< Mareka 12 >
1 Lyinu Jesu na tanga kuva ruta che inguli. Nati, “Mukwaame a va vyalite iwa lye feiga, cholu zakiriza, mi chasa ne chikomba choku kamwina iveine. Ava zaki itawala mi chatambika iwa kuva vyala iveine. Lyahanu iye chayenda mumusipili.
೧ಆಗ ಯೇಸು ಅವರೊಂದಿಗೆ ಸಾಮ್ಯಗಳಿಂದ ಮಾತನಾಡುವುದಕ್ಕೆ ಪ್ರಾರಂಭಿಸಿದನು, “ಒಬ್ಬ ಮನುಷ್ಯನುಒಂದು ದ್ರಾಕ್ಷಿಯ ತೋಟವನ್ನು ಮಾಡಿ ಸುತ್ತಲೂ ಬೇಲಿ ಹಾಕಿಸಿ ದ್ರಾಕ್ಷಿಯ ಆಲೆಗಾಗಿ ಒಂದು ಗುಂಡಿಯನ್ನು ತೆಗೆಸಿಕಾವಲು ಗೋಪುರವನ್ನು ಕಟ್ಟಿಸಿದನು. ಬಳಿಕ ಆ ತೋಟವನ್ನು ದ್ರಾಕ್ಷಿಯ ತೋಟಗಾರರಿಗೆ ಗುತ್ತಿಗೆಗೆ ಕೊಟ್ಟು, ಹೊರದೇಶಕ್ಕೆ ಹೊರಟು ಹೋದನು.
2 He nako iswanera, chaka tumina muhikana kuva vyali ve veine kwiza kuhinda kuvali zimwi zihantu zo mwiwa lye veine.
೨ಫಲಕಾಲವು ಬಂದಾಗ ತನಗೆ ಬರತಕ್ಕ ಪಾಲನ್ನು ತೆಗೆದುಕೊಳ್ಳುವುದಕ್ಕಾಗಿ ಒಬ್ಬ ಸೇವಕನನ್ನು ಗುತ್ತಿಗೆದಾರರ ಬಳಿಗೆ ಕಳುಹಿಸಿದನು.
3 vava muhindi, kumundama, ni kumuvonza nikusena chimwi cha hindite.
೩ಆದರೆ ಅವರು ಅವನನ್ನು ಹಿಡಿದುಕೊಂಡು ಹೊಡೆದು ಏನೂ ಕೊಡದೆ ಬರಿಗೈಯಲ್ಲಿ ಕಳುಹಿಸಿಬಿಟ್ಟರು.
4 Hape chavatumina zumwi muhikana, mi chiva muhorofaza mumutwi ni kumu nyandisa ahulu.
೪ಆ ತೋಟದ ಯಜಮಾನನು ಪುನಃ ಮತ್ತೊಬ್ಬ ಸೇವಕನನ್ನು ಅವರ ಬಳಿಗೆ ಕಳುಹಿಸಲು ಅವರು ಅವನ ತಲೆಯ ಮೇಲೆ ಹೊಡೆದು ಗಾಯಗೊಳಿಸಿ ಅಪಮಾನಮಾಡಿ ಕಳುಹಿಸಿಬಿಟ್ಟರು.
5 Chatumina hape zumwi, mi uzu vavamwi hayi. Vava pangi vangi vamwi mwinzira iswana, kundama vamwi nikwi haya vamwi.
೫ಆದರೂ ಇನ್ನೊಬ್ಬ ಸೇವಕನನ್ನು ಕಳುಹಿಸಿದನು. ಇವನನ್ನು ಅವರು ಕೊಂದು ಹಾಕಿದರು. ಇನ್ನೂ ಅನೇಕರಿಗೆ ಅವರು ಹಾಗೆಯೇ ಮಾಡಿ, ಅವರಲ್ಲಿ ಕೆಲವರನ್ನು ಹೊಡೆದರು ಮತ್ತು ಕೆಲವರನ್ನು ಕೊಂದು ಹಾಕಿದರು.
6 Avali kusina yenke zumwi mutu wo kutumina, mwana yo sakiwa. Avali njiwa mamani-mani wava tumini kuvali. Mi nati, “Muvaka kuteke mwanangu.”
೬ಅವನಿಗೆ ಕಳುಹಿಸಲು ಇನ್ನು ಒಬ್ಬನಿದ್ದನು. ಯಾರೆಂದರೆ ತನಗೆ ಪ್ರಿಯನಾಗಿದ್ದ ಒಬ್ಬನೇ ಮಗನು. ತನ್ನ ಮಗನಿಗೆ ಅವರು ಮರ್ಯಾದೆ ಕೊಡಬಹುದೆಂದು ಯಜಮಾನನು ಕೊನೆಗೆ ಅವನನ್ನು ಅವರ ಬಳಿಗೆ ಕಳುಹಿಸಿದನು.
7 Kono vavyali vewa chivali wambira zumwi ku zumwi, “Uzu njeye swana, Mwize, tumwi haye, mi chifumu muchive chetu.”
೭ಆದರೆ ಆ ಗುತ್ತಿಗೆದಾರರು, ‘ತೋಟಕ್ಕೆ ಇವನೇ ಉತ್ತರಾಧಿಕಾರಿ; ಬನ್ನಿ ಇವನನ್ನು ನಾವು ಕೊಂದು ಹಾಕೋಣ. ಆಗ ಆಸ್ತಿ ನಮ್ಮದಾಗುವುದು’ ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡು,
8 Vava muwondi, kumwihaya niku mu zindira hanze lyewa lyeveine.
೮ಅವರು ಅವನನ್ನು ಹಿಡಿದು ಕೊಂದು ಹಾಕಿ ದ್ರಾಕ್ಷಿಯ ತೋಟದಿಂದ ಹೊರಗೆ ಬಿಸಾಡಿದರು.
9 Linu, chizi chete apange mwine wewa lye veine? Mwakeze nikwiza kushinya babyali veveine ni kwiza kuha iwa lyeveine kuvamwi.
೯ಹಾಗಾದರೆ ಆ ದ್ರಾಕ್ಷಾ ತೋಟದ ಯಜಮಾನನು ಏನು ಮಾಡುವನು? ಅವನು ಬಂದು ಆ ಗುತ್ತಿಗೆದಾರರನ್ನು ಸಂಹರಿಸಿ ತನ್ನ ದ್ರಾಕ್ಷಾತೋಟವನ್ನು ಬೇರೆಯವರಿಗೆ ಒಪ್ಪಿಸುವನು.
10 Kamwini kuvala ili iñolo? 'Ivwe ilyo vazaki livava kani, livapangwa musumo.
೧೦“‘ಮನೆಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.
11 Ichi chivali kuzwa kwa Simwiine, mi chilotu mumenso entu.”'
೧೧ಇದು ಕರ್ತನಿಂದಲೇ ಆಯಿತು, ಇದು ನಮ್ಮ ಕಣ್ಣುಗಳಿಗೆ ಆಶ್ಚರ್ಯವಾಗಿ ತೋರುತ್ತದೆ ಎಂಬ ಶಾಸ್ತ್ರವಚನಗಳನ್ನೂ ನೀವು ಓದಲಿಲ್ಲವೇ?’” ಎಂದನು.
12 Niva zeza kusumina Jesu, mi vavatiyite chinzi, ka kuti vavezi kuti ava wambi iyi nguli kutondeka avo. Chiva musiya ni kuliyendeza.
೧೨ಯೇಸು ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದ್ದಾನೆ ಎಂದು ಅವರು ತಿಳಿದುಕೊಂಡು ಆತನನ್ನು ಹಿಡಿಯುವುದಕ್ಕೆ ಸಂದರ್ಭನೋಡುತ್ತಿದ್ದರು. ಆದರೆ ಜನರಿಗೆ ಭಯಪಟ್ಟು ಆತನನ್ನು ಬಿಟ್ಟುಹೋದರು.
13 Linu chivatumika vamwi vama Farisi niva Heroda kwali kuka mu cheesa cha manzwi.
೧೩ಆ ಮೇಲೆ ಅವರು ಯೇಸುವನ್ನು ಮಾತುಗಳಲ್ಲಿ ಹಿಡಿಯಬೇಕೆಂದು ಫರಿಸಾಯರಲ್ಲಿಯೂ, ಹೆರೋದ್ಯರಲ್ಲಿಯೂ ಕೆಲವರನ್ನು ಆತನ ಬಳಿಗೆ ಕಳುಹಿಸಿದರು.
14 Mi havakeza, chiva wamba kwali, “Muruti, twizi kuti ko wina indava ne kuti muntu zumwe u tiinzi, mane hape u hinda vantu choku lyikana. U ruta cho vuniti inzira ye Ireeza. Kana mulao kuliha mutero kwa Sisare kamba vule? Tulihe kamba sanzi tulihi?”
೧೪ಇವರು ಬಂದು, “ಬೋಧಕನೇ ನೀನು ಸತ್ಯವಂತನು, ಯಾವ ಮನುಷ್ಯನನ್ನು ಲಕ್ಷಿಸದವನೂ, ಮುಖದಾಕ್ಷಿಣ್ಯ ತೋರಿಸದವನೂ, ಸತ್ಯಕ್ಕನುಸಾರವಾಗಿ ದೈವಮಾರ್ಗವನ್ನು ಬೋಧಿಸುವವನೂ ಎಂದು ನಾವು ಬಲ್ಲೆವು. ಕೈಸರನಿಗೆ ಸುಂಕ ಕೊಡುವುದು ಧರ್ಮಸಮ್ಮತವೋ? ಅಲ್ಲವೋ? ನಾವದನ್ನು ಕೊಡಬೇಕೋ ಬೇಡವೋ?” ಎಂದು ಆತನನ್ನು ಕೇಳಿದರು.
15 Kono Jesu avali kwizi mwipo wavo ni kuwamba kuvali. “Chizi hamuni lika? Munitambike i koviri iri kuti ni lole haili.”
೧೫ಆದರೆ ಯೇಸು ಅವರ ಕಪಟತನವನ್ನು ಗ್ರಹಿಸಿ, “ನೀವು ನನ್ನನ್ನು ಪರೀಕ್ಷಿಸುವುದೇಕೆ? ಒಂದು ನಾಣ್ಯವನ್ನು ತಂದು ನನಗೆ ತೋರಿಸಿರಿ ನಾನು ಅದನ್ನು ನೋಡುತ್ತೇನೆ” ಎಂದು ಹೇಳಲು ಅವರು ತಂದರು.
16 Chiva leta yonke kwa Jesu. Cha wamba kuvali, “Chiswaniso chani ichi ni ziñoletwe?” Chivati, Sisare.”
೧೬ಆಗ ಆತನು ಇದರ “ಮೇಲಿರುವುದು ಯಾರ ಮುಖಮುದ್ರೆ? ಮತ್ತು ಯಾರ ಲಿಪಿ?” ಎಂದು ಕೇಳಿದ್ದಕ್ಕೆ ಅವರು ಕೈಸರನದು ಅಂದರು.
17 Jesu chati, “Muhe kwa Sisare zintu zili za Sisare, ni kwe Ireeza zintu zili ze Ireeza.” Chava komokisa.
೧೭ಯೇಸು, “ಕೈಸರನಿಗೆ ಸಂಬಂಧಪಟ್ಟವುಗಳನ್ನು ಕೈಸರನಿಗೂ ದೇವರಿಗೆ ಸಂಬಂಧಪಟ್ಟವುಗಳನ್ನು ದೇವರಿಗೂ ಸಲ್ಲಿಸಿರಿ” ಎಂದು ಹೇಳಿದನು. ಅದಕ್ಕೆ ಅವರು ಆತನ ವಿಷಯವಾಗಿ ಬಹು ಆಶ್ಚರ್ಯಪಟ್ಟರು.
18 Linu va Saduki, vata kuti kakwina kuvuka kuvafwire, chiveza kwali. Chiva muvuza, nivati,
೧೮ತರುವಾಯ ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಆತನ ಬಳಿಗೆ ಬಂದು,
19 “Muruti, Mushe ava tuñoleri, 'Haiva mukulwomuntu wa fwa ni kusiya muihyabwe, niku sena mwana, mwanche uswanera kuti a sese muka mukulwe, ne kumu zaalira vana.'
೧೯ಆತನನ್ನು ಪ್ರಶ್ನೆಮಾಡಿದ್ದೇನಂದರೆ, “ಬೋಧಕನೇ, ‘ಅಣ್ಣನಾದವನು ಮಕ್ಕಳಿಲ್ಲದೆ ಹೆಂಡತಿಯನ್ನು ಬಿಟ್ಟು ಸತ್ತರೆ ಆಕೆಯನ್ನು ಅವನ ತಮ್ಮನು ಮದುವೆ ಮಾಡಿಕೊಂಡು ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು’ ಮೋಶೆಯು ನಮಗಾಗಿ ಬರೆದಿಟ್ಟಿದ್ದಾನಲ್ಲವೇ.
20 Ku vena vakwame vakwana iyanza nivovere; we intanzi cha hinda mukulwakazi kusesa mi nikufwa, kusiya kakwina mwana.
೨೦“ಒಮ್ಮೆ ಏಳು ಮಂದಿ ಸಹೋದರರಿದ್ದರು. ಮೊದಲನೆಯವನು ಮದುವೆ ಮಾಡಿಕೊಂಡು ಸಂತಾನವಿಲ್ಲದೆ ಸತ್ತನು.
21 Linu wovuveri cha hinda uzo mukulwakazi ni kufwa, kusiya kakwina mwana. Niwo vutatu naye ni kuswana.
೨೧ಎರಡನೆಯವನೂ ಆಕೆಯನ್ನು ಮದುವೆ ಮಾಡಿಕೊಂಡು ಸಂತಾನವಿಲ್ಲದೆ ಸತ್ತನು. ಅದರಂತೆ ಮೂರನೆಯವನು.
22 Mane ne woku mana iyaanza ne toovere na vula ku siya vaana. Ku mamanimani a teni mukulwaakazi naye choku fwa.
೨೨ಇದೇ ಪ್ರಕಾರ ಏಳು ಮಂದಿಯೂ ಆಕೆಯನ್ನು ಮದುವೆಯಾಗಿ ಸಂತಾನವಿಲ್ಲದೆ ಸತ್ತರು. ಕೊನೆಯಲ್ಲಿ ಆ ಸ್ತ್ರೀಯೂ ಸತ್ತಳು.
23 Muku vuka kwa vafu, chiva vuka, ka yive mukani? Ka kuti vonse va mana iyaanza ne toovere vava musesi.”
೨೩ಪುನರುತ್ಥಾನದಲ್ಲಿ ಅವರು ಎದ್ದುಬರುವಾಗ ಅವರಲ್ಲಿ ಆಕೆಯು ಯಾರ ಹೆಂಡತಿಯಾಗಿರುವಳು? ಆ ಏಳು ಮಂದಿಗೂ ಆಕೆಯು ಹೆಂಡತಿಯಾಗಿದ್ದಳಲ್ಲಾ” ಎಂದರು.
24 Jesu chawamba, Ili kajilyona ivaka hamupanga mafosisa, ka kuti ka mwizi mañolo kamba ziho ze Ireeza?
೨೪ಅದಕ್ಕೆ ಯೇಸು, “ನೀವು ಶಾಸ್ತ್ರವಚನಗಳನ್ನಾದರೂ, ದೇವರ ಶಕ್ತಿಯನ್ನಾದರೂ ತಿಳಿಯದೆ ಇರುವುದರಿಂದಲೇ ತಪ್ಪುವವರಾಗಿದ್ದೀರಿ?
25 Kakuti hateniva vuke kuvafwiire, kate niva sese kamba kusesiwa, kono kavaswane uvu mañiroyi mwi wulu.
೨೫ಸತ್ತವರು ಬದುಕಿ ಎದ್ದಮೇಲೆ ಮದುವೆ ಮಾಡಿಕೊಳ್ಳುವುದೂ ಇಲ್ಲ, ಮದುವೆ ಮಾಡಿಕೊಡುವುದೂ ಇಲ್ಲ. ಆದರೆ ಅವರು ಪರಲೋಕದಲ್ಲಿರುವ ದೇವದೂತರಂತೆ ಇರುತ್ತಾರೆ.
26 Kono kuyamana nivafwire avo vete niva vunswe, kena muvavali mwimbuka ya Mushe, mwi ndava iyama chihumbu, vule Ireeza mwava wambiri kwali ni kuti, 'Jeme Ireeza wa Amburahama ni Ireeza wa Isaka ni Ireeza wa Jakovo?
೨೬ಆದರೆ ಸತ್ತವರು ಬದುಕಿ ಬರುತ್ತಾರೆಂಬುದನ್ನು ಕುರಿತು ಹೇಳಬೇಕಾದರೆ‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಆಗಿದ್ದೇನೆ ಎಂದು ಪೊದೆಯಲ್ಲಿ ದೇವರು ಮೋಶೆಯ ಸಂಗಡ ಮಾತನಾಡಿದನೆಂದು ನೀವು ಮೋಶೆಯ ಗ್ರಂಥದಲ್ಲಿ ಓದಲಿಲ್ಲವೋ?’
27 Kena ji Ireeza wava fwire, kono wavahala. Mwina muma fosisa.”
೨೭ಆತನು ಜೀವಂತರಿಗೆ ದೇವರಾಗಿದ್ದಾನೆ ಹೊರತು ಸತ್ತವರಿಗಲ್ಲ. ಈ ವಿಷಯದಲ್ಲಿ ನೀವು ಬಹು ತಪ್ಪಾದ ಅಭಿಪ್ರಾಯವುಳ್ಳವರಾಗಿದ್ದಿರಿ” ಎಂದು ಹೇಳಿದನು.
28 Zumwi wava ñoli cheza nikwiza kuzuwa ingambolo yavo; ava voni kuti Jesu avave tavi hande. Chamuvuza, “Jouhi mulao wina vutokwa hayonse?”
೨೮ಶಾಸ್ತ್ರಿಗಳಲ್ಲಿ ಒಬ್ಬನು ಅವರ ವಾದವನ್ನು ಕೇಳಿ ಯೇಸು ಅವರಿಗೆ ಸರಿಯಾಗಿ ಉತ್ತರ ಕೊಟ್ಟನೆಂದು ತಿಳಿದು ಆತನ ಹತ್ತಿರಕ್ಕೆ ಬಂದು, “ಎಲ್ಲಾ ಆಜ್ಞೆಗಳಲ್ಲಿ ಮುಖ್ಯವಾದ್ದದು ಯಾವುದು?” ಎಂದು ಆತನನ್ನು ಕೇಳಿದರು.
29 Jesu chetava, “Ovu tokwa kuhitiliza jowu, 'Zuwe, Isiraele, Simwine Ireeza wetu, Simwine yenke.
೨೯ಅದಕ್ಕೆ ಯೇಸು, “‘ಇಸ್ರಾಯೇಲ್ ಜನರೇ ಕೇಳಿ, ನಮ್ಮ ದೇವರಾದ ಕರ್ತನುಒಬ್ಬನೇ ದೇವರು.
30 U swanera kusaka Simwine Ireeza wako che nkulo yako yonse, chemunahano wako onse, che mizezo yako yonse ni cheziho zako zonse.'
೩೦ನಿನ್ನ ದೇವರಾದ ಕರ್ತನನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ, ಪೂರ್ಣ ಬುದ್ಧಿಯಿಂದಲೂ, ಪೂರ್ಣ ಶಕ್ತಿಯಿಂದಲೂ ಪ್ರೀತಿಸಬೇಕು’ ಎಂಬುದೇ ಮುಖ್ಯವಾದ ಆಜ್ಞೆ.
31 Ovuvere mulao jowu, 'Uswanera kusaka yo wikala hembali nawe uvu molisakira umwine'. Kakwina imwi milao mikando kuhita iyi.”
೩೧‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂಬುದೇ ಎರಡನೆಯ ಆಜ್ಞೆ. ಇವುಗಳಿಗಿಂತ ಹೆಚ್ಚಿನ ಆಜ್ಞೆ ಮತ್ತೊಂದಿಲ್ಲ” ಎಂದು ಉತ್ತರ ಕೊಟ್ಟನು.
32 Mu ñoli chati, 'Yowina hande, Muruti! Wawamba vuniti kuti Ireeza yenke, ni kuti kakwina zumwi kwanda yakwe.
೩೨ಆಗ ಆ ಶಾಸ್ತ್ರಿಯು, “ಬೋಧಕನೇ, ನೀನು ಚೆನ್ನಾಗಿ ಹೇಳಿದೆ. ಸತ್ಯವನ್ನೇ ಹೇಳಿದಿ ದೇವರು ಒಬ್ಬನೇ, ಆತನ ಹೊರತು ಬೇರೊಬ್ಬ ದೇವರಿಲ್ಲ ಎಂದು ಹೇಳಿದನು.
33 Ku musaka ni nkulo yako yonse ni kutwisiso yako yonse ni cheziho zako zonse, ni kusaka yowikala hembali nawe sina molisakira iwe umwine, mane ihita nagati ineo zokusumika ni zitavero.”
೩೩ಆತನನ್ನು ಪೂರ್ಣಹೃದಯದಿಂದಲೂ, ಪೂರ್ಣ ಬುದ್ಧಿಯಿಂದಲೂ, ಪೂರ್ಣ ಶಕ್ತಿಯಿಂದಲೂ ಪ್ರೀತಿಸತಕ್ಕದ್ದು. ಇದಲ್ಲದೆ ತನ್ನನ್ನು ಪ್ರೀತಿಸಿಕೊಳ್ಳುವಂತೆ ತನ್ನ ನೆರೆಯವನನ್ನು ಪ್ರೀತಿಸುವುದು ಇವೆರಡೂ ಎಲ್ಲಾ ಸರ್ವಾಂಗಹೋಮಗಳಿಗಿಂತಲೂ ಎಲ್ಲಾ ಯಜ್ಞಗಳಿಗಿಂತಲೂ ಮೇಲಾದುವು” ಅಂದನು.
34 Linu Jesu havona kuti waha ikalavo yo vutali, chati kwali, “Kowina kule ni muvuso we Ireeza.”Hakumana zina, kakwina zumwi yava zezi kuvuza Jesu ipuzo hape.
೩೪ಅವನು ಬುದ್ಧಿಯಿಂದ ಉತ್ತರಕೊಟ್ಟದ್ದನ್ನು ಯೇಸು ಕಂಡು, “ನೀನು ದೇವರ ರಾಜ್ಯಕ್ಕೆ ದೂರವಾದವನಲ್ಲ” ಎಂದನು. ಅಂದಿನಿಂದ ಆತನನ್ನು ಪ್ರಶ್ನೆಮಾಡುವುದಕ್ಕೆ ಯಾರಿಗೂ ಧೈರ್ಯವಿರಲಿಲ್ಲ.
35 Mi Jesu chetava, yaho nakwete kuruta mwi tempere; chati, “Kwina vule kuti vañoli vawambe Keresite mwana wa Davinda?
೩೫ಯೇಸು ದೇವಾಲಯದಲ್ಲಿ ಉಪದೇಶಮಾಡುತ್ತಿರಲಾಗಿ ಆತನು ಅವರನ್ನು, “ಶಾಸ್ತ್ರಿಗಳು ಕ್ರಿಸ್ತನನ್ನು ದಾವೀದನ ಮಗನೆಂದು ಹೇಳುತ್ತಾರಲ್ಲಾ ಅದು ಹೇಗೆ?
36 Davinda iye mwine, mu Luhuho lu Njolola, avacho, wikale kwi nyanza lyangu lyechiliso, kusikira hate nini pangire vakulwisa maltatiro a matende a ko.'
೩೬“‘ನಾನು ನಿನ್ನ ಶತ್ರುಗಳನ್ನು ನಿನ್ನ ಪಾದದಡಿ ಹಾಕುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು’ ಎಂಬುದಾಗಿ ದಾವೀದನೇ ಪವಿತ್ರಾತ್ಮನ ಪ್ರೇರಣೆಯಿಂದ ಹೇಳಿದ್ದಾನೆ.
37 Davinda iyemwine umu supa kuti 'Simwine; cwale kuwoleka vule kuti Keresite ave mwana wa Davida?” Chisi chikando chivali kusangitwe ahulu kutekereza kwali.
೩೭ದಾವೀದನೇ ಆತನನ್ನು ‘ಕರ್ತನೆಂದು’ ಹೇಳಿರುವಲ್ಲಿ ಆತನು ಅವನಿಗೆ ಮಗನಾಗುವುದು ಹೇಗೆ?” ಎಂದು ಪ್ರಶ್ನಿಸಿದನು. ಜನರ ದೊಡ್ಡ ಸಮೂಹವು ಆತನ ಮಾತನ್ನು ಸಂತೋಷದಿಂದ ಕೇಳುತ್ತಿತ್ತು.
38 Mututo zakwe Jesu ava wambi, “Mutokomere vañoli, vasaka ahulu kuyenda muzizwato zilele mi vasaka itumeriso ziva wana muzivaka zomusika
೩೮ಆತನು ಉಪದೇಶಮಾಡಿ ಹೇಳಿದ್ದೇನಂದರೆ, “ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನಿಲುವಂಗಿಯನ್ನು ಧರಿಸಿಕೊಂಡು ತಿರುಗಾಡುತ್ತಾ,
39 mi vasaka kuwana zipura zovulena muma sinangonge ni zivaka za malena ha mikiti.
೩೯ಸಂತೆಯ ಬೀದಿಗಳಲ್ಲಿ ನಮಸ್ಕಾರಗಳನ್ನೂ, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳನ್ನೂ, ಔತಣಗಳಲ್ಲಿ ಪ್ರಥಮ ಸ್ಥಾನಗಳನ್ನೂ ಅವರು ಇಷ್ಟಪಡುವವರಾಗಿದ್ದಾರೆ.
40 Miva vasinya mazuvo e mberwa, mi valapera itapero inde luli iri kuti vantu vavone. Ava vakwame kavatambule ikatulo ikando luli.”
೪೦ಇವರು ವಿಧವೆಯರ ಮನೆಗಳನ್ನು ದೋಚಿ ತೋರಿಕೆಗಾಗಿ ದೇವರಿಗೆ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ. ಇಂಥವರು ಹೆಚ್ಚಿನ ದಂಡನೆಯನ್ನು ಹೊಂದುವರು” ಎಂದನು.
41 Linu Jesu chekala hansi kumbali ni ka tanda ke neo muchivaka che tempere; avali kukwete kulwera vantu chiva vika mashereñi avo muchitanda. Vungi vwava fumite vavali kuvika mashereñi mangi.
೪೧ಯೇಸು ದೇವಾಲಯದ ಆವರಣದಲ್ಲಿ ಕಾಣಿಕೆ ಪೆಟ್ಟಿಗೆಯ ಎದುರಿಗೆ ಕುಳಿತುಕೊಂಡು ಜನರು ಅದರಲ್ಲಿ ಹಣ ಹಾಕುವುದನ್ನು ಗಮನಿಸುತ್ತಿದ್ದನು. ಅನೇಕ ಮಂದಿ ಐಶ್ವರ್ಯವಂತರು ಹೆಚ್ಚೆಚ್ಚು ಹಣ ಹಾಕುತ್ತಿದ್ದರು.
42 Chikwakeza mukulwakazi avali kufwirirwe we mberwa nikwiza kuvika makoviri overe, alikana i shiriñi.
೪೨ಒಬ್ಬ ಬಡ ವಿಧವೆಯು ಬಂದು, ಎರಡು ಕಾಸು ಬೆಲೆಯುಳ್ಳ ಒಂದು ದುಗ್ಗಾಣಿ ಹಾಕಿದಳು.
43 Mi chasupa varutwana vakwe ni kuva wambira, “Chovuniti ni miwambira, uzu mukulwakazi yasali wanini wa vikamo kuhita vonse vavika muchitanda che neo.
೪೩ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ, “ಈ ಕಾಣಿಕೆ ಪೆಟ್ಟಿಗೆಯಲ್ಲಿ ಹಾಕಿದವರೆಲ್ಲರಿಗಿಂತಲೂ ಈ ಬಡ ವಿಧವೆಯು ಹೆಚ್ಚಾಗಿ ಹಾಕಿದ್ದಾಳೆ ಎಂದು ನಿಮಗೆ ನಿಜವಾಗಿ ಹೇಳುತ್ತೇನೆ.
44 Kakuti vonse vaha kuzwisa hachifumu chavo, kono kuzwa havunjebwe bwakwe, wavikamo onse mashereñi aswanera kuli hazikiza ho.”
೪೪ಹೇಗೆಂದರೆ, ಎಲ್ಲರೂ ತಮ್ಮ ಸಮೃದ್ಧಿಯಲ್ಲಿ ಹಾಕಿದರು. ಆದರೆ ಈ ವಿಧವೆಯೋ ತನ್ನ ಬಡತನದಲ್ಲಿಯೂ ತನಗಿದ್ದದ್ದನ್ನೆಲ್ಲಾ ಎಂದರೆ, ತನ್ನ ಜೀವನಕ್ಕೆ ಆಧಾರವಾಗಿದ್ದ ಎಲ್ಲವನ್ನೂ ಕಾಣಿಕೆಯಾಗಿ ಹಾಕಿದ್ದಾಳೆ” ಎಂದನು.