< زەبوورەکان 140 >
بۆ گەورەی گۆرانیبێژان، زەبوورێکی داود. ئەی یەزدان، لە کەسی بەدکار دەربازم بکە، لە پیاوی توندوتیژ بمپارێزە، | 1 |
೧ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು, ದಾವೀದನ ಕೀರ್ತನೆ. ಯೆಹೋವನೇ, ಕೆಡುಕರಿಂದ ನನ್ನನ್ನು ಬಿಡಿಸು, ಬಲಾತ್ಕಾರಿಗಳಿಂದ ತಪ್ಪಿಸಿ ಕಾಪಾಡು.
ئەوانەی لە دڵەوە بیر لە خراپە دەکەنەوە و هەموو ڕۆژێک خەریکی شەڕانگێزین. | 2 |
೨ಅವರು ಕೇಡು ಕಲ್ಪಿಸುತ್ತಾರೆ, ಯಾವಾಗಲೂ ಜಗಳವೆಬ್ಬಿಸುತ್ತಾರೆ.
زمانیان وەک زمانی مار تیژکردووە، ژەهری تیرەمار لەژێر لێویانە. | 3 |
೩ತಮ್ಮ ನಾಲಿಗೆಯನ್ನು ಸರ್ಪದಂತೆ ಹದಮಾಡಿದ್ದಾರೆ, ಅವರ ತುಟಿಗಳ ಹಿಂದೆ ಹಾವಿನ ವಿಷವಿದೆ. (ಸೆಲಾ)
ئەی یەزدان، لە دەست بەدکار ئاگادارم بە، لە پیاوی توندوتیژ بمپارێزە، ئەوانەی پیلانیان داناوە بۆ ئەوەی قاچم بخلیسکێنن. | 4 |
೪ಯೆಹೋವನೇ, ದುಷ್ಟರ ಕೈಗೆ ಸಿಕ್ಕದಂತೆ ನನ್ನನ್ನು ಕಾಪಾಡು, ಬಲಾತ್ಕಾರಿಗಳಿಂದ ತಪ್ಪಿಸಿ ರಕ್ಷಿಸು. ಅವರು ನನ್ನ ಕಾಲುಗಳನ್ನು ಎಡವಿಸಿಬಿಡಬೇಕೆಂದು ಯೋಚಿಸಿದ್ದಾರೆ.
لووتبەرزان تەڵەیان بۆم ناوەتەوە، پەت و تۆڕیان بڵاو کردووەتەوە، لە دەم ڕێگا داویان بۆم ناوەتەوە. | 5 |
೫ಗರ್ವಿಷ್ಠರು ನನಗೋಸ್ಕರ ಗುಪ್ತಸ್ಥಳದಲ್ಲಿ ಉರುಲನ್ನೂ, ಪಾಶಗಳನ್ನೂ ಒಡ್ಡಿದ್ದಾರೆ, ದಾರಿಯ ಮಗ್ಗುಲಲ್ಲಿ ಬಲೆಹಾಸಿದ್ದಾರೆ, ನನಗಾಗಿ ಬಲೆಬೀಸಿಟ್ಟಿದ್ದಾರೆ. (ಸೆಲಾ)
بە یەزدانم گوت: «تۆ خودای منی!» ئەی یەزدان، گوێ لە دەنگی پاڕانەوەم بگرە. | 6 |
೬ನಾನು ಯೆಹೋವನಿಗೆ, “ನೀನೇ ನನ್ನ ದೇವರು, ಯೆಹೋವನೇ, ನನ್ನ ವಿಜ್ಞಾಪನೆಗೆ ಕಿವಿಗೊಡು,
ئەی یەزدانی پەروەردگار، هێزی ڕزگاریم، لە ڕۆژی شەڕدا سەری منت داپۆشی. | 7 |
೭ಕರ್ತನೇ, ಯೆಹೋವನೇ, ನನ್ನ ಆಶ್ರಯದುರ್ಗವೇ, ಯುದ್ಧ ಸಮಯದಲ್ಲಿ ನೀನೇ ನನ್ನ ಶಿರಸ್ತ್ರಾಣ,
ئەی یەزدان، ئارەزووەکانی بەدکار مەهێنە دی، لێمەگەڕێ پیلانەکانی سەربگرێت، بۆ ئەوەی لووتبەرز نەبن. | 8 |
೮ಯೆಹೋವನೇ, ದುಷ್ಟರು ತಮ್ಮನ್ನು ಹೆಚ್ಚಿಸಿಕೊಳ್ಳದಂತೆ, ಅವರ ಆಶೆಗಳನ್ನು ನೆರವೇರಿಸಬೇಡ, ಅವರ ಕುಯುಕ್ತಿಯನ್ನು ಸಾಗಗೊಡಿಸಬೇಡ” ಎಂದು ಹೇಳುತ್ತೇನೆ. (ಸೆಲಾ)
با سەری ئەوانەی دەوریان داوم بە خراپەی لێویان بپۆشرێن، | 9 |
೯ನನ್ನನ್ನು ಸುತ್ತಿಕೊಂಡಿರುವವರ ತುಟಿಗಳ ಕೇಡು ಅವರ ತಲೆಯ ಮೇಲೆಯೇ ಬರಲಿ,
با پشکۆیان بەسەردا ببارێت، بکەونە ناو ئاگرەوە، بکەونە ناو چاڵەوە، ڕاست نەبنەوە. | 10 |
೧೦ಅವರ ಮೇಲೆ ಕೆಂಡಗಳು ಸುರಿಯಲಿ, ಅವರು ಅಗ್ನಿಕುಂಡದೊಳಕ್ಕೂ, ಆಳವಾದ ತಗ್ಗಿನೊಳಕ್ಕೂ ದೊಬ್ಬಲ್ಪಟ್ಟು ತಿರುಗಿ ಏಳದಿರಲಿ.
با بوختانکەر لەسەر زەوی جێگیر نەبێت، با کەسی توندوتیژ ببێتە نێچیری خراپە. | 11 |
೧೧ಚಾಡಿಗಾರನು ದೇಶದಲ್ಲಿ ಉಳಿಯನು, ಕೇಡು ಬಲಾತ್ಕಾರಿಯನ್ನು ಹಿಂದಟ್ಟಿ ಕೆಡವಿಬಿಡುವುದು.
دەزانم یەزدان دادپەروەری دەکات بۆ هەژاران، ماف دەدات بە نەداران. | 12 |
೧೨ಯೆಹೋವನು ದೀನರ ವ್ಯಾಜ್ಯವನ್ನು ನಡೆಸುವನೆಂತಲೂ, ಬಡವರ ನ್ಯಾಯವನ್ನು ಸ್ಥಾಪಿಸುವನೆಂತಲೂ ಬಲ್ಲೆನು.
بێگومان ڕاستودروستان ستایشی ناوت دەکەن، سەرڕاستان لە ئامادەبوونت دادەنیشن. | 13 |
೧೩ನಿಶ್ಚಯವಾಗಿ ನೀತಿವಂತರು ನಿನ್ನ ಹೆಸರನ್ನು ಕೊಂಡಾಡುವರು, ಯಥಾರ್ಥರು ನಿನ್ನ ಸನ್ನಿಧಿಯಲ್ಲಿ ಬದುಕುವರು.