< 역대상 29 >

1 다윗 왕이 온 회중에게 이르되 내 아들 솔로몬이 홀로 하나님의 택하신 바 되었으나 오히려 어리고 연약하고 이 역사는 크도다 이 전은 사람을 위한 것이 아니요 여호와 하나님을 위한 것이라
ತರುವಾಯ ಅರಸನಾದ ದಾವೀದನು, “ದೇವರು ನನ್ನ ಮಗನಾದ ಸೊಲೊಮೋನನನ್ನೇ ದೇವಾಲಯ ಕಟ್ಟಲು ಆರಿಸಿಕೊಂಡಿದ್ದಾನೆ. ಆದರೆ ಅವನು ಇನ್ನೂ ಎಳೇ ಪ್ರಾಯದವನು. ಮಾಡತಕ್ಕ ಕೆಲಸವೋ ವಿಶೇಷವಾದದ್ದು. ಕಟ್ಟತಕ್ಕ ಮಂದಿರವು ದೇವರಾದ ಯೆಹೋವನಿಗಾಗಿಯೇ ಹೊರತು ಮನುಷ್ಯನಿಗಾಗಿಯಲ್ಲ.
2 내가 이미 내 하나님의 전을 위하여 힘을 다하여 예비하였나니 곧 기구를 만들 금과 은과 놋과 철과 나무며 또 마노와 박을 보석과 꾸밀 보석과 채석과 다른 보석들과 화반석이 매우 많으며
ನಾನು ನನ್ನಿಂದಾಗುವಷ್ಟು ಪ್ರಯಾಸಪಟ್ಟು ಬಂಗಾರದ ಕೆಲಸಕ್ಕಾಗಿ ಬೇಕಾಗುವ ಬಂಗಾರ, ಬೆಳ್ಳಿಯ ಕೆಲಸಕ್ಕಾಗಿ ಬೇಕಾಗುವ ಬೆಳ್ಳಿ, ತಾಮ್ರದ ಕೆಲಸಕ್ಕಾಗಿ ಬೇಕಾಗುವ ತಾಮ್ರ, ಕಬ್ಬಿಣದ ಕೆಲಸಕ್ಕಾಗಿ ಬೇಕಾಗುವ ಕಬ್ಬಿಣ, ಮರದ ಕೆಲಸಕ್ಕಾಗಿ ಬೇಕಾಗುವ ಮರ ಇವುಗಳನ್ನೂ, ಗೋಮೇಧಿಕ ರತ್ನ, ಕೆತ್ತುವುದಕ್ಕೆ ಬೇಕಾಗುವ ರತ್ನ, ಕೆಂಪು ಹರಳು, ವಿಚಿತ್ರ ವರ್ಣದ ಕಲ್ಲು, ಎಲ್ಲಾ ತರದ ಮಣಿ, ಚಂದ್ರಕಾಂತಶಿಲೆ ಇವುಗಳನ್ನೂ ನನ್ನ ದೇವರ ಮಂದಿರಕ್ಕೋಸ್ಕರ ರಾಶಿ ರಾಶಿಯಾಗಿ ಸಂಗ್ರಹಿಸಿದ್ದೇನೆ.
3 성전을 위하여 예비한 이 모든 것 외에도 내 마음에 내 하나님의 전을 사모하므로 나의 사유의 금, 은으로 내 하나님의 전을 위하여 드렸노니
ನಾನು ಪವಿತ್ರಾಲಯಕ್ಕೆ ಇವುಗಳನ್ನೆಲ್ಲಾ ಸಂಗ್ರಹಿಸಿದ್ದಲ್ಲದೆ ನನ್ನ ದೇವರ ಆಲಯದ ಮೇಲಣ ಅನುರಾಗದಿಂದ ಅದಕ್ಕೊಸ್ಕರ ನನ್ನ ಸ್ವಂತ ಸೊತ್ತಿನಿಂದ
4 곧 오빌의 금 삼천 달란트와 천은 칠천 달란트라 모든 전 벽에 입히며
ಮೂರು ಸಾವಿರ ತಲಾಂತು ಓಫೀರ್ ದೇಶದ ಬಂಗಾರವನ್ನೂ, ಏಳು ಸಾವಿರ ತಲಾಂತು ಚೊಕ್ಕ ಬೆಳ್ಳಿಯನ್ನೂ ಕೊಡುತ್ತೇನೆ. ಈ ಬೆಳ್ಳಿ ಬಂಗಾರದಿಂದ ಆಲಯದ ಗೋಡೆಗಳನ್ನು ಹೊದಿಸಬೇಕು.
5 금, 은 그릇을 만들며 공장의 손으로 하는 모든 일에 쓰게 하였노니 오늘날 누가 즐거이 손에 채워 여호와께 드리겠느냐
ಅಕ್ಕಸಾಲಿಗರು ಮಾಡಬಹುದಾದ ಎಲ್ಲಾ ತರದ ಬೆಳ್ಳಿ ಬಂಗಾರದ ಸಾಮಾನುಗಳನ್ನು ಮಾಡಿಸಬೇಕು. ಈ ಹೊತ್ತು ಉದಾರಹಸ್ತದಿಂದ ಯೆಹೋವನಿಗೋಸ್ಕರ ಕಾಣಿಕೆಯನ್ನರ್ಪಿಸುವುದಕ್ಕೆ ಯಾರಿಗೆ ಮನಸ್ಸಿದೆಯೋ ಅವರು ಮುಂದೆ ಬರಲಿ” ಎಂದು ನೆರೆದ ಸಭೆಗೆ ಹೇಳಿದನು.
6 이에 모든 족장과 이스라엘 모든 지파 어른과 천부장과 백부장과 왕의 사무 감독이 다 즐거이 드리되
ಆಗ ಇಸ್ರಾಯೇಲ್ ಗೋತ್ರಕುಟುಂಬಗಳ ಪ್ರಧಾನರೂ, ಸಹಸ್ರಾಧಿಪತಿಗಳೂ, ಅರಸನ ಕೆಲಸದವರ ಮುಖ್ಯಸ್ಥರೂ, ದೇವಾಲಯದ ಕೆಲಸಕ್ಕೋಸ್ಕರ ಸ್ವ ಇಚ್ಛೆಯಿಂದ
7 하나님의 전 역사를 위하여 금 오천 달란트와 금 다릭 일만과 은 일만 달란트와 놋 일만 팔천 달란트와 철 십만 달란트를 드리고
ಐದು ಸಾವಿರ ತಲಾಂತು, ಹತ್ತು ಸಾವಿರ ಪವನು ಬಂಗಾರವನ್ನೂ, ಹತ್ತು ಸಾವಿರ ತಲಾಂತು ಬೆಳ್ಳಿಯನ್ನೂ, ಹದಿನೆಂಟು ಸಾವಿರ ತಲಾಂತು ತಾಮ್ರವನ್ನೂ, ಒಂದು ಲಕ್ಷ ತಲಾಂತು ಕಬ್ಬಿಣವನ್ನೂ ಕೊಟ್ಟರು.
8 무릇 보석이 있는 자는 게르손 사람 여히엘의 손에 부쳐 여호와의 전 곳간에 드렸더라
ರತ್ನಗಳನ್ನು ಹೊಂದಿದ್ದವರು ಅವುಗಳನ್ನು ಯೆಹೋವನ ಆಲಯದ ಭಂಡಾರಕ್ಕೋಸ್ಕರ ಗೇರ್ಷೋನ್ಯನಾದ ಯೆಹೀಯೇಲನ ವಶಕ್ಕೆ ಕೊಟ್ಟರು.
9 백성이 자기의 즐거이 드림으로 기뻐하였으니 곧 저희가 성심으로 여호와께 즐거이 드림이며 다윗 왕도 기쁨을 이기지 못하여 하니라
ಅವರು ಪೂರ್ಣಮನಸ್ಸಿನಿಂದಲೂ, ಸ್ವ ಇಚ್ಛೆಯಿಂದಲೂ ಯೆಹೋವನಿಗೆ ಕಾಣಿಕೆ ನೀಡಿದ್ದನ್ನು ನೋಡಿ ಜನರೆಲ್ಲರೂ ಸಂತೋಷಪಟ್ಟರು. ಅರಸನಾದ ದಾವೀದನಿಗೂ ಬಹಳ ಸಂತೋಷವಾಯಿತು.
10 다윗이 온 회중 앞에서 여호와를 송축하여 가로되 우리 조상 이스라엘의 하나님 여호와여 주는 영원히 송축을 받으시옵소서
೧೦ಅನಂತರ ದಾವೀದನು ನೆರೆದ ಸಭೆಯ ಮುಂದೆ ಯೆಹೋವನನ್ನು ಸ್ತುತಿಸಿ ಹೇಳಿದ್ದೇನೆಂದರೆ, “ನಮ್ಮ ಪಿತೃವಾದ ಇಸ್ರಾಯೇಲಿನ ದೇವರೇ. ಯೆಹೋವನೇ, ಯುಗಯುಗಾಂತರಗಳಲ್ಲಿ ನಿನಗೆ ಕೊಂಡಾಟವಾಗಲಿ.
11 여호와여 광대하심과 권능과 영광과 이김과 위엄이 다 주께 속하였사오니 천지에 있는 것이 다 주의 것이로소이다 여호와여 주권도 주께 속하였사오니 주는 높으사 만유의 머리심이니이다
೧೧ಯೆಹೋವನೇ, ಎಲ್ಲಾ ಮಹಿಮೆ, ವೈಭವ, ಪರಾಕ್ರಮ, ಪ್ರಭಾವ, ಪ್ರತಾಪ, ಪ್ರತಿಭೆ ಎಲ್ಲವೂ ನಿನ್ನವೆ. ಭೂಮ್ಯಾಕಾಶಗಳಲ್ಲಿ ಇರುವದೆಲ್ಲಾ ನಿನ್ನದೇ. ಯೆಹೋವನೇ ರಾಜ್ಯವು ನಿನ್ನದು. ನೀನು ಮಹೋನ್ನತನಾಗಿ ಸರ್ವವನ್ನು ಆಳುವವನಾಗಿರುತ್ತೀ.
12 부와 귀가 주께로 말미암고 또 주는 만유의 주재가 되사 손에 권세와 능력이 있사오니 모든 자를 크게 하심과 강하게 하심이 주의 손에 있나이다
೧೨ಪ್ರಭಾವ ಐಶ್ವರ್ಯಗಳು ನಿನ್ನ ಸನ್ನಿಧಿಯಿಂದ ಬರುತ್ತವೆ. ನೀನು ಸರ್ವಾಧಿಕಾರಿಯು. ಬಲಪರಾಕ್ರಮಗಳು ನಿನ್ನ ಹಸ್ತದಲ್ಲಿರುತ್ತವೆ. ಎಲ್ಲಾ ಮಹಿಮೆಗೂ, ಶಕ್ತಿಗೂ ನೀನೇ ಮೂಲನು.
13 우리 하나님이여 이제 우리가 주께 감사하오며 주의 영화로운 이름을 찬양하나이다
೧೩ಆದುದರಿಂದ ನಮ್ಮ ದೇವರೇ ನಾವು ನಿನಗೆ ಕೃತಜ್ಞತಾಸ್ತುತಿಮಾಡುತ್ತಾ, ನಿನ್ನ ಪ್ರಭಾವವುಳ್ಳ ನಾಮವನ್ನು ಕೀರ್ತಿಸುತ್ತೇವೆ.
14 나와 나의 백성이 무엇이관대 이처럼 즐거운 마음으로 드릴 힘이 있었나이까 모든 것이 주께로 말미암았사오니 우리가 주의 손에서 받은 것으로 주께 드렸을 뿐이니이다
೧೪ನಾವು ಸ್ವ ಇಚ್ಛೆಯಿಂದ ನಿನಗೆ ಕಾಣಿಕೆಗಳನ್ನು ಸಮರ್ಪಿಸಲು ನಾನಾಗಲಿ, ನನ್ನ ಪ್ರಜೆಗಳಾಗಲಿ ಸಮರ್ಥರಲ್ಲ. ಸಮಸ್ತವೂ ನಿನ್ನಿಂದಲೇ ಸಾಧ್ಯವಾಯಿತು, ನೀನು ಕೊಟ್ಟದ್ದನ್ನೇ ನಿನಗೆ ಕೊಟ್ಟೆವು.
15 주 앞에서는 우리가 우리 열조와 다름이 없이 나그네와 우거한 자라 세상에 있는 날이 그림자 같아서 머무름이 없나이다
೧೫ನಾವು ನಿನ್ನ ದೃಷ್ಟಿಯಲ್ಲಿ ಪರದೇಶಿಗಳೂ, ನಮ್ಮ ಪೂರ್ವಿಕರೆಲ್ಲರಂತೆ ಪ್ರವಾಸಿಗಳೂ ಆಗಿದ್ದೇವೆ. ನಮ್ಮ ಆಯುಷ್ಕಾಲವು ನೆರಳಿನಂತಿದೆ. ನಮಗೆ ಯಾವ ನಿರೀಕ್ಷೆಯೂ ಇಲ್ಲ.
16 우리 하나님 여호와여 우리가 주의 거룩한 이름을 위하여 전을 건축하려고 미리 저축한 이 모든 물건이 다 주의 손에서 왔사오니 다 주의 것이니이다
೧೬ನಮ್ಮ ದೇವರಾದ ಯೆಹೋವನೇ, ನಿನ್ನ ಪರಿಶುದ್ಧ ನಾಮಕ್ಕೋಸ್ಕರ ಆಲಯ ಕಟ್ಟಿಸಬೇಕೆಂದು ಸಂಗ್ರಹಿಸಿಟ್ಟಿರುವ ಈ ಎಲ್ಲಾ ವಸ್ತುಗಳು ನಿನ್ನಿಂದಲೇ ನಮಗೆ ದೊರಕಿದವು. ಇವೆಲ್ಲಾ ನಿನ್ನವೇ.
17 나의 하나님이여 주께서 마음을 감찰하시고 정직을 기뻐하시는 줄 내가 아나이다 내가 정직한 마음으로 이 모든 것을 즐거이 드렸사오며 이제 내가 또 여기 있는 주의 백성이 주께 즐거이 드리는 것을 보오니 심히 기쁘도소이다
೧೭ನನ್ನ ದೇವರೇ, ನೀನು ಹೃದಯವನ್ನು ಶೋಧಿಸುವವನೂ, ಯಥಾರ್ಥಚಿತ್ತರನ್ನು ಮೆಚ್ಚುವವನೂ ಆಗಿದ್ದಿ ಎಂಬುದನ್ನು ಬಲ್ಲೆನು. ನಾನಂತೂ ಯಥಾರ್ಥಮನಸ್ಸಿನಿಂದಲೂ, ಸ್ವ ಇಚ್ಛೆಯಿಂದಲೂ ಇದನ್ನೆಲ್ಲಾ ಕೊಟ್ಟಿದ್ದೇನೆ. ಇಲ್ಲಿ ಕೂಡಿರುವ ನಿನ್ನ ಪ್ರಜೆಗಳೂ ಸ್ವ ಇಚ್ಛೆಯಿಂದಲೇ ಕಾಣಿಕೆಯನ್ನು ಅರ್ಪಿಸಿದ್ದಾರೆ ಎಂದು ನೋಡಿ ಸಂತೋಷಿಸುತ್ತೇನೆ.
18 우리 열조 아브라함과 이삭과 이스라엘의 하나님 여호와여 주께서 이것을 주의 백성의 심중에 영원히 두어 생각하게 하시고 그 마음을 예비하여 주께로 돌아오게 하옵시며
೧೮ನಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಇಸ್ರಾಯೇಲರ ದೇವರೇ, ಯೆಹೋವನೇ, ನಿನ್ನ ಪ್ರಜೆಗಳಲ್ಲಿ ಇಂಥಾ ಮನಸ್ಸು ಯಾವಾಗಲೂ ಇರುವಂತೆ ಮಾಡು. ನಿನ್ನಲ್ಲಿ ಭಯಭಕ್ತಿ ಉಳ್ಳವರಾಗಿರುವುದಕ್ಕೆ ಅವರಿಗೆ ಸ್ಥಿರಚಿತ್ತವನ್ನು ಅನುಗ್ರಹಿಸು.
19 또 내 아들 솔로몬에게 정성된 마음을 주사 주의 계명과 법도와 율례를 지켜 이 모든 일을 행하게 하시고 내가 위하여 예비한 것으로 전을 건축하게 하옵소서
೧೯ನನ್ನ ಮಗನಾದ ಸೊಲೊಮೋನನು ನಿನ್ನ ಆಜ್ಞಾವಿಧಿಗಳನ್ನು ಕೈಕೊಳ್ಳುತ್ತಿರುವಂತೆಯೂ, ನಾನು ಯಾವ ಮಂದಿರಕ್ಕೋಸ್ಕರ ಇಷ್ಟನ್ನೆಲ್ಲಾ ಸಿದ್ಧಪಡಿಸಿರುತ್ತೇನೋ ಆ ನಿನ್ನ ಮಂದಿರವನ್ನು ಅವನು ಯಥಾರ್ಥಮನಸ್ಸಿನಿಂದ ಕಟ್ಟಿಸಿ ತೀರಿಸುವಂತೆಯೂ ದಯಪಾಲಿಸು” ಎಂದು ಪ್ರಾರ್ಥಿಸಿದನು.
20 다윗이 온 회중에게 이르되 너희는 너희 하나님 여호와를 송축하라 하매 회중이 그 열조의 하나님 여호와를 송축하고 머리를 숙여 여호와와 왕에게 절하고
೨೦ತರುವಾಯ ದಾವೀದನು ನೆರೆದ ಸಭೆಯವರಿಗೆಲ್ಲಾ, “ನಿಮ್ಮ ದೇವರಾದ ಯೆಹೋವನನ್ನು ಸ್ತುತಿಸಿರಿ” ಎಂದು ಹೇಳಲು ಸಮೂಹದವರೆಲ್ಲರೂ ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ಸ್ತುತಿಸುತ್ತಾ ತಲೆಬಾಗಿ ದೇವರಿಗೂ ಮತ್ತು ಅರಸನಿಗೂ ನಮಸ್ಕರಿಸಿದರು.
21 이튿날 여호와께 제사를 드리고 또 번제를 드리니 수송아지가 일천이요 수양이 일천이요 어린 양이 일천이요 또 그 전제라 온 이스라엘을 위하여 풍성한 제물을 드리고
೨೧ಮರುದಿನ ಅವರು ಯೆಹೋವನಿಗೆ ಯಜ್ಞಗಳನ್ನೂ, ಸರ್ವಾಂಗಹೋಮಗಳನ್ನೂ ಸಮರ್ಪಿಸಿದರು. ಅವರು ಆ ದಿನದ ಯಜ್ಞಕ್ಕಾಗಿ ಸಾವಿರ ಹೋರಿಗಳನ್ನೂ, ಸಾವಿರ ಟಗರುಗಳನ್ನೂ, ಸಾವಿರ ಕುರಿಮರಿಗಳನ್ನೂ ವಧಿಸಿದರು. ಇವುಗಳೊಡನೆ ಅರ್ಪಿಸತಕ್ಕ ಪಾನದ್ರವ್ಯಗಳನ್ನೂ ಇಸ್ರಾಯೇಲರೆಲ್ಲರಿಗೆ ಸಾಕಾಗುವಷ್ಟು ಸಮಾಧಾನಯಜ್ಞಗಳನ್ನೂ ಸಮರ್ಪಿಸಿ, ಯೆಹೋವನ ಸನ್ನಿಧಿಯಲ್ಲಿ ಮಹಾ ಸಂತೋಷದಿಂದ ಅನ್ನಪಾನಗಳನ್ನು ತೆಗೆದುಕೊಂಡರು.
22 이 날에 무리가 크게 기뻐하여 여호와 앞에서 먹으며 마셨더라 무리가 다윗의 아들 솔로몬으로 다시 왕을 삼아 기름을 부어 여호와께 돌려 주권자가 되게 하고 사독에게도 기름을 부어 제사장이 되게 하니라
೨೨ಜನರು ದಾವೀದನ ಮಗನಾದ ಸೊಲೊಮೋನನನ್ನು ಪುನಃ ಅರಸನನ್ನಾಗಿ ಆರಿಸಿಕೊಂಡು ಅವನನ್ನು ರಾಜನನ್ನಾಗಿಸಿವುದಕ್ಕೂ, ಚಾದೋಕನನ್ನು ಯಾಜಕನಾಗುವುದಕ್ಕೂ ಅಭಿಷೇಕಿಸಿ ಯೆಹೋವನಿಗೋಸ್ಕರ ಪ್ರತಿಷ್ಠಿಸಿದರು.
23 솔로몬이 여호와께서 주신 위에 앉아 부친 다윗을 이어 왕이 되어 형통하니 온 이스라엘이 그 명령을 순종하며
೨೩ಅಂದಿನಿಂದ ಸೊಲೊಮೋನನು ತನ್ನ ತಂದೆಯಾದ ದಾವೀದನಿಗೆ ಬದಲು ಅರಸನಾಗಿ ಯೆಹೋವನ ಸಿಂಹಾಸನದಲ್ಲಿ ಕುಳಿತುಕೊಂಡು ವೃದ್ಧಿಯಾಗುತ್ತಾ ಬಂದನು. ಅರಸನಾದ ಸೊಲೊಮೋನನಿಗೆ ಇಸ್ರಾಯೇಲರೆಲ್ಲರೂ ವಿಧೇಯರಾಗಿ ನಡೆಯುವವರಾದರು.
24 모든 방백과 용사와 다윗 왕의 여러 아들이 솔로몬 왕에게 복종하니
೨೪ಎಲ್ಲಾ ಅಧಿಪತಿಗಳೂ ದಂಡಿನವರೂ ಅರಸನಾದ ದಾವೀದನ ಎಲ್ಲಾ ಮಕ್ಕಳೂ ಅವನಿಗೆ ಅಧೀನರಾದರು.
25 여호와께서 솔로몬으로 이스라엘 무리의 목전에 심히 존대케 하시고 또 왕의 위엄을 주사 그 전 이스라엘 모든 왕보다 뛰어나게 하셨더라
೨೫ಯೆಹೋವನು ಇಸ್ರಾಯೇಲರೆಲ್ಲರಿಗೆ ಗೊತ್ತಾಗುವಂತೆ ಸೊಲೊಮೋನನನ್ನು ಅಭಿವೃದ್ಧಿಪಡಿಸಿ ಅವನಿಗಿಂತ ಮೊದಲು ಇಸ್ರಾಯೇಲರನ್ನು ಆಳಿದ ಎಲ್ಲಾ ಅರಸರ ವೈಭವಕ್ಕಿಂತಲೂ ಹೆಚ್ಚಿನ ವೈಭವವನ್ನು ಅವನಿಗೆ ಅನುಗ್ರಹಿಸಿದನು.
26 이새의 아들 다윗이 온 이스라엘의 왕이 되어
೨೬ಹೀಗೆ ಇಷಯನ ಮಗನಾದ ದಾವೀದನು ಇಸ್ರಾಯೇಲರೆಲ್ಲರ ಅರಸನಾಗಿ ಆಳ್ವಿಕೆ ಮಾಡಿದನು.
27 이스라엘을 치리한 날짜는 사십 년이라 헤브론에서 칠 년을 치리하였고 예루살렘에서 삼십삼 년을 치리하였더라
೨೭ಅವನು ಹೆಬ್ರೋನಿನಲ್ಲಿ ಏಳು ವರ್ಷವೂ, ಯೆರೂಸಲೇಮಿನಲ್ಲಿ ಮೂವತ್ತಮೂರು ವರ್ಷವೂ ಒಟ್ಟಿಗೆ ನಲ್ವತ್ತು ವರ್ಷ ಆಳಿದನು.
28 저가 나이 많아 늙도록 부하고 존귀하다가 죽으매 그 아들 솔로몬이 대신하여 왕이 되니라
೨೮ಅವನು ಐಶ್ವರ್ಯ, ಮಾನ, ದೀರ್ಘಾಯುಷ್ಯ ಇವುಗಳನ್ನು ಅನುಭವಿಸಿದ ನಂತರ ತುಂಬಾ ವೃದ್ಧನಾಗಿ ಮರಣ ಹೊಂದಿದನು. ಅವನಿಗೆ ಬದಲಾಗಿ ಅವನ ಮಗನಾದ ಸೊಲೊಮೋನನು ಅರಸನಾದನು.
29 다윗 왕의 시종 행적이 선견자 사무엘의 글과 선지자 나단의 글과 선견자 갓의 글에 다 기록되고
೨೯ದಾವೀದನ ಪೂರ್ವೋತ್ತರಚರಿತ್ರೆ ಅವನ ಆಳ್ವಿಕೆ, ಪರಾಕ್ರಮ ಅವನಿಗೂ ಇಸ್ರಾಯೇಲರಿಗೂ, ಸುತ್ತಣ ರಾಜ್ಯಗಳಿಗೂ ಸಂಭವಿಸಿದ ಸುಖದುಃಖ ಇವುಗಳ ವೃತ್ತಾಂತ.
30 또 저의 왕 된 일과 그 권세와 저와 이스라엘과 온 세상 열국의 지난 시사가 다 기록되니라
೩೦ದೇವದರ್ಶಿಯಾದ ಸಮುವೇಲ, ಪ್ರವಾದಿಯಾದ ನಾತಾನ, ದೇವದರ್ಶಿಯಾದ ಗಾದ ಇವರ ಚರಿತ್ರೆಗಳಲ್ಲಿಯೂ ಬರೆದಿರುತ್ತದೆ.

< 역대상 29 >