< 시편 93 >

1 여호와께서 통치하시니 스스로 권위를 입으셨도다 여호와께서 능력을 입으시며 띠셨으므로 세계도 견고히 서서 요동치 아니하도다
ಯೆಹೋವ ದೇವರು ಆಳಿಕೆ ಮಾಡುತ್ತಿದ್ದಾರೆ. ಘನತೆಯನ್ನು ಹೊದ್ದುಕೊಂಡಿದ್ದಾರೆ. ಬಲದಿಂದ ತಮ್ಮ ನಡುವನ್ನು ಕಟ್ಟಿಕೊಂಡಿದ್ದಾರೆ. ಆದುದರಿಂದ ಲೋಕವು ಸಹ ಸ್ಥಿರವಾಗಿದೆ, ಕದಲುವುದಿಲ್ಲ.
2 주의 보좌는 예로부터 견고히 섰으며 주는 영원부터 계셨나이다
ದೇವರೇ, ನಿಮ್ಮ ಸಿಂಹಾಸನವು ಪೂರ್ವಕಾಲದಿಂದ ಸ್ಥಿರವಾಗಿದೆ. ಯುಗಯುಗದಿಂದ ನೀವು ಇದ್ದೀರಿ.
3 여호와여 큰 물이 소리를 높였고 큰 물이 그 소리를 높였고 큰 물이 그 물결을 높이나이다
ಯೆಹೋವ ದೇವರೇ, ಸಮುದ್ರಗಳಲ್ಲಿ ಪ್ರವಾಹಗಳು ಮೊರೆಯುತ್ತಿವೆ. ಸಮುದ್ರಗಳು ತಮ್ಮ ಧ್ವನಿಯನ್ನು ಎತ್ತಿವೆ. ಸಮುದ್ರಗಳು ತಮ್ಮ ಅಲೆಗಳ ಘೋಷವನ್ನು ಎತ್ತಿವೆ.
4 높이 계신 여호와의 능력은 많은 물 소리와 바다의 큰 파도보다 위대하시니이다
ಮಹಾಸಾಗರದ ಶಬ್ದಕ್ಕಿಂತಲೂ, ಸಮುದ್ರದ ಬಲವಾದ ಅಲೆಗಳಿಗಿಂತಲೂ ಉನ್ನತದಲ್ಲಿರುವ ಯೆಹೋವ ದೇವರು ಬಲಿಷ್ಠರಾಗಿದ್ದಾರೆ.
5 여호와여 주의 증거하심이 확실하고 거룩함이 주의 집에 합당하여 영구하리이다
ದೇವರೇ, ನಿಮ್ಮ ಶಾಸನಗಳು ಬಹಳ ನಿಶ್ಚಯವಾದವುಗಳು. ಯೆಹೋವ ದೇವರೇ, ಪರಿಶುದ್ಧತೆಯು ಸದಾಕಾಲ ನಿಮ್ಮ ಆಲಯವನ್ನು ಅಲಂಕರಿಸುತ್ತದೆ.

< 시편 93 >