< Luo Samuel 6 >
1 David el sifilpa orani mwet mweun ma wo emeet in Israel, ac pisalos oasr ke mwet tolngoul tausin.
೧ಅನಂತರ ದಾವೀದನು ಇಸ್ರಾಯೇಲರಲ್ಲಿ ಮೂವತ್ತು ಸಾವಿರ ಮಂದಿ ಶ್ರೇಷ್ಠ ಸೈನಿಕರನ್ನು ಆರಿಸಿಕೊಂಡು ಅವರ ಸಂಗಡ
2 El kololos nu Baalah in acn Judah, tuh elos in use Tuptup in Wuleang lun God liki acn we, su Inen LEUM GOD Kulana oan kac, ac nien muta fulat lal oan fin cherub lukwa ma oan fac.
೨ದೇವರ ಮಂಜೂಷವನ್ನು ತರುವುದಕ್ಕಾಗಿ ಯೆಹೂದ ದೇಶದ ಬಾಳಾ ಎಂಬಲ್ಲಿಗೆ ಹೋದನು. ಆ ಮಂಜೂಷವು ದೇವನಾಮದಿಂದ ಅಂದರೆ ಕೆರೂಬಿಯರ ನಡುವೆ ಆಸೀನನಾಗಿರುವ ಸೇನಾಧೀಶ್ವರನಾದ ಯೆಹೋವನ ನಾಮದಿಂದ ಪ್ರಸಿದ್ಧವಾಗಿತ್ತು.
3 Elos use liki lohm sel Abinadab fin tohktok ah, ac filiya fin sie mwe wiwa sasu. Uzzah ac Ahio, wen natul Abinadab, pa us mwe wiwa soko ah,
೩ಅವರು ದೇವರ ಮಂಜೂಷವನ್ನು ಗುಡ್ಡದ ಮೇಲಿರುವ ಅಬೀನಾದಾಬನ ಮನೆಯಿಂದ ಹೊರಗೆ ತಂದು, ಅದನ್ನು ಒಂದು ಹೊಸ ಬಂಡಿಯ ಮೇಲೆ ಏರಿಸಿದರು. ಅಬೀನಾದಾಬನ ಮಕ್ಕಳಾದ ಉಜ್ಜನೂ ಮತ್ತು ಅಹಿಯೋವನೂ ಬಂಡಿಯನ್ನು ಮಾರ್ಗ ತೋರಿಸುತ್ತಾ ಮುನ್ನಡೆಸಿದರು.
೪ಗುಡ್ಡದ ಮೇಲೆ ವಾಸವಾಗಿದ್ದ ಅಬೀನಾದಾಬನ ಮನೆಯಿಂದ ತೆಗೆಯಲ್ಪಟ್ಟ ದೇವರ ಮಂಜೂಷದ ಮುಂದೆ ಅಹಿಯೋವನೂ ಹೋಗುತ್ತಿದ್ದನು.
5 David ac mwet Israel nukewa fahsr tacn ac on ke kuiyalos nufon in akfulatye LEUM GOD. Elos srital ke harp, lyre, drum, rattle, ac cymbal.
೫ದಾವೀದನೂ ಎಲ್ಲಾ ಇಸ್ರಾಯೇಲರೂ ಶಂಕುಮರದಿಂದ (ಸೈಪ್ರಸ್ ಮರ) ಮಾಡಿದ ಕಿನ್ನರಿ, ಸ್ವರಮಂಡಲ, ದಮ್ಮಡಿ, ಝಲ್ಲರಿ, ತಾಳ ಇವುಗಳನ್ನು ಬಾರಿಸಿಕೊಂಡು ಪೂರ್ಣಾಸಕ್ತಿಯಿಂದ ಗೀತೆಗಳನ್ನು ಹಾಡುತ್ತಾ, ಯೆಹೋವನ ಮುಂದೆ ನರ್ತನ ಮಾಡುತ್ತಾ ಹೋದರು.
6 Ke elos tuku sun acn in kulkul wheat lal Nacon, cow uh tukulkulyak, na Uzzah el saplakyang sruokya Tuptup in Wuleang.
೬ಅವರು ನಾಕೋನನ ಕಣಕ್ಕೆ ಬಂದಾಗ ಎತ್ತುಗಳು ಎಡವಿದ್ದರಿಂದ ಉಜ್ಜನು ಕೈಚಾಚಿ ದೇವರ ಮಂಜೂಷವನ್ನು ಹಿಡಿದನು.
7 In pacl sacna, LEUM GOD El mulat sel Uzzah ac unilya ke sripen el kahlya Tuptup in Wuleang sac, na Uzzah el misa sisken na Tuptup in Wuleang.
೭ಆಗ ಯೆಹೋವನು ಉಜ್ಜನ ಮೇಲೆ ಕೋಪಗೊಂಡು, ಈ ತಪ್ಪಿಗೆ ಅವನನ್ನು ಸಂಹರಿಸಿದನು. ಅವನು ಅಲ್ಲೇ ದೇವರ ಮಂಜೂಷದ ಬಳಿಯಲ್ಲಿ ಸತ್ತನು.
8 Ouinge acn sac pangpang Perez Uzzah in pacl sac me. David el arulana toasr lah LEUM GOD El sang kaiyuk nu sel Uzzah ke kasrkusrak.
೮ಯೆಹೋವನು ಉಜ್ಜನನ್ನು ಹತ್ಯಮಾಡಿದ್ದರಿಂದ ದಾವೀದನು ಸಿಟ್ಟುಗೊಂಡು ಆ ಸ್ಥಳಕ್ಕೆ “ಪೆರೆಚ್ ಉಜ್ಜಾ” ಎಂದು ಹೆಸರಿಟ್ಟನು. ಅದಕ್ಕೆ ಇಂದಿನ ವರೆಗೂ ಅದೇ ಹೆಸರಿರುತ್ತದೆ.
9 Na David el sangeng sin LEUM GOD ac fahk, “Inge nga ac usla fuka Tuptup in Wuleang tuh in wiyu?”
೯ಆ ದಿನ ದಾವೀದನು ಯೆಹೋವನಿಗೆ ಭಯಪಟ್ಟು, “ಯೆಹೋವನ ಮಂಜೂಷವನ್ನು ನಾನಿರುವಲ್ಲಿಗೆ ತೆಗೆದುಕೊಂಡು ಹೋಗುವುದು ಹೇಗೆ?” ಎಂದುಕೊಂಡು,
10 Ouinge el wotela elan tia us welul nu Jerusalem, a el kuhfla liki inkanek ah, usla nu lohm sel Obed Edom, sie mwet in siti lun Gath.
೧೦ಅದನ್ನು ದಾವೀದನಗರಕ್ಕೆ ತರಲೊಲ್ಲದೆ ಗತ್ ಊರಿನ ಓಬೇದೆದೋಮನ ಮನೆಗೆ ಕಳುಹಿಸಿದನು.
11 Tuptup sac oanna we ke malem tolu, ac LEUM GOD El akinsewowoyal Obed Edom ac sou lal.
೧೧ಯೆಹೋವನ ಮಂಜೂಷವು ಗತ್ ಊರಿನ ಓಬೇದೆದೋಮನ ಮನೆಯಲ್ಲಿ ಮೂರು ತಿಂಗಳು ಇತ್ತು. ಆ ದಿನಗಳಲ್ಲಿ ಯೆಹೋವನು ಅವನನ್ನೂ ಅವನ ಮನೆಯವರನ್ನೂ ಆಶೀರ್ವದಿಸಿದನು.
12 Tokosra David el lohng lah LEUM GOD El akinsewowoye sou lal Obed Edom ac ma lal nukewa ke sripen Tuptup in Wuleang sac. Ouinge David el eis Tuptup in Wuleang sac liki lohm sel Obed, tuh elan usla nu Jerusalem ke engan ac akfulat lulap.
೧೨ಯೆಹೋವನು ಹೀಗೆ ಮಂಜೂಷದ ದೆಸೆಯಿಂದ ಓಬೇದೆದೋಮನನ್ನೂ ಅವನಿಗಿರುವುದೆಲ್ಲವನ್ನೂ ಆಶೀರ್ವದಿಸಿದ್ದಾನೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ, ಅವನು ಹೋಗಿ ಓಬೇದೆದೋಮನ ಮನೆಯಲ್ಲಿದ್ದ ದೇವರ ಮಂಜೂಷವನ್ನು ಉತ್ಸಾಹದಿಂದ ದಾವೀದನಗರಕ್ಕೆ ತಂದನು.
13 Ke mwet us Tuptup in Wuleang elos tufahna fahsryak fahluk onkosr, David el sap elos in tui, ac el oru sie mwe kisa nu sin LEUM GOD ke cow mukul soko ac cow fusr fact soko.
೧೩ಯೆಹೋವನ ಮಂಜೂಷವನ್ನು ಹೊತ್ತವರು ಆರು ಹೆಜ್ಜೆ ನಡೆದ ನಂತರ, ದಾವೀದನು ಒಂದು ಎತ್ತನ್ನೂ ಕೊಬ್ಬಿದ ಕರುವನ್ನೂ ಯಜ್ಞಮಾಡಿದನು.
14 El laflafyang ke ipin nuknuk linen se ac tacn ke kuiyal nufon in akfulatye LEUM GOD.
೧೪ದಾವೀದನು ನಾರಿನ ಏಫೋದನ್ನು ಧರಿಸಿಕೊಂಡವನಾಗಿ, ಯೆಹೋವನ ಸನ್ನಿಧಿಯಲ್ಲಿ ಪೂರ್ಣಾಸಕ್ತಿಯಿಂದ ಕುಣಿದಾಡಿದನು.
15 Ouinge David ac mwet Israel nukewa elos sasa ke engan ac uk mwe ukuk ke elos us Tuptup in Wuleang ac fahsryak nu Jerusalem.
೧೫ಹೀಗೆ ದಾವೀದನೂ ಎಲ್ಲಾ ಇಸ್ರಾಯೇಲರೂ ಅರ್ಭಟಿಸುತ್ತಾ, ತುತ್ತೂರಿ ಊದುತ್ತಾ, ಯೆಹೋವನ ಮಂಜೂಷವನ್ನು ತಂದರು.
16 Ke Tuptup sac utuku nu in siti ah, Michal, acn natul Saul, el ngetla liki winto ah, ac liye ke Tokosra David el tacn ac srosro in akfulatye LEUM GOD, na Michal el arulana toasrla sel.
೧೬ಮಂಜೂಷವು ದಾವೀದನಗರದೊಳಗೆ ಬರುತ್ತಿರುವಾಗ ಸೌಲನ ಮಗಳಾದ ಮೀಕಲಳು ಕಿಟಿಕಿಯಿಂದ ಇಣಿಕಿ ನೋಡಿ, ದಾವೀದನು ಯೆಹೋವನ ಮುಂದೆ ಜಿಗಿಯುತ್ತಾ, ಕುಣಿಯುತ್ತಾ ಇರುವುದನ್ನು ಕಂಡು, ಮನಸ್ಸಿನಲ್ಲಿ ಅವನನ್ನು ತಿರಸ್ಕರಿಸಿದಳು
17 Elos us Tuptup sac ac likiya in Lohm Nuknuk se David el tuh akoela nu kac. Na David el orek kisa ac mwe kisa in akinsewowo nu sin LEUM GOD.
೧೭ಜನರು ಯೆಹೋವನ ಮಂಜೂಷವನ್ನು ತಂದು ದಾವೀದನು ಹಾಕಿಸಿದ ಗುಡಾರದೊಳಗೆ ನಿಯಮಿತ ಸ್ಥಳದಲ್ಲಿಟ್ಟರು. ಆಗ ದಾವೀದನು ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು, ಸಮಾಧಾನಯಜ್ಞಗಳನ್ನೂ ಸಮರ್ಪಿಸಿದನು.
18 Ke el orek kisa tari, el akinsewowoye mwet uh Inen LEUM GOD Kulana,
೧೮ಇದಾದ ಮೇಲೆ ಅವನು ಸೇನಾಧೀಶ್ವರನಾದ ಯೆಹೋವನ ಹೆಸರಿನಲ್ಲಿ ಎಲ್ಲರನ್ನೂ ಆಶೀರ್ವದಿಸಿದನು.
19 ac el kitalik mwe mongo nu selos nukewa. El sang nu sin kais sie mukul ac mutan in Israel kais soko lof in bread, kais sie ipin ikwa manman, ac kutu raisin. Na mwet nukewa folokla nu yen selos.
೧೯ಸಭೆಯಾಗಿ ಸೇರಿ ಬಂದಿರುವ ಇಸ್ರಾಯೇಲರ ಪ್ರತಿಯೊಬ್ಬ ಗಂಡಸಿಗೂ ಹೆಂಗಸಿಗೂ ಒಂದು ರೊಟ್ಟಿಯನ್ನೂ, ಒಂದು ತುಂಡು ಮಾಂಸವನ್ನೂ ಮತ್ತು ದ್ರಾಕ್ಷಿ ಹಣ್ಣಿನ ಉಂಡೆಯನ್ನೂ ಕೊಡಿಸಿದರು. ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು.
20 Tukun ma inge, ke Tokosra David el som nu yen sel in paing sou lal ah, Michal el illa in osun nu sel ac fahk, “Seyal kutu, tokosra lun Israel el arulana yukunul sifacna misenge! El sifacna ikasulla oana sie mwet lalfon ye mutun tulik mutan kulansap lun mwet pwapa lal!”
೨೦ಅನಂತರ ದಾವೀದನು ತನ್ನ ಮನೆಯವರನ್ನು ಆಶೀರ್ವದಿಸುವುದಕ್ಕೆ ಹೋದಾಗ ಸೌಲನ ಮಗಳಾದ ಮೀಕಲಳು ಅವನೆದುರಿಗೆ ಬಂದು, “ಈ ಹೊತ್ತು ಇಸ್ರಾಯೇಲರ ಅರಸನು ಎಂಥ ಗೌರವದಿಂದ ನಡೆದುಕೊಂಡನು. ಹುಚ್ಚರಲ್ಲೊಬ್ಬನಂತೆ ತನ್ನ ಜನರ ದಾಸಿಯರ ಮುಂದೆ ಬೆತ್ತಲೆಯಾಗಿದ್ದನಲ್ಲಾ” ಅಂದಳು.
21 David el topuk, “Nga tacn in akfulatye LEUM GOD, su suleyula, ac tia papa tomom ku sou lal, tuh nga in mwet kol nu sin mwet lal, mwet Israel. Ac nga ac sifil pacna tacn in akfulatye LEUM GOD,
೨೧ಆಗ ದಾವೀದನು ಮೀಕಲಳಿಗೆ, “ಇದನ್ನು ಯೆಹೋವನ ಸನ್ನಿಧಿಯಲ್ಲಿ ಮಾಡಿದ್ದೇನಷ್ಟೇ, ನಿನ್ನ ತಂದೆಯನ್ನೂ ಅವರ ಮನೆಯವರೆಲ್ಲರನ್ನೂ ಬಿಟ್ಟು, ನನ್ನನ್ನೇ ಆರಿಸಿಕೊಂಡು, ತನ್ನ ಪ್ರಜೆಗಳಾದ ಇಸ್ರಾಯೇಲರ ಅರಸನನ್ನಾಗಿ ಮಾಡಿದ ಯೆಹೋವನ ಮುಂದೆ ಇನ್ನೂ ಸಂತೋಷದಿಂದ ಕುಣಿದಾಡುವೆನು.
22 ac nga fah akpusiselye lumuk yohk liki inge. Sahp kom nunku mu nga lusrongten, a tulik mutan ingo elos ac arulana akfulatyeyu!”
೨೨ಇದಕ್ಕಿಂತ ಇನ್ನೂ ಹೆಚ್ಚಾಗಿ ತಿರಸ್ಕಾರ ಹೊಂದುವುದಕ್ಕೂ ನನ್ನನ್ನು ಅಲ್ಪನೆಂದು ಭಾವಿಸಿಕೊಳ್ಳುವುದಕ್ಕೂ ಸಿದ್ಧನಾಗಿದ್ದೇನೆ. ನೀನು ಹೇಳಿದ ದಾಸಿಯರಾದರೋ ಹೇಗೂ ನನ್ನನ್ನು ಸನ್ಮಾನಿಸುವರು” ಎಂದನು.
23 Na wanginna tulik Michal, acn natul Saul, el oswela nwe ke na el misa.
೨೩ಸೌಲನ ಮಗಳಾದ ಮೀಕಲಳಿಗೆ ಜೀವದಿಂದಿರುವ ವರೆಗೂ ಮಕ್ಕಳೇ ಆಗಲಿಲ್ಲ.