< Hiezechielis Prophetæ 27 >
1 et factum est verbum Domini ad me dicens
೧ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು,
2 tu ergo fili hominis adsume super Tyrum lamentum
೨“ನರಪುತ್ರನೇ, ನೀನು ತೂರಿನ ವಿಷಯದಲ್ಲಿ ಶೋಕ ಗೀತೆಯನ್ನೆತ್ತು, ಅದಕ್ಕೆ ಹೀಗೆ ನುಡಿ,
3 et dices Tyro quae habitat in introitu maris negotiationi populorum ad insulas multas haec dicit Dominus Deus o Tyre tu dixisti perfecti decoris ego sum
೩‘ಸಮುದ್ರ ದ್ವಾರದಲ್ಲಿ ವಾಸಿಸುತ್ತಾ, ಜನಾಂಗಗಳಿಗಾಗಿ ಅನೇಕ ದ್ವೀಪಗಳೊಂದಿಗೆ ವ್ಯಾಪಾರ ಮಾಡುವ ನಗರಿಯೇ!’ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ತೂರೇ, ‘ನಾನು ಪರಿಪೂರ್ಣ ಸುಂದರಿಯಾಗಿದ್ದೇನೆ’ ಎಂದು ನೀನು ಅಂದುಕೊಂಡಿದ್ದೀ!
4 et in corde maris sita finitimi tui qui te aedificaverunt impleverunt decorem tuum
೪ನಿನ್ನ ನೆಲೆಯು ಸಮುದ್ರದ ಮಧ್ಯವೇ; ನಿನ್ನನ್ನು ಕಟ್ಟಿದವರು ನಿನ್ನ ಸೌಂದರ್ಯವನ್ನು ಪರಿಪೂರ್ಣಗೊಳಿಸಿದರು.
5 abietibus de Sanir extruxerunt te cum omnibus tabulatis maris cedrum de Libano tulerunt ut facerent tibi malum
೫ಸೆನೀರಿನ ತುರಾಯಿ ಮರದಿಂದ ನಿನ್ನ ಹಲಗೆಗಳನ್ನು ಮಾಡುವುದಕ್ಕೆ ಮತ್ತು ನಿನ್ನ ಸ್ತಂಭವನ್ನು ರಚಿಸುವುದಕ್ಕೆ ಲೆಬನೋನಿನಿಂದ ದೇವದಾರು ಮರವನ್ನು ತಂದರು.
6 quercus de Basan dolaverunt in remos tuos transtra tua fecerunt tibi ex ebore indico et praetoriola de insulis Italiae
೬ನಿನ್ನ ಹುಟ್ಟುಗೋಲನ್ನು ಬಾಷಾನಿನ ಓಕ್ ಮರದಿಂದ ಮಾಡಿ, ಕಿತ್ತೀಮ್ ದ್ವೀಪದ ಹಲಿಗೆಯಿಂದ ನಿನ್ನ ಹಡಗಿನ ಮೇಲ್ಮಾಳಿಗೆಯನ್ನು ಕಟ್ಟಿ, ಅದನ್ನು ದಂತದಿಂದ ಕೆತ್ತಿದ್ದಾರೆ.
7 byssus varia de Aegypto texta est tibi in velum ut poneretur in malo hyacinthus et purpura de insulis Elisa facta sunt operimentum tuum
೭ನಿನ್ನ ಹಾಯಿಯು ನಿನಗೆ ಧ್ವಜವಾಗಲೆಂದು ಅದನ್ನು ಐಗುಪ್ತದ ಕಸೂತಿಯ ನಾರು ಬಟ್ಟೆಯಿಂದ ಮಾಡಿದರು. ನಿನ್ನ ಮೇಲ್ಕಟ್ಟನ್ನು ಎಲೀಷ ಕರಾವಳಿಯ ಧೂಮ್ರ ರಕ್ತವರ್ಣಗಳಿಂದ ಚಿತ್ರಿತವಾಗಿದೆ.
8 habitatores Sidonis et Aradii fuerunt remiges tui sapientes tui Tyre facti sunt gubernatores tui
೮ಚೀದೋನಿನ, ಅರ್ವಾದಿನ ನಿವಾಸಿಗಳು ನಿನಗೆ ಹುಟ್ಟು ಹಾಕುವರು; ತೂರೇ, ನಿನ್ನಲ್ಲಿನ ವಿವೇಕಿಗಳು ನಿನ್ನ ನಾವಿಕರು.
9 senes Bibli et prudentes eius habuerunt nautas ad ministerium variae supellectilis tuae omnes naves maris et nautae earum fuerunt in populo negotiationis tuae
೯ನಿನ್ನಲ್ಲಿ ಸೇರಿಕೊಂಡಿದ್ದ ಗೇಬಾಲಿನ ಹಿರಿಯರೂ ಮತ್ತು ಜಾಣರೂ ನಿನ್ನ ಬಿರುಕುಗಳನ್ನು ಮುಚ್ಚಿದ್ದಾರೆ. ಸಮುದ್ರದ ಸಕಲ ನಾವೆಗಳ ಮತ್ತು ನಾವಿಕರ ಸಮೇತ ನಿನ್ನ ಬಳಿಯಲ್ಲಿದ್ದು, ನಿನಗೆ ಸರಕುಗಳನ್ನು ತಂದೊಪ್ಪಿಸಿದ್ದಾರೆ.
10 Persae et Lydi et Lybies erant in exercitu tuo viri bellatores tui clypeum et galeam suspenderunt in te pro ornatu tuo
೧೦ಪಾರಸಿಯರೂ, ಲೂದ್ಯರೂ, ಪೂಟ್ಯರೂ ನಿನ್ನ ಸೈನ್ಯಾಧಿಕಾರಿಗಳಾಗಿ ನಿನ್ನ ಸೈನ್ಯದಲ್ಲಿದ್ದರು. ಗುರಾಣಿಯನ್ನು ಮತ್ತು ಶಿರಸ್ತ್ರಾಣವನ್ನು ನಿನ್ನಲ್ಲಿ ತೂಗಿಸಿದರು. ಇವರು ನಿನಗೆ ಮಹತ್ತನ್ನು ಕೊಟ್ಟರು!
11 filii Aradii cum exercitu tuo erant super muros tuos in circuitu sed et Pigmei qui erant in turribus tuis faretras suas suspenderunt in muris tuis per gyrum ipsi conpleverunt pulchritudinem tuam
೧೧ಅರ್ವಾದಿನವರೂ ಮತ್ತು ಹೆಲೆಕರು ನಿನ್ನ ಸೈನಿಕರ ಸಂಗಡ ನಿನ್ನ ಗೋಡೆಗಳ ಸುತ್ತಲೂ ನಿಂತಿದ್ದರು. ಗಮ್ಮಾದ್ಯರು ನಿನ್ನ ಕೊತ್ತಲುಗಳಲ್ಲಿ ಕಾವಲಾಗಿದ್ದರು. ಎಲ್ಲರೂ ತಮ್ಮ ಗುರಾಣಿಗಳನ್ನು ಸುತ್ತಮುತ್ತಲು ನಿನ್ನ ಗೋಡೆಗಳ ಮೇಲೆ ನೇತುಹಾಕಿ, ನಿನ್ನ ಸೌಂದರ್ಯವನ್ನು ಪರಿಪೂರ್ಣಗೊಳಿಸಿದರು!
12 Carthaginienses negotiatores tui a multitudine cunctarum divitiarum argento ferro stagno plumboque repleverunt nundinas tuas
೧೨“ಅಪಾರವಾದ ಬಗೆಬಗೆಯ ಆಸ್ತಿಯು ನಿನಗೆ ಬೇಕಾಗಿದ್ದರಿಂದ ತಾರ್ಷೀಷಿನವರು ನಿನ್ನ ಕಡೆಯ ವರ್ತಕರಾಗಿ ಬೆಳ್ಳಿ, ಕಬ್ಬಿಣ, ತವರ ಮತ್ತು ಸೀಸಗಳನ್ನು ಒದಗಿಸುತ್ತಿದ್ದರು.
13 Graecia Thubal et Mosoch ipsi institores tui mancipia et vasa aerea adduxerunt populo tuo
೧೩ಯಾವಾನ್, ತೂಬಲ್, ಮೆಷೆಕ್ ಇವರು ನಿನ್ನ ವರ್ತಕರಾಗಿದ್ದರು. ಗುಲಾಮರನ್ನೂ ಮತ್ತು ತಾಮ್ರದ ಪಾತ್ರೆಗಳನ್ನೂ ನಿನಗೆ ಸರಬರಾಜು ಮಾಡುತ್ತಿದ್ದರು.
14 de domo Thogorma equos et equites et mulos adduxerunt ad forum tuum
೧೪“ತೋಗರ್ಮ ವಂಶದವರು ಕುದುರೆಗಳಿಂದಲೂ, ಕುದುರೆ ಸವಾರಿಗಳಿಂದಲೂ, ಹೇಸರಗತ್ತೆಗಳಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು.
15 filii Dadan negotiatores tui insulae multae negotiatio manus tuae dentes eburneos et hebeninos commutaverunt in pretio tuo
೧೫ದೇದಾನಿನವರು ನಿನ್ನ ವರ್ತಕರಾಗಿದ್ದರು; ಅನೇಕ ದ್ವೀಪಗಳು ನಿನ್ನ ಕೈಕೆಳಗೆ ವ್ಯಾಪಾರವನ್ನು ನಡೆಸಿದವು; ಅವರು ದಂತ ಕೊಂಬು ಮತ್ತು, ಕಪ್ಪುಮರಗಳನ್ನೂ ನಿನಗೆ ಕಪ್ಪವಾಗಿ ಸಲ್ಲಿಸುತ್ತಿದ್ದರು.
16 Syrus negotiator tuus propter multitudinem operum tuorum gemmam purpuram et scutulata et byssum et sericum et chodchod proposuerunt in mercatu tuo
೧೬“ನಿನ್ನ ಕೈಕೆಲಸದ ವಸ್ತುಗಳು ಅಪಾರವಾಗಿದ್ದುದರಿಂದ ಅರಾಮಿನವರೂ ನಿನ್ನವರಾಗಿ ವ್ಯಾಪಾರಮಾಡಿ, ಕೆಂಪರಲು, ರಕ್ತಾಂಬರ, ಕಸೂತಿಯ ವಸ್ತ್ರ, ನಾರುಬಟ್ಟೆ, ಹವಳ, ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿದರು.
17 Iuda et terra Israhel ipsi institores tui in frumento primo balsamum et mel et oleum et resinam proposuerunt in nundinis tuis
೧೭“ಯೆಹೂದ್ಯರೂ, ಇಸ್ರಾಯೇಲ್ ದೇಶದವರೂ ನಿನ್ನ ಕಡೆಯ ವರ್ತಕರಾಗಿ ಮಿನ್ನೀಥಿನ ಗೋದಿಯಿಂದಲೂ, ಖಂಡಸಕ್ಕರೆ, ಜೇನು, ಎಣ್ಣೆ ಮತ್ತು ಸುಗಂಧತೈಲದಿಂದಲೂ ನಿನ್ನೊಂದಿಗೆ ವ್ಯಾಪಾರ ನಡೆಸಿದರು.
18 Damascenus negotiator tuus in multitudine operum tuorum in multitudine diversarum opum in vino pingui in lanis coloris optimi
೧೮“ನಿನ್ನ ಕೈಕೆಲಸದ ವಸ್ತುಗಳು ನಿನ್ನಲ್ಲಿ ಅಪಾರವಾಗಿದ್ದುದರಿಂದಲೂ, ಅಪರಿಮಿತವಾದ ಬಗೆಬಗೆಯ ಆಸ್ತಿಯೂ ನಿನಗೆ ಬೇಕಾಗಿದ್ದುದರಿಂದಲೂ ದಮಸ್ಕದವರೂ ನಿನ್ನ ಪರವಾಗಿ ವ್ಯಾಪಾರಮಾಡಿ, ಹೆಲ್ಬೋನಿನ ದ್ರಾಕ್ಷಾರಸವನ್ನೂ ಹಾಗು ಚಾಹರಿನ ಉಣ್ಣೆಯನ್ನೂ ನಿನ್ನಲ್ಲಿ ತುಂಬಿಸುತ್ತಿದ್ದರು.
19 Dan et Graecia et Mozel in nundinis tuis proposuerunt ferrum fabrefactum stacte et calamus in negotiatione tua
೧೯“ದಾನಿನವರೂ ಮತ್ತು ಯಾವಾನಿನವರೂ ಊಜಾಲಿನಿಂದ ನಾನಾ ಸರಕುಗಳನ್ನು ತಂದು ನಿನಗೆ ಒಪ್ಪಿಸಿದರು. ಕಬ್ಬಿಣ, ಬಜೆ, ಲವಂಗ, ಚಕ್ಕೆ ಇವುಗಳು ನಿನಗೆ ಆಮದಾಗುತ್ತಿದ್ದವು.
20 Dadan institores tui in tapetibus ad sedendum
೨೦ದೇದಾನಿನವರು ರಥಗಳ ಸವಾರಿಗಳಿಗೆ ತಕ್ಕ ಒಳ್ಳೆಯ ಬಟ್ಟೆಗಳಿಂದ ನಿನ್ನ ಸಂಗಡ ವ್ಯಾಪಾರ ಮಾಡುತ್ತಿದ್ದರು.
21 Arabia et universi principes Cedar ipsi negotiatores manus tuae cum agnis et arietibus et hedis venerunt ad te negotiatores tui
೨೧ಅರಬರು ಮತ್ತು ಕೇದಾರಿನ ಪ್ರಧಾನರೂ ನಿನ್ನ ಕೈಕೆಳಗಿನ ವರ್ತಕರಾಗಿದ್ದರು; ಕುರಿಮರಿಗಳಿಂದಲೂ, ಟಗರುಗಳಿಂದಲೂ, ಹೋತಗಳಿಂದಲೂ ನಿನ್ನೊಡನೆ ವ್ಯಾಪಾರ ಮಾಡಿದ್ದರು.
22 venditores Saba et Reema ipsi negotiatores tui cum universis primis aromatibus et lapide pretioso et auro quod proposuerunt in mercatu tuo
೨೨“ಶೆಬದವರೂ ಮತ್ತು ರಗ್ಮದವರೂ ನಿನ್ನ ಕಡೆಯ ವರ್ತಕರಾಗಿ, ಎಲ್ಲಾ ಶ್ರೇಷ್ಠವಾದ ಸುಗಂಧದ್ರವ್ಯದಿಂದಲೂ, ಅಮೂಲ್ಯವಾದ ರತ್ನಗಳಿಂದಲೂ, ಚಿನ್ನದಿಂದಲೂ ನಿನ್ನೊಡನೆ ವ್ಯಾಪಾರ ಮಾಡಿದರು.
23 Aran et Chenne et Eden negotiatores Saba Assur Chelmad venditores tui
೨೩ಹಾರಾನ್, ಕನ್ನೆ, ಎದೆನ್ ಸ್ಥಳಗಳವರೂ, ಶೆಬ, ಅಶ್ಶೂರ್ ಕಿಲ್ಮದ್ ಪ್ರಾಂತ್ಯಗಳವರೂ ನಿನ್ನ ವರ್ತಕರಾಗಿದ್ದರು.
24 ipsi negotiatores tui multifariam involucris hyacinthi et polymitorum gazarumque pretiosarum quae obvolutae et adstrictae erant funibus cedros quoque habebant in negotiationibus tuis
೨೪ಅವರು ನಿನ್ನ ವ್ಯಾಪಾರಿಗಳಾಗಿ, ಉತ್ತಮ ಕಸೂತಿಯ ಧೂಮ್ರ ವರ್ಣದ ನಿಲುವಂಗಿ ಮೊದಲಾದ ಸರಕುಗಳನ್ನೂ, ಹಗ್ಗಗಳಿಂದ ಬಲವಾಗಿ ಬಿಗಿದ ವಿಚಿತ್ರ ವಸ್ತ್ರಗಳ ಪೆಟ್ಟಿಗೆಗಳನ್ನೂ ತಂದರು.
25 naves maris principes tuae in negotiatione tua et repleta es et glorificata nimis in corde maris
೨೫ತಾರ್ಷೀಷಿನ ಹಡಗಿನ ಪ್ರಯಾಣಿಕರು ನಿನ್ನನ್ನು ನಿನ್ನ ಮಾರುಕಟ್ಟೆಯಲ್ಲಿ ಹೊಗಳುವರು. ನೀನು ಸಮುದ್ರ ಮಧ್ಯದಲ್ಲಿ ಬಹಳ ಘನವುಳ್ಳವಳಾದೆ.
26 in aquis multis adduxerunt te remiges tui ventus auster contrivit te in corde maris
೨೬ಹುಟ್ಟುಹಾಕುವವರು ನಿನ್ನನ್ನು ಮಹಾ ತರಂಗಗಳಿಗೆ ಸಿಕ್ಕಿಸಿದ್ದಾರೆ; ಮೂಡಣ ಗಾಳಿಯು ನಿನ್ನನ್ನು ಸಾಗರದ ಮಧ್ಯದಲ್ಲಿ ಒಡೆದುಬಿಟ್ಟಿದೆ.
27 divitiae tuae et thesauri tui et multiplex instrumentum tuum nautae tui et gubernatores tui qui tenebant supellectilem tuam et populo tuo praeerant viri quoque bellatores tui qui erant in te cum universa multitudine tua quae est in medio tui cadent in corde maris in die ruinae tuae
೨೭ನಿನ್ನ ಆಸ್ತಿಯು, ನಿನ್ನ ವಸ್ತುಗಳು, ನಿನ್ನ ಸರಕುಗಳು, ನಿನ್ನ ನಾವಿಕರು, ನಿನ್ನ ಅಂಬಿಗರು, ನಿನ್ನ ಒಡಕುಗಳನ್ನು ಭದ್ರಪಡಿಸುವವರು, ನಿನ್ನ ವ್ಯಾಪಾರಿಗಳು, ನಿನ್ನಲ್ಲಿನ ಸಮಸ್ತ ಸೈನಿಕರು, ಅಂತು ನಿನ್ನೊಳಗೆ ಸೇರಿಕೊಂಡಿರುವ ನಿನ್ನ ಸಿಬ್ಬಂದಿಯೆಲ್ಲವೂ ನಿನ್ನ ನಾಶದ ದಿನದಲ್ಲಿ ಸಮುದ್ರದೊಳಗೆ ಮುಳುಗಿ ಹೋಗುವರು.
28 a sonitu clamoris gubernatorum tuorum conturbabuntur classes
೨೮ನಿನ್ನ ನಾವಿಕರ ಕೂಗಾಟಕ್ಕೆ ಸಮೀಪದ ಪ್ರದೇಶಗಳು ನಡುಗುವುವು.
29 et descendent de navibus suis omnes qui tenebant remum nautae et universi gubernatores maris in terra stabunt
೨೯ಹುಟ್ಟುಹಾಕುವವರೆಲ್ಲರೂ, ಅಂಬಿಗರೂ, ಸಮುದ್ರದ ಸಕಲ ನಾವಿಕರೂ ತಮ್ಮ ತಮ್ಮ ಹಡಗುಗಳಿಂದ ಇಳಿದು ನೆಲದ ಮೇಲೆ ನಿಂತುಕೊಳ್ಳುವರು.
30 et heiulabunt super te voce magna et clamabunt amare et superiacient pulverem capitibus suis et cinere conspergentur
೩೦ನಿನ್ನ ನಿಮಿತ್ತ ದುಃಖದಿಂದ ಅರಚಿ, ತಲೆಗೆ ಧೂಳೆರಚಿಕೊಂಡು, ಬೂದಿಯಲ್ಲಿ ಬಿದ್ದು ಹೊರಳಾಡಿ,
31 et radent super te calvitium et accingentur ciliciis et plorabunt te in amaritudine animae ploratu amarissimo
೩೧ನಿನಗಾಗಿ ತಲೆ ಬೋಳಿಸಿಕೊಂಡು, ಗೋಣಿತಟ್ಟನ್ನು ಸುತ್ತಿಕೊಂಡು, ಮನೋವ್ಯಥೆಯಿಂದ ಗೋಳಾಡಿ, ನಿನಗೋಸ್ಕರ ಬಿಕ್ಕಿಬಿಕ್ಕಿ ಅಳುವರು.
32 et adsument super te carmen lugubre et plangent te quae est ut Tyrus quae obmutuit in medio maris
೩೨ಅವರು ರೋದನ ಮಾಡುತ್ತಾ ನಿನ್ನ ವಿಷಯವಾಗಿ ಶೋಕ ಗೀತವನ್ನೆತ್ತಿ ಹೀಗೆ ಪ್ರಲಾಪಿಸುವರು, ‘ಸಮುದ್ರದ ನಡುವೆ ಹಾಳಾಗಿರುವ ತೂರಿಗೆ ಯಾವ ಪಟ್ಟಣ ಸಮಾನವಾಗಿದೆ?’
33 quae in exitu negotiationum tuarum de mari implesti populos multos in multitudine divitiarum tuarum et populorum tuorum ditasti reges terrae
೩೩ನಿನ್ನ ಸರಕುಗಳು ಸಮುದ್ರಗಳನ್ನು ದಾಟಿ ಹರಡಿಕೊಂಡವು, ಅವುಗಳಿಂದ ಅನೇಕ ಜನಾಂಗಗಳನ್ನು ತೃಪ್ತಿಪಡಿಸಿದಿ; ನಿನ್ನ ಅಪಾರವಾದ ಐಶ್ವರ್ಯದಿಂದಲೂ, ವ್ಯಾಪಾರದ ವಸ್ತುಗಳಿಂದಲೂ ಭೂರಾಜರನ್ನು ಸಮೃದ್ಧಿಪಡಿಸಿದಿ.
34 nunc contrita es a mari in profundis aquarum opes tuae et omnis multitudo tua quae erat in medio tui ceciderunt
೩೪ಈಗಲಾದರೋ ನೀನು ಸಮುದ್ರದಿಂದ ಹಾಳಾದೆ, ನಿನ್ನ ಸರಕುಗಳೂ, ನಿನ್ನಲ್ಲಿ ಸೇರಿಕೊಂಡಿದ್ದ ಸಕಲ ಜನರೂ ಅಗಾಧಜಲದಲ್ಲಿ ಮುಳುಗಿ ಹೋದರು.
35 universi habitatores insularum obstipuerunt super te et reges earum omnes tempestate perculsi mutaverunt vultus
೩೫ಕರಾವಳಿಯ ಸಮಸ್ತ ನಿವಾಸಿಗಳು ನಿನ್ನ ಸ್ಥಿತಿಗೆ ಬೆಚ್ಚಿ ವಿಸ್ಮಯರಾಗಿದ್ದಾರೆ; ಅರಸರು ಭಯಪಟ್ಟಿದ್ದಾರೆ. ಅರಸರು ನಡುಗಿ ಭೀತಿಗೊಂಡಿದ್ದಾರೆ.
36 negotiatores populorum sibilaverunt super te ad nihilum deducta es et non eris usque in perpetuum
೩೬ಜನಾಂಗಗಳ ವರ್ತಕರು ನಿನ್ನನ್ನು ನೋಡಿ, ಸಿಳ್ಳು ಹಾಕುತ್ತಾರೆ; ನೀನು ಸಂಪೂರ್ಣ ಧ್ವಂಸವಾಗಿ ಇನ್ನೆಂದಿಗೂ ಇಲ್ಲದಂತಾಗಿರುವೆ.”