< Esdræ 8 >

1 Hi sunt autem principes familiarum, et genealogia eorum, qui ascenderunt mecum in regno Artaxerxis regis de Babylone.
ಅರ್ತಷಸ್ತ ರಾಜನ ಆಳ್ವಿಕೆಯಲ್ಲಿ ನನ್ನೊಂದಿಗೆ ಬಾಬಿಲೋನಿನಿಂದ ಹೊರಟ ಗೋತ್ರಪ್ರಧಾನರ ಮತ್ತು ಅವರ ಸಂತಾನದವರ ವಿವರಣೆ.
2 De filiis Phinees, Gersom. De filiis Ithamar, Daniel. De filiis David, Hattus.
ಫೀನೆಹಾಸನ ಸಂತಾನದವರಲ್ಲಿ ಗೇರ್ಷೋಮ್; ಈತಾಮಾರನ ಸಂತಾನದವರಲ್ಲಿ ದಾನಿಯೇಲ್; ದಾವೀದನ ಸಂತಾನದವರಲ್ಲಿ ಶೆಕನ್ಯನ ಮೊಮ್ಮಗನಾದ ಹಟ್ಟೂಷ್.
3 De filiis Secheniae, et de filiis Pharos, Zacharias: et cum eo numerati sunt viri centum quinquaginta.
ಪರೋಷಿನವರಲ್ಲಿ ಜೆಕರ್ಯನೂ ಅವನೊಡನೆ ಶೆಕನ್ಯನ ವಂಶಕ್ಕೆ ಸೇರುವ 150 ಗಂಡಸರು.
4 De filiis Phahath Moab, Elioenai filius Zarehe, et cum eo ducenti viri.
ಪಹತ್ ಮೋವಾಬಿನವರಲ್ಲಿ ಜೆರಹ್ಯನ ಮಗನಾದ ಎಲ್ಯೆಹೋವೇನೈಯೂ ಮತ್ತು ಅವನೊಡನೆ 200 ಗಂಡಸರು.
5 De filiis Secheniae, filius Ezechiel, et cum eo trecenti viri.
ಜತ್ತೂವಿನವರಲ್ಲಿ ಯಹಜೀಯೇಲನ ಮಗನಾದ ಶೆಕನ್ಯನೂ ಹಾಗೂ ಅವನೊಡನೆ 300 ಗಂಡಸರು.
6 De filiis Adan, Abed filius Ionathan, et cum eo quinquaginta viri.
ಆದೀನನವರಲ್ಲಿ ಯೋನಾತಾನನ ಮಗನಾದ ಎಬೆದನೂ ಅವನೊಡನೆ 50 ಗಂಡಸರು.
7 De filiis Alam, Isaias filius Athaliae, et cum eo septuaginta viri.
ಏಲಾಮಿನವರಲ್ಲಿ ಅತಲ್ಯನ ಮಗನಾದ ಯೆಶಾಯನೂ ಅವನೊಡನೆ 70 ಗಂಡಸರು.
8 De filiis Saphatiae, Zebedia filius Michael, et cum eo octoginta viri.
ಶೆಫಟ್ಯನವರಲ್ಲಿ ಮಿಕಾಯೇಲನ ಮಗನಾದ ಜೆಬದ್ಯನೂ ಅವನೊಡನೆ 80 ಗಂಡಸರು.
9 De filiis Ioab, Obedia filius Iahiel, et cum eo ducenti decem et octo viri.
ಯೋವಾಬನವರಲ್ಲಿ ಯೆಹೀಯೇಲನ ಮಗನಾದ ಓಬದ್ಯನೂ ಅವನೊಡನೆ 218 ಗಂಡಸರು.
10 De filiis Selomith, filius Iosphiae, et cum eo centum sexaginta viri.
೧೦ಬಾನೀಯವರಲ್ಲಿ ಯೋಸಿಫ್ಯನ ಮಗನಾದ ಶಿಲೋಮೀತನೂ ಅವನೊಡನೆ 160 ಗಂಡಸರು.
11 De filiis Bebai, Zacharias filius Bebai, et cum eo vigintiocto viri.
೧೧ಬೇಬೈಯವರಲ್ಲಿ ಬೇಬೈಯ ಮಗನಾದ ಜೆಕರ್ಯನೂ ಅವನೊಡನೆ 28 ಗಂಡಸರು.
12 De filiis Azgad, Iohanan filius Eccetan, et cum eo centum et decem viri.
೧೨ಅಜ್ಗಾದನವರಲ್ಲಿ ಹಕ್ಕಾಟಾನನ ಮಗನಾದ ಯೋಹಾನಾನನೂ ಅವನೊಡನೆ 110 ಗಂಡಸರು.
13 De filiis Adonicam, qui erant novissimi: et haec nomina eorum: Elipheleth, et Iehiel, et Samaias, et cum eis sexaginta viri.
೧೩ಅದೋನೀಕಾಮಿನವರಲ್ಲಿ ಕಡೆಯವರಾದ ಎಲೀಫೆಲೆಟ್, ಎಮೀಯೇಲ್, ಶೆಮಾಯ ಎಂಬ ಹೆಸರುಳ್ಳವರೂ ಅವರೊಡನೆ 60 ಗಂಡಸರು.
14 De filii Begui, Uthai et Zachur, et cum eis septuaginta viri.
೧೪ಬಿಗ್ವೈಯವರಲ್ಲಿ ಜಕ್ಕೂರನ ಮಗನಾದ ಊತೈಯೂ ಅವನೊಡನೆ 70 ಗಂಡಸರು.
15 Congregavi autem eos ad fluvium, qui decurrit ad Ahava, et mansimus ibi tribus diebus: quaesivique in populo et in sacerdotibus de filiis Levi, et non inveni ibi.
೧೫ಅಹವಾ ಪ್ರಾಂತ್ಯದ ಕಡೆಗೆ ಹರಿಯುವ ನದಿಯ ಬಳಿಯಲ್ಲಿ ನಾನು ಇವರನ್ನು ಕೂಡಿಸಿದೆನು. ಅಲ್ಲಿ ಮೂರು ದಿನ ಪಾಳೆಯಮಾಡಿಕೂಂಡ ಮೇಲೆ ಸಾಧಾರಣ ಜನರೂ, ಯಾಜಕರೂ ಬಂದಿದ್ದಾರೆ, ಲೇವಿಯರಲ್ಲಿ ಯಾರೂ ಬರಲಿಲ್ಲ ಎಂದು ಕಂಡುಬಂತು.
16 Itaque misi Eliezer, et Ariel, et Semeiam, et Elnathan, et Iarib, et alterum Elnathan, et Nathan, et Zachariam, et Mosollam principes: et Ioiarib, et Elnathan sapientes.
೧೬ಆದುದರಿಂದ ನಾನು ಪ್ರಧಾನರಾದ ಎಲೀಯೆಜೆರ್, ಅರೀಯೇಲ್, ಶೆಮಾಯ, ಎಲ್ನಾತಾನ್, ಯಾರೀಬ್, ಎಲ್ನಾತಾನ್, ನಾತಾನ್, ಜೆಕರ್ಯ, ಮೆಷುಲ್ಲಾಮ್ ಇವರನ್ನೂ, ಪಂಡಿತರಾದ ಯೋಯಾರೀಬ್ ಎಲ್ನಾತಾನ್ ಇವರನ್ನೂ ಕರೆಯಿಸಿದೆನು.
17 Et misi eos ad Eddo, qui est primus in Casphiae loco, et posui in ore eorum verba, quae loquerentur ad Eddo, et fratres eius Nathinaeos in loco Casphiae ut adducerent nobis ministros domus Dei nostri.
೧೭ಅವರ ತರುವಾಯ ನಾನು ಕಾಸಿಫ್ಯ ಊರಿನ ಮುಖ್ಯಸ್ಥನಾದ ಇದ್ದೋವಿನ ಬಳಿಗೆ ಹೋಗಬೇಕೆಂದು ಅಪ್ಪಣೆಮಾಡಿ, ನಮ್ಮ ಬಳಿಗೆ ದೇವಾಲಯ ಸೇವಕರನ್ನು ಕಳುಹಿಸುವ ಹಾಗೆ, ಅವರು ಇದ್ದೋವಿಗೂ ಕಾಸಿಫ್ಯ ಊರಿನಲ್ಲಿ ವಾಸಿಸುತ್ತಿದ್ದ ಅವನ ಸಹೋದರರಾದ ದೇವಸ್ಥಾನದ ಪರಿಚಾರಕರಿಗೂ ಹೇಳತಕ್ಕ ಮಾತುಗಳನ್ನು ಹೇಳಿಕೊಟ್ಟೆನು. ಆ ಊರಿನವರು ದೇವದಾಸವರ್ಗದವರಷ್ಟೆ.
18 Et adduxerunt nobis per manum Dei nostri bonam super nos, virum doctissimum de filiis Moholi filii Levi filii Israel, et Sarabiam et filios eius et fratres eius decem et octo,
೧೮ನಮ್ಮ ದೇವರ ಕೃಪಾಶೀರ್ವಾದ ನಮಗೆ ದೊರೆಕ್ಕಿದ್ದರಿಂದ ಅವರು ಇಸ್ರಾಯೇಲನ ಮಗನಾದ ಲೇವಿಯ ಕುಲದ ಮಹ್ಲೀ ಸಂತಾನದವರಲ್ಲಿ ಈಸ್ಸೆಕೆಲನನ್ನೂ, ಶೇರೇಬ್ಯನನ್ನೂ ಅವನ ಪುತ್ರಭ್ರಾತೃಗಳಲ್ಲಿ ಹದಿನೆಂಟು ಜನರನ್ನೂ,
19 et Hasabiam, et cum eo Isaiam de filiis Merari, fratresque eius, et filios eius viginti:
೧೯ಮೆರಾರೀಯರಲ್ಲಿ ಹಷಬ್ಯನನ್ನೂ ಅವನೊಡನೆ ಯೆಶಾಯನನ್ನೂ, ಅವರ ಪುತ್ರ ಸಹೋದರರಲ್ಲಿ ಇಪ್ಪತ್ತು ಜನರು,
20 et de Nathinaeis, quos dederat David et principes ad ministeria Levitarum, Nathinaeos ducentos viginti: omnes hi suis nominibus vocabantur.
೨೦ದಾವೀದನೂ ಅವನ ಮುಖ್ಯಸ್ಥರನ್ನು ಲೇವಿಯರೊಂದಿಗೆ ಸೇವೆಗಾಗಿ ಕೊಟ್ಟು ದೇವಸ್ಥಾನ ಪರಿಚಾರಕರಲ್ಲಿ ಇನ್ನೂರಿಪ್ಪತ್ತು ಜನರನ್ನೂ ನಮ್ಮ ಬಳಿಗೆ ಕರೆದುಕೊಂಡು ಬಂದರು. ಇವರೆಲ್ಲರ ಹೆಸರುಗಳು ಪಟ್ಟಿಯಲ್ಲಿದ್ದವು.
21 Et praedicavi ibi ieiunium iuxta fluvium Ahava ut affligeremur coram Domino Deo nostro, et peteremus ab eo viam rectam nobis et filiis nostris, universaeque substantiae nostrae.
೨೧ಆ ಮೇಲೆ ಆ ಅಹವಾ ನದಿಯ ಬಳಿಯಲ್ಲಿ ನಾವು ಉಪವಾಸದಿಂದಿದ್ದು, ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸಿಕೊಂಡು, ನಮಗೂ ನಮ್ಮ ಮನೆಯವರಿಗೂ ನಮ್ಮ ಎಲ್ಲಾ ಆಸ್ತಿಗೂ ಪ್ರಯಾಣದಲ್ಲಿ ಶುಭವನ್ನು ಬೇಡಿಕೊಳ್ಳಬೇಕೆಂದು ಉಪವಾಸವನ್ನು ಪ್ರಕಟಿಸಿದನು.
22 Erubui enim petere a rege auxilium et equites, qui defenderent nos ab inimico in via: quia dixeramus regi: Manus Dei nostri est super omnes, qui quaerunt eum in bonitate: et imperium eius et fortitudo eius, et furor super omnes, qui derelinquunt eum.
೨೨ನಮ್ಮ ದೇವರ ಹಸ್ತವು ಆತನ ಎಲ್ಲಾ ಶರಣಾರ್ಥಿಗಳನ್ನೂ ಪಾಲಿಸುವುದು; ಆತನನ್ನು ತೊರೆದುಬಿಟ್ಟವರೆಲ್ಲರೂ ಆತನ ಉಗ್ರವಾದ ಕೋಪಕ್ಕೆ ಗುರಿಯಾಗುವರು. ದಾರಿಯಲ್ಲಿ ನಮ್ಮನ್ನು ಶತ್ರುಗಳಿಂದ ರಕ್ಷಿಸುವುದಕ್ಕೋಸ್ಕರ ಸೈನ್ಯವನ್ನೂ, ಅಶ್ವಬಲವನ್ನೂ ಕೊಡಲು ಅರಸನಿಂದ ಸಹಾಯ ಕೇಳಲು ನಾಚಿಕೊಂಡಿದ್ದೆನು.
23 Ieiunavimus autem, et rogavimus Deum nostrum per hoc: et evenit nobis prospere.
೨೩ಆದುದರಿಂದ ನಾವು ಉಪವಾಸಮಾಡಿ ದೇವರನ್ನು ಪ್ರಾರ್ಥಿಸಲು ಆತನು ನಮಗೆ ಪ್ರಸನ್ನನಾದನು.
24 Et separavi de principibus Sacerdotum duodecim, Sarabiam, et Hasabiam, et cum eis de fratribus eorum decem.
೨೪ಅನಂತರ ನಾನು ಯಾಜಕರ ಮುಖ್ಯಸ್ಥರಲ್ಲಿ ಶೇರೇಬ್ಯ, ಹಷಬ್ಯ ಇವರ ಸಹೋದರರಲ್ಲಿ ಹತ್ತು ಜನರನ್ನೂ ಆರಿಸಿಕೊಂಡು ಅರಸನಿಂದಲೂ, ಅವನ ಮಂತ್ರಿಗಳಿಂದಲೂ, ಸರದಾರರಿಂದಲೂ ಮತ್ತು
25 appendique eis argentum et aurum, et vasa consecrata domus Dei nostri, quae obtulerat rex et consiliatores eius, et principes eius, universusque Israel eorum, qui inventi fuerant:
೨೫ಇಸ್ರಾಯೇಲರಿಂದಲೂ ನಮ್ಮ ದೇವರ ಆಲಯಕ್ಕೋಸ್ಕರ ಕಾಣಿಕೆಯಾಗಿ ಕೊಡಲ್ಪಟ್ಟ ಬೆಳ್ಳಿ ಬಂಗಾರವನ್ನೂ, ಸಾಮಾನುಗಳನ್ನೂ ತೂಕಮಾಡಿ ಅವರಿಗೆ ಒಪ್ಪಿಸಿದೆನು.
26 et appendi in manibus eorum argenti talenta sexcenta quinquaginta, et vasa argentea centum, auri centum talenta:
೨೬ಅವರ ಕೈಯಲ್ಲಿ ಕೊಟ್ಟ ಬೆಲೆಬಾಳುವ ಸಾಮಾನುಗಳ ತೂಕ: ಬೆಳ್ಳಿಯು ಆರುನೂರೈವತ್ತು ತಲಾಂತು, ಬಂಗಾರವು ನೂರು ತಲಾಂತು,
27 et crateres aureos viginti, qui habebant solidos millenos, et vasa aeris fulgentis optimi duo, pulchra, ut aurum.
೨೭ಬಂಗಾರದ ಇಪ್ಪತ್ತು ಬಟ್ಟಲುಗಳು ಪ್ರತಿಯೊಂದೂ ಸಾವಿರ ಪವನು; ಇವುಗಳಲ್ಲದೆ ಶ್ರೇಷ್ಠವಾದ ಶುಭ್ರತಾಮ್ರದ ಎರಡು ಪಾತ್ರೆಗಳಿದ್ದವು. ಅವು ಬಂಗಾರದಷ್ಟು ಬೆಲೆಯುಳ್ಳವುಗಳು.
28 Et dixi eis: Vos sancti Domini, et vasa sancta, et argentum et aurum, quod sponte oblatum est Domino Deo patrum nostrorum:
೨೮ನಾನು ಅವರಿಗೆ, “ನೀವು ಯೆಹೋವನ ಸ್ವಕೀಯರು; ಆ ಪಾತ್ರೆಗಳೂ, ದೇವರ ವಸ್ತುಗಳು; ಆ ಬೆಳ್ಳಿಬಂಗಾರವೂ ನಿಮ್ಮ ಪೂರ್ವಿಕರ ದೇವರಾದ ಯೆಹೋವನಿಗೋಸ್ಕರ ಸಮರ್ಪಿತವಾದ ಕಾಣಿಕೆಯು.
29 vigilate et custodite, donec appendatis coram principibus Sacerdotum, et Levitarum, et ducibus familiarum Israel in Ierusalem, in thesaurum domus Domini.
೨೯ಆದುದರಿಂದ ನೀವು ಜಾಗರೂಕರಾಗಿದ್ದು ಯೆರೂಸಲೇಮಿನಲ್ಲಿರುವ ಯಾಜಕರ ಮತ್ತು ಲೇವಿಯರ ಪ್ರಧಾನರ ಮುಂದೆಯೂ ಇವುಗಳನ್ನು ತೂಕಮಾಡಿ ಯೆಹೋವನ ಆಲಯದ ಕೊಠಡಿಗಳಲ್ಲಿ ಇಡುವವರೆಗೂ ಕಾಯಿರಿ” ಎಂದು ಹೇಳಿದನು.
30 Susceperunt autem Sacerdotes et Levitae pondus argenti, et auri, et vasorum ut deferrent Ierusalem in domum Dei nostri.
೩೦ಆ ಯಾಜಕರೂ ಮತ್ತು ಲೇವಿಯರೂ, ಯೆರೂಸಲೇಮಿನ ದೇವಾಲಯಕ್ಕೆ ತಲುಪಿಸುವುದಕ್ಕೋಸ್ಕರ ಬೆಳ್ಳಿಬಂಗಾರವನ್ನೂ, ಉಪಕರಣಗಳನ್ನೂ ತೂಕಮಾಡಿಸಿ ತಮ್ಮ ವಶದಲ್ಲಿಟ್ಟುಕೊಂಡರು.
31 Promovimus ergo a flumine Ahava duodecimo die mensis primi ut pergeremus Ierusalem: et manus Dei nostri fuit super nos, et liberavit nos de manu inimici et insidiatoris in via.
೩೧ನಾವು ಮೊದಲನೆಯ ತಿಂಗಳಿನ ಹನ್ನೆರಡನೆಯ ದಿನದಲ್ಲಿ ಅಹವಾ ನದಿಯನ್ನು ಬಿಟ್ಟು ಯೆರೂಸಲೇಮಿಗೆ ಹೊರಟೆವು. ನಮ್ಮ ದೇವರ ಹಸ್ತವು ನಮ್ಮನ್ನು ಪಾಲಿಸುತ್ತಾ ಇತ್ತು. ಆತನು ಶತ್ರುಗಳ ಮತ್ತು ದಾರಿಯಲ್ಲಿ ಹೊಂಚುಹಾಕುವವರ ಕೈಗೆ ಸಿಕ್ಕದಂತೆ ನಮ್ಮನ್ನು ತಪ್ಪಿಸಿದನು.
32 Et venimus Ierusalem, et mansimus ibi tribus diebus.
೩೨ನಾವು ಯೆರೂಸಲೇಮನ್ನು ಸೇರಿ ಮೂರು ದಿನ ವಿಶ್ರಮಿಸಿಕೊಂಡೆವು.
33 Die autem quarta appensum est argentum, et aurum, et vasa in domo Dei nostri per manum Meremoth filii Uriae Sacerdotis, et cum eo Eleazar filius Phinees, cumque eis Iozabed filius Iosue, et Noadaia filius Bennoi Levitae,
೩೩ನಾಲ್ಕನೆಯ ದಿನ ನಮ್ಮ ದೇವರ ಆಲಯದಲ್ಲಿ ಊರೀಯನ ಮಗನಾದ ಮೆರೇಮೋತ್ ಎಂಬ ಯಾಜಕನಿಗೆ ಬೆಳ್ಳಿಬಂಗಾರವನ್ನೂ ಉಪಕರಣಗಳನ್ನೂ ತೂಕಮಾಡಿ ಒಂದೊಂದಾಗಿ ಎಣಿಸಿಕೊಟ್ಟೆವು. ಫೀನೆಹಾಸನ ವಂಶದವನಾದ ಎಲ್ಲಾಜಾರ್, ಯೇಷೂವನ ಮಗನಾದ ಯೋಜಾಬಾದ್, ಬಿನ್ನೂಯನ ಮಗನಾದ ನೋವದ್ಯ ಎಂಬ ಲೇವಿಯರು ಅವನ ಜೊತೆಯಲ್ಲಿದ್ದರು.
34 iuxta numerum et pondus omnium: descriptumque est omne pondus in tempore illo.
೩೪ಆಗಲೇ ಎಲ್ಲವುಗಳ ತೂಕವು ಲಿಖಿತವಾಯಿತು.
35 Sed et qui venerant de captivitate filii transmigrationis, obtulerunt holocaustomata Deo Israel, vitulos duodecim pro omni populo Israel, arietes nonaginta sex, agnos septuaginta septem, hircos pro peccato, duodecim: omnia in holocaustum Domino.
೩೫ದೇಶಾಂತರದ ಸೆರೆಯಿಂದ ಹಿಂತಿರುಗಿ ಬಂದವರು ಇಸ್ರಾಯೇಲರ ದೇವರಿಗೆ ತೊಂಭತ್ತಾರು ಟಗರುಗಳನ್ನೂ, ಎಪ್ಪತ್ತೇಳು ಕುರಿಮರಿಗಳನ್ನೂ, ಸಮಸ್ತ ಇಸ್ರಾಯೇಲರ ನಿಮಿತ್ತವಾಗಿ ಹನ್ನೆರಡು ಹೋತಗಳನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದರು. ಇವೆಲ್ಲಾ ಯೆಹೋವನಿಗೆ ಸರ್ವಾಂಗಹೋಮವೇ.
36 Dederunt autem edicta regis satrapis, qui erant de conspectu regis et ducibus trans Flumen, et elevaverunt populum et domum Dei.
೩೬ಆ ಮೇಲೆ ಅವರು ರಾಜಶಾಸನವನ್ನು ರಾಜೋದ್ಯೋಗಸ್ಥರಿಗೂ, ಹೊಳೆಯಾಚೆಯ ಪ್ರದೇಶಾಧಿಪತಿಗಳಿಗೂ ಒಪ್ಪಿಸಿದರು. ಇವರು ಜನರಿಗೂ ಮತ್ತು ದೇವಾಲಯಕ್ಕೂ ಸಹಾಯಮಾಡಿದರು.

< Esdræ 8 >