< Iudicum 17 >
1 fuit eo tempore vir quidam de monte Ephraim nomine Michas
೧ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿ ಮೀಕನೆಂಬ ಒಬ್ಬ ಮನುಷ್ಯನಿದ್ದನು. ಅವನು ಒಂದು ದಿನ ತನ್ನ ತಾಯಿಗೆ, “ಅಮ್ಮಾ, ಕಳವಾಗಿದ್ದ ನಿನ್ನ ಸಾವಿರದ ನೂರು ರೂಪಾಯಿಗಳಿಗೋಸ್ಕರ ನೀನು ನನಗೆ ಕೇಳಿಸುವಂತೆ ಶಪಿಸಿದಿಯಲ್ಲಾ;
2 qui dixit matri suae mille centum argenteos quos separaveras tibi et super quibus me audiente iuraveras ecce ego habeo et apud me sunt cui illa respondit benedictus filius meus Domino
೨ಇಗೋ, ಆ ಸಾವಿರದ ನೂರು ರೂಪಾಯಿಗಳು ನನ್ನ ಹತ್ತಿರ ಇವೆ; ನಾನು ತೆಗೆದುಕೊಂಡಿದ್ದೆನು” ಎಂದು ಹೇಳಿದನು. ಆಕೆಯು, “ನನ್ನ ಮಗನೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ” ಅಂದಳು.
3 reddidit ergo eos matri suae quae dixerat ei consecravi et vovi argentum hoc Domino ut de manu mea suscipiat filius meus et faciat sculptile atque conflatile et nunc trado illud tibi
೩ಅವನು ಆ ಸಾವಿರದ ನೂರು ರೂಪಾಯಿಗಳನ್ನು ತನ್ನ ತಾಯಿಗೆ ಹಿಂದಕ್ಕೆ ಕೊಡಲು ಆಕೆಯು, “ನನ್ನ ಮಗನಿಗೆ ಹಿತವಾಗಲೆಂದು ಈ ಹಣವನ್ನು ಯೆಹೋವನಿಗೆ ಹರಕೆಮಾಡಿದ್ದೇನೆ; ಇದರಿಂದ ಒಂದು ಎರಕದ ವಿಗ್ರಹವನ್ನು ಮಾಡಿಸಿ ನಿನ್ನ ವಶಕ್ಕೆ ಕೊಡುವೆನು” ಎಂದು ಹೇಳಿ,
4 reddidit igitur matri suae quae tulit ducentos argenteos et dedit eos argentario ut faceret ex eis sculptile atque conflatile quod fuit in domo Micha
೪ಮಗನು ಹಿಂದಕ್ಕೆ ಕೊಟ್ಟ ರೂಪಾಯಿಗಳಲ್ಲಿ ಇನ್ನೂರು ರೂಪಾಯಿಗಳನ್ನು ತೆಗೆದು ಅಕ್ಕಸಾಲಿಗನಿಗೆ ಕೊಟ್ಟಳು. ಅವನು ಅವುಗಳಿಂದ ಕೆತ್ತನೆಯ ಮತ್ತು ಎರಕದ ವಿಗ್ರಹಗಳನ್ನು ಮಾಡಿಕೊಟ್ಟನು. ಮೀಕನು ಅದನ್ನು ತನ್ನ ಮನೆಯಲ್ಲಿಟ್ಟುಕೊಂಡನು.
5 qui aediculam quoque in ea Deo separavit et fecit ephod ac therafin id est vestem sacerdotalem et idola implevitque unius filiorum suorum manum et factus est ei sacerdos
೫ಈ ಮೀಕನು ಏಫೋದನ್ನೂ ವಿಗ್ರಹಗಳನ್ನೂ ಮಾಡಿಸಿ, ಅವುಗಳನ್ನು ತಾನು ಕಟ್ಟಿಸಿದ ದೇವಸ್ಥಾನದಲ್ಲಿಟ್ಟು, ತನ್ನ ಮಕ್ಕಳಲ್ಲಿ ಒಬ್ಬನನ್ನು ಅರ್ಚಕ ಸೇವೆಗಾಗಿ ಪ್ರತಿಷ್ಠಿಸಿದನು.
6 in diebus illis non erat rex in Israhel sed unusquisque quod sibi rectum videbatur hoc faciebat
೬ಆ ಕಾಲದಲ್ಲಿ ಇಸ್ರಾಯೇಲರೊಳಗೆ ಅರಸನಿರಲಿಲ್ಲ. ಪ್ರತಿಯೊಬ್ಬನೂ ಮನಸ್ಸಿಗೆ ಬಂದ ಹಾಗೆಯೇ ನಡೆದುಕೊಳ್ಳುತ್ತಿದ್ದನು.
7 fuit quoque alter adulescens de Bethleem Iuda et cognatione eius eratque ipse Levites et habitabat ibi
೭ಯೆಹೂದದ ಬೇತ್ಲೆಹೇಮಿನವನೂ, ಯೆಹೂದ ಕುಲದವನೂ ಆಗಿದ್ದ ಒಬ್ಬ ಯೌವನಸ್ಥನಾದ ಲೇವಿಯು ಉಪಜೀವನಕ್ಕೆ ಅನುಕೂಲವಾಗುವಂತೆ
8 egressusque de civitate Bethleem peregrinari voluit ubicumque sibi commodum repperisset cumque venisset in monte Ephraim iter faciens et declinasset parumper in domum Micha
೮ವಾಸಮಾಡಲು ತನ್ನ ಸ್ವಂತ ಊರನ್ನು ಬಿಟ್ಟು, ಪ್ರಯಾಣಮಾಡುತ್ತಾ ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿದ್ದ ಮೀಕನ ಮನೆಗೆ ಬಂದನು.
9 interrogatus est ab eo unde venis qui respondit Levita sum de Bethleem Iuda et vado ut habitem ubi potuero et utile mihi esse perspexero
೯“ನೀನು ಎಲ್ಲಿಂದ ಬಂದಿ” ಎಂದು ಮೀಕನು ಅವನನ್ನು ಕೇಳಲು ಅವನು, “ನಾನು ಯೆಹೂದದ ಬೇತ್ಲೆಹೇಮಿನವನಾದ ಲೇವಿಯನು; ಉಪಜೀವನಕ್ಕೆ ಅನುಕೂಲವಾದ ವಾಸಸ್ಥಳವನ್ನು ಹುಡುಕಿಕೊಂಡು ಹೊರಟಿದ್ದೇನೆ” ಎಂದು ಉತ್ತರಕೊಟ್ಟನು.
10 mane inquit apud me et esto mihi parens ac sacerdos daboque tibi per annos singulos decem argenteos ac vestem duplicem et quae ad victum necessaria sunt
೧೦ಮೀಕನು ಅವನಿಗೆ, “ನೀನು ನಮ್ಮಲ್ಲಿರು; ನಮಗೆ ತಂದೆಯೂ, ಯಾಜಕನೂ ಆಗು. ನಿನಗೆ ವರ್ಷಕ್ಕೆ ಹತ್ತು ಬೆಳ್ಳಿ ನಾಣ್ಯಗಳನ್ನೂ, ಬಟ್ಟೆಯನ್ನೂ, ಆಹಾರವನ್ನೂ ಕೊಡುತ್ತೇನೆ” ಅನ್ನಲು
11 adquievit et mansit apud hominem fuitque illi quasi unus de filiis
೧೧ಆ ಲೇವಿಯನು ಒಪ್ಪಿಕೊಂಡು ಅಲ್ಲೇ ವಾಸಮಾಡಿದನು; ಹೀಗೆ ಆ ಯೌವನಸ್ಥನು ಅವನ ಮಕ್ಕಳಲ್ಲೊಬ್ಬನಂತಾದನು.
12 implevitque Micha manum eius et habuit apud se puerum sacerdotem
೧೨ಮೀಕನು ಯೌವನಸ್ಥನಾದ ಆ ಲೇವಿಯನನ್ನು ಯಾಜಕಸೇವೆಗೋಸ್ಕರ ಪ್ರತಿಷ್ಠಿಸಿ ತನ್ನ ಮನೆಯಲ್ಲಿಟ್ಟುಕೊಂಡು,
13 nunc scio dicens quod bene mihi faciat Deus habenti levitici generis sacerdotem
೧೩“ಒಬ್ಬ ಲೇವಿಯು ನನ್ನ ಮನೆಯಲ್ಲಿ ಯಾಜಕನಾಗಿರುವುದರಿಂದ ಯೆಹೋವನು ನನ್ನನ್ನು ಆಶೀರ್ವದಿಸುವನೆಂದು ಬಲ್ಲೆನು” ಅಂದುಕೊಂಡನು.