< 시편 6 >
1 (다윗의 시. 영장으로 현악 스미닛에 맞춘 노래) 여호와여, 주의 분으로 나를 견책하지 마옵시며 주의 진노로 나를 징계하지 마옵소서
೧ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದ ಮಂದರಸ್ಥಾಯಿಯೊಡನೆ ಹಾಡತಕ್ಕದ್ದು; ದಾವೀದನು ರಚಿಸಿದ ಕೀರ್ತನೆ. ಯೆಹೋವನೇ, ಕೋಪದಿಂದ ನನ್ನನ್ನು ಗದರಿಸಬೇಡ; ರೋಷದಿಂದ ನನ್ನನ್ನು ದಂಡಿಸಬೇಡ.
2 여호와여, 내가 수척하였사오니 긍휼히 여기소서 여호와여, 나의 뼈가 떨리오니 나를 고치소서
೨ಯೆಹೋವನೇ, ಕನಿಕರಿಸು; ನಾನು ನಿಶ್ಶಕ್ತನಾಗಿ ಹೋಗಿದ್ದೇನೆ. ಯೆಹೋವನೇ, ವಾಸಿಮಾಡು; ನನ್ನ ಎಲುಬುಗಳೆಲ್ಲಾ ಅದುರುತ್ತವೆ.
3 나의 영혼도 심히 떨리나이다 여호와여, 어느 때까지니이까?
೩ನನ್ನ ಪ್ರಾಣವು ಸಹ ಬಹಳವಾಗಿ ತತ್ತರಿಸುತ್ತದೆ. ಯೆಹೋವನೇ, ಎಷ್ಟರ ವರೆಗೆ ನನ್ನನ್ನು ಕೈಬಿಟ್ಟಿರುವಿ?
4 여호와여, 돌아와 나의 영혼을 건지시며 주의 인자하심을 인하여 나를 구원하소서
೪ಯೆಹೋವನೇ, ಹಿಂತಿರುಗು, ನನ್ನನ್ನು ಬಿಡಿಸು; ನಿನ್ನ ಕೃಪೆಯ ನಿಮಿತ್ತ ನನ್ನನ್ನು ರಕ್ಷಿಸು.
5 사망중에서는 주를 기억함이 없사오니 음부에서 주께 감사할 자 누구리이까? (Sheol )
೫ಮೃತರಿಗೆ ನಿನ್ನ ಜ್ಞಾಪಕವಿರುವುದಿಲ್ಲವಲ್ಲಾ; ಪಾತಾಳದಲ್ಲಿ ನಿನ್ನನ್ನು ಸ್ತುತಿಸುವವರು ಯಾರು? (Sheol )
6 내가 탄식함으로 곤핍하여 밤마다 눈물로 내 침상을 띄우며 내 요를 적시나이다
೬ನಾನು ನರಳಿ ನರಳಿ ದಣಿದಿದ್ದೇನೆ; ಪ್ರತಿರಾತ್ರಿಯೂ ನನ್ನ ಮಂಚವು ಕಣ್ಣೀರಿನಿಂದ ತೇಲಾಡುತ್ತದೆ. ಹಾಸಿಗೆಯು ಕಣ್ಣೀರಿನಿಂದ ನೆನದುಹೋಗುತ್ತದೆ.
7 내 눈이 근심을 인하여 쇠하며 내 모든 대적을 인하여 어두웠나이다
೭ದುಃಖದಿಂದ ನನ್ನ ಕಣ್ಣು ಬತ್ತಿ ಹೋಯಿತು; ವಿರೋಧಿಗಳ ಬಾಧೆಯ ದೆಸೆಯಿಂದಲೇ ಅವು ಮೊಬ್ಬಾಯಿತು.
8 행악하는 너희는 다 나를 떠나라 여호와께서 내 곡성을 들으셨도다
೮ಧರ್ಮವನ್ನು ಮೀರಿ ನಡೆಯುವವರೇ, ನೀವೆಲ್ಲರೂ ನನ್ನಿಂದ ತೊಲಗಿಹೋಗಿರಿ; ಯೆಹೋವನು ನನ್ನ ಗೋಳಾಟಕ್ಕೆ ಕಿವಿಗೊಟ್ಟಿದ್ದಾನೆ.
9 여호와께서 내 간구를 들으셨음이여 여호와께서 내 기도를 받으시로다
೯ಆತನು ನನ್ನ ವಿಜ್ಞಾಪನೆಯನ್ನು ಕೇಳಿದ್ದಾನಲ್ಲಾ; ನನ್ನ ಪ್ರಾರ್ಥನೆಯನ್ನು ಅಂಗೀಕರಿಸುವನು.
10 내 모든 원수가 부끄러움을 당하고 심히 떪이여 홀연히 부끄러워 물러가리로다
೧೦ನನ್ನ ವಿರೋಧಿಗಳೆಲ್ಲರು ನಾಚಿಕೆಯಿಂದ ಕಳವಳಗೊಳ್ಳುವರು; ಅವರು ಪಕ್ಕನೆ ಲಜ್ಜೆಗೊಂಡು ಹಿಂದಿರುಗುವರು.