< Psalmorum 125 >
1 Canticum graduum. Qui confidunt in Domino, sicut mons Sion: non commovebitur in aeternum, qui habitat
೧ಯಾತ್ರಾಗೀತೆ. ಯೆಹೋವನಲ್ಲಿ ಭರವಸೆ ಇಡುವವರು, ಚೀಯೋನ್ ಪರ್ವತದ ಹಾಗೆ ಇದ್ದಾರೆ; ಅದು ಕದಲುವುದಿಲ್ಲ, ಸದಾ ಸ್ಥಿರವಾಗಿರುತ್ತದೆ.
2 in Ierusalem. Montes in circuitu eius: et Dominus in circuitu populi sui, ex hoc nunc et usque in saeculum.
೨ಪರ್ವತಗಳು ಯೆರೂಸಲೇಮಿನ ಸುತ್ತಲೂ ಹೇಗೋ ಹಾಗೆಯೇ, ಯೆಹೋವನು ಈಗಿನಿಂದ ಸದಾಕಾಲವೂ ತನ್ನ ಜನರ ಸುತ್ತಲೂ ಇರುವನು.
3 Quia non relinquet Dominus virgam peccatorum super sortem iustorum: ut non extendant iusti ad iniquitatem manus suas.
೩ದುಷ್ಟರ ದಂಡಾಧಿಕಾರವು ನೀತಿವಂತರ ಸ್ವತ್ತಿನಲ್ಲಿ ಉಳಿಯುವುದೇ ಇಲ್ಲ; ಉಳಿದರೆ ನೀತಿವಂತರೂ ಅಕ್ರಮಕ್ಕೆ ಕೈ ಹಾಕಬಹುದು.
4 Benefac Domine bonis, et rectis corde.
೪ಯೆಹೋವನೇ, ಒಳ್ಳೆಯವರೂ, ಯಥಾರ್ಥಚಿತ್ತರೂ, ಆಗಿರುವವರಿಗೆ ಉಪಕಾರಮಾಡು.
5 Declinantes autem in obligationes, adducet Dominus cum operantibus iniquitatem: pax super Israel.
೫ಯೆಹೋವನು ಡೊಂಕುದಾರಿ ಹಿಡಿದವರನ್ನು, ಪಾತಕಿಗಳು ಹೋಗುವ ಸ್ಥಳಕ್ಕೆ ನಡೆಸುವನು. ಇಸ್ರಾಯೇಲರಿಗೆ ಶುಭವುಂಟಾಗಲಿ.