< 에스더 10 >
1 아하수에로 왕이 그 본토와 바다 섬들로 공을 바치게 하였더라
ಅರಸನಾದ ಅಹಷ್ವೇರೋಷನು ದೇಶದ ಮೇಲೆಯೂ ಸಮುದ್ರದ ದ್ವೀಪಗಳ ಮೇಲೆಯೂ ತೆರಿಗೆಯನ್ನು ನೇಮಿಸಿದನು.
2 왕의 능력의 모든 행적과 모르드개를 높여 존귀케 한 사적이 메대와 바사 열왕의 일기에 기록되지 아니하였느냐
ಅವನ ಅಧಿಕಾರದ ಕ್ರಿಯೆಗಳೂ ಅವನ ಪರಾಕ್ರಮವೂ ಅರಸನು ಮೊರ್ದೆಕೈಯನ್ನು ಹೆಚ್ಚಿಸಿದ ಮಹತ್ತಿನ ಪ್ರಸಿದ್ಧಿಯೂ ಮೇದ್ಯ ಮತ್ತು ಪಾರಸಿಯ ಅರಸರ ಇತಿಹಾಸಗಳ ಗ್ರಂಥದಲ್ಲಿ ಬರೆದಿರುತ್ತವೆ.
3 유다인 모르드개가 아하수에로 왕의 다음이 되고 유다인 중에 존대하여 그 허다한 형제에게 굄을 받고 그 백성의 이익을 도모하며 그 모든 종족을 안위하였더라
ಯೆಹೂದ್ಯನಾದ ಮೊರ್ದೆಕೈ ಅರಸನಾದ ಅಹಷ್ವೇರೋಷನಿಗೆ ಎರಡನೆಯವನೂ ಯೆಹೂದ್ಯರಲ್ಲಿ ಸನ್ಮಾನಿತನೂ ತನ್ನ ಸಹೋದರರ ಸಮೂಹದಲ್ಲಿ ಹೆಚ್ಚಿನ ಗೌರವ ಪಾತ್ರನೂ ತನ್ನ ಜನರ ಹಿತಚಿಂತಕನೂ ತನ್ನ ಸಂತಾನದವರಿಗೆ ಕ್ಷೇಮಾಭಿವೃದ್ಧಿಯನ್ನು ಮಾತನಾಡುವವನೂ ಆಗಿದ್ದನು.