< Psalm 32 >

1 [Psalm lal David] Insewowo elos su ma koluk lalos nunak munas nu selos, Su ma koluk lalos tuleyukla.
ದಾವೀದನ ಪದ್ಯ. ಯಾರ ದ್ರೋಹವು ಪರಿಹಾರವಾಗಿದೆಯೋ, ಯಾರ ಪಾಪವು ಕ್ಷಮಿಸಲ್ಪಟ್ಟಿದೆಯೋ ಅವನೇ ಧನ್ಯನು.
2 Insewowo el su LEUM GOD El tia esam orekma tafongla lal Ac su wangin kutasrik in el.
ಯೆಹೋವನು ಯಾರ ಲೆಕ್ಕಕ್ಕೆ ಅಪರಾಧವನ್ನು ಎಣಿಸುವುದಿಲ್ಲವೋ? ಯಾರ ಹೃದಯದಲ್ಲಿ ಕಪಟವಿರುವುದಿಲ್ಲವೋ ಅವನು ಧನ್ಯನು.
3 Ke nga tuh tia fahkak ma koluk luk, Nga foroti ke nga tung len nufon.
ನಾನು ನನ್ನ ಪಾಪವನ್ನು ಅರಿಕೆಮಾಡದೆ ಇದ್ದಾಗ, ದಿನವೆಲ್ಲಾ ನರಳುವುದರಿಂದ ನನ್ನ ಎಲುಬುಗಳು ಸವೆದುಹೋಗುತ್ತಿದ್ದವು.
4 LEUM GOD, kom kaiyu ke len ac fong; Ku luk wanginla na pwaye, Oana ke aunfong uh wanginla ke pacl fol.
ಹಗಲಿರುಳು ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿತ್ತು; ನನ್ನ ಶರೀರದ ಸಾರವೆಲ್ಲಾ ಬೇಸಿಗೆಯ ನೀರಿನಂತೆ ಬತ್ತಿಹೋಯಿತು. (ಸೆಲಾ)
5 Na nga fahkak ma koluk luk nu sum; Nga tia okanla orekma koluk luk. Nga sulela in fahkak nu sum, Ac kom nunak munas ke ma koluk luk nukewa.
ಹೀಗಿರುವಲ್ಲಿ ಯೆಹೋವನ ಸನ್ನಿಧಿಯಲ್ಲಿ ನನ್ನ ದ್ರೋಹವನ್ನು ಒಪ್ಪಿಕೊಳ್ಳುವೆನು ಅಂದುಕೊಂಡು ನನ್ನ ಪಾಪವನ್ನು ಮರೆಮಾಡದೆ ನಿನಗೆ ನನ್ನ ದೋಷವನ್ನು ತಿಳಿಸಿದೆನು. ನೀನು ನನ್ನ ಪಾಪಗಳ ಅಪರಾಧವನ್ನು ಪರಿಹರಿಸಿಬಿಟ್ಟಿ. (ಸೆಲಾ)
6 Ke ma inge, lela mwet inse pwaye lom nukewa in pre nu sum in pacl in enenu; Tuh in pacl ma koluk tuku oana sronot, Ac fah tia ku in sonolos.
ಆದುದರಿಂದ ಭಕ್ತರೆಲ್ಲರು ಅಗತ್ಯಕಾಲದಲ್ಲಿ ನಿನ್ನನ್ನು ಪ್ರಾರ್ಥಿಸಲಿ; ಆಗ ಮಹಾಪ್ರವಾಹವು ಅಂಥವರನ್ನು ಮುಟ್ಟುವುದೇ ಇಲ್ಲ.
7 Kom nien wikla luk; Kom ac fah moliyu in pacl in ongoiya. Nga onkakin molela lom ke pusra lulap Tuh kom karinginyu.
ನೀನೇ ನನಗೆ ಮರೆಯು; ನಿರಪಾಯವಾಗಿ ನನ್ನನ್ನು ಕಾಯುವಿ; ವಿಮೋಚನಧ್ವನಿಯಿಂದ ನನ್ನನ್ನು ಆವರಿಸಿಕೊಳ್ಳುತ್ತೀ. (ಸೆಲಾ)
8 LEUM GOD El fahk, “Nga fah lun kom inkanek kom in fahsr kac; Nga fah aketeya nu sum ac kasrekom.
ಯೆಹೋವನು, “ನಿನ್ನನ್ನು ಉಪದೇಶಿಸಿ ನಡೆಯಬೇಕಾದ ಮಾರ್ಗವನ್ನು ತಿಳಿಸುವೆನು; ನಿನ್ನನ್ನು ಕಟಾಕ್ಷಿಸಿ ಆಲೋಚನೆ ಹೇಳುವೆನು” ಎಂದು ಅನ್ನುತ್ತಾನಲ್ಲಾ.
9 Nik kom lalfon oana soko horse ku soko miul, Su enenu sie mwe kapir inwalulos Ac soko sucl in kifasulos.”
ಆದುದರಿಂದ ನೀವು ವಿವೇಕಹೀನರಾಗಿ ಕುದುರೆಯಂತಾಗಲಿ ಅಥವಾ ಹೇಸರಗತ್ತೆಯಂತಾಗಲಿ ಇರಬೇಡಿರಿ; ಅವುಗಳು ಬಾರು ಕಡಿವಾಣಗಳಿಲ್ಲದೆ ಸ್ವಾಧೀನವಾಗುವುದಿಲ್ಲ.
10 Fal mwet koluk in keok, A elos su lulalfongi in LEUM GOD Elos karinginyuk ke lungse kawil lal.
೧೦ದುಷ್ಟರಿಗೆ ಅನೇಕ ಕಷ್ಟನಷ್ಟಗಳು ಉಂಟಾಗುವವು; ಆದರೆ ಯೆಹೋವನಲ್ಲಿ ಭರವಸವಿಟ್ಟವರನ್ನು ಆತನ ಕೃಪೆಯು ಆವರಿಸಿಕೊಳ್ಳುವುದು.
11 Kowos su suwoswos, kowos in engan ac insewowo Ke sripen orekma lun LEUM GOD. Kowos su aksol, kowos in sasa ke engan!
೧೧ನೀತಿವಂತರೇ, ಯೆಹೋವನಲ್ಲಿ ಸಂತೋಷಿಸುತ್ತಾ ಉಲ್ಲಾಸವಾಗಿರಿ; ಯಥಾರ್ಥಚಿತ್ತರೇ, ಆತನ ವಿಷಯದಲ್ಲಿ ಉತ್ಸಾಹ ಧ್ವನಿಮಾಡಿರಿ.

< Psalm 32 >