< 시편 19 >

1 (다윗의 시. 영장으로 한 노래) 하늘이 하나님의 영광을 선포하고 궁창이 그 손으로 하신 일을 나타내는도다
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. ಆಕಾಶವು ದೇವರ ಪ್ರಭಾವವನ್ನು ಪ್ರಚುರಪಡಿಸುತ್ತದೆ; ಗಗನವು ಆತನ ಕೈಕೆಲಸವನ್ನು ತಿಳಿಸುತ್ತದೆ.
2 날은 날에게 말하고 밤은 밤에게 지식을 전하니
ದಿನವು ದಿನಕ್ಕೆ ದೇವರ ಮಹಿಮೆಯನ್ನು ತಿಳಿಸುತ್ತಿರುವುದು; ರಾತ್ರಿಯು ರಾತ್ರಿಗೆ ಜ್ಞಾನವನ್ನು ಪ್ರಕಟಿಸುತ್ತಿರುವುದು.
3 언어가 없고 들리는 소리도 없으나
ಶಬ್ದವಿಲ್ಲ, ಮಾತಿಲ್ಲ, ಅವುಗಳ ಸ್ವರ ಕೇಳಿಸುವುದಿಲ್ಲ.
4 그 소리가 온 땅에 통하고 그 말씀이 세계 끝까지 이르도다 하나님이 해를 위하여 하늘에 장막을 베푸셨도다
ಆದರೂ ಅವುಗಳ ಪ್ರಭುತ್ವವು ಭೂಮಿಯಲ್ಲೆಲ್ಲಾ ಪ್ರಸರಿಸಿದೆ; ಅವುಗಳ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿರುತ್ತವೆ. ಅಲ್ಲಿ ದೇವರು ಸೂರ್ಯನಿಗೋಸ್ಕರ ಗುಡಾರವನ್ನು ಏರ್ಪಡಿಸಿದ್ದಾನೆ.
5 해는 그 방에서 나오는 신랑과 같고 그 길을 달리기 기뻐하는 장사 같아서
ಅವನು ತನ್ನ ಮಂಟಪದೊಳಗಿಂದ ಬರುವ ಮದಲಿಂಗನೋ ಎಂಬಂತೆ ಹೊರಟುಬರುವನು. ಅವನು ಶೂರನಂತೆ ತನಗೆ ನೇಮಕವಾದ ಮಾರ್ಗದಲ್ಲಿ ಓಡುವುದಕ್ಕೆ ಉಲ್ಲಾಸಗೊಂಡಿದ್ದಾನೆ.
6 하늘 이 끝에서 나와서 하늘 저 끝까지 운행함이여 그 온기에서 피하여 숨은 자 없도다
ಆಕಾಶದ ಒಂದು ಕಡೆಯಿಂದ ಹೊರಟು ಮತ್ತೊಂದು ಕಡೆಗೆ ಬರುತ್ತಾನೆ; ಅವನ ಬಿಸಿಲಿಗೆ ಮರೆಯಾದದ್ದು ಒಂದೂ ಇಲ್ಲ.
7 여호와의 율법은 완전하여 영혼을 소성케 하고 여호와의 증거는 확실하여 우둔한 자로 지혜롭게 하며
ಯೆಹೋವನ ಧರ್ಮಶಾಸ್ತ್ರವು ಲೋಪವಿಲ್ಲದ್ದು; ಅದು ಪ್ರಾಣವನ್ನು ಉಜ್ಜೀವಿಸಮಾಡುವಂಥದ್ದು. ಯೆಹೋವನ ಕಟ್ಟಳೆಗಳು ನಂಬಿಕೆಗೆ ಯೋಗ್ಯವಾದದ್ದು; ಅವು ಬುದ್ಧಿಹೀನರಿಗೆ ವಿವೇಕಪ್ರದವಾಗಿದೆ.
8 여호와의 교훈은 정직하여 마음을 기쁘게 하고 여호와의 계명은 순결하여 눈을 밝게 하도다
ಯೆಹೋವನ ಆಜ್ಞೆಗಳು ನೀತಿಯುಳ್ಳವುಗಳಾಗಿವೆ; ಮನಸ್ಸನ್ನು ಹರ್ಷಪಡಿಸುತ್ತವೆ. ಯೆಹೋವನ ಆಜ್ಞೆ ಪವಿತ್ರವಾದದ್ದು; ಕಣ್ಣುಗಳನ್ನು ಕಳೆಗೊಳಿಸುತ್ತದೆ.
9 여호와를 경외하는 도는 정결하여 영원까지 이르고 여호와의 규례는 확실하여 다 의로우니
ಯೆಹೋವನ ಭಯ ಪರಿಶುದ್ಧವಾಗಿದೆ; ಅದು ಶಾಶ್ವತವಾದದ್ದೇ. ಯೆಹೋವನ ಕಟ್ಟಳೆಗಳು ಯಥಾರ್ಥವಾದವುಗಳು; ಅವು ಕೇವಲ ನ್ಯಾಯವಾಗಿವೆ.
10 금 곧 많은 정금보다 더 사모할 것이며 꿀과 송이꿀보다 더 달도다
೧೦ಅವು ಬಂಗಾರಕ್ಕಿಂತಲೂ, ಅಪರಂಜಿರಾಶಿಗಿಂತಲೂ ಅಪೇಕ್ಷಿಸತಕ್ಕವುಗಳು. ಅವು ಜೇನಿಗಿಂತಲೂ, ಶೋಧಿಸಿದ ಜೇನುತುಪ್ಪಕ್ಕಿಂತಲೂ ಸಿಹಿಯಾಗಿವೆ.
11 또 주의 종이 이로 경계를 받고 이를 지킴으로 상이 크니이다
೧೧ಅವುಗಳ ಮೂಲಕ ನಿನ್ನ ದಾಸನಿಗೆ ವಿವೇಚನೆ ಉಂಟಾಗುತ್ತದೆ; ಅವುಗಳನ್ನು ಕೈಕೊಳ್ಳುವುದರಿಂದ ಬಹಳ ಫಲ ದೊರೆಯುತ್ತದೆ.
12 자기 허물을 능히 깨달을 자 누구리요 나를 숨은 허물에서 벗어나게 하소서
೧೨ತನ್ನ ತಪ್ಪುಗಳನ್ನೆಲ್ಲಾ ತಿಳಿದುಕೊಳ್ಳುವವನು ಯಾರು? ಮರೆಯಾದ ದೋಷಗಳಿಂದ ನನ್ನನ್ನು ನಿರ್ಮಲಮಾಡು.
13 또 주의 종으로 고범죄를 짓지 말게 하사 그 죄가 나를 주장치 못하게 하소서 그리하시면 내가 정직하여 큰 죄과에서 벗어나겠나이다
೧೩ಅದಲ್ಲದೆ ಬೇಕೆಂದು ಪಾಪಮಾಡದಂತೆ ನಿನ್ನ ದಾಸನನ್ನು ಕಾಪಾಡು. ಅಂಥ ಪಾಪಗಳು ನನ್ನನ್ನು ಆಳದಿರಲಿ. ಆಗ ನಾನು ತಪ್ಪಿಲ್ಲದವನಾಗಿ ಮಹಾದ್ರೋಹಕ್ಕೆ ಒಳಗಾಗುವುದಿಲ್ಲ.
14 나의 반석이시요 나의 구속자이신 여호와여, 내 입의 말과 마음의 묵상이 주의 앞에 열납되기를 원하나이다
೧೪ಯೆಹೋವನೇ ನನ್ನ ಶರಣನೇ, ನನ್ನ ವಿಮೋಚಕನೇ, ನನ್ನ ಮಾತುಗಳೂ ಮತ್ತು ನನ್ನ ಹೃದಯದ ಧ್ಯಾನವೂ ನಿನಗೆ ಸಮರ್ಪಕವಾಗಿರಲಿ.

< 시편 19 >