< 시편 47 >
1 고라 자손의 시, 영장으로 한 노래 너희 만민들아 손바닥을 치고 즐거운 소리로 하나님께 외칠지어다
ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ಕೋರಹೀಯರ ಗೀತೆ. ಎಲ್ಲಾ ಜನರೇ, ಕೈ ತಟ್ಟಿರಿ; ಜಯಾರ್ಭಟದಿಂದ ದೇವರಿಗೆ ಧ್ವನಿಗೈಯಿರಿ.
2 지존하신 여호와는 엄위하시고 온 땅에 큰 임군이 되심이로다
ಏಕೆಂದರೆ ಮಹೋನ್ನತರಾದ ಯೆಹೋವ ದೇವರು ಭಯಭಕ್ತಿಗೆ ಪಾತ್ರರೂ ಭೂಮಿಯ ಮೇಲೆಲ್ಲಾ ಮಹಾರಾಜರೂ ಆಗಿದ್ದಾರೆ.
3 여호와께서 만민을 우리에게, 열방을 우리 발아래 복종케 하시며
ಜನರನ್ನು ನಮ್ಮ ಕೆಳಗೆ ತಂದಿದ್ದಾರೆ. ಜನಾಂಗಗಳನ್ನು ನಮಗೆ ಅಧೀನಮಾಡಿದ್ದಾರೆ.
4 우리를 위하여 기업을 택하시나니 곧 사랑하신 야곱의 영화로다
ಅವರು ಪ್ರೀತಿಸುವ ಯಾಕೋಬಿನ ಘನತೆಯಾಗಿರುವ ನಮ್ಮ ಬಾಧ್ಯತೆಯನ್ನು ನಮಗಾಗಿ ಆಯ್ದುಕೊಂಡಿದ್ದಾರೆ.
5 하나님이 즐거이 부르는 중에 올라가심이여 여호와께서 나팔소리 중에 올라가시도다
ದೇವರು ಜಯಘೋಷದಿಂದ ಉನ್ನತರಾಗಿದ್ದಾರೆ. ಯೆಹೋವ ದೇವರು ತುತೂರಿಯ ಧ್ವನಿಯೊಡನೆ ಸಾಗಿದ್ದಾರೆ.
6 찬양하라 하나님을 찬양하라 찬양하라 우리 왕을 찬양하라
ದೇವರಿಗೆ ಸ್ತುತಿಯನ್ನು ಹಾಡಿರಿ, ಸ್ತುತಿಯನ್ನು ಹಾಡಿರಿ; ನಮ್ಮ ರಾಜರಿಗೆ ಸ್ತುತಿಯನ್ನು ಹಾಡಿರಿ, ಸ್ತುತಿಯನ್ನು ಹಾಡಿರಿ.
7 하나님은 온 땅의 왕이심이라 지혜의 시로 찬양할지어다
ಏಕೆಂದರೆ, ದೇವರು ಭೂಮಿಗೆಲ್ಲಾ ಮಹಾರಾಜರು. ದೇವರನ್ನು ಸ್ತೋತ್ರದ ಕೀರ್ತನೆಯಿಂದ ಕೀರ್ತಿಸಿರಿ.
8 하나님이 열방을 치리하시며 하나님이 그 거룩한 보좌에 앉으셨도다
ದೇವರು ಜನಾಂಗಗಳನ್ನು ಆಳುತ್ತಾರೆ. ದೇವರು ತಮ್ಮ ಪರಿಶುದ್ಧ ಸಿಂಹಾಸನದಲ್ಲಿ ಕೂತಿದ್ದಾರೆ.
9 열방의 방백들이 모임이여 아브라함의 하나님의 백성이 되도다 세상의 모든 방패는 여호와의 것임이여 저는 지존하시도다
ರಾಷ್ಟ್ರಗಳ ಅಧಿಪತಿಗಳು ಅಬ್ರಹಾಮನ ದೇವರ ಜನರಾಗಿ ಕೂಡಿಬಂದಿದ್ದಾರೆ. ಏಕೆಂದರೆ, ಭೂಮಿಯ ರಾಜರೆಲ್ಲರೂ ದೇವರಿಗೆ ಸೇರಿದವರು. ದೇವರು ಬಹಳವಾಗಿ ಘನ ಹೊಂದಿದ್ದಾರೆ.