< 시편 64 >
1 (다윗의 시. 영장으로 한 노래) 하나님이여, 나의 근심하는 소리를 들으시고 원수의 두려움에서 나의 생명을 보존하소서
ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ದಾವೀದನ ಕೀರ್ತನೆ. ದೇವರೇ, ನನ್ನ ದೂರುಗಳನ್ನು ನಿಮ್ಮ ಮುಂದಿಡುವಾಗ ನನ್ನ ಬಿನ್ನಹವನ್ನು ಕೇಳಿರಿ. ಶತ್ರುವಿನ ಹೆದರಿಕೆಯಿಂದ ನನ್ನ ಜೀವವನ್ನು ಕಾಪಾಡಿರಿ.
2 주는 나를 숨기사 행악자의 비밀한 꾀에서와 죄악을 짓는 자의 요란에서 벗어나게 하소서
ದುರ್ಮಾರ್ಗಿಗಳ ಗುಪ್ತ ಆಲೋಚನೆಗಳಿಗೂ, ದುಷ್ಟರ ಒಳಸಂಚಿಗೂ ನನ್ನನ್ನು ಮರೆಮಾಡಿರಿ.
3 저희가 칼 같이 자기 혀를 연마하며 화살같이 독한 말로 겨누고
ಅವರು ತಮ್ಮ ನಾಲಿಗೆಯನ್ನು ಖಡ್ಗದಂತೆ ಮಸೆಯುತ್ತಾರೆ.
4 숨은 곳에서 완전한 자를 쏘려 하다가 갑자기 쏘고 두려워하지 않도다
ನಿರ್ದೋಷಿಯ ಕಡೆಗೆ ಕಹಿಮಾತುಗಳನ್ನು ಬಾಣದಂತೆ ಗುರಿಯಿಟ್ಟಿದ್ದಾರೆ. ಅಂಜದೆ ಫಕ್ಕನೆ ಅವನ ಕಡೆಗೆ ಎಸೆಯುತ್ತಾರೆ.
5 저희는 악한 목적으로 서로 장려하며 비밀히 올무 놓기를 함께 의논하고 하는 말이 누가 보리요 하며
ತಮ್ಮೊಳಗೆ ಕೇಡನ್ನು ಪ್ರೋತ್ಸಾಹ ಮಾಡುತ್ತಾರೆ. ರಹಸ್ಯವಾಗಿ ಬಲೆಗಳನ್ನು ಒಡ್ಡುವುದಕ್ಕೆ ಮಾತನಾಡುತ್ತಾ, “ನಮ್ಮನ್ನು ಕಾಣುವವರು ಯಾರು?” ಎಂದುಕೊಳ್ಳುತ್ತಾರೆ.
6 저희는 죄악을 도모하며 이르기를 우리가 묘책을 찾았다 하나니 각 사람의 속 뜻과 마음이 깊도다
ಅವರು ಅನ್ಯಾಯಗಳನ್ನು ಕಲ್ಪಿಸಿ, “ನಾವು ಒಳ್ಳೇ ಉಪಾಯವನ್ನು ಮಾಡಿದ್ದೇವೆ,” ಅಂದುಕೊಳ್ಳುತ್ತಾರೆ. ನಿಶ್ಚಯವಾಗಿ ಮಾನವರ ಆಂತರ್ಯವೂ ಹೃದಯವೂ ಕುಯುಕ್ತಿಯಿಂದ ಕೂಡಿದೆ.
7 그러나 하나님이 저희를 쏘시리니 저희가 홀연히 살에 상하리로다
ಆದರೆ ದೇವರು ಅವರ ಬಾಣದಿಂದಲೇ, ಫಕ್ಕನೆ ಅವರಿಗೆ ಗಾಯಗಳಾಗುವಂತೆ ಅನುಮತಿಸುವರು.
8 이러므로 저희가 엎드러지리니 저희의 혀가 저희를 해함이라 저희를 보는 자가 다 머리를 흔들리로다
ಹೀಗೆ ಅವರು ತಮ್ಮ ನಾಲಿಗೆಯಿಂದ ತಾವೇ ಎಡವಿ ಬೀಳುವಂತೆ ಮಾಡಿಕೊಳ್ಳುವರು. ಅವರನ್ನು ಕಾಣುವವರೆಲ್ಲರೂ ತಲೆಯಾಡಿಸಿ ಅಣಕಿಸುವರು.
9 모든 사람이 두려워하여 하나님의 일을 선포하며 그 행하심을 깊이 생각하리로다
ಎಲ್ಲಾ ಮನುಷ್ಯರೂ ಭಯಪಟ್ಟು ದೇವರ ಕಾರ್ಯಗಳನ್ನು ಸಾರುವರು. ದೇವರು ಮಾಡಿದವುಗಳನ್ನು ಆಲೋಚಿಸಿಕೊಳ್ಳುವರು.
10 의인은 여호와를 인하여 즐거워하며 그에게 피하리니 마음이 정직한 자는 다 자랑하리로다
ನೀತಿವಂತರು ಯೆಹೋವ ದೇವರಲ್ಲಿ ಆನಂದಪಟ್ಟು ದೇವರನ್ನೇ ಆಶ್ರಯಿಸಿಕೊಳ್ಳುವರು. ಸರಳ ಹೃದಯದವರೆಲ್ಲರೂ ದೇವರನ್ನು ಮಹಿಮೆಪಡಿಸುವರು.