< 창세기 3 >
1 여호와 하나님의 지으신 들짐승 중에 뱀이 가장 간교하더라 뱀이 여자에게 물어 가로되 하나님이 참으로 너희더러 동산 모든 나무의 실과를 먹지 말라 하시더냐
೧ಯೆಹೋವನಾದ ದೇವರು ಉಂಟುಮಾಡಿದ ಎಲ್ಲಾ ಕಾಡುಮೃಗಗಳಲ್ಲಿ ಸರ್ಪವು ಅತಿ ಯುಕ್ತಿಯುಳ್ಳದ್ದಾಗಿತ್ತು. ಸರ್ಪವು ಸ್ತ್ರೀಯ ಬಳಿಗೆ ಬಂದು, “ಏನಮ್ಮಾ, ತೋಟದಲ್ಲಿರುವ ಯಾವ ಮರದ ಹಣ್ಣನ್ನು ನೀವು ತಿನ್ನಬಾರದೆಂದು ದೇವರು ಅಪ್ಪಣೆ ಕೊಟ್ಟಿರುವುದು ನಿಜವೋ?” ಎಂದು ಕೇಳಲು.
2 여자가 뱀에게 말하되 동산 나무의 실과를 우리가 먹을 수 있으나
೨ಆ ಸ್ತ್ರೀಯು ಸರ್ಪಕ್ಕೆ, “ತೋಟದಲ್ಲಿರುವ ಎಲ್ಲಾ ಮರಗಳ ಹಣ್ಣುಗಳನ್ನು ತಿನ್ನಬಹುದು,
3 동산 중앙에 있는 나무의 실과는 하나님의 말씀에 너희는 먹지도 말고 만지지도 말라 너희가 죽을까 하노라 하셨느니라
೩ಆದರೆ ತೋಟದ ಮಧ್ಯದಲ್ಲಿರುವ ಆ ಮರದ ಹಣ್ಣಿನ ವಿಷಯವಾಗಿ, ‘ನೀವು ಇದನ್ನು ತಿನ್ನಲೂ ಬಾರದು, ಮುಟ್ಟಲೂ ಕೂಡದು, ತಿಂದರೆ ಸಾಯುವಿರಿ’ ಎಂದು ದೇವರು ಹೇಳಿದ್ದಾನೆ” ಅಂದಳು.
4 뱀이 여자에게 이르되 너희가 결코 죽지 아니하리라
೪ಆಗ ಸರ್ಪವು ಸ್ತ್ರೀಗೆ, “ನೀವು ನಿಶ್ಚಯವಾಗಿ ಸಾಯುವುದಿಲ್ಲ.
5 너희가 그것을 먹는 날에는 너희 눈이 밝아 하나님과 같이 되어 선악을 알 줄을 하나님이 아심이니라
೫ನೀವು ಇದರ ಹಣ್ಣನ್ನು ತಿಂದ ಕ್ಷಣವೇ ನಿಮ್ಮ ಕಣ್ಣುಗಳು ತೆರೆಯುವವು, ನೀವು ದೇವರುಗಳಂತೆ ಆಗಿ ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನು ತಿಳಿಯುವಿರಿ, ಇದು ದೇವರಿಗೆ ಚೆನ್ನಾಗಿ ಗೊತ್ತು” ಎಂದು ಹೇಳಿತು.
6 여자가 그 나무를 본즉 먹음직도 하고 보암직도 하고 지혜롭게 할 만큼 탐스럽기도 한 나무인지라 여자가 그 실과를 따먹고 자기와 함께한 남편에게도 주매 그도 먹은지라
೬ಆಗ ಸ್ತ್ರೀಯು ಆ ಮರದ ಹಣ್ಣು ತಿನ್ನುವುದಕ್ಕೆ ಉತ್ತಮವಾಗಿಯೂ, ನೋಡುವುದಕ್ಕೆ ರಮ್ಯವಾಗಿಯೂ, ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು ಅದನ್ನು ತೆಗೆದುಕೊಂಡು ತಿಂದಳು ಮತ್ತು ಸಂಗಡ ಇದ್ದ ಗಂಡನಿಗೂ ಕೊಡಲೂ, ಅವನೂ ತಿಂದನು.
7 이에 그들의 눈이 밝아 자기들의 몸이 벗은 줄을 알고 무화과 나무 잎을 엮어 치마를 하였더라
೭ಕೂಡಲೆ ಅವರಿಬ್ಬರ ಕಣ್ಣುಗಳು ತೆರೆದವು. ತಾವು ಬೆತ್ತಲೆಯಾಗಿದ್ದೇವೆಂದು ತಿಳಿದು ಅಂಜೂರದ ಎಲೆಗಳನ್ನು ಜೋಡಿಸಿ ಉಟ್ಟುಕೊಂಡರು.
8 그들이 날이 서늘할 때에 동산에 거니시는 여호와 하나님의 음성을 듣고 아담과 그 아내가 여호와 하나님의 낯을 피하여 동산 나무 사이에 숨은지라
೮ತರುವಾಯ ಯೆಹೋವನಾದ ದೇವರು ಸಂಜೆಯ ತಂಗಾಳಿಯಲ್ಲಿ ತೋಟದೊಳಗೆ ಸಂಚರಿಸುತ್ತಿರುವಾಗ ಆ ಮನುಷ್ಯನು ಮತ್ತು ಸ್ತ್ರೀಯು ಆತನ ಸಪ್ಪಳವನ್ನು ಕೇಳಿ ಆತನಿಗೆ ಕಾಣಿಸಬಾರದೆಂದು ತೋಟದ ಮರಗಳ ಹಿಂದೆ ಅಡಗಿಕೊಂಡರು.
9 여호와 하나님이 아담을 부르시며 그에게 이르시되 네가 어디 있느냐
೯ಆಗ ಯೆಹೋವ ದೇವರು ಮನುಷ್ಯನನ್ನು ಕರೆದು, “ನೀನು ಎಲ್ಲಿದ್ದೀ?” ಎಂದು ಕೇಳಿದನು.
10 가로되 내가 동산에서 하나님의 소리를 듣고 내가 벗었으므로 두려워하여 숨었나이다
೧೦ಅದಕ್ಕೆ ಅವನು, “ನೀನು ತೋಟದಲ್ಲಿ ಸಂಚರಿಸುವ ಸಪ್ಪಳವನ್ನು ನಾನು ಕೇಳಿ, ಬೆತ್ತಲೆಯಾಗಿರುವುದರಿಂದ ಹೆದರಿ ಅಡಗಿಕೊಂಡೆನು” ಎಂದನು.
11 가라사대 누가 너의 벗었음을 네게 고하였느냐 내가 너더러 먹지 말라 명한 그 나무 실과를 네가 먹었느냐
೧೧ಅದಕ್ಕಾತನು, “ನೀನು ಬೆತ್ತಲೆಯಾಗಿದ್ದೀಯೆಂದು ನಿನಗೆ ತಿಳಿಸಿದವರಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಹಣ್ಣನ್ನು ತಿಂದಿದ್ದಿಯಾ?” ಎಂದು ಕೇಳಿದನು.
12 아담이 가로되 하나님이 주셔서 나와 함께 하게 하신 여자 그가 그 나무 실과를 내게 주므로 내가 먹었나이다
೧೨ಅದಕ್ಕೆ ಆ ಮನುಷ್ಯನು, “ನನ್ನ ಜೊತೆಯಲ್ಲಿರುವುದಕ್ಕೆ ನೀನು ಕೊಟ್ಟ ಈ ಸ್ತ್ರೀಯು, ಆ ಮರದ ಹಣ್ಣನ್ನು ನನಗೆ ಕೊಟ್ಟಳು, ನಾನು ತಿಂದೆನು” ಎಂದು ಹೇಳಿದನು.
13 여호와 하나님이 여자에게 이르시되 네가 어찌하여 이렇게 하였느냐 여자가 가로되 뱀이 나를 꾀므로 내가 먹었나이다
೧೩ಯೆಹೋವನಾದ ದೇವರು ಆ ಸ್ತ್ರೀಗೆ, “ಇದೇನು ನೀನು ಮಾಡಿದ್ದು?” ಎಂದು ಕೇಳಲು, ಆ ಸ್ತ್ರೀಯು, “ಸರ್ಪವು ನನ್ನನ್ನು ವಂಚಿಸಿತು, ನಾನು ತಿಂದೆನು” ಎಂದು ಉತ್ತರ ಕೊಟ್ಟಳು.
14 여호와 하나님이 뱀에게 이르시되 네가 이렇게 하였으니 네가 모든 육축과 들의 모든 짐승보다 더욱 저주를 받아 배로 다니고 종신토록 흙을 먹을지니라
೧೪ಆಗ ಯೆಹೋವನಾದ ದೇವರು ಸರ್ಪಕ್ಕೆ; “ನೀನು ಈ ಕಾರ್ಯವನ್ನು ಮಾಡಿದ್ದರಿಂದ ಎಲ್ಲಾ ಪಶುಗಳಲ್ಲಿಯೂ ಅಡವಿಯ ಎಲ್ಲಾ ಕಾಡುಮೃಗಗಳಲ್ಲಿಯೂ ಶಾಪಗ್ರಸ್ತನಾಗಿರುವೆ. ನೀನು ಹೊಟ್ಟೆಯಿಂದ ಹರಿದು ನಿನ್ನ ಜೀವಮಾನದ ದಿನಗಳಲ್ಲೆಲ್ಲಾ ಮಣ್ಣನ್ನೇ ತಿನ್ನುವಿ.
15 내가 너로 여자와 원수가 되게 하고 너의 후손도 여자의 후손과 원수가 되게 하리니 여자의 후손은 네 머리를 상하게 할 것이요 너는 그의 발꿈치를 상하게 할 것이니라 하시고
೧೫ನಿನಗೂ, ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವುದು. ನೀನು ಅವನ ಹಿಮ್ಮಡಿಯನ್ನು ಕಚ್ಚುವಿ” ಎಂದು ಹೇಳಿದನು.
16 또 여자에게 이르시되 내가 네게 잉태하는 고통을 크게 더하리니 네가 수고하고 자식을 낳을 것이며 너는 남편을 사모하고 남편은 너를 다스릴 것이니라 하시고
೧೬ಆ ನಂತರ ಆ ಸ್ತ್ರೀಗೆ, “ನಾನು ನಿನ್ನ ಗರ್ಭವೇದನೆಯನ್ನು ಅಧಿಕವಾಗಿ ಹೆಚ್ಚಿಸುವೆನು ನೀನು ನೋವಿನಿಂದ ಮಕ್ಕಳನ್ನು ಹಡೆಯುವಿ. ಗಂಡನ ಮೇಲೆ ನಿನಗೆ ಬಯಕೆ ಇರುವುದು, ಆದರೆ ಅವನು ನಿನ್ನ ಮೇಲೆ ಆಳ್ವಿಕೆ ಮಾಡುವನು” ಎಂದು ಹೇಳಿದನು.
17 아담에게 이르시되 네가 네 아내의 말을 듣고 내가 너더러 먹지 말라 한 나무 실과를 먹었은즉 땅은 너로 인하여 저주를 받고 너는 종신토록 수고하여야 그 소산을 먹으리라
೧೭ಅನಂತರ ಆ ಪುರುಷನಿಗೆ, “ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನಿನ್ನ ಹೆಂಡತಿಯ ಮಾತು ಕೇಳಿ ತಿಂದ ಕಾರಣ, ನಿನ್ನ ನಿಮಿತ್ತ ಭೂಮಿಯು ಶಾಪಗ್ರಸ್ಥವಾಯಿತು. ನಿನ್ನ ಜೀವಮಾನವೆಲ್ಲಾ ಕಷ್ಟಪಟ್ಟು ಬೆವರು ಸುರಿಸಿ ದುಡಿದು ಭೂಮಿಯ ಹುಟ್ಟುವಳಿಯನ್ನು ತಿನ್ನಬೇಕು.
18 땅이 네게 가시덤불과 엉겅퀴를 낼 것이라 너의 먹을 것은 밭의 채소인즉
೧೮ಆ ಭೂಮಿಯಲ್ಲಿ ಮುಳ್ಳುಗಿಡಗಳೂ ಕಳೆಗಳೂ ಬಹಳವಾಗಿ ಬೆಳೆಯುವವು, ಹೊಲದ ಬೆಳೆಗಳು ನಿನಗೆ ಆಹಾರವಾಗಿರುವವು.
19 네가 얼굴에 땀이 흘러야 식물을 먹고 필경은 흙으로 돌아 가리니 그 속에서 네가 취함을 입었음이라 너는 흙이니 흙으로 돌아갈 것이니라 하시니라
೧೯ನೀನು ಪುನಃ ಮಣ್ಣಿಗೆ ಸೇರುವ ತನಕ ಬೆವರು ಸುರಿಸುತ್ತಾ ಬೇಕಾದ ಆಹಾರವನ್ನು ಸಂಪಾದಿಸಬೇಕು. ನೀನು ಮಣ್ಣಿನಿಂದ ತೆಗೆಯಲ್ಪಟ್ಟವನಾಗಿರುವುದರಿಂದ ನೀನು ಮಣ್ಣೇ; ಪುನಃ ಮಣ್ಣಿಗೆ ಸೇರತಕ್ಕವನಾಗಿದ್ದೀ” ಎಂದು ಹೇಳಿದನು.
20 아담이 그 아내를 하와라 이름하였으니 그는 모든 산 자의 어미가 됨이더라
೨೦ಆ ಮನುಷ್ಯನು ತನ್ನ ಹೆಂಡತಿಗೆ ಹವ್ವ ಎಂದು ಹೆಸರಿಟ್ಟನು. ಆದುದರಿಂದ ಬದುಕಿರುವವರೆಲ್ಲರಿಗೂ ಆಕೆಯೇ ಮೂಲತಾಯಿಯಾಗಿದ್ದಾಳೆ.
21 여호와 하나님이 아담과 그 아내를 위하여 가죽옷을 지어 입히시니라
೨೧ಯೆಹೋವ ದೇವರು ಆದಾಮನಿಗೂ ಅವನ ಹೆಂಡತಿಗೂ ಚರ್ಮದ ಅಂಗಿಗಳನ್ನು ಮಾಡಿ ತೊಡಿಸಿದನು.
22 여호와 하나님이 가라사대 보라 이 사람이 선악을 아는 일에 우리 중 하나 같이 되었으니 그가 그 손을 들어 생명나무 실과도 따 먹고 영생할까 하노라 하시고
೨೨ಯೆಹೋವ ದೇವರು “ಈ ಮನುಷ್ಯನು ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನರಿತು ನಮ್ಮಲ್ಲಿ ಒಬ್ಬನಂತಾದನಲ್ಲಾ? ಇದರಿಂದ ಇವನು ಕೈಚಾಚಿ ಜೀವವೃಕ್ಷದ ಫಲವನ್ನು ಸಹ ತಿಂದು ಶಾಶ್ವತವಾಗಿ ಬದುಕುವವನಾಗಬಾರದು” ಎಂದು ಆಜ್ಞಾಪಿಸಿದನು.
23 여호와 하나님이 에덴 동산에서 그 사람을 내어 보내어 그의 근본된 토지를 갈게 하시니라
೨೩ಆದ್ದರಿಂದ ಯೆಹೋವನು ಅವನನ್ನು ಸೃಷ್ಟಿಸಿದ ಮಣ್ಣಿನ ಭೂಮಿಯನ್ನೇ ವ್ಯವಸಾಯ ಮಾಡುವುದಕ್ಕಾಗಿ ಅವನನ್ನು ಏದೆನ್ ತೋಟದಿಂದ ಹೊರಗೆ ಕಳುಹಿಸಿ ಬಿಟ್ಟನು.
24 이같이 하나님이 그 사람을 쫓아 내시고 에덴 동산 동편에 그룹들과 두루 도는 화염검을 두어 생명나무의 길을 지키게 하시니라
೨೪ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ, ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವುದಕ್ಕೆ, ಏದೆನ್ ವನದ ಪೂರ್ವ ದಿಕ್ಕಿನಲ್ಲಿ ಕೆರೂಬಿಯರನ್ನೂ, ಎಲ್ಲಾ ಕಡೆಯಲ್ಲಿ ಧಗಧಗಿಸುತ್ತಾ ಉರಿಯುವ ಜ್ವಾಲೆಯ ಕತ್ತಿಯನ್ನು ಇರಿಸಿದನು.