< 시편 81 >
1 (아삽의 시. 영장으로 깃딧이 맞춘 노래) 우리 능력 되신 하나님께 높이 노래하며 야곱의 하나님께 즐거이 노래할지어다
೧ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಗಿತ್ತೀಯ ರಾಗದಿಂದ ಹಾಡತಕ್ಕದ್ದು; ಆಸಾಫನ ಕೀರ್ತನೆ. ನಮಗೆ ಬಲಪ್ರದನಾಗಿರುವ ದೇವರಿಗೆ ಉತ್ಸಾಹಧ್ವನಿ ಮಾಡಿರಿ; ಯಾಕೋಬ್ಯರ ದೇವರಿಗೆ ಜಯಘೋಷಮಾಡಿರಿ.
2 시를 읊으며 소고를 치고 아름다운 수금에 비파를 아우를지어다
೨ರಾಗವನ್ನು ಎತ್ತಿರಿ; ದಮ್ಮಡಿಯನ್ನು ಬಡಿಯಿರಿ; ಇಂಪಾದ ಕಿನ್ನರಿಯನ್ನೂ, ಸ್ವರಮಂಡಲವನ್ನೂ ಬಾರಿಸಿರಿ.
3 월삭과 월망과 우리의 절일에 나팔을 불지어다
೩ಅಮಾವಾಸ್ಯೆಯಲ್ಲಿಯೂ, ನಮ್ಮ ಉತ್ಸವದಿನವಾಗಿರುವ ಹುಣ್ಣಿಮೆಯಲ್ಲಿಯೂ ಕೊಂಬನ್ನು ಊದಿರಿ.
4 이는 이스라엘의 율례요 야곱의 하나님의 규례로다
೪ಇದು ಇಸ್ರಾಯೇಲರಲ್ಲಿ ಒಂದು ಕಟ್ಟಳೆ; ಇದು ಯಾಕೋಬ್ಯರ ದೇವರು ವಿಧಿಸಿದ್ದು.
5 하나님이 애굽 땅을 치러 나가시던 때에 요셉의 족속 중에 이를 증거로 세우셨도다 거기서 내가 알지 못하던 말씀을 들었나니
೫ಆತನು ಐಗುಪ್ತ ದೇಶವನ್ನು ಬಾಧಿಸಲಿಕ್ಕೆ ಹೊರಟಾಗ, ನೆನಪಿಗಾಗಿ ಯೋಸೇಫ್ಯರಲ್ಲಿ ಈ ಕಟ್ಟಳೆಯನ್ನು ನೇಮಿಸಿದನು. ಪರಿಚಯವಿಲ್ಲದವನ ಮಾತು ನನಗೆ ಕೇಳಿಸುತ್ತದೆ; ಏನೆಂದರೆ,
6 이르시되 내가 그 어깨에서 짐을 벗기고 그 손에서 광주리를 놓게 하였도다
೬“ಅವನ ಹೆಗಲನ್ನು ಹೊರೆಗೆ ತಪ್ಪಿಸಿದೆನು; ಅವನ ಕೈಗಳನ್ನು ಪುಟ್ಟಿಯಿಂದ ಬಿಡಿಸಿದೆನು.
7 네가 고난 중에 부르짖으매 내가 너를 건졌고 뇌성의 은은한 곳에서 네게 응답하며 므리바 물가에서 너를 시험하였도다 (셀라)
೭ಕಷ್ಟದಲ್ಲಿ ಮೊರೆಯಿಟ್ಟ ನಿನ್ನನ್ನು ವಿಮೋಚಿಸಿದೆನು; ಗುಡುಗುವ ಮೋಡದಲ್ಲಿದ್ದು ನಿನಗೆ ಉತ್ತರವನ್ನು ಕೊಟ್ಟೆನು; ಮೆರೀಬಾ ಪ್ರವಾಹಗಳ ಬಳಿಯಲ್ಲಿ ನಿನ್ನನ್ನು ಪರೀಕ್ಷಿಸಿದೆನು. (ಸೆಲಾ)
8 내 백성이여 들으라 내가 네게 증거하리라 이스라엘이여, 내게 듣기를 원하노라
೮ನನ್ನ ಜನರೇ, ಕೇಳಿರಿ; ಖಂಡಿತವಾಗಿ ಹೇಳುತ್ತೇನೆ, ಇಸ್ರಾಯೇಲರೇ, ಕಿವಿಗೊಟ್ಟರೆ ಎಷ್ಟೋ ಒಳ್ಳೇದು,
9 너희 중에 다른 신을 두지 말며 이방신에게 절하지 말지어다
೯ನಿಮ್ಮಲ್ಲಿ ಅನ್ಯದೇವತೆಗಳು ಇರಬಾರದು; ಪರರ ದೇವತೆಗಳನ್ನು ಪೂಜಿಸಬಾರದು;
10 나는 너를 애굽 땅에서 인도하여 낸 여호와 네 하나님이니 네 입을 넓게 열라 내가 채우리라 하였으나
೧೦ನಿಮ್ಮನ್ನು ಐಗುಪ್ತದಿಂದ ಕರೆತಂದ ಯೆಹೋವನೆಂಬ ನಾನೇ ನಿಮ್ಮ ದೇವರು; ಅಗಲವಾಗಿ ಬಾಯಿತೆರೆಯಿರಿ; ಅದನ್ನು ತುಂಬಿಸುವೆನು ಅಂದೆನು.
11 내 백성이 내 소리를 듣지 아니하며 이스라엘이 나를 원치 아니하였도다
೧೧ಆದರೆ ನನ್ನ ಜನರು ನನ್ನ ಮಾತು ಕೇಳಲಿಲ್ಲ; ಇಸ್ರಾಯೇಲರು ನನಗೆ ಸಮ್ಮತಿಸಲಿಲ್ಲ.
12 그러므로 내가 그 마음의 강퍅한대로 버려두어 그 임의대로 행케 하였도다
೧೨ಆದುದರಿಂದ ಇವರು ಹಟಮಾರಿಗಳು; ತಮ್ಮ ಮನಸ್ಸಿನಂತೆ ನಡೆಯಲಿ ಎಂದು ಬಿಟ್ಟುಬಿಟ್ಟೆನು.
13 내 백성이 나를 청종하며 이스라엘이 내 도 행하기를 원하노라
೧೩ನನ್ನ ಪ್ರಜೆಗಳಾದ ಇಸ್ರಾಯೇಲರು ನನ್ನ ಮಾತನ್ನು ಕೇಳಿ, ನನ್ನ ಮಾರ್ಗದಲ್ಲಿ ನಡೆದರೆ ಎಷ್ಟೋ ಒಳ್ಳೆಯದು!
14 그리하면 내가 속히 저희 원수를 제어하며 내 손을 돌려 저희 대적을 치리니
೧೪ನಾನು ಅವರ ಎದುರಾಳಿಗಳ ಮೇಲೆ ಕೈಯೆತ್ತಿ, ಅವರ ಶತ್ರುಗಳನ್ನು ಸುಲಭವಾಗಿ ಬಗ್ಗಿಸುವೆನು.
15 여호와를 한하는 자는 저에게 복종하는 체 할지라도 저희 시대는 영원히 계속하리라
೧೫ಯೆಹೋವನ ದ್ವೇಷಿಗಳು ಅವರ ಮುಂದೆ ಮುದುರಿಕೊಳ್ಳುವರು; ಅವರಾದರೋ ಸದಾಕಾಲವೂ ಇರುವರು.
16 내가 또 밀의 아름다운 것으로 저희에게 먹이며 반석에서 나오는 꿀로 너를 만족케 하리라 하셨도다
೧೬ನಾನು ಅವರಿಗೆ ಶ್ರೇಷ್ಠವಾದ ಗೋದಿಯನ್ನು ಊಟಕ್ಕೆ ಕೊಟ್ಟು, ಬಂಡೆಯೊಳಗಿನ ಜೇನಿನಿಂದ ತೃಪ್ತಿಪಡಿಸುವೆನು” ಎಂಬುದೇ.