನದ ದಿನವನ್ನು ನೆನಪುಮಾಡಿಕೋ. ಅವರು, “ಅದನ್ನು ಹಾಳುಮಾಡಿರಿ, ಅಸ್ತಿವಾರ ಸಹಿತ ಹಾಳುಮಾಡಿರಿ” ಎಂದು ಹೇಳಿದರಲ್ಲಾ.
8 여자 같은 멸망할 바벨론아! 네가 우리에게 행한대로 네게 갚는 자가 유복하리로다
೮ಹಾಳಾಗುವುದಕ್ಕಿರುವ ಬಾಬೆಲ್ ಪಟ್ಟಣವೇ, ನೀನು ನನಗೆ ಮಾಡಿದ್ದಕ್ಕೆ ಮುಯ್ಯಿ ತೀರಿಸುವವನು ಧನ್ಯನು.
9 네 어린 것들을 반석에 메어치는 자는 유복하리로다
೯ನಿನ್ನ ಮಕ್ಕಳನ್ನು ಹಿಡಿದು ಬಂಡೆಗೆ ಅಪ್ಪಳಿಸುವವನು ಭಾಗ್ಯಹೊಂದಲಿ.