< ئەیوب 35 >
ئەلیهوش بەردەوام بوو و گوتی: | 1 |
೧ಆ ಮೇಲೆ ಎಲೀಹು ಮತ್ತೆ ಇಂತೆಂದನು,
«ئایا ئەمە بە ڕاست دادەنێیت؟ گوتت:”ڕاستییەکەی لای منە، نەک لای خودا.“ | 2 |
೨“ನೀತಿಯಿಂದ ನನಗೇನು ಪ್ರಯೋಜನವಾಯಿತು? ಪಾಪಮಾಡದೆ ಇದ್ದುದರಿಂದ ನನಗಾದ ಹೆಚ್ಚು ಲಾಭವೇನು?
لەگەڵ ئەوەشدا لێی دەپرسیت:”چ سوودێکی بۆم هەیە، قازانجی چیم کرد لە نەکردنی گوناه؟“ | 3 |
೩ಈ ರೀತಿ ನೀನು ನುಡಿಯುವುದು ನ್ಯಾಯವೆಂದು ನೀನು ಊಹಿಸಿಕೊಂಡು, ನನ್ನ ನೀತಿಯು ದೇವರ ನೀತಿಗಿಂತ ಹೆಚ್ಚೆಂದುಕೊಳ್ಳುತ್ತಿಯಾ?
«من حەز دەکەم وەڵامی تۆ بدەمەوە، وەڵامی تۆ و هاوڕێیەکانیشت دەدەمەوە. | 4 |
೪ನಾನು ನಿನಗೂ, ನಿನ್ನ ಜೊತೆಗಾರರಿಗೂ ಕೂಡ ಉತ್ತರಕೊಡುವೆನು.
تەماشای ئاسمان بکە و ببینە، تێبینی هەورەکان بکە لە تۆ بەرزترن. | 5 |
೫ಕಣ್ಣೆತ್ತಿ ಗಗನಮಂಡಲವನ್ನು ನೋಡು, ಮೇಘಮಾರ್ಗವನ್ನು ದೃಷ್ಟಿಸು, ಅವು ನಿನಗಿಂತ ಎಷ್ಟೋ ಎತ್ತರವಾಗಿವೆ!
ئەگەر گوناهە بکەیت چیت لێکردووە و ئەگەر یاخیبوونەکانت زۆر بکەیت چیت پێکردووە؟ | 6 |
೬ನೀನು ಪಾಪಮಾಡಿದ್ದರೆ ಆತನಿಗೆ ಏನು ಮಾಡಿದಂತಾಯಿತು? ನಿನ್ನ ದ್ರೋಹಗಳು ಹೆಚ್ಚಾಗಿದ್ದರೂ ಆತನಿಗೇನು?
ئەگەر ڕاستودروست بیت چیت پێیداوە، یان چی لە دەستت وەردەگرێت؟ | 7 |
೭ನೀನು ನೀತಿವಂತನಾಗಿದ್ದರೆ ಆತನಿಗೇನು ಕೊಟ್ಟಂತಾಯಿತು? ನಿನ್ನ ಕೈಯಿಂದ ಆತನಿಗೆ ಲಾಭವೇನು?
خراپەکەت بۆ مرۆڤێک دەبێت کە وەک خۆتە و ڕاستودروستیشت بۆ ئادەمیزادە. | 8 |
೮ನಿನ್ನ ಕೆಟ್ಟತನದಿಂದ ನಿನ್ನಂಥ ಮನುಷ್ಯನಿಗೇ ನಷ್ಟವಾದೀತು, ನಿನ್ನ ನೀತಿಯಿಂದ ನರಜನ್ಮದವನಿಗೇನು ಲಾಭ ಸಿಕ್ಕಬಹುದು.
«خەڵک لەتاوی زۆرداری هاوار دەکەن، لەبەر ستەمکاران هاواری فریاکەوتن دەکەن. | 9 |
೯ಅಪಾರವಾದ ಹಿಂಸೆಗಳಿಗೆ ಒಳಪಟ್ಟವರು ಮೊರೆಯಿಡುತ್ತಾ, ಬಲಿಷ್ಠರ ಭುಜಬಲದಿಂದ ಪೀಡಿತರಾಗಿ ಕೂಗಿಕೊಳ್ಳುವರು.
ناڵێن:”کوا خودای بەدیهێنەرم، ئەوەی لە شەودا زەبوور دەدات، | 10 |
೧೦‘ನನ್ನ ಸೃಷ್ಟಿ ಕರ್ತನಾದ ದೇವರು ಎಲ್ಲಿ? ಆತನು ರಾತ್ರಿಯಲ್ಲಿಯೂ ಕೀರ್ತನೆಗಳನ್ನು ಹಾಡುತ್ತಾನಲ್ಲಾ ಎಂದು ಯಾರೂ ಹೇಳುವುದಿಲ್ಲ.
ئەوەی فێرمان دەکات زیاتر لە ئاژەڵەکانی زەوی و لە باڵندەکانی ئاسمان داناترمان دەکات؟“ | 11 |
೧೧ಆತನು ಕಾಡು ಮೃಗಗಳಿಗಿಂತ ನಮಗೆ ಹೆಚ್ಚು ಜ್ಞಾನವನ್ನು ಬೋಧಿಸುತ್ತಾ, ಆಕಾಶದ ಪಕ್ಷಿಗಳಿಗಿಂತ ಹೆಚ್ಚು ಬುದ್ಧಿಯನ್ನು ನಮಗೆ ಕಲಿಸುತ್ತಾನೆ’ ಎಂದು ಹೇಳುವುದೇ ಇಲ್ಲ.
کاتێک خەڵک لە دەست لووتبەرزی خراپەکاران هاوار دەکەن، وەڵام ناداتەوە. | 12 |
೧೨ಇಂಥಾ ಸಂದರ್ಭದಲ್ಲಿ ಅವರು ದುಷ್ಟರ ಸೊಕ್ಕಿನಿಂದ ನೊಂದು ಗೋಳಾಡುವರು, ಆದರೂ ಆತನು ಉತ್ತರವನ್ನು ದಯಪಾಲಿಸುವುದಿಲ್ಲ.
خودا گوێ لە داواکاری پووچیان ناگرێت، توانادارەکە تەماشای ناکات. | 13 |
೧೩ದೇವರು ಮೂರ್ಖನ ಮಾತಿಗೆ ಕಿವಿಗೊಡುವುದೇ ಇಲ್ಲ, ಸರ್ವಶಕ್ತನಾದ ದೇವರು ಅದನ್ನು ಎಂದಿಗೂ ಲಕ್ಷಿಸುವುದಿಲ್ಲ.
ئیتر چۆن گوێ لە تۆ بگرێت ئەگەر بڵێیت کە نایبینیت، داواکارییەکەت لەبەردەمیەتی و دەبێت چاوەڕێی ئەو بکەیت، | 14 |
೧೪ಹೀಗಿರಲು ಆತನು ಕಾಣುವುದಿಲ್ಲ, ನನ್ನ ವ್ಯಾಜ್ಯವು ಆತನ ಮುಂದೆ ಇದೆ, ಆತನನ್ನು ಕಾದಿರುತ್ತೇನೆ ಎಂದು ನೀನು ಹೇಳಿದರೆ ಆತನು ಕೇಳುತ್ತಾನೆಯೇ?
هەروەها تووڕەییەکەی هەرگیز سزا نادات و گوێ نادات بە زۆری خراپەکاری. | 15 |
೧೫ಆತನು ದುಷ್ಟರ ಮೇಲೆ ತನ್ನ ಕೋಪವನ್ನು ತೀರಿಸದೆ ಇರುವ ಕಾರಣ ಆಹಾ, ಆತನು ದ್ರೋಹವನ್ನು ವಿಶೇಷವಾಗಿ ಗಮನಿಸುವುದಿಲ್ಲವೆಂದು,
بەم جۆرە ئەیوب لە هیچ دەمی کردووەتەوە و بەبێ زانین قسەی زل دەکات.» | 16 |
೧೬ಯೋಬನು ಸುಮ್ಮನೆ ಬಾಯಿ ತೆರೆಯುತ್ತಾನೆ, ಯಾವ ತಿಳಿವಳಿಕೆಯೂ ಇಲ್ಲದೆ ಬಹಳ ಮಾತನಾಡುತ್ತಾನೆ.”