< 레위기 21 >

1 여호와께서 모세에게 이르시되 아론의 자손 제사장들에게 고하여 이르라 백성 중의 죽은 자로 인하여 스스로 더럽히지 말려니와
ಯೆಹೋವನು ಮೋಶೆಯೊಂದಿಗೆ ಮಾತನಾಡಿ, “ನೀನು ಆರೋನನ ಮಕ್ಕಳಾದ ಯಾಜಕರಿಗೆ ಹೀಗೆ ಆಜ್ಞಾಪಿಸಬೇಕು, ‘ಕುಲದಲ್ಲಿ ಸತ್ತವರಿಗೋಸ್ಕರ ಯಾವ ಯಾಜಕನೂ ತನ್ನನ್ನು ಅಪವಿತ್ರ ಮಾಡಿಕೊಳ್ಳಬಾರದು.
2 골육지친인 부모나 자녀나 형제나
ಆದರೂ ಸಮೀಪ ರಕ್ತಸಂಬಂಧಿಗಳಾದ ತಾಯಿ, ತಂದೆ, ಮಕ್ಕಳು ಮತ್ತು ಅಣ್ಣತಮ್ಮಂದಿರು ಇವರಿಗೋಸ್ಕರ ಈ ನಿಯಮ ಇರುವುದಿಲ್ಲ.
3 출가하지 아니한 처녀인 친 자매로 인하여는 몸을 더럽힐 수 있느니라
ಇದಲ್ಲದೆ ಕನ್ನಿಕೆಯಾಗಿರುವ ತಂಗಿ ಇನ್ನು ಮದುವೆಯಾಗದೆ ಅವನ ಆಶ್ರಯದಲ್ಲಿರುವುದರಿಂದ ಅವಳಿಗೋಸ್ಕರ ಅವನು ಅಪವಿತ್ರ ಮಾಡಿಕೊಳ್ಳಬಹುದು.
4 제사장은 백성의 어른인즉 스스로 더럽혀 욕되게 하지 말지니라
ಅವನು ಕುಲದಲ್ಲಿ ನಾಯಕನಾಗಿರುವುದರಿಂದ ತನ್ನನ್ನು ಅಪವಿತ್ರ ಮಾಡಿಕೊಳ್ಳಬಾರದು, ಮಾಡಿದರೆ ಯಾಜಕಸೇವೆಗೆ ಅಯೋಗ್ಯನಾದಾನು.
5 제사장은 머리털을 깎아 대머리 같게 하지 말며 그 수염 양편을 깎지 말며 살을 베지 말고
ಅವರು ತಲೆಬೋಳಿಸಿಕೊಳ್ಳಬಾರದು, ಗಡ್ಡವನ್ನು ಕತ್ತರಿಸಿ ವಿಕಾರಗೊಳಿಸಬಾರದು; ದೇಹವನ್ನು ಗಾಯಮಾಡಿಕೊಳ್ಳಬಾರದು.
6 그 하나님께 대하여 거룩하고 그 하나님의 이름을 욕되게 하지 말 것이며 그들은 여호와의 화제 곧 그 하나님의 식물을 드리는 자인즉 거룩할 것이라
ಅವರು ದೇವರಿಗೆ ಮೀಸಲಾಗಿರಬೇಕು; ತಾವು ಸೇವಿಸುವ ದೇವರ ಹೆಸರನ್ನು ಅಪಕೀರ್ತಿಗೆ ಗುರಿಪಡಿಸಬಾರದು. ತಮ್ಮ ದೇವರ ಆಹಾರವನ್ನು ಅಂದರೆ ಯೆಹೋವನ ಹೋಮದ್ರವ್ಯಗಳನ್ನು ಅವರು ಸಮರ್ಪಿಸುವವರು ಆಗಿರುವುದರಿಂದ ಪವಿತ್ರರಾಗಿರಬೇಕು.
7 그들은 기생이나 부정한 여인을 취하지 말 것이며 이혼 당한 여인을 취하지 말지니 이는 그가 여호와께 거룩함이니라
ಯಾಜಕರು ತಮ್ಮ ದೇವರಿಗೆ ಮೀಸಲಾದವರು ಆಗಿರುವುದರಿಂದ ವೇಶ್ಯ ಸ್ತ್ರೀಯನ್ನಾಗಲಿ, ಮಾನವನ್ನು ಭಂಗಪಡಿಸಿಕೊಂಡ ಸ್ತ್ರೀಯನ್ನಾಗಲಿ ಅಥವಾ ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ ಹೆಂಡತಿಯನ್ನಾಗಿ ತೆಗೆದುಕೊಳ್ಳಬಾರದು.
8 너는 그를 거룩하게 하라 그는 네 하나님의 식물을 드림이니라 너는 그를 거룩히 여기라 나 여호와 너희를 거룩하게 하는 자는 거룩함이니라
ಅವರು ನಿಮ್ಮ ದೇವರ ಆಹಾರವನ್ನು ಸಮರ್ಪಿಸುವವರಾದ ಕಾರಣ ಅವರನ್ನು ದೇವರ ಸೇವಕರೆಂದು ಭಾವಿಸಬೇಕು. ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡಿರುವ ಯೆಹೋವನೆಂಬ ನಾನು ಪರಿಶುದ್ಧನಾಗಿರುವುದರಿಂದ ಅವರನ್ನು ಪರಿಶುದ್ಧರೆಂದು ನೀವು ಭಾವಿಸಬೇಕು.
9 아무 제사장의 딸이든지 행음하여 스스로 더럽히면 그 아비를 욕되게 함이니 그를 불사를지니라
ಯಾಜಕನ ಮಗಳು ವೇಶ್ಯೆ ಎಂಬ ನಿಂದೆಗೆ ಒಳಗಾದರೆ ತನ್ನ ತಂದೆಯನ್ನು ನಿಂದೆಗೆ ಒಳಪಡಿಸಿದವಳಾದಳು, ಅವಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು.
10 자기 형제 중 관유로 부음을 받고 위임되어 예복을 입은 대제사장은 그 머리를 풀지 말며 그 옷을 찢지 말며
೧೦“‘ಮಹಾಯಾಜಕನು ಅಂದರೆ ತನ್ನ ಸಹೋದರರಲ್ಲಿ ಪ್ರಧಾನನು, ಯಾವನು ತೈಲಾಭಿಷೇಕಹೊಂದಿ, ದೀಕ್ಷಾವಸ್ತ್ರಗಳನ್ನು ಧರಿಸಿ, ಪಟ್ಟಕ್ಕೆ ಬರುವನೋ ಅವನು ದುಃಖಸೂಚನೆಗಾಗಿ ತನ್ನ ತಲೆಯ ಕೂದಲನ್ನು ಕೆದರಿಕೊಳ್ಳಬಾರದು, ಬಟ್ಟೆಗಳನ್ನು ಹರಿದುಕೊಳ್ಳಬಾರದು.
11 어떤 시체에든지 가까이 말지니 부모로 인하여도 더러워지게 말며
೧೧ಅವನು ಶವವಿರುವ ಯಾವ ಸ್ಥಳಕ್ಕೂ ಹೋಗಬಾರದು. ತಂದೆತಾಯಿಗಳ ಮರಣದ ನಿಮಿತ್ತ ತನ್ನನ್ನು ಅಪವಿತ್ರ ಮಾಡಿಕೊಳ್ಳಬಾರದು.
12 성소에서 나오지 말며 그 하나님의 성소를 더럽히지 말라 이는 하나님의 위임한 관유가 그 위에 있음이니라 나는 여호와니라
೧೨ಇದಕ್ಕಾಗಿ ಅವನು ದೇವಸ್ಥಾನವನ್ನು ಬಿಡಲೇ ಬಾರದು; ಬಿಟ್ಟುಹೋದರೆ ತಾನು ಸೇವೆಮಾಡುವ ದೇವರ ಮಂದಿರದ ಗೌರವಕ್ಕೆ ಕುಂದು ಬರುವುದು. ತನ್ನ ದೇವರ ಅಭಿಷೇಕತೈಲವನ್ನು ತಲೆಯ ಮೇಲೆ ಹೊಯ್ಯಿಸಿಕೊಂಡು ಪ್ರತಿಷ್ಠಿತನಾಗಿದ್ದಾನಲ್ಲಾ, ನಾನು ಯೆಹೋವನು.
13 그는 처녀를 취하여 아내를 삼을지니
೧೩ಅವನು ಕನ್ನಿಕೆಯನ್ನು ಮದುವೆ ಮಾಡಿಕೊಳ್ಳಬೇಕು.
14 과부나 이혼된 여인이나 더러운 여인이나 기생을 취하지 말고 자기 백성 중 처녀를 취하여 아내를 삼아
೧೪ಅವನು ವಿಧವೆಯನ್ನಾಗಲಿ, ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ, ಮಾನವನ್ನು ಭಂಗಪಡಿಸಿಕೊಂಡ ಸ್ತ್ರೀಯನ್ನಾಗಲಿ ಅಥವಾ ವೇಶ್ಯ ಸ್ತ್ರೀಯನ್ನಾಗಲಿ ಹೆಂಡತಿಯನ್ನಾಗಿ ಮಾಡಿಕೊಳ್ಳಬಾರದು. ಸ್ವದೇಶದವರಲ್ಲಿಯ ಕನ್ನಿಕೆಯನ್ನೇ ಮದುವೆ ಮಾಡಿಕೊಳ್ಳಬೇಕು.
15 그 자손으로 백성 중에서 더럽히지 말지니 나는 그를 거룩하게 하는 여호와임이니라
೧೫ಇಲ್ಲವಾದರೆ ಅವನ ಸಂತತಿಯ ಸ್ವಜನರೊಳಗೆ ಅವನು ಅಪವಾದಕ್ಕೆ ಗುರಿಯಾಗುವನು. ಅವನನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು’” ಎಂದು ಹೇಳಿದನು.
16 여호와께서 모세에게 일러 가라사대
೧೬ಯೆಹೋವನು ಮೋಶೆಯೊಂದಿಗೆ ಮಾತನಾಡಿ,
17 아론에게 고하여 이르라 무릇 너의 대대 자손 중 육체에 흠이 있는 자는 그 하나님의 식물을 드리려고 가까이 오지 못할 것이라
೧೭“ನೀನು ಆರೋನನಿಗೆ ಹೀಗೆ ಆಜ್ಞಾಪಿಸು, ‘ನಿನ್ನ ಸಂತತಿಯವರ ಎಲ್ಲಾ ತಲಾಂತರಗಳಲ್ಲಿಯೂ ಯಾವ ಅಂಗವಿಕಲನೂ ದೇವರ ಆಹಾರವನ್ನು ಸಮರ್ಪಿಸುವುದಕ್ಕೆ ನನ್ನ ಸನ್ನಿಧಿಗೆ ಬರಬಾರದು; ಅಂಗವಿಕಲನು ಈ ಕಾರ್ಯವನ್ನು ವಹಿಸಿಕೊಳ್ಳಲೇ ಬಾರದು.
18 무릇 흠이 있는 자는 가까이 못할지니 곧 소경이나 절뚝발이나 코가 불완전한 자나 지체가 더한 자나
೧೮ಅವನು ಕುರುಡನಾಗಲಿ, ಕುಂಟನಾಗಲಿ, ವಿಕಾರ ಮುಖವುಳ್ಳವನಾಗಲಿ,
19 발 부러진 자나 손 부러진 자나
೧೯ವಿಪರೀತ ಅವಯವಗಳುಳ್ಳವನಾಗಲಿ, ಕೈಕಾಲು ಮುರಿದವನಾಗಲಿ,
20 곱사등이나 난장이나 눈에 백막이 있는 자나 괴혈병이나 버짐이 있는 자나 불알 상한 자나
೨೦ಗೂನು ಇಲ್ಲವೇ ಕುಬ್ಜರಾಗಲಿ, ಹೂಗಣ್ಣ ಅಥವಾ ಕಾಯಿಗಣ್ಣನಾಗಲಿ, ಕಜ್ಜಿ, ತುರಿಗಳುಳ್ಳವನಾಗಲಿ,
21 제사장 아론의 자손 중에 흠이 있는 자는 나아와 여호와의 화제를 드리지 못할지니 그는 흠이 있은즉 나아와 하나님의 식물을 드리지 못하느니라
೨೧ನಪುಂಸಕನಾಗಲಿ, ಬೇರೆ ಯಾವ ಕಳಂಕವಿದ್ದವನಾಗಲಿ ಯೆಹೋವನಿಗೆ ಹೋಮದ್ರವ್ಯಗಳನ್ನು ಸಮರ್ಪಿಸುವುದಕ್ಕೆ ಸನ್ನಿಧಿಗೆ ಬರಬಾರದು. ಅಂಥವನು ದೇಹದಲ್ಲಿ ದೋಷವಿರುವುದರಿಂದ ದೇವರ ಆಹಾರವನ್ನು ಸಮರ್ಪಿಸಲೇಬಾರದು.
22 그는 하나님의 식물의 지성물이든지 성물이든지 먹을 것이나
೨೨ದೇವರಿಗೆ ನೈವೇದ್ಯವಾದ ಆಹಾರದಲ್ಲಿ ಪರಿಶುದ್ಧವಾದದ್ದನ್ನು ಮತ್ತು ಮಹಾಪರಿಶುದ್ಧವಾದುದನ್ನು ಅವನು ಊಟಮಾಡಬಹುದು.
23 장 안에 들어가지 못할 것이요 단에 가까이 못할지니 이는 그가 흠이 있음이라 이와 같이 그가 나의 성소를 더럽히지 못할 것은 나는 그들을 거룩하게 하는 여호와임이니라
೨೩ಅವನಿಗೆ ಕಳಂಕವಿರುವುದರಿಂದ ತೆರೆಯನ್ನು ದಾಟಿ ಒಳಗೆ ಬರಬಾರದು; ಯಜ್ಞವೇದಿಯ ಬಳಿಗೆ ಬರಬಾರದು; ನನ್ನ ಪವಿತ್ರಸ್ಥಾನಗಳ ಗೌರವಕ್ಕೆ ಅವನಿಂದ ಕುಂದು ಉಂಟಾಗಬಾರದು; ಆ ಸ್ಥಾನಗಳನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು’” ಎಂದು ಹೇಳಿದನು.
24 모세가 이대로 아론과 그 아들들과 온 이스라엘 자손에게 고하였더라
೨೪ಮೋಶೆಯು ಆರೋನನಿಗೂ, ಅವನ ಮಕ್ಕಳಿಗೂ ಮತ್ತು ಇಸ್ರಾಯೇಲರೆಲ್ಲರಿಗೂ ಈ ಆಜ್ಞೆಗಳನ್ನು ತಿಳಿಸಿದನು.

< 레위기 21 >