< Osee Propheta 5 >
1 Audite hoc sacerdotes, et attendite domus Israel, et domus regis auscultate: quia vobis iudicium est, quoniam laqueus facti estis speculationi, et sicut rete expansum super Thabor.
೧ಯಾಜಕರೇ, ಇದನ್ನು ಕೇಳಿರಿ, ಇಸ್ರಾಯೇಲ್ ಕುಲದವರೇ, ಆಲಿಸಿರಿ; ರಾಜವಂಶದವರೇ, ಕಿವಿಗೊಡಿರಿ; ನೀವು ಮಿಚ್ಪದಲ್ಲಿ ಉರುಲಾಗಿಯೂ, ತಾಬೋರಿನಲ್ಲಿ ಬಲೆಯಾಗಿಯೂ ಇದ್ದ ಕಾರಣ ನಿಮಗೆ ನ್ಯಾಯತೀರ್ಪು ಬಂದಿದೆ.
2 Et victimas declinastis in profundum: et ego eruditor omnium eorum.
೨ನನಗೆ ತಿರುಗಿಬಿದ್ದವರು ಅಗಾಧವಾದ ಕೊಲೆಯಲ್ಲಿ ಮಗ್ನರಾಗಿದ್ದಾರೆ; ನಾನೇ ಅವರೆಲ್ಲರನ್ನೂ ಶಿಕ್ಷಿಸುವೆನು.
3 Ego scio Ephraim, et Israel non est absconditus a me: quia nunc fornicatus est Ephraim, contaminatus est Israel.
೩ಎಫ್ರಾಯೀಮನ್ನು ಬಲ್ಲೆ, ಇಸ್ರಾಯೇಲ್ ನನಗೆ ಮರೆಯಾಗಿಲ್ಲ; ಎಫ್ರಾಯೀಮೇ, ನೀನೀಗ ವ್ಯಭಿಚಾರ ಮಾಡಿದ್ದಿ, ಇಸ್ರಾಯೇಲ್ ಹೊಲೆಯಾಗಿದೆ.
4 Non dabunt cogitationes suas ut revertantur ad Deum suum: quia spiritus fornicationum in medio eorum, et Dominum non cognoverunt.
೪ಅವರು ತಮ್ಮ ದೇವರ ಕಡೆಗೆ ತಿರುಗಿಕೊಳ್ಳಲು ಅವುಗಳ ದುಷ್ಕೃತ್ಯಗಳು ಅವರನ್ನು ಬಿಡುವುದಿಲ್ಲ; ವ್ಯಭಿಚಾರದ ಸ್ವಭಾವವು ಅವುಗಳಲ್ಲಿ ನೆಲೆಗೊಂಡಿದೆ, ಯೆಹೋವನನ್ನು ತಿಳಿದುಕೊಂಡಿಲ್ಲ.
5 Et respondebit arrogantia Israel in facie eius: et Israel, et Ephraim ruent in iniquitate sua, ruet etiam Iuda cum eis.
೫ಇಸ್ರಾಯೇಲಿಗೆ ಅದರ ಹೆಮ್ಮೆಯೇ ವಿರುದ್ಧ ಸಾಕ್ಷಿಯಾಗಿದೆ; ಇಸ್ರಾಯೇಲೂ ಮತ್ತು ಎಫ್ರಾಯೀಮೂ ತಮ್ಮ ದುರ್ಮಾರ್ಗದಲ್ಲಿ ಎಡವಿ ಬೀಳುವವು; ಯೆಹೂದವೂ ಅವುಗಳೊಂದಿಗೆ ಬೀಳುವುದು.
6 In gregibus suis, et in armentis suis vadent ad quaerendum Dominum, et non invenient: ablatus est ab eis.
೬ಅವು ತಮ್ಮ ದನ ಮತ್ತು ಕುರಿಗಳ ಸಂಗಡ ಯೆಹೋವನಿಗೆ ಶರಣುಹೊಗಲು ಹೊರಡುವವು; ಆತನು ಸಿಕ್ಕುವುದಿಲ್ಲ, ಅವುಗಳಿಂದ ಮರೆಯಾಗಿದ್ದಾನೆ.
7 In Dominum praevaricati sunt, quia filios alienos genuerunt: nunc devorabit eos mensis cum partibus suis.
೭ಅವು ಯೆಹೋವನ ಮಕ್ಕಳಲ್ಲದ ಮಕ್ಕಳನ್ನು ಪಡೆದು ಆತನಿಗೆ ದ್ರೋಹಮಾಡಿವೆ; ಅವುಗಳನ್ನೂ, ಅವುಗಳ ಭೂಸ್ವಾಸ್ತ್ಯಗಳನ್ನೂ ಈ ಅಮಾವಾಸ್ಯೆಯು ನುಂಗಿಬಿಡುವುದು.
8 Clangite buccina in Gabaa, tuba in Rama: ululate in Bethaven, post tergum tuum Beniamin.
೮ಗಿಬ್ಯದಲ್ಲಿ ತುತ್ತೂರಿಯನ್ನು ಊದಿರಿ, ರಾಮದಲ್ಲಿ ಕೊಂಬು ಕೂಗಲಿ, ಬೇತ್ ಅವೆನಿನಲ್ಲಿ ಆರ್ಭಟಿಸಿರಿ, ಬೆನ್ಯಾಮೀನೇ, ಹಿಂದೆ ನೋಡು!
9 Ephraim in desolatione erit in die correptionis: in tribubus Israel ostendi fidem.
೯ದಂಡನೆಯ ದಿನದಲ್ಲಿ ಎಫ್ರಾಯೀಮು ಹಾಳಾಗುವುದು; ಇಸ್ರಾಯೇಲ್ ಕುಲಗಳ ಭವಿಷ್ಯತ್ತಿನ ನಿಶ್ಚಯವನ್ನು ತಿಳಿಯಪಡಿಸಿದ್ದೇನೆ.
10 Facti sunt principes Iuda quasi assumentes terminum: super eos effundam quasi aquam iram meam.
೧೦ಯೆಹೂದದ ಮುಖಂಡರು ಮೇರೆಯನ್ನು ಒತ್ತುವವರಂತಿದ್ದಾರೆ; ಅವರ ಮೇಲೆ ನನ್ನ ರೌದ್ರವನ್ನು ನೀರಿನ ಹಾಗೆ ಹೊಯ್ದುಬಿಡುವೆನು.
11 Calumniam patiens est Ephraim, fractus iudicio: quoniam coepit abire post sordes.
೧೧ಎಫ್ರಾಯೀಮು ವ್ಯರ್ಥಾಚಾರಗಳನ್ನು ಅನುಸರಿಸಲು ಮನಸ್ಸುಮಾಡಿದ ಕಾರಣ, ಅದು ದೇವರ ನ್ಯಾಯತೀರ್ಪಿಗೆ ಗುರಿಯಾಗಿ ಹಿಂಸಿಸಲ್ಪಟ್ಟಿದೆ, ಜಜ್ಜಲ್ಪಟ್ಟಿದೆ.
12 Et ego quasi tinea Ephraim: et quasi putredo domui Iuda.
೧೨ನಾನು ಎಫ್ರಾಯೀಮಿಗೆ ನುಸಿ, ಯೆಹೂದ ಕುಲಕ್ಕೆ ಒಣ ಕುಂಟೆಯಂತಿರುವೆನು.
13 Et vidit Ephraim languorem suum, et Iuda vinculum suum: et abiit Ephraim ad Assur, et misit ad regem Ultorem: et ipse non poterit sanare vos, nec solvere poterit a vobis vinculum.
೧೩ಹೀಗಿರಲು ಎಫ್ರಾಯೀಮು ತಾನು ರೋಗಿಯೆಂದು ತಿಳುಕೊಂಡಿತು, ಯೆಹೂದವು ತನ್ನ ವ್ರಣವನ್ನು ನೋಡಿಕೊಂಡಿತು; ಆಗ ಎಫ್ರಾಯೀಮು ಅಶ್ಶೂರದ ಕಡೆಗೆ ತಿರುಗಿಕೊಂಡು ಜಗಳಗಂಟ ಮಹಾರಾಜನ ಬಳಿಗೆ ದೂತರನ್ನು ಕಳುಹಿಸಿತು; ಆದರೆ ಅವನು ನಿಮ್ಮನ್ನು ಸ್ವಸ್ಥಮಾಡಲಾರನು, ನಿಮ್ಮ ಗಾಯವನ್ನು ಗುಣಪಡಿಸಲಾರನು.
14 Quoniam ego quasi leaena Ephraim, et quasi catulus leonis domui Iuda: ego ego capiam, et vadam: tollam, et non est qui eruat.
೧೪ನಾನು ಎಫ್ರಾಯೀಮಿಗೆ ಸಿಂಹವೂ, ಯೆಹೂದ ಕುಲಕ್ಕೆ ಪ್ರಾಯದ ಸಿಂಹವೂ ಆಗುವೆನು; ನಾನೇ ಸೀಳಿಬಿಟ್ಟು ಹೋಗುವೆನು, ನಾನು ಎತ್ತಿಕೊಂಡು ಹೋಗಲು ಯಾರೂ ಬಿಡಿಸರು.
15 Vadens revertar ad locum meum: donec deficiatis, et quaeratis faciem meam.
೧೫ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ, ನನ್ನ ಪ್ರಸನ್ನತೆಯನ್ನು ಬೇಡಿಕೊಳ್ಳುವ ತನಕ, ನಾನು ನನ್ನ ವಾಸಸ್ಥಾನಕ್ಕೆ ಹಿಂದಿರುಗಿ ಹೋಗುವೆನು; ಅವರು ಇಕ್ಕಟ್ಟಿಗೆ ಸಿಕ್ಕಿದ ಕೂಡಲೆ ನನ್ನನ್ನು ಆಶ್ರಯಿಸುವರು.