< Mateu 5 >
1 Cwale Jesu ha vona bantu, ca kambama he lundu. cwale he kala hansi, Valutiwa bakwe cibeza kwali.
ಯೇಸು ಜನರ ಗುಂಪನ್ನು ಕಂಡು, ಒಂದು ಬೆಟ್ಟವನ್ನೇರಿ ಕುಳಿತುಕೊಂಡರು. ಶಿಷ್ಯರು ಅವರ ಬಳಿಗೆ ಬಂದರು.
2 Ca zasumuka ni kubaluta. Ca wamba kuti,
ಮತ್ತು ಯೇಸು ಅವರಿಗೆ ಉಪದೇಶಿಸಲು ಪ್ರಾರಂಭಿಸಿದರು. ಅವರು ಹೀಗೆ ಹೇಳಿದರು:
3 “Imbuyoti ya vana va vontana mu luhuho, kakuti cavo mubuso we Wulu.
“ಆತ್ಮದಲ್ಲಿ ಬಡವರಾಗಿರುವವರು ಧನ್ಯರು, ಪರಲೋಕ ರಾಜ್ಯವು ಅವರದು.
4 Imbuyoti ya bana ba Lila, kakuti muva ntontozwe.
ದುಃಖಿಸುವವರು ಧನ್ಯರು, ಅವರು ಆದರಣೆ ಹೊಂದುವರು.
5 Va fuyaulitwe bali Tobohete, kakuti mu ba yole inkanda.
ಸಾತ್ವಿಕರು ಧನ್ಯರು, ಅವರು ಭೂಮಿಗೆ ಬಾಧ್ಯರಾಗುವರು.
6 Va fuyauletwe abo ba fwa inzala yo ku shiyama ni nyota yo Kushiyama, kakuli mu be kute.
ನೀತಿಗೋಸ್ಕರ ಹಸಿದು ಬಾಯಾರುವವರು ಧನ್ಯರು, ಅವರು ತೃಪ್ತಿಹೊಂದುವರು.
7 Imbuyoti ya vaana ve Cishemo, kakuti kava tambule cishemo.
ಕರುಣೆಯುಳ್ಳವರು ಧನ್ಯರು, ಅವರು ಕರುಣೆ ಪಡೆಯುವರು.
8 Va fuyauletwe vena Inkulo zi jolola, ka va vone Ireza.
ಹೃದಯದಲ್ಲಿ ಶುದ್ಧರಾಗಿರುವವರು ಧನ್ಯರು, ಅವರು ದೇವರನ್ನು ಕಾಣುವರು.
9 Va fuyaulitwe va leta Inkozo, kaba supwe vana ve Ireza,
ಸಮಾಧಾನ ಪಡಿಸುವವರು ಧನ್ಯರು, ಅವರು ದೇವರ ಮಕ್ಕಳೆನಿಸಿಕೊಳ್ಳುವರು.
10 Va fuyaulitwe va nyandisiwa ce baka lyo kuluka', kakuti cavo mubuso we Wulu.
ನೀತಿಯ ನಿಮಿತ್ತವಾಗಿ ಹಿಂಸೆಗೊಳಗಾಗುವವರು ಧನ್ಯರು, ಪರಲೋಕ ರಾಜ್ಯವು ಅವರದು.
11 Imbuyoti zenu vantu ciba mi tukola ni kuminyandisa, kapa kuwamba zibilala zonse ca mapa cevaka lyangu.
“ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ನಿಂದಿಸಿ, ಹಿಂಸಿಸಿ ನಿಮ್ಮ ಮೇಲೆ ಎಲ್ಲಾ ವಿಧವಾದ ಕೆಟ್ಟ ಮಾತುಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರು.
12 mutabe mi musange, kakuti itifo yenu inkando kwi Wulu. Kakuti vantu mubaba nyandisezi maporofita vavali kwina kwa teni ni museni ku zalwa.
ಸಂತೋಷಪಟ್ಟು ಆನಂದಿಸಿರಿ. ಏಕೆಂದರೆ ಪರಲೋಕದಲ್ಲಿ ನಿಮಗೆ ಮಹಾ ಪ್ರತಿಫಲ ಸಿಕ್ಕುವುದು. ಅವರು ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನು ಸಹ ಇದೇ ರೀತಿಯಲ್ಲಿ ಹಿಂಸೆಪಡಿಸಿದರು.
13 Inwe mwi Sautu lye kanda, kono i Sautu hali sampuka, muli lungiswe cinzi? kalisina buzole, konji kusohera fera hanze ni kulyatolwa ca matende.
“ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ಸಪ್ಪಗಾದರೆ, ಅದಕ್ಕೆ ಉಪ್ಪಿನ ರುಚಿ ಹೇಗೆ ಬಂದೀತು? ಅದು ಹೊರಗೆ ಹಾಕಿ ತುಳಿಯುವುದಕ್ಕೆ ಯೋಗ್ಯವೇ ಹೊರತು ಬೇರೆ ಯಾವ ಕೆಲಸಕ್ಕೂ ಬರುವುದಿಲ್ಲ.
14 inwe mwi seli lye kanda. munzi uzakitwe he lundu ka u oli ku wungulwa.
“ನೀವು ಲೋಕಕ್ಕೆ ಬೆಳಕಾಗಿದ್ದೀರಿ; ಬೆಟ್ಟದ ಮೇಲಿರುವ ಊರು ಮರೆಯಾಗಿರಲಾರದು.
15 ka kwina vantu va munika ilambi ni kuli bwika mwi nguvo, kono ulivika ha voneka, mi a tondeze vena mwi nzuvo vonse iseli.
ದೀಪವನ್ನು ಹಚ್ಚಿ ಯಾರೂ ಅಳೆಯುವ ಪಾತ್ರೆಯೊಳಗೆ ಇಡುವುದಿಲ್ಲ, ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕು ಕೊಡುತ್ತದೆ.
16 Iseli lyenu livenye havusu bwa vantu vonse kuti va vone mitendo yenu yi shiyeme mi muva tembe ishenu wina kwi wulu.
ಅದೇ ರೀತಿಯಲ್ಲಿ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ; ಹೀಗಾದರೆ ಜನರು ನಿಮ್ಮ ಸತ್ಕ್ರಿಯೆಗಳನ್ನು ಕಂಡು ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಮಹಿಮೆಪಡಿಸುವರು.
17 musiye kuhupula kuti ni va kezi kumanisa mulao kapa vaporofita. Kena ni va kezi kuku zimanisa, kono ku i zuziriza.
“ಮೋಶೆಯ ನಿಯಮವನ್ನಾಗಲಿ, ಪ್ರವಾದನೆಗಳನ್ನಾಗಲಿ ರದ್ದು ಮಾಡುವುದಕ್ಕೆ ನಾನು ಬಂದೆನೆಂದು ಭಾವಿಸಬೇಡಿರಿ; ನಾನು ಅವುಗಳನ್ನು ರದ್ದುಗೊಳಿಸಲು ಬರಲಿಲ್ಲ, ನೆರವೇರಿಸಲು ಬಂದಿದ್ದೇನೆ.
18 kakuti ni mi wambira buniti kwanda Iwulu ni nkanda cinza mana, ka kwina yonke i taku yo Mulao, yetene ni imane mbwita zintu zonse hete ni zi mane.
ಭೂಮಿ ಆಕಾಶಗಳು ಗತಿಸಿಹೋಗುವವು, ಆದರೆ ನಿಯಮವೆಲ್ಲಾ ನೆರವೇರುವ ತನಕ ಅದರಲ್ಲಿ ಒಂದು ಚಿಕ್ಕ ಅಕ್ಷರವಾದರೂ ಚಿಕ್ಕ ಚುಕ್ಕೆಯಾದರೂ ಅಳಿದುಹೋಗುವುದಿಲ್ಲ ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.
19 Cwale yense yo cola mulao kuti kawina butokwa ni kuluta vamwi vo vulyo milao ka supiwe kuti munini mu mubuso wo kwi Wulu. Kono yo imamera ni kuiruta ka supiwe kuti mukando mumu buso wo kwi Wulu.
ಆದ್ದರಿಂದ ಈ ಆಜ್ಞೆಗಳಲ್ಲಿ ಅತ್ಯಂತ ಚಿಕ್ಕದಾದ ಒಂದನ್ನು ಮೀರಿ, ಹಾಗೆಯೇ ಮೀರಲು ಇತರರಿಗೆ ಬೋಧಿಸುವವನು ಪರಲೋಕ ರಾಜ್ಯದಲ್ಲಿ ಅತಿ ಚಿಕ್ಕವನೆಂದು ಎನಿಸಿಕೊಳ್ಳುವನು. ಆದರೆ ಈ ಆಜ್ಞೆಗಳನ್ನು ಪಾಲಿಸಿ ಇತರರಿಗೆ ಬೋಧಿಸುವವನು ಪರಲೋಕ ರಾಜ್ಯದಲ್ಲಿ ದೊಡ್ಡವನೆಂದು ಎನಿಸಿಕೊಳ್ಳುವನು.
20 ceniti ni mi wambira nita kuti ku luka kwenu haiba ka ku hitirili kuluka kwa bañoli ni kwa bafalisi, ka sane ni mwi njire mubuso we Wula.
ನಿಮ್ಮ ನೀತಿಯು ಫರಿಸಾಯರ ಮತ್ತು ನಿಯಮ ಬೋಧಕರ ನೀತಿಗಿಂತಲೂ ಹೆಚ್ಚಿನದಾಗದಿದ್ದರೆ, ನೀವು ಪರಲೋಕ ರಾಜ್ಯವನ್ನು ಸೇರಲಾರಿರಿ ಎಂದು ನಿಮಗೆ ಹೇಳುತ್ತೇನೆ.
21 muba zuwi kuba wambwa kuba ikale kuti, usiye kwi haya, mi we haya u swaneri ku hewa mulandu,
“‘ನರಹತ್ಯೆ ಮಾಡಬಾರದು, ಯಾವನಾದರೂ ನರಹತ್ಯೆ ಮಾಡಿದರೆ ಅವನು ನ್ಯಾಯತೀರ್ಪಿಗೆ ಗುರಿಯಾಗುವನು,’ ಎಂದು ನಿಮ್ಮ ಪೂರ್ವಿಕರಿಗೆ ಹೇಳಿದ್ದನ್ನು ನೀವು ಕೇಳಿದ್ದೀರಷ್ಟೇ.
22 kono ni miwambira mutu zuhi kamba zuhi yo bengera mu kwakwe, mwa swanere ku atuliwa. Mi hape yo wambira mu kwakwe kuti “u ci hole” u swanela ku atuliwa mwi khuta, mi yo mu wamba kuti, I we yasanambene, u mwabe mubu kabo bo muliro we here. (Geenna )
ಆದರೆ ನಾನು ನಿಮಗೆ ಹೇಳುವುದೇನೆಂದರೆ: ತನ್ನ ಸಹೋದರನ ಮೇಲೆ ಕೋಪಿಸಿಕೊಳ್ಳುವ ಪ್ರತೀ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು. ಮಾತ್ರವಲ್ಲದೆ, ಯಾವನಾದರೂ ತನ್ನ ಸಹೋದರನನ್ನು ‘ಬುದ್ಧಿ ಇಲ್ಲದವನೇ’ ಎಂದರೂ ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು. ಯಾರನ್ನಾದರೂ, ‘ಮೂರ್ಖಾ,’ ಎನ್ನುವವನು ಅಗ್ನಿನರಕಕ್ಕೆ ಗುರಿಯಾಗುವನು. (Geenna )
23 Cwale he co neula i mpo zako he aletare, ho sika hateni wiza kuhupula kuti wina mulandu ni mukwako,
“ಆದ್ದರಿಂದ, ನೀನು ನಿನ್ನ ಕಾಣಿಕೆಯನ್ನು ಸಮರ್ಪಿಸಲು ಬಲಿಪೀಠದ ಬಳಿಗೆ ತಂದಾಗ, ನಿನ್ನ ಸಹೋದರನಿಗೆ ಅಥವಾ ನಿನ್ನ ಸಹೋದರಿಗೆ ನಿನ್ನ ಮೇಲೆ ಏನೋ ವಿರೋಧವಿದೆ ಎಂಬುದು ನಿನ್ನ ನೆನಪಿಗೆ ಬಂದರೆ,
24 siye i mpo za ko habusu bwa katala, u yende muka ambo lisane ni ku zumizana ni mukwako, njo so keze ku tambika i mpo yako cwale.
ನಿನ್ನ ಕಾಣಿಕೆಯನ್ನು ಬಲಿಪೀಠದ ಮುಂದೆಯೇ ಬಿಟ್ಟು ಹೋಗಿ ಮೊದಲು ಸಹೋದರನೊಡನೆ ಅಥವಾ ಸಹೋದರಿಯೊಡನೆ ಸಂಧಾನಮಾಡಿಕೋ; ಆಮೇಲೆ ಬಂದು ನಿನ್ನ ಕಾಣಿಕೆಯನ್ನು ಸಮರ್ಪಿಸು.
25 U litahanere ku zumi zana naye yo kuzekisa ni musina mwi nzira, mwendi yo zo, yo kuzekisa mpohona ca ka ku twale ku muatuli mi muatuli mwa ka kutambike mu manza o mu hikana yasa ka ku atule, ya sa ku sohere mwi intorongo,
“ನಿನ್ನ ಎದುರಾಳಿ ನಿನ್ನನ್ನು ನ್ಯಾಯಾಲಯಕ್ಕೂ, ನ್ಯಾಯಾಧಿಪತಿಯು ನಿನ್ನನ್ನು ಅಧಿಕಾರಿಗೆ ಒಪ್ಪಿಸಿ ಸೆರೆಮನೆಗೆ ಹಾಕದಿರುವುದಕ್ಕೂ, ಎದುರಾಳಿಯ ಸಂಗಡ ದಾರಿಯಲ್ಲಿರುವಾಗಲೇ ಬೇಗ ಸಮಾಧಾನ ಮಾಡಿಕೋ.
26 Ka maniti ni mi wambira, kosono zwe mwa teni kwanda hete no mane kuliha mulando ca mali onse o kwete.
ಇಲ್ಲದಿದ್ದರೆ, ನೀನು ಕೊನೆಯ ಪೈಸೆಯನ್ನಾದರೂ ಸಲ್ಲಿಸುವವರೆಗೂ ಅಲ್ಲಿಂದ ಹೊರಗೆ ಬರುವುದೇ ಇಲ್ಲವೆಂದು ನಿನಗೆ ಸತ್ಯವಾಗಿ ಹೇಳುತ್ತೇನೆ.
27 Muba zuwi kuti kuba tewa kuti, usiye ku panga buhule.
“‘ವ್ಯಭಿಚಾರ ಮಾಡಬಾರದು,’ ಎಂದು ಹೇಳಿದ್ದನ್ನು ನೀವು ಕೇಳಿದ್ದೀರಷ್ಟೇ.
28 kono i me ni mi wambira kuti, yense yo lola mwanakazi cwo ku mu lakamina, ca mulala mwi nkulo ya kwe.
ಆದರೆ ಒಬ್ಬ ಸ್ತ್ರೀಯನ್ನು ಕಾಮದೃಷ್ಟಿಯಿಂದ ನೋಡುವ ಪ್ರತಿಯೊಬ್ಬನೂ ಆಗಲೇ ತನ್ನ ಹೃದಯದಲ್ಲಿ ಆಕೆಯ ಸಂಗಡ ವ್ಯಭಿಚಾರ ಮಾಡಿದ್ದಾನೆ ಎಂದು ನಾನು ನಿಮಗೆ ಹೇಳುತ್ತೇನೆ.
29 linso lyako lye cilyo haiba li ku sitatalisa, u li nyukule mo, mi u linzindire kule nawe, ka kuti ci lotu kwa ko, zi lama ca ko conke ha cifwa cocona, mi mubiri wa ko onse kanji u zindirwa mumulilo we Here. (Geenna )
ಆದ್ದರಿಂದ ನಿನ್ನ ಬಲಗಣ್ಣು ನಿನ್ನ ಪಾಪಕ್ಕೆ ಕಾರಣವಾದರೆ, ಅದನ್ನು ನೀನು ಕಿತ್ತೆಸೆದುಬಿಡು. ಏಕೆಂದರೆ ನಿನ್ನ ಇಡೀ ದೇಹ ನರಕದಲ್ಲಿ ಎಸೆಯುವುದಕ್ಕಿಂತ ನಿನ್ನ ಒಂದು ಅಂಗವು ನಾಶವಾಗುವುದು ನಿನಗೆ ಒಳಿತು. (Geenna )
30 I yanza lyako lye chilyo haiba ni liku sitatalisa, u likosole kwa teni, mi u lisohere kule nawe, kakuli ci lotu kwa ko cilama conke ha ci fwa co nke isiñi mubiri onse ha u nzindirwa mumuliro we Here. (Geenna )
ನಿನ್ನ ಬಲಗೈ ನಿನ್ನ ಪಾಪಕ್ಕೆ ಕಾರಣವಾದರೆ, ಅದನ್ನು ನೀನು ಕತ್ತರಿಸಿ ಬಿಸಾಡಿಬಿಡು; ಏಕೆಂದರೆ ನಿನ್ನ ಇಡೀ ದೇಹ ನರಕದಲ್ಲಿ ಎಸೆಯುವುದಕ್ಕಿಂತ ನಿನ್ನ ಒಂದು ಅಂಗವು ನಾಶವಾಗುವುದು ನಿನಗೆ ಒಳಿತು. (Geenna )
31 ku ba wambiwa hape kuti, muntu ha tanda mwi hyabwe, a mu tambike i mpampili lye kauhano.
“ಇದಲ್ಲದೆ, ‘ತನ್ನ ಹೆಂಡತಿಯನ್ನು ಬಿಡುವವನು ಆಕೆಗೆ ವಿವಾಹ ವಿಚ್ಛೇದನ ಪತ್ರವನ್ನು ಕೊಡಲಿ,’ ಎಂದು ಹೇಳಿದೆಯಷ್ಟೆ.
32 kono i me ni mi wambira kuti muntu zuhi kamba zuhi yo hindika mwi hyabwe, kwanda o mulandu wo bushahi, u mupanga bushahi. Mi yense yasana musese kuzwa ha kukanwa kaibe i hule naye.
ನಾನು ನಿಮಗೆ ಹೇಳುವುದೇನೆಂದರೆ, ಹಾದರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಅವಳು ವ್ಯಭಿಚಾರ ಮಾಡುವುದಕ್ಕೆ ಕಾರಣನಾಗುತ್ತಾನೆ; ವಿವಾಹ ವಿಚ್ಛೇದನೆ ಹೊಂದಿದವಳನ್ನು ಮದುವೆ ಆಗುವವನು ವ್ಯಭಿಚಾರ ಮಾಡಿದವನಾಗುತ್ತಾನೆ.
33 Hape, muba zuwi mu wambiro ku batu ba kwa ikale kuti, 'kanji u nkonkii ca vulisumino bwa mapa kwa Simwine, kono wi zuzirise vulisumino kwe Ireza ko bali sumini cabo.
“‘ಇದಲ್ಲದೆ ನೀನು ಆಣೆಯಿಟ್ಟರೆ ಅದನ್ನು ಮೀರಬಾರದು, ಕರ್ತನಿಗೆ ಮಾಡಿದ ಆಣೆಗಳನ್ನು ನೆರವೇರಿಸಲೇಬೇಕು,’ ಎಂದು ನಿಮ್ಮ ಪೂರ್ವಿಕರಿಗೆ ಹೇಳಿರುವುದನ್ನು ಕೇಳಿದ್ದೀರಿ.
34 Kono ni mi wambira kuti kanji muku nkonka, kamba niheba ce Wulu, ka kuli ji kwina cipula he kere Ireza,
ಆದರೆ ನಾನು ನಿಮಗೆ ಹೇಳುವುದೇನೆಂದರೆ, ಆಣೆಯಿಡಲೇ ಬೇಡಿರಿ. ಪರಲೋಕದ ಮೇಲೆ ಆಣೆ ಇಡಬೇಡಿರಿ, ಏಕೆಂದರೆ ಅದು ದೇವರ ಸಿಂಹಾಸನವು;
35 kamba ce nkanda, kakuli nji malyatiro a matende a kwe; kamba ca Jerusalema kakuli muleneñi wa Simwine.
ಭೂಮಿಯ ಮೇಲೆ ಆಣೆ ಇಡಬೇಡಿರಿ, ಏಕೆಂದರೆ ಅದು ದೇವರ ಪಾದಪೀಠವು. ಯೆರೂಸಲೇಮಿನ ಮೇಲೆ ಆಣೆ ಇಡಬೇಡಿರಿ, ಏಕೆಂದರೆ ಅದು ಮಹಾರಾಜನ ಪಟ್ಟಣವಾಗಿದೆ.
36 Hape musiye ku nkonka ce mitwi yenu, sina ha musa woli ku sandula lusuki lonke kusiha kapa kutuba,
ನಿನ್ನ ತಲೆಯ ಮೇಲೂ ಆಣೆಯಿಡುವುದು ಬೇಡ, ಏಕೆಂದರೆ ನೀನು ಒಂದು ಕೂದಲನ್ನಾದರೂ ಬೆಳ್ಳಗೆ ಅಥವಾ ಕಪ್ಪಗೆ ಮಾಡಲಾರೆ.
37 Ci muswanera kuwamba co bufuhi kuta kuti eni eni kapa Ne ne, cihi ne chihi ci hitilira izi cicizwa kumutu mu bilala.
ಆದ್ದರಿಂದ ನಿಮ್ಮ ಮಾತು ಹೌದಾದರೆ ‘ಹೌದು’ ಇಲ್ಲವಾದರೆ ‘ಇಲ್ಲ’ ಎಂದಿರಲಿ. ಇದಕ್ಕಿಂತ ಹೆಚ್ಚಿನದು ಕೆಡುಕನಿಂದ ಬಂದದ್ದು.
38 Mubazuwi kuti kuba wambiwa kuti, 'Linso ce Linso, mi lino ce Lino,
“‘ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು,’ ಎಂದು ಹೇಳಿರುವುದನ್ನು ನೀವು ಕೇಳಿದ್ದೀರಿ.
39 Kono ni mi wambira kuti, kanji mu kanini mutu mubilala. Haiba, yense u ku bakula kwi tama lyo bulyo, muntezekere ni kuyimwi mbali nayo a bakule koo.
ಆದರೆ ನಾನು ನಿಮಗೆ ಹೇಳುವುದೇನೆಂದರೆ, ಕೆಡುಕನನ್ನು ಎದುರಿಸಬೇಡಿರಿ. ಯಾವನಾದರೂ ನಿನ್ನ ಬಲಗೆನ್ನೆಗೆ ಹೊಡೆದರೆ, ಅವನಿಗೆ ಮತ್ತೊಂದು ಕೆನ್ನೆಯನ್ನೂ ತಿರುಗಿಸಿಕೊಡು.
40 Mi haiba zumwi u saka kumi suminisa ni kuhinda ci zwato canko, muherere ni ngubo yanko,
ನಿನ್ನೊಡನೆ ವ್ಯಾಜ್ಯ ಮಾಡಿ ನಿನ್ನ ಅಂಗಿಯನ್ನು ನಿನ್ನಿಂದ ಕಿತ್ತುಕೊಳ್ಳುವವನಿಗೆ, ನಿನ್ನ ಮೇಲಂಗಿಯನ್ನೂ ಕೊಟ್ಟುಬಿಡು.
41 ha iba muntu u kuhambiriza kumu sindikiza cibima conke, u musindikize zibima zo bere.
ಯಾವನಾದರೂ ನಿನ್ನನ್ನು ಒಂದು ಕಿಲೋಮೀಟರು ದೂರ ಬಾ ಎಂದು ಒತ್ತಾಯ ಮಾಡಿದರೆ, ಅವನೊಡನೆ ಎರಡು ಕಿಲೋಮೀಟರು ದೂರ ಹೋಗು;
42 U he ku muntu yense yo kukumbira, mi kanji u ka nini muntu yo saka ku kalima kwako.
ಕೇಳುವವನಿಗೆ ಕೊಡು, ನಿನ್ನಿಂದ ಸಾಲ ಕೇಳುವವನ ಕಡೆಯಿಂದ ಮುಖ ತಿರುಗಿಸಿಕೊಳ್ಳಬೇಡ.
43 Mubazuwi kuti kuba wambitwe kuti, u sake yo wikala naye he mbali mi u toye cila ca nko.
“‘ನಿನ್ನ ನೆರೆಯವನನ್ನು ಪ್ರೀತಿಸಿ, ನಿನ್ನ ವೈರಿಯನ್ನು ದ್ವೇಷಿಸು,’ ಎಂದು ಹೇಳಿರುವುದನ್ನು ಕೇಳಿದ್ದೀರಿ.
44 'Kono ni mi wambira kuti, musake zila zenu mi mulaperele bana ba mi nyandisa,
ಆದರೆ ನಾನು ನಿಮಗೆ ಹೇಳುವುದೇನೆಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಹಿಂಸಿಸುವವರಿಗೋಸ್ಕರ ಪ್ರಾರ್ಥಿಸಿರಿ.
45 Jokuta kuti mube baana be shenu wina kwi Wulu, yo ñatulisa i zuba lyakwe ku bantu va vii mane bulyo ni ba Lukite, mi u tumina i bula ha ba shiyeme ni ba fosahere.
ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಅವರು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತಮ್ಮ ಸೂರ್ಯನು ಉದಯಿಸುವಂತೆ ಮಾಡುತ್ತಾರೆ. ನೀತಿವಂತರ ಮೇಲೂ ಅನೀತಿವಂತರ ಮೇಲೂ ಮಳೆ ಸುರಿಸುತ್ತಾರೆ.
46 Haiba kuti musaka bulyo ba misaka, mupuzo inzi wete ni muka tambule?, esi ni batelisi bo mutero bapanga bulyo?
ನಿಮ್ಮನ್ನು ಪ್ರೀತಿಸುವವರನ್ನೇ ನೀವು ಪ್ರೀತಿಸಿದರೆ ನಿಮಗೇನು ಫಲ? ಸುಂಕದವರೂ ಹಾಗೆ ಮಾಡುವುದಿಲ್ಲವೇ?
47 Mi haiba kuti mu lumerisa bulyo ba kwenu, zintu nzi zi mupanga zi hitilira zi bamwi? esi ni basezi Ireza nabo bapanga bulyo?
ನಿಮ್ಮ ಸ್ವಂತದವರನ್ನು ಮಾತ್ರ ವಂದಿಸಿದರೆ ಹೆಚ್ಚೇನು ಮಾಡಿದ ಹಾಗಾಯಿತು? ಯೆಹೂದ್ಯರಲ್ಲದವರು ಸಹ ಹಾಗೆಯೇ ಮಾಡುತ್ತಾರಲ್ಲವೇ?
48 Mu be hande he, sina ishenu wina kwi Wulu ha shiyeme.
ಆದ್ದರಿಂದ, ಪರಲೋಕದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣರಾಗಿರುವಂತೆ ನೀವೂ ಪರಿಪೂರ್ಣರಾಗಿರಿ.