< 예레미야 33 >
1 예레미야가 아직 시위대 뜰에 갇혔을 때에 여호와의 말씀이 그에게 임하니라 가라사대
ಯೆಹೋವ ದೇವರ ವಾಕ್ಯವು ಯೆರೆಮೀಯನಿಗೆ ಅವನು ಇನ್ನು ಸೆರೆಮನೆಯ ಅಂಗಳದಲ್ಲಿ ಸೆರೆಯಾಗಿದ್ದಾಗ ಎರಡನೆಯ ಸಾರಿ ಉಂಟಾಯಿತು.
2 일을 행하는 여호와, 그것을 지어 성취하는 여호와, 그 이름을 여호와라 하는 자가 이같이 이르노라
“ಭೂಮಿಯನ್ನು ಸೃಷ್ಟಿಮಾಡುವ ಯೆಹೋವ ದೇವರೂ ಅದನ್ನು ಸ್ಥಾಪಿಸುವುದಕ್ಕಾಗಿ ಅದನ್ನು ರೂಪಿಸಿದ ಯೆಹೋವನೆಂಬ ಹೆಸರುಳ್ಳವನೂ ಹೇಳುವುದೇನೆಂದರೆ,
3 너는 내게 부르짖으라 내가 네게 응답하겠고 네가 알지 못하는 크고 비밀한 일을 네게 보이리라
‘ನನ್ನನ್ನು ಕರೆ, ಆಗ ನಿನಗೆ ಉತ್ತರಕೊಡುವೆನು. ನಿನಗೆ ತಿಳಿಯದ ಮತ್ತು ಪರಿಶೋಧನೆಗೆ ಮೀರಿದ ಮಹಾಕಾರ್ಯಗಳನ್ನೂ ನಿನಗೆ ಹೇಳಿಕೊಡುವೆನು.’
4 이스라엘의 하나님 여호와가 말하노라 무리가 이 성읍의 가옥과 유다 왕궁을 헐어서 갈대아인의 흉벽과 칼을 막아
ದಿಬ್ಬಗಳಿಂದಲೂ ಖಡ್ಗದಿಂದಲೂ ಕೆಡವಿರುವ ಈ ಪಟ್ಟಣದ ಮನೆಗಳ ವಿಷಯವಾಗಿವೂ ಯೆಹೂದದ ಅರಸರ ಅರಮನೆಗಳ ವಿಷಯವಾಗಿಯೂ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ.
5 싸우려 하였으나 내가 나의 노와 분함으로 그들을 죽이고 그 시체로 이 성에 채우게 하였나니 이는 그들의 모든 악을 인하여 나의 얼굴을 가리워 이 성을 돌아보지 아니하였음이니라
ಅವರು ಕಸ್ದೀಯರ ಸಂಗಡ ಯುದ್ಧ ಮಾಡುವುದಕ್ಕೂ ನಾನು ನನ್ನ ಕೋಪದಲ್ಲಿಯೂ, ‘ನನ್ನ ಉರಿಯಲ್ಲಿಯೂ ಕೊಂದುಹಾಕಿದ ಮನುಷ್ಯರ ಹೆಣಗಳಿಂದ ಅವುಗಳನ್ನು ತುಂಬಿಸುವುದಕ್ಕೂ ಬರುತ್ತಾರೆ. ಏಕೆಂದರೆ ನಾನು ಈ ಪಟ್ಟಣಕ್ಕೆ ವಿರೋಧವಾಗಿ ಅವರ ಸಮಸ್ತ ದುಷ್ಟತನದ ನಿಮಿತ್ತ ನನ್ನ ಮುಖವನ್ನು ಮರೆಮಾಡಿದ್ದೇನೆ.
6 그러나 보라 내가 이 성을 치료하며 고쳐 낫게 하고 평강과 성실함에 풍성함을 그들에게 나타낼 것이며
“‘ಇಗೋ, ನಾನು ಅದಕ್ಕೆ ಕ್ಷೇಮವನ್ನೂ, ಸ್ವಸ್ಥತೆಯನ್ನೂ ಹುಟ್ಟಿಸಿ ಅವರನ್ನು ಗುಣಪಡಿಸಿ ಸಮಾಧಾನದ ಸತ್ಯವನ್ನು ಸಮೃದ್ಧಿಯಾಗಿ ಅವರಿಗೆ ಪ್ರಕಟಮಾಡುವೆನು.
7 내가 유다의 포로와 이스라엘의 포로를 돌아오게 하여 그들을 처음과 같이 세울 것이며
ಯೆಹೂದದ ಸೆರೆಯನ್ನೂ, ಇಸ್ರಾಯೇಲಿನ ಸೆರೆಯನ್ನೂ ತಿರುಗಿಸಿ, ಅವರನ್ನು ಮುಂಚಿನ ಹಾಗೆ ಕಟ್ಟುವೆನು.
8 내가 그들을 내게 범한 그 모든 죄악에서 정하게 하며 그들의 내게 범하여 행한 모든 죄악을 사할 것이라
ಅವರು ಯಾವುದರಿಂದ ನನಗೆ ವಿರೋಧವಾಗಿ ಪಾಪ ಮಾಡಿದರೋ, ಆ ಅಕ್ರಮದಿಂದೆಲ್ಲಾ ಅವರನ್ನು ಶುದ್ಧಮಾಡುವೆನು. ಅವರು ಯಾವವುಗಳಿಂದ ನನಗೆ ವಿರೋಧವಾಗಿ ಪಾಪಮಾಡಿ ನನ್ನ ವಿಷಯದಲ್ಲಿ ದ್ರೋಹಿಗಳಾಗಿದ್ದಾರೋ, ಆ ಅಕ್ರಮಗಳನ್ನೆಲ್ಲಾ ಮನ್ನಿಸುವೆನು.
9 이 성읍이 세계 열방 앞에서 내게 기쁜 이름이 될 것이며 찬송과 영광이 될 것이요 그들은 나의 이 백성에게 베푼 모든 복을 들을 것이요 나의 이 성읍에 베푼 모든 복과 모든 평강을 인하여 두려워하며 떨리라
ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಸೌಭಾಗ್ಯಗಳ ಸುದ್ದಿಯನ್ನು ಸಕಲ ಭೂರಾಜ್ಯಗಳು ಕೇಳುವರು. ಈ ನಗರಕ್ಕೆ ನಾನು ನೀಡುವ ಸುಖ ಸಮಾಧಾನಗಳನ್ನು ಅವರು ನೋಡುವರು ಹಾಗೂ ಹೆದರಿ ನಡುಗುವರು. ಇದರಿಂದಾಗಿ ಆ ಎಲ್ಲಾ ರಾಜ್ಯಗಳ ಮುಂದೆ ನನಗೆ ಅದು ಕೀರ್ತಿಯನ್ನು, ಮಹಿಮೆಯನ್ನು ಹಾಗೂ ಆನಂದವನ್ನು ತರುವುದು.’
10 나 여호와가 이같이 말하노라 너희가 가리켜 말하기를 황폐하여 사람도 없고 짐승도 없다 하던 여기 곧 황폐하여 사람도 없고 주민도 없고 짐승도 없던 유다 성읍들과 예루살렘 거리에서 즐거워하는 소리, 기뻐하는 소리, 신랑의 소리, 신부의 소리와 및 만군의 여호와께 감사하라, 여호와는 선하시니 그 인자하심이 영원하다
“ಯೆಹೋವ ದೇವರು ಹೇಳುವುದೇನೆಂದರೆ: ‘“ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾಯಿತು,” ಎಂದು ನೀವು ಹೇಳುವ ಈ ಸ್ಥಳದಲ್ಲಿಯೂ ಮನುಷ್ಯರೂ ನಿವಾಸಿಗಳೂ ಪಶುಗಳೂ ಇಲ್ಲದೆ ನಾಶವಾದ ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ
11 하는 소리와 여호와의 집에 감사제를 드리는 자들의 소리가 다시 들리리니 이는 내가 이 땅의 포로로 돌아와서 처음과 같이 되게 할 것이니라 여호와의 말이니라
ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ ಮತ್ತು ಹಾಡುತ್ತಾ ಕೃತಜ್ಞತಾ ಬಲಿಯನ್ನು ಯೆಹೋವ ದೇವರ ಆಲಯಕ್ಕೆ ತರುವವರ ಸ್ವರ ಹೀಗೆ ಹೇಳುವವು, “‘“ಸೇನಾಧೀಶ್ವರ ಯೆಹೋವ ದೇವರಿಗೆ ಕೃತಜ್ಞತಾ ಸ್ತೋತ್ರಮಾಡಿರಿ, ಏಕೆಂದರೆ ಯೆಹೋವ ದೇವರು ಒಳ್ಳೆಯವರು. ಆತನ ಪ್ರೀತಿ ಶಾಶ್ವತವಾಗಿರುತ್ತದೆ.” ಏಕೆಂದರೆ ನಾನು ಈ ದೇಶದ ಸಮೃದ್ಧಿಯನ್ನು ಮೊದಲಿನಂತೆ ಪುನಃಸ್ಥಾಪಿಸುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ.
12 나 만군의 여호와가 이같이 말하노라 황폐하여 사람도 없고 짐승도 없던 이 곳과 그 모든 성읍에 다시 목자의 거할 곳이 있으리니 그 양무리를 눕게 할 것이라
“ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: ‘ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾದ ಈ ಸ್ಥಳದಲ್ಲಿಯೂ, ಅದರ ಎಲ್ಲಾ ಪಟ್ಟಣಗಳಲ್ಲಿಯೂ, ಅದರ ಎಲ್ಲಾ ಪಟ್ಟಣಗಳಲ್ಲಿ ಕುರುಬರು ತಮ್ಮ ಹಿಂಡುಗಳಿಗೆ ವಿಶ್ರಾಂತಿ ನೀಡಲು ಮತ್ತೆ ಹುಲ್ಲುಗಾವಲುಗಳು ಇರುತ್ತವೆ.
13 산지 성읍들과 평지 성읍들과 남방의 성읍들과 베냐민 땅과 예루살렘 사면과 유다 성읍들에서 양 무리가 다시 계수하는 자의 손 아래로 지나리라 여호와의 말이니라
ಬೆಟ್ಟದ ಪಟ್ಟಣಗಳಲ್ಲಿಯೂ ತಗ್ಗಿನ ಪಟ್ಟಣಗಳಲ್ಲಿಯೂ, ದಕ್ಷಿಣ ಪಟ್ಟಣಗಳಲ್ಲಿಯೂ, ಬೆನ್ಯಾಮೀನನ ದೇಶದಲ್ಲಿಯೂ, ಯೆರೂಸಲೇಮಿನ ಪ್ರದೇಶಗಳಲ್ಲಿಯೂ, ಯೆಹೂದದ ಪಟ್ಟಣಗಳಲ್ಲಿಯೂ ಇನ್ನು ಮೇಲೆ ಕುರಿಮಂದೆಗಳು ಎಣಿಸುವವನ ಕೈಕೆಳಗೆ ಹಾದುಹೋಗುವುದು,’ ಎಂದು ಯೆಹೋವ ದೇವರು ಹೇಳುತ್ತಾರೆ.
14 나 여호와가 말하노라 보라 내가 이스라엘 집과 유다 집에 대하여 이른 선한 말을 성취할 날이 이르리라
“‘ಇಗೋ, ದಿನಗಳು ಬರಲಿವೆ,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ಆಗ ನಾನು ಇಸ್ರಾಯೇಲಿನ ಮತ್ತು ಯೆಹೂದದ ಮನೆಯವರ ಸಂಗಡ ಹೇಳಿದ ಒಳ್ಳೆಯ ವಾಗ್ದಾನವನ್ನು ನೆರವೇರಿಸುವೆನು.
15 그 날 그 때에 내가 다윗에게 한 의로운 가지가 나게 하리니 그가 이 땅에 공평과 정의를 실행할 것이라
“‘ಆ ದಿನಗಳಲ್ಲಿಯೂ ಆ ಕಾಲದಲ್ಲಿಯೂ ನಾನು ದಾವೀದನಿಗೆ ನೀತಿಯುಳ್ಳ ಕೊಂಬೆಯನ್ನು ಚಿಗುರ ಮಾಡುವೆನು. ಆತನು ದೇಶದಲ್ಲಿ ನ್ಯಾಯವನ್ನೂ, ನೀತಿಯನ್ನೂ ನಡೆಸುವನು.
16 그 날에 유다가 구원을 얻겠고 예루살렘이 안전히 거할 것이며 그 성은 여호와 우리의 의라 일컬음을 입으리라
ಆಗ ಯೆಹೂದ್ಯರು ಸುರಕ್ಷಿತರಾಗಿರುವರು. ಯೆರೂಸಲೇಮಿನವರು ನೆಮ್ಮದಿಯಿಂದ ವಾಸಿಸುವರು. ಯೆಹೋವ ಚಿದ್ಕೇನು ಅಂದರೆ ಯೆಹೋವ ದೇವರೇ ನಮ್ಮ ಸದ್ಧರ್ಮ ಎಂಬ ಹೆಸರು ಈ ನಗರಕ್ಕೆ ಸಲ್ಲುವುದು.’
17 나 여호와가 이같이 말하노라 이스라엘 집 위에 앉을 사람이 다윗에게 영영히 끊어지지 아니할 것이며
ಯೆಹೋವ ದೇವರಾದ ನಾನು ಹೇಳುವುದೇನೆಂದರೆ: ‘ದಾವೀದನು ಎಂದಿಗೂ ಇಸ್ರಾಯೇಲ್ ಸಿಂಹಾಸನದಲ್ಲಿ ಕುಳಿತುಕೊಳ್ಳಲು ಒಬ್ಬ ವ್ಯಕ್ತಿಯನ್ನು ಹೊಂದಲು ವಿಫಲನಾಗುವುದಿಲ್ಲ
18 내 앞에서 번제를 드리며 소제를 사르며 다른 제를 항상 드릴 레위 사람 제사장들도 끊어지지 아니하리라 하시니라
ಅದಕ್ಕೆ ಆ ಸಂತಾನದವರಲ್ಲಿ ಒಬ್ಬ ಗಂಡಸು ಇಲ್ಲದೆ ಇರನು. ಅಂತೆಯೇ ನನ್ನ ಸನ್ನಿಧಿಯಲ್ಲಿ ನಿರಂತರವಾಗಿ ದಹನಬಲಿಯನ್ನು, ನೈವೇದ್ಯವನ್ನು ಹಾಗು ಕಾಣಿಕೆಯನ್ನು ಒಪ್ಪಿಸತಕ್ಕ ಒಬ್ಬನು ಲೇವಿಯರಾದ ಯಾಜಕರು ಇದ್ದೇ ಇರುವನು.’”
19 여호와의 말씀이 예레미야에게 임하니라 가라사대
ಯೆಹೋವ ದೇವರು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದರು:
20 나 여호와가 이같이 말하노라 너희가 능히 낮에 대한 나의 약정과 밤에 대한 나의 약정을 파하여 주야로 그 때를 잃게할 수 있을진대
“ಯೆಹೋವ ದೇವರಾದ ನನ್ನ ನುಡಿ ಇದು: ‘ಹಗಲಿರುಳೆಂಬ ನನ್ನ ನಿಬಂಧನೆಗಳನ್ನು ನಿಲ್ಲಿಸಿ, ಹಗಲನ್ನು ಮತ್ತು ಇರುಳನ್ನು ಅದರದರ ಸಮಯದಲ್ಲಿ ಉಂಟಾಗದಂತೆ ಮಾಡಲು ನಿಮ್ಮಿಂದಾದೀತೇ?
21 내 종 다윗에게 세운 나의 언약도 파하여 그로 그 위에 앉아 다스릴 아들이 없게 할 수 있겠으며 내가 나를 섬기는 레위인 제사장에게 세운 언약도 파할 수 있으리라
ಆಗುವುದಾದರೆ ಮಾತ್ರ ನನ್ನ ದಾಸ ದಾವೀದನೊಂದಿಗೆ ನನ್ನ ಪರಿಚಾರಕರಾದ ಲೇವಿ ಕುಲದ ಯಾಜಕರೊಂದಿಗೆ ನಾನು ಮಾಡಿದ ಒಡಂಬಡಿಕೆ ನಿಂತುಹೋಗುವುದು ಮತ್ತು ದಾವೀದನ ಸಿಂಹಾಸನವನ್ನು ಏರಿ ಆಳತಕ್ಕ ಅವನ ಸಂತಾನದವನು ಒಬ್ಬನೂ ಇಲ್ಲವಾಗುವನು.
22 하늘의 만상은 셀 수 없으며 바다의 모래는 측량할 수 없나니 내가 그와 같이 내 종 다윗의 자손과 나를 섬기는 레위인을 번성케 하리라 하시니라
ಆದರೆ ನನ್ನ ದಾಸ ದಾವೀದನ ಸಂತಾನವನ್ನೂ ನನ್ನ ಪರಿಚಾರಕರಾದ ಲೇವಿಯರನ್ನೂ ಅಸಂಖ್ಯಾತ ನಕ್ಷತ್ರಗಣದಷ್ಟು ಮತ್ತು ಎಣಿಸಲಾಗದ ಸಮುದ್ರತೀರದ ಮರಳಿನಷ್ಟು ಅಧಿಕಗೊಳಿಸುವೆನು.’”
23 여호와의 말씀이 예레미야에게 임하니라 가라사대
ಇದಲ್ಲದೆ ಯೆಹೋವ ದೇವರು ಯೆರೆಮೀಯನಿಗೆ ಈ ವಾಕ್ಯವನ್ನು ಅನುಗ್ರಹಿಸಿದರು:
24 이 백성이 말하기를 여호와께서 그 택하신 두 족속을 버리셨다 한 것을 네가 생각지 아니하느냐 그들이 내 백성을 멸시하여 자기들 앞에서 나라로 인정치 아니하도다
“‘ಯೆಹೋವ ದೇವರಾದ ನಾನು ಆರಿಸಿಕೊಂಡಿದ್ದ ಎರಡು ವಂಶಗಳನ್ನು ನಿರಾಕರಿಸಿಬಿಟ್ಟಿದ್ದೇನೆ, ಎಂದು ಜನರು ಆಡಿಕೊಳ್ಳುತ್ತಿದ್ದಾರೆ.’ ಈ ಮಾತನ್ನು ನೀನು ಗಮನಿಸಿರಬೇಕು. ನನ್ನ ಜನರು ಒಂದು ಜನಾಂಗವೇ ಅಲ್ಲ ಎನ್ನುವಷ್ಟರ ಮಟ್ಟಿಗೆ ಅವರು ಅಸಡ್ಡೆ ಮಾಡುತ್ತಿದ್ದಾರಲ್ಲವೇ?
25 나 여호와가 이같이 말하노라 나의 주야의 약정이 서지 아니할 수 있다든지 천지의 규례가 정한 대로 되지 아니할 수 있다 할진대
ಯೆಹೋವನಾದ ನಾನು ಹೇಳುವುದನ್ನು ಕೇಳು: ‘ಹಗಲಿರುಳೆಂಬ ಸ್ಥಿರವಾದ ನಿಬಂಧನೆಯನ್ನು ನಾನು ಮಾಡದೆ ಹೋಗಿದ್ದರೆ, ಭೂಮ್ಯಾಕಾಶಗಳಿಗೆ ನಿಯಮವನ್ನು ನಾನು ವಿಧಿಸದೆ ಹೋಗಿದ್ದರೆ,
26 내가 야곱과 내 종 다윗의 자손을 버려서 다시는 다윗의 자손 중에서 아브라함과 이삭과 야곱의 자손을 다스릴 자를 택하지 아니하리라 내가 그 포로된 자로 돌아오게 하고 그를 긍휼히 여기리라
ಆಗ ಮಾತ್ರ ನಾನು ಯಾಕೋಬನ ಸಂತಾನದವರನ್ನು ತ್ಯಜಿಸುತ್ತಿದ್ದೆ. ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತತಿಯನ್ನು ಆಳತಕ್ಕ ಒಡೆಯನನ್ನು ದಾಸ ದಾವೀದನ ವಂಶದಿಂದ ಆರಿಸದೆ, ಆ ವಂಶವನ್ನು ನಿರಾಕರಿಸುತ್ತಿದ್ದೆ. ಆದರೆ ಈಗ ಗುಲಾಮಗಿರಿಯಿಂದ ಅವರನ್ನು ಬಿಡುಗಡೆಮಾಡುವೆನು. ಅವರಿಗೆ ಕರುಣೆಯನ್ನು ತೋರಿಸಿಯೇ ತೋರಿಸುವೆನು.’”