< 호세아 10 >
1 이스라엘은 열매 맺는 무성한 포도나무라 그 열매가 많을수록 제단을 많게 하며 그 땅이 아름다울수록 주상을 아름답게 하도다
೧ಇಸ್ರಾಯೇಲ್ ಸೊಂಪಾಗಿ ಬೆಳೆದ ದ್ರಾಕ್ಷಾಲತೆಯಾಗಿದೆ; ಹಣ್ಣುಬಿಟ್ಟುಕೊಂಡಿದೆ; ಅದರ ಹಣ್ಣುಗಳು ಹೆಚ್ಚಿದಷ್ಟೂ ಯಜ್ಞವೇದಿಗಳನ್ನು ಹೆಚ್ಚಿಸಿಕೊಂಡಿದೆ; ಅದರ ಭೂಮಿಯು ಎಷ್ಟು ಒಳ್ಳೆಯದೋ, ಅಷ್ಟು ಒಳ್ಳೆಯ ವಿಗ್ರಹ ಸ್ತಂಭಗಳನ್ನು ನಿರ್ಮಾಣ ಮಾಡಿಕೊಂಡಿದೆ.
2 저희가 두 마음을 품었으니 이제 죄를 받을 것이라 하나님이 그 제단을 쳐서 깨치시며 그 주상을 헐으시리라
೨ಇಸ್ರಾಯೇಲರ ಮನಸ್ಸು ನುಣುಚಿಕೊಳ್ಳುತ್ತದೆ; ಈಗ ದಂಡನೆಗೆ ಈಡಾಗಿದ್ದಾರೆ. ಯೆಹೋವನೇ ಅವರ ಯಜ್ಞವೇದಿಗಳನ್ನು ಮುರಿದುಬಿಡುವನು. ಅವರ ವಿಗ್ರಹ ಸ್ತಂಭಗಳನ್ನು ಹಾಳುಮಾಡುವನು.
3 저희가 이제 이르기를 우리가 여호와를 두려워 아니하므로 우리에게 왕이 없거니와 왕이 우리를 위하여 무엇을 하리요 하리로다
೩“ನಮಗೆ ರಾಜನೇ ಇಲ್ಲ; ನಾವು ಯೆಹೋವನಲ್ಲಿ ಭಯಭಕ್ತಿಯಿಟ್ಟವರಲ್ಲ. ರಾಜನಾದರೋ ನಮಗಾಗಿ ಏನು ಮಾಡಿಯಾನು?” ಎಂದು ಈಗ ಅವರು ಅಂದುಕೊಳ್ಳಬೇಕಾಯಿತು.
4 저희가 헛된 말을 내며 거짓 맹세를 발하여 언약을 세우니 그 재판이 밭이랑에 돋는 독한 인진 같으리로다
೪ಹರಟೆಹರಟುತ್ತಾರೆ, ಸುಳ್ಳಾಣೆಯಿಡುತ್ತಾರೆ, ಸಂಧಾನ ಮಾಡಿಕೊಳ್ಳುತ್ತಾರೆ; ಅಲ್ಲಿನ ನ್ಯಾಯವು ನೇಗಿಲಗೆರೆಗಳಲ್ಲಿ ಹುಟ್ಟುವ ವಿಷದ ಕಳೆಗಳಂತಿದೆ.
5 사마리아 거민이 벧아웬의 송아지를 인하여 두려워할 것이라 그 백성이 슬퍼하며 그것을 기뻐하던 제사장들도 슬퍼하리니 이는 그 영광이 떠나감이며
೫ಸಮಾರ್ಯದ ನಿವಾಸಿಗಳು ಬೇತಾವೆನಿನ ಬಸವನ ವಿಷಯದಲ್ಲಿ ಭಯಪಡುವರು. ಅದರ ಭಕ್ತ ಜನರು ಅದಕ್ಕಾಗಿ ಎದೆಬಡಿದುಕೊಳ್ಳುವರು; ಅದರ ಮಹಿಮೆಯು ನಂದಿಹೋಯಿತು ಎಂದು ಪೂಜಾರಿಗಳು ಅದಕ್ಕಾಗಿ ನಡುಗುವರು.
6 그 송아지는 앗수르로 옮겨다가 예물로 야렙 왕에게 드리리니 에브라임은 수치를 받을 것이요 이스라엘은 자기들의 계의를 부끄러워할 것이며
೬ಅದು ಜಗಳಗಂಟ ಮಹಾರಾಜನಿಗೆ ಕಾಣಿಕೆಯಾಗಿ ಅಶ್ಶೂರಕ್ಕೆ ಒಯ್ಯಲ್ಪಡುವುದು. ಎಫ್ರಾಯೀಮಿಗೆ ಅವಮಾನವಾಗುವುದು, ಇಸ್ರಾಯೇಲ್ ತಾನು ಸಂಕಲ್ಪಿಸಿಕೊಂಡ ವಿಷಯಕ್ಕಾಗಿ ನಾಚಿಕೆಪಡುವುದು.
7 사마리아 왕은 물 위에 거품 같이 멸망할 것이며
೭ಸಮಾರ್ಯದ ರಾಜನು ಹಾಳಾಗಿ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗುವ ಮರದ ಚಕ್ಕೆಗೆ ಸಮಾನನಾಗಿದ್ದಾನೆ.
8 이스라엘의 죄 된 아웬의 산당은 패괴되어 가시와 찔레가 그 단 위에 날 것이니 그 때에 저희가 산더러 우리를 가리우라 할 것이요 작은 산더러 우리 위에 무너지라 하리라
೮ಇಸ್ರಾಯೇಲಿಗೆ ಪಾಪಾಸ್ಪದವಾದ ಆವೆನಿನ ಪೂಜಾಸ್ಥಾನಗಳು ನಾಶವಾಗುವವು. ಮುಳ್ಳುಗಿಡಗಳೂ, ಕಳೆಗಳೂ ಅಲ್ಲಿನ ಯಜ್ಞವೇದಿಗಳ ಮೇಲೆ ಹುಟ್ಟುವವು; ಅಲ್ಲಿನ ಜನರು, “ಬೆಟ್ಟಗಳೇ, ನಮ್ಮನ್ನು ಮುಚ್ಚಿಕೊಳ್ಳಿರಿ, ಗುಡ್ಡಗಳೇ, ನಮ್ಮ ಮೇಲೆ ಬೀಳಿರಿ” ಎಂದು ಕೂಗಿಕೊಳ್ಳುವರು.
9 이스라엘아 네가 기브아에 서서 흉악한 족속을 치는 전쟁을 거기서 면하였도다
೯ಇಸ್ರಾಯೇಲೇ, ಗಿಬ್ಯದಲ್ಲಿ ದುರಾಚಾರವು ನಡೆದಂದಿನಿಂದ ನೀನು ಪಾಪಮಾಡುತ್ತಾ ಬಂದಿದ್ದಿ; ಆಹಾ, ನಿನ್ನ ಜನರು ಅಲ್ಲಿ ನಿಂತಿದ್ದಾರೆ, ದುರಾಚಾರಿಗಳಿಗೆ ವಿರುದ್ಧವಾದ ಗಿಬ್ಯದಲ್ಲಿ ನಡೆದ ಯುದ್ಧಕ್ಕೆ ಅವರು ತುತ್ತಾಗುವುದಿಲ್ಲವೋ?
10 내가 원하는 때에 저희를 징계하리니 저희가 두 가지 죄에 걸릴 때에 만민이 모여서 저희를 치리라
೧೦ನನಗಿಷ್ಟವಾದಾಗ ನಾನು ಅವರನ್ನು ದಂಡಿಸುವೆನು; ಅವರ ಎರಡು ಅಪರಾಧಗಳ ದಂಡನೆಗೋಸ್ಕರ ಜನಾಂಗಗಳು ಅವರಿಗೆ ವಿರುದ್ಧವಾಗಿ ಒಟ್ಟುಗೂಡುವವು.
11 에브라임은 마치 길들인 암소 같아서 곡식 밟기를 좋아하나 내가 그 아름다운 목에 멍에를 메우고 그의 위에 사람을 태우리니 유다가 밭을 갈고 야곱이 흙덩이를 깨뜨리리라
೧೧ಎಫ್ರಾಯೀಮು ಹತೋಟಿಗೆ ಬಂದು ತೆನೆಹುಲ್ಲನ್ನು ತುಳಿಯುತ್ತಿರುವುದರಲ್ಲಿಯೇ ಇಷ್ಟಪಡುವ ಕಡಸಾಗಿದೆ; ಈಗಲಾದರೋ ಅದರ ಅಂದವಾದ ಹೆಗಲಿನ ಮೇಲೆ ಕೈಹಾಕಿದ್ದೇನೆ, ಎಫ್ರಾಯೀಮನ್ನು ನೊಗಕ್ಕೆ ಹೂಡುವೆನು, ಯೆಹೂದವು ಉಳಬೇಕು, ಯಾಕೋಬು ಕುಂಟೆ ಎಳೆಯಬೇಕು.
12 너희가 자기를 위하여 의를 심고 긍휼을 거두라 지금이 곧 여호와를 찾을 때니 너희 묵은 땅을 기경하라 마침내 여호와께서 임하사 의를 비처럼 너희에게 내리시리라
೧೨ನೀತಿಯ ಬೀಜವನ್ನು ಬಿತ್ತಿರಿ, ಪ್ರೀತಿಯ ಫಲವನ್ನು ಕೊಯ್ಯಿರಿ, ಹಾಳಾದ ನಿಮ್ಮ ಭೂಮಿಯನ್ನು ಫಲವತ್ತಾಗಿಸಿ; ಯೆಹೋವನು ಬಂದು ನಮ್ಮ ಮೇಲೆ ನೀತಿಯನ್ನು ವರ್ಷಿಸಲೆಂದು ಆತನಿಗೆ ಶರಣುಹೋಗುವ ಸಮಯವು ಒದಗಿದೆ.
13 너희는 악을 밭갈아 죄를 거두고 거짓 열매를 먹었나니 이는 네가 네 길과 네 용사의 많음을 의뢰하였음이라
೧೩ನೀವು ಮಾಡಿದ ವ್ಯವಸಾಯವು ದುಷ್ಟತನ, ನಿಮಗಾದ ಬೆಳೆಯು ಅನ್ಯಾಯ ನೀವು ನಿಮ್ಮ ಕಟ್ಟುಪಾಡಿನಲ್ಲಿಯೂ, ನಿಮ್ಮ ಶೂರರ ರಥಗಳಲ್ಲಿಯೂ ಭರವಸವಿಟ್ಟಿದ್ದರಿಂದ ಮೋಸದ ಫಲವನ್ನು ಅನುಭವಿಸಿದ್ದೀರಿ.
14 그러므로 너희 백성 중에 요란함이 일어나며 네 산성들이 다 훼파되되 살만이 전쟁의 날에 벧아벨을 훼파한 것 같이 될 것이라 그 때에 어미와 자식이 함께 부숴졌도다
೧೪ಹೀಗಿರಲು ನಿಮ್ಮ ಕುಲಗಳವರಿಗೆ ವಿರುದ್ಧವಾಗಿ ಯುದ್ಧಘೋಷವು ಮೊಳಗುವುದು. ಕಾಳಗದ ದಿನದಲ್ಲಿ ಶಲ್ಮಾನನು ತಾಯಿ ಮತ್ತು ಮಕ್ಕಳನ್ನು ಒಟ್ಟಿಗೆ ಬಂಡೆಗೆ ಅಪ್ಪಳಿಸಲ್ಪಡುವುದು. ಬೇತ್ ಅರ್ಬೇಲ್ ಪಟ್ಟಣವನ್ನು ಸೂರೆಮಾಡಿದಂತೆ ನಿಮ್ಮ ಎಲ್ಲಾ ಕೋಟೆಗಳು ಸೂರೆಮಾಡಲ್ಪಡುವವು.
15 너희의 큰 악을 인하여 벧엘이 이같이 너희에게 행하리니 이스라엘 왕이 새벽에 멸절하리로다
೧೫ನಿಮ್ಮ ದುಷ್ಟತನವು ಬಹಳವಾಗಿರುವುದರಿಂದ ಬೇತೇಲು ಇಂಥ ದುರ್ಗತಿಯನ್ನು ನಿಮಗೆ ತರುವುದು; ಬೆಳಗಾಗುವುದರೊಳಗೆ ಇಸ್ರಾಯೇಲಿನ ರಾಜನು ತೀರಾ ಹಾಳಾಗುವನು.