< 빌레몬서 1 >
1 그리스도 예수를 위하여 갇힌 자 된 바울과 및 형제 디모데는 우리의 사랑을 받는 자요 동역자인 빌레몬과
೧ಕ್ರಿಸ್ತ ಯೇಸುವಿನ ಸೆರೆಯಾಳಾಗಿರುವ ಪೌಲನೂ, ಸಹೋದರನಾದ ತಿಮೊಥೆಯನೂ, ನಮಗೆ ಪ್ರಿಯನೂ ಜೊತೆ ಸೇವಕನೂ ಆಗಿರುವ ಫಿಲೆಮೋನನೆಂಬ ನಿನಗೂ,
2 및 자매 압비아와 및 우리와 함께 군사된 아킵보와 네 집에 있는 교회에게 편지하노니
೨ಮತ್ತು ಸಹೋದರಿಯಾದ ಅಪ್ಫಿಯಳಿಗೂ, ನಮ್ಮ ಸಹ ಹೋರಾಟಗಾರನಾದ ಅರ್ಖಿಪ್ಪನಿಗೂ ನಿನ್ನ ಮನೆಯಲ್ಲಿ ಸೇರಿಬರುವ ಸಭೆಯವರಿಗೂ ಬರೆಯುವುದೇನಂದರೆ:
3 하나님 우리 아버지와 주 예수 그리스도로 좇아 은혜와 평강이 너희에게 있을지어다
೩ನಮ್ಮ ತಂದೆಯಾದ ದೇವರಿಂದಲೂ, ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ, ಶಾಂತಿಯೂ ಆಗಲಿ.
4 내가 항상 내 하나님께 감사하고 기도할 때에 너를 말함은
೪ಕರ್ತನಾದ ಯೇಸುವಿನ ಮೇಲೆ ನೀನು ಇಟ್ಟಿರುವ ನಂಬಿಕೆ, ಪ್ರೀತಿ ಹಾಗೂ ದೇವಜನರ ಮೇಲಿರುವ ನಿನ್ನ ಪ್ರೀತಿಯನ್ನು ಕುರಿತು ಕೇಳಿದ್ದರಿಂದ,
5 주 예수와 및 모든 성도에 대한 네 사랑과 믿음이 있음을 들음이니
೫ನನ್ನ ಪ್ರಾರ್ಥನೆಗಳಲ್ಲಿ ಯಾವಾಗಲೂ ನಿನ್ನನ್ನು ನೆನಪು ಮಾಡಿಕೊಂಡು ನಾನು ದೇವರಿಗೆ ಸ್ತೋತ್ರವನ್ನು ಸಲ್ಲಿಸುತ್ತೇನೆ, ನಿನಗಾಗಿ ವಿಜ್ಞಾಪನೆ ಮಾಡುತ್ತೇನೆ.
6 이로써 네 믿음의 교제가 우리 가운데 있는 선을 알게 하고 그리스도께 미치도록 역사하느니라
೬ಕ್ರಿಸ್ತನಲ್ಲಿ ನಮಗೆ ದೊರಕಿರುವ ಎಲ್ಲಾ ಸುವರಗಳನ್ನು ಕುರಿತು ನೀನು ತಿಳಿವಳಿಕೆಯನ್ನು ಹೊಂದುತ್ತಿರುವೆ. ಕ್ರಿಸ್ತ ನಂಬಿಕೆಯಲ್ಲಿರುವ ನಿನ್ನ ಅನ್ಯೋನ್ಯತೆಯೂ ಕ್ರಿಸ್ತನಿಗೆ ಅತಿಯಾದ ಮಹಿಮೆಯನ್ನು ಉಂಟುಮಾಡಬೇಕೆಂದು ಪ್ರಾರ್ಥಿಸುತ್ತೇನೆ.
7 형제여 성도들의 마음이 너로 말미암아 평안함을 얻었으니 내가 너의 사랑으로 많은 기쁨과 위로를 얻었노라
೭ಸಹೋದರನೇ, ನಿನ್ನ ಮೂಲಕ ದೇವಜನರ ಹೃದಯಗಳಿಗೆ ಪ್ರೋತ್ಸಾಹವೂ, ಪ್ರೇರಣೆಯೂ ಉಂಟಾದುದರಿಂದ ಅವರ ಬಗ್ಗೆ ಇರುವ ಪ್ರೀತಿಯಿಂದ ನನಗೆ ಬಹಳ ಆನಂದವೂ, ಸಮಾಧಾನವೂ ಉಂಟಾಯಿತು.
8 이러므로 내가 그리스도 안에서 많은 담력을 가지고 네게 마땅한 일로 명할 수 있으나
೮ವೃದ್ಧನೂ, ಈಗ ಕ್ರಿಸ್ತಯೇಸುವಿನ ನಿಮಿತ್ತ ಸೆರೆಯಾಳಾಗಿರುವ ಈ ಪೌಲನೆಂಬ ನಾನು ಪ್ರೀತಿಯ ನಿಮಿತ್ತ ನಿನ್ನನ್ನು ಬೇಡಿಕೊಳ್ಳುತ್ತಿದ್ದೇನೆ.
9 사랑을 인하여 도리어 간구하노니 나이 많은 나 바울은 지금 또 예수 그리스도를 위하여 갇힌 자 되어
೯ನೀನು ಯುಕ್ತವಾದದ್ದನ್ನು ಮಾಡಬೇಕೆಂದು ಆಜ್ಞಾಪಿಸುವುದಕ್ಕೆ ನನಗೆ ಕ್ರಿಸ್ತನಲ್ಲಿ ಪೂರ್ಣ ಅಧಿಕಾರವಿದ್ದರೂ ಹಾಗೆ ಆಜ್ಞಾಪಿಸದೇ
10 갇힌 중에서 낳은 아들 오네시모를 위하여 네게 간구하노라
೧೦ನಾನು ಸೆರೆಯಲ್ಲಿ ಬಂಧಿಯಾಗಿರುವಾಗ ನನ್ನ ಮಗನಂತೆ ಬಂದ ಓನೇಸಿಮನ ವಿಷಯದಲ್ಲಿ ನಿನ್ನನ್ನು ಬೇಡಿಕೊಳ್ಳುತ್ತೇನೆ.
11 저가 전에는 네게 무익하였으나 이제는 나와 네게 유익하므로
೧೧ಅವನು ಮೊದಲು ನಿನಗೆ ಅಪ್ರಯೋಜಕನಾಗಿದ್ದನು. ಈಗ ನಿನಗೂ ನನಗೂ ಪ್ರಯೋಜಕನಾಗಿದ್ದಾನೆ.
12 네게 저를 돌려 보내노니 저는 내 심복이라
೧೨ನನಗೆ ಪ್ರಾಣ ಪ್ರಿಯನಂತಿರುವ ಅವನನ್ನು ನಿನ್ನ ಬಳಿಗೆ ಕಳುಹಿಸಿ ಕೊಡುತ್ತಿದ್ದೇನೆ.
13 저를 내게 머물러 두어 내 복음을 위하여 갇힌 중에서 네 대신 나를 섬기게 하고자 하나
೧೩ನಾನು ಸುವಾರ್ತೆಯ ನಿಮಿತ್ತ ಸೆರೆಮನೆಯಲ್ಲಿರುವಾಗ ನನಗೆ ಉಪಚಾರಮಾಡುವಂತೆ ನಿನಗೆ ಬದಲಾಗಿ ಅವನನ್ನು ನನ್ನ ಬಳಿಯಲ್ಲೇ ಉಳಿಸಿಕೊಳ್ಳಬೇಕೆಂದು ಆಲೋಚಿಸಿದ್ದೆನು.
14 다만 네 승낙이 없이는 내가 아무 것도 하기를 원치 아니하노니 이는 너의 선한 일이 억지 같이 되지 아니하고 자의로 되게 하려 함이로라
೧೪ಆದರೆ ನಿನ್ನ ಉಪಕಾರವು ಮನಃಪೂರ್ವಕವಾಗಿಯೇ ಇರಬೇಕೆಂದು ಯೋಚಿಸಿ ನಿನ್ನ ಸಮ್ಮತಿಯಿಲ್ಲದೆ ಏನು ಮಾಡುವುದಕ್ಕೂ ನನಗೆ ಇಷ್ಟವಿಲ್ಲ.
15 저가 잠시 떠나게 된 것은 이를 인하여 저를 영원히 두게 함이니 (aiōnios )
೧೫ಅವನು ಸ್ವಲ್ಪಕಾಲ ನಿನ್ನಿಂದ ದೂರವಾಗಿಹೋದದ್ದು ಬಹುಶಃ ನೀನು ಅವನನ್ನು ನಿರಂತರವಾಗಿ ಸೇರಿಸಿಕೊಳ್ಳುವುದಕ್ಕಾಗಿಯೇ ಇರಬಹುದು; (aiōnios )
16 이 후로는 종과 같이 아니하고 종에서 뛰어나 곧 사랑받는 형제로 둘 자라 내게 특별히 그러하거든 하물며 육신과 주 안에서 상관 된 네게랴
೧೬ಇನ್ನು ಮೇಲೆ ಅವನು ದಾಸನಂತಾಗಿರದೆ ದಾಸನಿಗಿಂತ ಮಿಗಿಲಾಗಿ ಉತ್ತಮವಾದ ಪ್ರಿಯ ಸಹೋದರನಂತಾಗಬೇಕು. ಅವನು ನನಗೆ ಬಹಳ ಪ್ರಿಯನಾಗಿರುವಲ್ಲಿ ನಿನಗೆ ಲೋಕದ ಪ್ರಕಾರವಾಗಿಯೂ, ಕರ್ತನ ಸಂಬಂಧದಲ್ಲಿಯೂ ಇನ್ನೂ ಹೆಚ್ಚು ಪ್ರಿಯನಾಗಿರುವನಲ್ಲವೇ?
17 그러므로 네가 나를 동무로 알진대 저를 영접하기를 내게 하듯 하고
೧೭ನೀನು ನನ್ನನ್ನು ಜೊತೆಗಾರನೆಂದು ಭಾವಿಸುವುದಾದರೆ ನನ್ನನ್ನು ಸೇರಿಸಿಕೊಳ್ಳುವ ಪ್ರಕಾರವೇ ಅವನನ್ನು ಸೇರಿಸಿಕೋ.
18 저가 만일 네게 불의를 하였거나 네게 진 것이 있거든 이것을 내게로 회계하라
೧೮ಆದರೆ ಅವನಿಂದ ನಿನಗೆ ಏನಾದರೂ ನಷ್ಟವಾಗಿದ್ದರೆ ಅಥವಾ ಅವನು ನಿನಗೆ ಸಾಲವೇನಾದರೂ ತೀರಿಸಬೇಕಾಗಿದ್ದರೆ ಅದನ್ನು ನನ್ನ ಲೆಕ್ಕಕ್ಕೆ ಹಾಕು.
19 나 바울이 친필로 쓰노니 내가 갚으려니와 너는 이 외에 네 자신으로 내게 빚진 것을 내가 말하지 아니하노라
೧೯ನಾನೇ ಕೊಟ್ಟು ತೀರಿಸುತ್ತೇನೆಂದು ಪೌಲನೆಂಬ ನಾನು ಸ್ವಂತ ಕೈಯಿಂದ ಬರೆದಿದ್ದೇನೆ. ನಿನ್ನ ಆತ್ಮದ ವಿಷಯದಲ್ಲಿ ನೀನೇ ನನಗೆ ಹೊಣೆಗಾರನಾಗಿದ್ದೀ ಎಂದು ನಾನು ಬೇರೆ ಹೇಳಬೇಕೇ?
20 오 형제여 나로 주 안에서 너를 인하여 기쁨을 얻게 하고 내 마음이 그리스도 안에서 평안하게 하라
೨೦ಹೌದು, ಸಹೋದರನೇ, ಕರ್ತನಲ್ಲಿ ನಿನ್ನಿಂದ ನನಗೆ ಪ್ರಯೋಜನವಾಗುವಂತೆ ಮಾಡು. ಕ್ರಿಸ್ತನಲ್ಲಿ ನನ್ನ ಹೃದಯವನ್ನು ಉಲ್ಲಾಸಗೊಳಿಸು.
21 나는 네가 순종함을 확신하므로 네게 썼노니 네가 나의 말보다 더 행할 줄을 아노라
೨೧ನಿನ್ನ ವಿಧೇಯತೆಯಲ್ಲಿ ಭರವಸೆವುಳ್ಳವನಾಗಿ ಈ ಪತ್ರಿಕೆಯನ್ನು ನಿನಗೆ ಬರೆದಿದ್ದೇನೆ. ನಾನು ಹೇಳುವುದಕ್ಕಿಂತಲೂ ಹೆಚ್ಚಾಗಿಯೇ ನೀನು ಮಾಡುತ್ತಿ ಎಂದು ನನಗೆ ಗೊತ್ತಿದೆ.
22 오직 너는 나를 위하여 처소를 예비하라 너희 기도로 내가 너희에게 나아가게 하여 주시기를 바라노라
೨೨ಇದಲ್ಲದೆ ದೇವರು ನಿಮ್ಮ ಪ್ರಾರ್ಥನೆಗಳನ್ನು ಕೇಳಿ ನಾನು ನಿಮ್ಮ ಬಳಿಗೆ ಬರುವುದಕ್ಕೆ ಕೃಪೆ ಮಾಡುವನೆಂಬ ನಿರೀಕ್ಷೆ ನನಗುಂಟು. ಆದಕಾರಣ ನಾನು ಉಳಿದುಕೊಳ್ಳಲು ಒಂದು ಕೊಠಡಿಯನ್ನು ಸಿದ್ಧಪಡಿಸು.
23 그리스도 예수 안에서 나와 함께 갇힌 자 에바브라와
೨೩ಕ್ರಿಸ್ತಯೇಸುವಿನ ನಿಮಿತ್ತವಾಗಿ ನನ್ನ ಜೊತೆ ಸೆರೆಯವನಾದ ಎಪಫ್ರನೂ ನಿನಗೆ ವಂದನೆ ತಿಳಿಸುತ್ತಾನೆ.
24 또한 나의 동역자 마가, 아리스다고, 데마, 누가가 문안하느니라
೨೪ನನ್ನ ಜೊತೆಗೆಲಸದವರಾದ ಮಾರ್ಕ, ಅರಿಸ್ತಾರ್ಕ, ದೇಮ, ಲೂಕ ಇವರೆಲ್ಲರೂ ನಿನಗೆ ವಂದನೆ ತಿಳಿಸಿದ್ದಾರೆ.
25 우리 주 예수 그리스도의 은혜가 너희 심령과 함께 할지어다
೨೫ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲಿ. ಆಮೆನ್.