< 시편 24 >

1 다윗의 시 땅과 거기 충만한 것과 세계와 그 중에 거하는 자가 다 여호와의 것이로다
ದಾವೀದನ ಕೀರ್ತನೆ. ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವನದು; ಲೋಕವೂ ಮತ್ತು ಅದರ ನಿವಾಸಿಗಳೂ ಆತನವೇ.
2 여호와께서 그 터를 바다 위에 세우심이여 강들 위에 건설하셨도다
ಆತನೇ ಅದರ ಅಸ್ತಿವಾರವನ್ನು ಸಾಗರದ ಮೇಲೆ ಹಾಕಿದವನು; ಅದನ್ನು ಜಲರಾಶಿಗಳ ಮೇಲೆ ಸ್ಥಿರಪಡಿಸಿದವನು ಆತನೇ.
3 여호와의 산에 오를 자 누구며 그 거룩한 곳에 설 자가 누군고
ಯೆಹೋವನ ಪರ್ವತವನ್ನು ಹತ್ತತಕ್ಕವನು ಯಾರು? ಆತನ ಪವಿತ್ರಸ್ಥಾನದಲ್ಲಿ ಪ್ರವೇಶಿಸುವುದಕ್ಕೆ ಎಂಥವನು ಯೋಗ್ಯನು?
4 곧 손이 깨끗하며 마음이 청결하며 뜻을 허탄한 데 두지 아니하며 거짓 맹세치 아니하는 자로다
ಯಾರು ಅಯೋಗ್ಯಕಾರ್ಯಗಳಲ್ಲಿ ಮನಸ್ಸಿಡದೆ, ಮೋಸ ಪ್ರಮಾಣಮಾಡದೆ, ಶುದ್ಧಹಸ್ತವೂ, ನಿರ್ಮಲಮನಸ್ಸೂ ಉಳ್ಳವನಾಗಿದ್ದಾನೋ,
5 저는 여호와께 복을 받고 구원의 하나님께 의를 얻으리니
ಅವನೇ ಯೆಹೋವನಿಂದ ಶುಭವನ್ನು ಹೊಂದುವನು; ತನ್ನ ರಕ್ಷಕನಾದ ದೇವರಿಂದ ನೀತಿಫಲವನ್ನು ಪಡೆಯುವನು.
6 이는 여호와를 찾는 족속이요 야곱의 하나님의 얼굴을 구하는 자로다(셀라)
ಇಂಥವರೇ ಆತನ ದರ್ಶನವನ್ನು ಬಯಸುವವರು. ಯಾಕೋಬ್ಯರ ದೇವರೇ, ನಿನ್ನ ಸಾನ್ನಿಧ್ಯವನ್ನು ಸೇರುವವರು ಇಂಥವರೇ. (ಸೆಲಾ)
7 문들아 너희 머리를 들지어다 영원한 문들아 들릴지어다 영광의 왕이 들어가시리로다
ದ್ವಾರಗಳೇ, ಉನ್ನತವಾಗಿರ್ರಿ! ಪುರಾತನವಾದ ಕದಗಳೇ ತೆರೆದುಕೊಂಡಿರ್ರಿ! ಮಹಾಮಹಿಮೆಯುಳ್ಳ ಅರಸನು ಆಗಮಿಸುತ್ತಾನೆ.
8 영광의 왕이 뉘시뇨 강하고 능한 여호와시요 전쟁에 능한 여호와시로다
ಮಹಾಮಹಿಮೆಯುಳ್ಳ ಈ ಅರಸನು ಯಾರು? ಮಹಾ ಬಲಿಷ್ಠನೂ, ವಿಶೇಷ ಪರಾಕ್ರಮಿಯೂ ಆಗಿರುವ ಯೆಹೋವ, ಯುದ್ಧವೀರನಾಗಿರುವ ಯೆಹೋವ.
9 문들아 너희 머리를 들지어다 영원한 문들아 들릴지어다 영광의 왕이 들어가시리로다
ದ್ವಾರಗಳೇ, ಉನ್ನತವಾಗಿರ್ರಿ! ಪುರಾತನವಾದ ಕದಗಳೇ, ತೆರೆದುಕೊಂಡಿರ್ರಿ! ಮಹಾಮಹಿಮೆಯುಳ್ಳ ಅರಸನು ಆಗಮಿಸುತ್ತಾನೆ.
10 영광의 왕이 뉘시뇨 만군의 여호와께서 곧 영광의 왕이시로다(셀라)
೧೦ಮಹಾಮಹಿಮೆಯುಳ್ಳ ಈ ಅರಸನು ಯಾರು? ಸೇನಾಧೀಶ್ವರನಾದ ಯೆಹೋವನೇ, ಮಹಾಮಹಿಮೆಯುಳ್ಳ ಅರಸನು ಈತನೇ. (ಸೆಲಾ)

< 시편 24 >