< Leviticus 13 >
1 locutus est Dominus ad Mosen et Aaron dicens
೧ಯೆಹೋವನು ಮೋಶೆ ಮತ್ತು ಆರೋನರಿಗೆ,
2 homo in cuius carne et cute ortus fuerit diversus color sive pustula aut quasi lucens quippiam id est plaga leprae adducetur ad Aaron sacerdotem vel ad unum quemlibet filiorum eius
೨“ಒಬ್ಬ ಮನುಷ್ಯನ ಮೈಮೇಲೆ ಬಾವಾಗಲಿ, ಗುಳ್ಳೆಯಾಗಲಿ ಅಥವಾ ಹೊಳೆಯುವ ಮಚ್ಚೆಯಾಗಲಿ ಉಂಟಾಗಿ ಅದರಲ್ಲಿ ಕುಷ್ಠರೋಗದ ಲಕ್ಷಣಗಳು ತೋರಿದರೆ ಅವನನ್ನು ಮಹಾಯಾಜಕನಾದ ಆರೋನನ ಬಳಿಗೆ ಇಲ್ಲವೆ ಆರೋನನ ಮಕ್ಕಳಾದ ಯಾಜಕರಲ್ಲಿ ಒಬ್ಬನ ಬಳಿಗೆ ಕರೆದುಕೊಂಡು ಬರಬೇಕು.
3 qui cum viderit lepram in cute et pilos in album mutatos colorem ipsamque speciem leprae humiliorem cute et carne reliqua plaga leprae est et ad arbitrium eius separabitur
೩ಯಾಜಕನು ಅವನ ಚರ್ಮದಲ್ಲಿರುವ ಮಚ್ಚೆಯನ್ನು ಪರೀಕ್ಷಿಸುವಾಗ ಆ ಮಚ್ಚೆಯಲ್ಲಿರುವ ರೋಮ ಬೆಳ್ಳಗಾಗಿದ್ದರೆ ಮತ್ತು ಆ ಮಚ್ಚೆ ಉಳಿದ ಚರ್ಮಕ್ಕಿಂತ ಆಳವಾಗಿದ್ದರೆ ಅದು ಕುಷ್ಠರೋಗ. ಯಾಜಕನು ಅದನ್ನು ಪರೀಕ್ಷಿಸಿ ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು.
4 sin autem lucens candor fuerit in cute nec humilior carne reliqua et pili coloris pristini recludet eum sacerdos septem diebus
೪ಆ ಹೊಳೆಯುವ ಮಚ್ಚೆ ಬೆಳ್ಳಗಾಗಿದ್ದು ಉಳಿದ ಚರ್ಮಕ್ಕಿಂತ ಆಳವಾಗಿರದೆ ಹೋದರೆ ಮತ್ತು ಅಲ್ಲಿರುವ ರೋಮ ಬೆಳ್ಳಗಾಗದಿದ್ದರೆ ಯಾಜಕನು ಆ ಮಚ್ಚೆಯಿದ್ದವನನ್ನು ಏಳು ದಿನಗಳ ವರೆಗೆ ಪ್ರತ್ಯೇಕವಾಗಿ ಇರಿಸಬೇಕು.
5 et considerabit die septimo et siquidem lepra ultra non creverit nec transierit in cute priores terminos rursum includet eum septem diebus aliis
೫ಏಳನೆಯ ದಿನದಲ್ಲಿ ಯಾಜಕನು ಅವನನ್ನು ಪರೀಕ್ಷಿಸುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಳ್ಳದೆ ಮೊದಲು ಇದ್ದಂತೆಯೇ ಕಾಣಿಸಿದರೆ ಯಾಜಕನು ಇನ್ನು ಏಳು ದಿನಗಳ ವರೆಗೂ ಅವನನ್ನು ಪ್ರತ್ಯೇಕವಾಗಿ ಇರಿಸಬೇಕು.
6 et die septimo contemplabitur si obscurior fuerit lepra et non creverit in cute mundabit eum quia scabies est lavabitque homo vestimenta sua et mundus erit
೬ಆ ಏಳು ದಿನಗಳಾದ ಮೇಲೆ ಯಾಜಕನು ಪುನಃ ಅವನನ್ನು ಪರೀಕ್ಷಿಸುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಳ್ಳದೆ ಮೊಬ್ಬಾಗಿದ್ದರೆ ಯಾಜಕನು ಅದು ಬರೀ ಗುಳ್ಳೆಯೆಂದು ತಿಳಿದು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಶುದ್ಧನಾಗುವನು.
7 quod si postquam a sacerdote visus est et redditus munditiae iterum lepra creverit adducetur ad eum
೭ಆದರೆ ಅವನು ತನ್ನ ಶುದ್ಧಿಯ ವಿಷಯದಲ್ಲಿ ತನ್ನನ್ನು ಯಾಜಕನಿಗೆ ತೋರಿಸಿಕೊಂಡನಂತರ ಆ ಗುಳ್ಳೆ ದೇಹದ ಚರ್ಮದಲ್ಲಿ ಹರಡಿಕೊಂಡರೆ ಅವನು ಪುನಃ ಯಾಜಕನಿಗೆ ತೋರಿಸಿಕೊಳ್ಳಬೇಕು.
8 et inmunditiae condemnabitur
೮ಯಾಜಕನು ಪರೀಕ್ಷಿಸುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಂಡಿದ್ದರೆ ಅದು ಕುಷ್ಠವೆಂದು ತಿಳಿದು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು.
9 plaga leprae si fuerit in homine adducetur ad sacerdotem
೯“ಕುಷ್ಠರೋಗದ ಲಕ್ಷಣಗಳು ಯಾವನಲ್ಲಾದರೂ ಕಾಣಿಸಿದರೆ ಅವನನ್ನು ಯಾಜಕನ ಬಳಿಗೆ ಕರೆದುಕೊಂಡು ಬರಬೇಕು.
10 et videbit eum cumque color albus in cute fuerit et capillorum mutarit aspectum ipsa quoque caro viva apparuerit
೧೦ಯಾಜಕನು ಅವನನ್ನು ಪರೀಕ್ಷಿಸುವಾಗ ದೇಹದ ಚರ್ಮದಲ್ಲಿ ಬೆಳ್ಳಗಾದ ಬಾವು ಇದ್ದರೆ ಮತ್ತು ಅಲ್ಲಿರುವ ರೋಮವು ಬೆಳ್ಳಗಾಗಿದ್ದರೆ ಮತ್ತು ಆ ಬಾವಿನಲ್ಲಿ ಮಾಂಸ ಕಾಣಿಸಿದರೆ ಅದು ಹಳೇ ಕುಷ್ಠರೋಗದ ಗುರುತು.
11 lepra vetustissima iudicabitur atque inolita cuti contaminabit itaque eum sacerdos et non recludet quia perspicue inmunditia est
೧೧ಅವನು ಅಶುದ್ಧನಾದುದರಿಂದ ಯಾಜಕನು ಅವನನ್ನು ಪ್ರತ್ಯೇಕಿಸದೆ ಅಶುದ್ಧನೆಂದು ನಿರ್ಣಯಿಸಬೇಕು.
12 sin autem effloruerit discurrens lepra in cute et operuerit omnem carnem a capite usque ad pedes quicquid sub aspectu oculorum cadit
೧೨“ಆದರೆ ಒಬ್ಬನ ಚರ್ಮದಲ್ಲಿ ತೊನ್ನು ಹತ್ತಿ ಯಾಜಕನು ನೋಡುವ ಎಲ್ಲಾ ಕಡೆಯಲ್ಲಿಯೂ ತಲೆ ಮೊದಲುಗೊಂಡು ಅಂಗಾಲಿನವರೆಗೂ ಹರಡಿಕೊಂಡಿದ್ದರೆ,
13 considerabit eum sacerdos et teneri lepra mundissima iudicabit eo quod omnis in candorem versa sit et idcirco homo mundus erit
೧೩ಯಾಜಕನು ಪರೀಕ್ಷಿಸುವಾಗ ಆ ತೊನ್ನು ದೇಹದಲ್ಲೆಲ್ಲಾ ವ್ಯಾಪಿಸಿಕೊಂಡಿದ್ದರೆ, ಅಂಥವನನ್ನು ಶುದ್ಧನೆಂದು ಯಾಜಕನು ನಿರ್ಣಯಿಸಬೇಕು. ಅವನ ಚರ್ಮವೆಲ್ಲಾ ಬೆಳ್ಳಗಾಗಿ ಹೋದುದರಿಂದ ಅವನು ಶುದ್ಧನು.
14 quando vero caro vivens in eo apparuerit
೧೪ಆದರೆ ಅಂಥವನ ದೇಹದಲ್ಲಿ ಎಲ್ಲಿಯಾದರೂ ಮಾಂಸ ಕಂಡುಬಂದರೆ ಅವನು ಅಶುದ್ಧನಾಗುವನು.
15 tunc sacerdotis iudicio polluetur et inter inmundos reputabitur caro enim viva si lepra aspergatur inmunda est
೧೫ಯಾಜಕನು ಆ ಮಾಂಸವನ್ನು ನೋಡಿ ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು. ಅಂತಹ ಮಾಂಸವು ಅಶುದ್ಧವೇ; ಅದು ಕುಷ್ಠವೇ.
16 quod si rursum versa fuerit in alborem et totum hominem operuerit
೧೬ಆದರೆ ಆ ಮಾಂಸವು ಅದೇ ಪ್ರಕಾರವಾಗಿ ಇರದೆ ಪುನಃ ಬೆಳ್ಳಗಾದರೆ ಅವನು ಯಾಜಕನ ಬಳಿಗೆ ಬರಬೇಕು.
17 considerabit eum sacerdos et mundum esse decernet
೧೭ಯಾಜಕನು ಪರೀಕ್ಷಿಸುವಾಗ ಆ ಮಚ್ಚೆಯು ಬೆಳ್ಳಗಾಗಿಹೋಗಿದ್ದರೆ ಆ ಮನುಷ್ಯನನ್ನು ಶುದ್ಧನೆಂದು ನಿರ್ಣಯಿಸಬೇಕು; ಅವನು ಶುದ್ಧನೇ.
18 caro et cutis in qua ulcus natum est et sanatum
೧೮“ಒಬ್ಬನ ದೇಹದ ಚರ್ಮದಲ್ಲಿ ಹುಣ್ಣು ಆಗಿದ್ದು ಅದು ವಾಸಿಯಾದ ಮೇಲೆ,
19 et in loco ulceris cicatrix apparuerit alba sive subrufa adducetur homo ad sacerdotem
೧೯ಅದು ಇದ್ದ ಸ್ಥಳದಲ್ಲಿ ಬಿಳಿ ಬಾವಾಗಲಿ ಅಥವಾ ಕೆಂಪು ಬಿಳುಪು ಮಿಶ್ರವಾಗಿ ಹೊಳೆಯುವ ಕಲೆಯಾಗಲಿ ಉಂಟಾದರೆ ಅವನು ತನ್ನನ್ನು ಯಾಜಕನಿಗೆ ತೋರಿಸಿಕೊಳ್ಳಬೇಕು.
20 qui cum viderit locum leprae humiliorem carne reliqua et pilos versos in candorem contaminabit eum plaga enim leprae orta est in ulcere
೨೦ಯಾಜಕನು ಪರೀಕ್ಷಿಸುವಾಗ ಆ ಕಲೆ ಉಳಿದ ಚರ್ಮಕ್ಕಿಂತ ಆಳವಾಗಿ ಕಂಡರೆ ಮತ್ತು ಅದರಲ್ಲಿರುವ ರೋಮ ಬೆಳ್ಳಗಾಗಿ ಹೋಗಿದ್ದರೆ ಆ ಹುಣ್ಣಿನಲ್ಲಿ ಕುಷ್ಠ ಹುಟ್ಟಿದ್ದರಿಂದ ಅವನು ಅಶುದ್ಧನೆಂದು ಯಾಜಕನು ನಿರ್ಣಯಿಸಬೇಕು.
21 quod si pilus coloris est pristini et cicatrix subobscura et vicina carne non est humilior recludet eum septem diebus
೨೧ಆದರೆ ಯಾಜಕನು ಪರೀಕ್ಷಿಸುವಾಗ ಅದರಲ್ಲಿ ಬಿಳಿ ರೋಮವಿಲ್ಲದೆ ಹೋದರೆ ಮತ್ತು ಆ ಕಲೆ ಉಳಿದ ಚರ್ಮಕ್ಕಿಂತ ಆಳವಾಗಿರದೆ ಮೊಬ್ಬಾಗಿದ್ದರೆ ಯಾಜಕನು ಅವನನ್ನು ಏಳು ದಿನಗಳು ಪ್ರತ್ಯೇಕವಾಗಿ ಇರಿಸಬೇಕು.
22 et siquidem creverit adiudicabit eum leprae
೨೨ತರುವಾಯ ಅದು ಚರ್ಮದಲ್ಲಿ ಹರಡಿಕೊಂಡಿದ್ದರೆ ಯಾಜಕನು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು; ಅದು ಕುಷ್ಠರೋಗವೇ.
23 sin autem steterit in loco suo ulceris est cicatrix et homo mundus erit
೨೩ಆದರೆ ಆ ಹೊಳೆಯುವ ಕಲೆ ಹರಡಿಕೊಳ್ಳದೆ ಮೊದಲಿದ್ದಂತೆಯೇ ಇದ್ದರೆ ಅದು ಆ ಹುಣ್ಣಿನ ಕಲೆಯೆಂದು ತಿಳಿದುಕೊಂಡು ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು.
24 caro et cutis quam ignis exuserit et sanata albam sive rufam habuerit cicatricem
೨೪“ಒಬ್ಬನ ದೇಹದ ಚರ್ಮದಲ್ಲಿ ಬೆಂಕಿಯಿಂದುಂಟಾದ ಬೊಬ್ಬೆ ಇರಲಾಗಿ ಆ ಬೊಬ್ಬೆಯ ಸ್ಥಳವು ಹೊಳೆಯುವ ಕಲೆಯಾಗಿ ಬೆಳ್ಳಗಾಗಿಯಾಗಲಿ ಕೆಂಪು ಬಿಳುಪು ಮಿಶ್ರವಾಗಿ ಇದ್ದರೆ ಯಾಜಕನು ಅದನ್ನು ನೋಡಬೇಕು.
25 considerabit eam sacerdos et ecce versa est in alborem et locus eius reliqua cute humilior contaminabit eum quia plaga leprae in cicatrice orta est
೨೫ಅವನು ಪರೀಕ್ಷಿಸುವಾಗ ಆ ಹೊಳೆಯುವ ಕಲೆಯಲ್ಲಿರುವ ರೋಮವು ಬೆಳ್ಳಗಾಗಿದ್ದರೆ ಮತ್ತು ಆ ಕಲೆಯು ಉಳಿದ ಚರ್ಮಕ್ಕಿಂತ ಆಳವಾಗಿ ತೋರಿದರೆ ಅದು ಆ ಬೊಬ್ಬೆಯಲ್ಲಿ ಹುಟ್ಟಿದ ಕುಷ್ಠವೆಂದು ತಿಳಿದು ಯಾಜಕನು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು.
26 quod si pilorum color non fuerit inmutatus nec humilior plaga carne reliqua et ipsa leprae species fuerit subobscura recludet eum septem diebus
೨೬ಆದರೆ ಯಾಜಕನು ಪರೀಕ್ಷಿಸುವಾಗ ಆ ಹೊಳೆಯುವ ಕಲೆಯಲ್ಲಿ ಬಿಳಿ ರೋಮವಿಲ್ಲದೆ ಹೋದರೆ ಮತ್ತು ಅದು ಉಳಿದ ಚರ್ಮಕ್ಕಿಂತ ಆಳವಾಗಿ ಕಾಣದೆ, ಮೊಬ್ಬಾಗಿ ಹೋಗಿದ್ದರೆ ಯಾಜಕನು ಅವನನ್ನು ಏಳು ದಿನಗಳ ತನಕ ಪ್ರತ್ಯೇಕವಾಗಿ ಇರಿಸಬೇಕು.
27 et die septimo contemplabitur si creverit in cute lepra contaminabit eum
೨೭ಏಳನೆಯ ದಿನದಲ್ಲಿ ಯಾಜಕನು ಅವನನ್ನು ಪರೀಕ್ಷಿಸುವಾಗ ಅದು ಚರ್ಮದಲ್ಲಿ ಹರಡಿಕೊಂಡಿದ್ದರೆ ಅದು ಕುಷ್ಠರೋಗವೆಂದು ತಿಳಿದು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು.
28 sin autem in loco suo candor steterit non satis clarus plaga conbustionis est et idcirco mundabitur quia cicatrix est conbusturae
೨೮ಆ ಹೊಳೆಯುವ ಕಲೆಯು ಚರ್ಮದಲ್ಲಿ ಹರಡಿಕೊಳ್ಳದೆ ಮೊದಲಿನಂತೆಯೇ ಇದ್ದು ಮೊಬ್ಬಾಗಿಹೋಗಿದ್ದರೆ ಅದು ಬೆಂಕಿಸುಟ್ಟ ಬೊಬ್ಬೆಯೆಂದು ತಿಳಿದು ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. ಅದು ಬೆಂಕಿಯಿಂದ ಸುಟ್ಟ ಕಲೆಯೇ ಹೊರತು ಮತ್ತೇನೂ ಅಲ್ಲ.
29 vir sive mulier in cuius capite vel barba germinarit lepra videbit eos sacerdos
೨೯“ಹೆಂಗಸಿನ ತಲೆಯಲ್ಲಿ ಆಗಲಿ, ಗಂಡಸಿನ ತಲೆಯಲ್ಲಿ ಆಗಲಿ ಅಥವಾ ಗಡ್ಡದ ಮೇಲೆ ಆಗಲಿ ಕಲೆಯುಂಟಾದರೆ ಯಾಜಕನು ಅದನ್ನು ಪರೀಕ್ಷಿಸಬೇಕು.
30 et siquidem humilior fuerit locus carne reliqua et capillus flavus solitoque subtilior contaminabit eos quia lepra capitis ac barbae est
೩೦ಆಗ ಅದು ಉಳಿದ ಚರ್ಮಕ್ಕಿಂತ ಆಳವಾಗಿ ತೋರಿದರೆ ಮತ್ತು ಅದರಲ್ಲಿ ಹಳದಿಬಣ್ಣವುಳ್ಳ ಸಣ್ಣ ಕೂದಲು ಇದ್ದರೆ ಅದು ತಲೆಯಲ್ಲಾಗಲಿ ಅಥವಾ ಗಡ್ಡದಲ್ಲಾಗಲಿ ಉಂಟಾದ ಕುಷ್ಠವನ್ನು ಸೂಚಿಸುವ ಲಕ್ಷಣವಿದ್ದರೆ ಯಾಜಕನು ಅಂಥವನನ್ನು ಅಶುದ್ಧನೆಂದು ನಿರ್ಣಯಿಸಬೇಕು.
31 sin autem viderit et locum maculae aequalem vicinae carni et capillum nigrum recludet eos septem diebus
೩೧ಯಾಜಕನು ಆ ಗಾಯವನ್ನು ನೋಡುವಾಗ ಅದು ಬೇರೆ ಚರ್ಮಕ್ಕಿಂತ ಆಳವಾಗಿ ಕಾಣದೆ ಹೋದಾಗ್ಯೂ, ಅದು ಇರುವ ಭಾಗದಲ್ಲಿ ಕಪ್ಪು ಕೂದಲು ಇಲ್ಲದಿದ್ದರೆ ಯಾಜಕನು ಅವನನ್ನು ಏಳು ದಿನಗಳ ತನಕ ಪ್ರತ್ಯೇಕವಾಗಿ ಇರಿಸಬೇಕು.
32 et die septimo intuebitur si non creverit macula et capillus sui coloris est et locus plagae carni reliquae aequalis
೩೨ಏಳನೆಯ ದಿನದಲ್ಲಿ ಯಾಜಕನು ಪರೀಕ್ಷಿಸುವಾಗ ಆ ಗಾಯ ಹರಡಿಕೊಳ್ಳದೆ ಇದ್ದರೆ ಮತ್ತು ಅದು ಇರುವ ಭಾಗದಲ್ಲಿ ಹಳದಿ ಬಣ್ಣದ ಕೂದಲು ಇಲ್ಲದಿದ್ದರೆ ಮತ್ತು ಅದು ಉಳಿದ ಚರ್ಮಕ್ಕಿಂತ ಆಳವಾಗಿ ಕಾಣದೆಹೋದರೆ,
33 radetur homo absque loco maculae et includetur septem diebus aliis
೩೩ಅವನು ಕ್ಷೌರಮಾಡಿಸಿಕೊಳ್ಳಬೇಕು. ಆ ಗಾಯ ಇರುವ ಭಾಗವನ್ನು ಮಾತ್ರ ಕ್ಷೌರಮಾಡಿಸಿಕೊಳ್ಳಬಾರದು. ಯಾಜಕನು ಅವನನ್ನು ಇನ್ನು ಏಳು ದಿನಗಳವರೆಗೂ ಪ್ರತ್ಯೇಕಿಸಬೇಕು.
34 si die septimo visa fuerit stetisse plaga in loco suo nec humilior carne reliqua mundabit eum lotisque vestibus mundus erit
೩೪ಏಳನೆಯ ದಿನದಲ್ಲಿ ಯಾಜಕನು ಪುನಃ ಆ ಗಾಯವನ್ನು ನೋಡುವಾಗ ಅದು ಚರ್ಮದಲ್ಲಿ ಹರಡಿಕೊಳ್ಳದೆ ಹೋಗಿದ್ದರೆ ಉಳಿದ ಚರ್ಮಕ್ಕಿಂತ ಆಳವಾಗಿ ತೋರದೆ ಇದ್ದರೆ ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡಾಗ ಶುದ್ಧನಾಗುವನು.
35 sin autem post emundationem rursus creverit macula in cute
೩೫ಆದರೆ ಅವನು ಶುದ್ಧನೆಂದು ನಿರ್ಣಯಿಸಲ್ಪಟ್ಟ ಮೇಲೆ ಆ ಗಾಯ ಚರ್ಮದಲ್ಲಿ ಹರಡಿಕೊಂಡರೆ,
36 non quaeret amplius utrum capillus in flavum colorem sit commutatus quia aperte inmundus est
೩೬ಯಾಜಕನು ಅವನನ್ನು ಪರೀಕ್ಷಿಸಬೇಕು; ಆದರೆ ಹಳದಿಬಣ್ಣದ ಕೂದಲು ಇದೆಯೋ ಇಲ್ಲವೋ ಎಂದು ನೋಡಬೇಕಾದ ಅಗತ್ಯವಿಲ್ಲ; ಅವನು ಅಶುದ್ಧನೇ.
37 porro si steterit macula et capilli nigri fuerint noverit hominem esse sanatum et confidenter eum pronuntiet mundum
೩೭ಆ ಗಾಯ ಮೊದಲು ಇದ್ದಂತೆಯೇ ಇದ್ದು ಅದರಲ್ಲಿ ಕಪ್ಪು ಕೂದಲು ಹುಟ್ಟಿದ್ದರೆ ಅದು ವಾಸಿಯಾಯಿತು. ಅವನು ಶುದ್ಧನು; ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು.
38 vir et mulier in cuius cute candor apparuerit
೩೮“ಪುರುಷನಿಗಾಗಲಿ ಅಥವಾ ಸ್ತ್ರೀಗಾಗಲಿ ಚರ್ಮದಲ್ಲಿ ಹೊಳೆಯುವ ಬಿಳುಪಾದ ಕಲೆಗಳು ಅಲ್ಲಲ್ಲಿ ಹುಟ್ಟಿದ್ದರೆ ಯಾಜಕನು ಅವುಗಳನ್ನು ಪರೀಕ್ಷಿಸಬೇಕು.
39 intuebitur eos sacerdos si deprehenderit subobscurum alborem lucere in cute sciat non esse lepram sed maculam coloris candidi et hominem mundum
೩೯ಆ ಹೊಳೆಯುವ ಕಲೆಗಳು ಮೊಬ್ಬಾದ ಬಿಳೀ ಬಣ್ಣವಾಗಿದ್ದರೆ ಅದು ದೇಹದ ಚರ್ಮದಲ್ಲಿ ಹುಟ್ಟಿದ ಚಿಬ್ಬು; ಅವನು ಶುದ್ಧನು.
40 vir de cuius capite capilli fluunt calvus ac mundus est
೪೦“ಯಾವನ ತಲೆಯ ಕೂದಲು ಉದುರಿ ಹೋಗಿ ಅವನು ಬೋಳುತಲೆಯವನಾದರೂ ಅವನು ಶುದ್ಧನೇ.
41 et si a fronte ceciderint pili recalvaster et mundus est
೪೧ಮುಂದಲೆಯ ಕೂದಲು ಉದುರಿದರೆ ಅವನು ಪಟ್ಟೆತಲೆಯವನಾದರೂ ಶುದ್ಧನೇ.
42 sin autem in calvitio sive in recalvatione albus vel rufus color fuerit exortus
೪೨ಆದರೆ ಬೋಳುತಲೆಯಲ್ಲಾಗಲಿ ಅಥವಾ ಪಟ್ಟೆತಲೆಯಲ್ಲಾಗಲಿ ಕೆಂಪು ಬಿಳುಪು ಮಿಶ್ರವಾದ ಮಚ್ಚೆ ಹುಟ್ಟಿದರೆ ಅದು ಕುಷ್ಠವೇ.
43 et hoc sacerdos viderit condemnabit eum haut dubiae leprae quae orta est in calvitio
೪೩ಯಾಜಕನು ಅವನನ್ನು ಪರೀಕ್ಷಿಸಬೇಕು. ಆಗ ಅದರಿಂದುಂಟಾದ ಬಾವು ಕೆಂಪು ಬಿಳುಪು ಮಿಶ್ರವಾಗಿ ಚರ್ಮದಲ್ಲಿನ ಕುಷ್ಠದಂತೆ ತೋರಿದರೆ,
44 quicumque ergo maculatus fuerit lepra et separatus ad arbitrium sacerdotis
೪೪ಅವನು ಕುಷ್ಠರೋಗಿ ಮತ್ತು ಅಶುದ್ಧನು. ಅವನ ತಲೆಯ ಮೇಲೆ ಕುಷ್ಠದ ಗುರುತು ಕಾಣಿಸಿದ್ದರಿಂದ ಅವನು ಅಶುದ್ಧನೆಂದು ಯಾಜಕನು ನಿರ್ಣಯಿಸಬೇಕು.
45 habebit vestimenta dissuta caput nudum os veste contectum contaminatum ac sordidum se clamabit
೪೫“ಯಾರಲ್ಲಿ ಕುಷ್ಠದ ಗುರುತು ಕಾಣಿಸಿತೋ ಅವನು ತನ್ನ ಬಟ್ಟೆಗಳನ್ನು ಹರಿದುಕೊಂಡು, ತಲೆಯನ್ನು ಕೆದರಿಕೊಂಡು, ಬಾಯಿಯನ್ನು ಬಟ್ಟೆಯಿಂದ ಮುಚ್ಚಿಕೊಂಡು ‘ನಾನು ಅಶುದ್ಧನು, ಅಶುದ್ಧನು’ ಎಂದು ಕೂಗಿಕೊಳ್ಳಬೇಕು.
46 omni tempore quo leprosus est et inmundus solus habitabit extra castra
೪೬ಆ ರೋಗದ ಗುರುತುಗಳು ಅವನಲ್ಲಿ ಇರುವ ದಿನಗಳೆಲ್ಲಾ ಅವನು ಅಶುದ್ಧನಾಗಿರುವನು. ಅವನು ಅಶುದ್ಧನಾದುದರಿಂದ ಪ್ರತ್ಯೇಕವಾಗಿಯೇ ವಾಸವಾಗಿರಬೇಕು; ಅವನ ನಿವಾಸವು ಪಾಳೆಯದ ಹೊರಗೆ ಇರಬೇಕು.
47 vestis lanea sive linea quae lepram habuerit
೪೭“ಕುಷ್ಠರೋಗದ ಗುರುತು ಬಟ್ಟೆಯಲ್ಲಿ ಕಂಡು ಬಂದಾಗ ಅದು ಉಣ್ಣೆಯ ಬಟ್ಟೆಯಾಗಲಿ ಅಥವಾ ನಾರಿನ ಬಟ್ಟೆಯಾಗಲಿ,
48 in stamine atque subtemine aut certe pellis vel quicquid ex pelle confectum est
೪೮ನಾರಿನ ಅಥವಾ ಉಣ್ಣೆಯ ಹಾಸಿನಲ್ಲಾಗಲಿ, ಹೆಣಿಗೆಯಲ್ಲಾಗಲಿ ಇಲ್ಲವೆ ತೊಗಲಿನಲ್ಲಾಗಲಿ, ತೊಗಲಿನಿಂದ ಮಾಡಲ್ಪಟ್ಟ ವಸ್ತುವಿನಲ್ಲಾಗಲಿ,
49 si alba aut rufa macula fuerit infecta lepra reputabitur ostendeturque sacerdoti
೪೯ಆ ಬಟ್ಟೆ, ತೊಗಲು, ಹಾಸು, ಹೆಣಿಗೆ, ತೊಗಲಿನ ಸಾಮಾನುಗಳಲ್ಲಿ ಹಸುರಾಗಿ ಇಲ್ಲವೆ ಕೆಂಪಾಗಿ ಮಚ್ಚೆಕಾಣಿಸಿದರೆ ಅದು ಕುಷ್ಠದ ಗುರುತು; ಅದನ್ನು ಯಾಜಕನಿಗೆ ತೋರಿಸಬೇಕು.
50 qui consideratam recludet septem diebus
೫೦ಯಾಜಕನು ಅದನ್ನು ಪರೀಕ್ಷಿಸಿ ನೋಡಿ ಏಳು ದಿನಗಳ ವರೆಗೆ ಪ್ರತ್ಯೇಕವಾಗಿ ಇಡಿಸಬೇಕು.
51 et die septimo rursus aspiciens si crevisse deprehenderit lepra perseverans est pollutum iudicabit vestimentum et omne in quo fuerit inventa
೫೧ಏಳನೆಯ ದಿನದಲ್ಲಿ ಅವನು ಅದನ್ನು ಪರೀಕ್ಷಿಸುವಾಗ ಆ ಬಟ್ಟೆಯ ಹಾಸಿನಲ್ಲಾಗಲಿ ಅಥವಾ ಹೆಣಿಗೆಯಲ್ಲಾಗಲಿ ಇಲ್ಲವೆ ಯಾವುದಾದರೂ ಒಂದು ಕೆಲಸಕ್ಕೆ ಉಪಯೋಗವಾಗಿರುವ ಆ ತೊಗಲಿನಲ್ಲಿ ಆ ಮಚ್ಚೆ ಹರಡಿಕೊಂಡಿದ್ದರೆ ಅದು ಪ್ರಾಣಕ್ಕೆ ಅಪಾಯಕರವಾದ ಕುಷ್ಠವೇ, ಆ ವಸ್ತುವು ಅಶುದ್ಧ.
52 et idcirco conburetur flammis
೫೨ಆ ವಸ್ತುವು ಬಟ್ಟೆಯಾದರೂ, ಹಾಸಾದರೂ, ಹೊಕ್ಕಾದರೂ, ಉಣ್ಣೆಯದಾದರೂ, ನಾರಿನದಾದರೂ ಅಥವಾ ತೊಗಲಿನದಾದರೂ ಅದರಲ್ಲಿ ಪ್ರಾಣಕ್ಕೆ ಅಪಾಯಕರವಾದ ಕುಷ್ಠವಿರುವುದರಿಂದ ಅದನ್ನು ಬೆಂಕಿಯಿಂದ ಸುಡಿಸಿಬಿಡಬೇಕು.
53 quod si eam viderit non crevisse
೫೩ಆದರೆ ಯಾಜಕನು ಪರೀಕ್ಷಿಸುವಾಗ ಆ ವಸ್ತುವಿನಲ್ಲಿ ಅಂದರೆ ಆ ಬಟ್ಟೆ, ಹಾಸು, ಹೆಣಿಗೆ, ತೊಗಲಿನ ಸಾಮಾನು ಇವುಗಳಲ್ಲಿ ಆ ಮಚ್ಚೆ ಹರಡಿಕೊಳ್ಳದಿದ್ದರೆ,
54 praecipiet et lavabunt id in quo lepra est recludetque illud septem diebus aliis
೫೪ಅದನ್ನು ನೀರಿನಿಂದ ತೊಳೆಯಬೇಕೆಂದು ಯಾಜಕನು ಅಪ್ಪಣೆಕೊಟ್ಟು ಇನ್ನು ಏಳು ದಿನಗಳ ತನಕ ಅದನ್ನು ಪ್ರತ್ಯೇಕವಾಗಿ ಇಡಿಸಬೇಕು.
55 et cum viderit faciem quidem pristinam non reversam nec tamen crevisse lepram inmundum iudicabit et igne conburet eo quod infusa sit in superficie vestimenti vel per totum lepra
೫೫ಆ ಮಚ್ಚೆ ಇದ್ದ ವಸ್ತುಗಳನ್ನು ತೊಳೆಸಿದ ಮೇಲೆ ಯಾಜಕನು ಪರೀಕ್ಷಿಸುವಾಗ ಆ ಮಚ್ಚೆಯು ಹರಡಿಕೊಳ್ಳದೆ ಇದ್ದಾಗ್ಯೂ ಅದರ ಬಣ್ಣ ಮೊದಲಿದ್ದಂತೆಯೇ ಇದ್ದರೆ ಆ ವಸ್ತು ಅಶುದ್ಧ. ಕುಷ್ಠರೋಗದ ಗುರುತು ಅದರ ಮೇಲ್ಭಾಗದಿಂದಾಗಲಿ ಅಥವಾ ಕೆಳಭಾಗದಿಂದಾಗಲಿ ಆ ವಸ್ತುವಿನೊಳಗೆ ವ್ಯಾಪಿಸಿದ್ದರಿಂದ ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.
56 sin autem obscurior fuerit locus leprae postquam vestis est lota abrumpet eum et a solido dividet
೫೬ಆದರೆ ತೊಳೆದ ಬಟ್ಟೆಯನ್ನು ಯಾಜಕನು ಪರೀಕ್ಷಿಸುವಾಗ ಅದರಲ್ಲಿದ್ದ ಮಚ್ಚೆ ಮೊಬ್ಬಾಗಿಹೋಗಿದ್ದರೆ ಅವನು ಆ ಮಚ್ಚೆ ಇರುವ ಭಾಗವನ್ನು ಆ ಬಟ್ಟೆಯಿಂದಾಗಲಿ, ತೊಗಲಿನಿಂದಾಗಲಿ, ಹಾಸಿನಿಂದಾಗಲಿ, ಹೆಣಿಗೆಯಿಂದಾಗಲಿ ಕತ್ತರಿಸಬೇಕು.
57 quod si ultra apparuerit in his locis quae prius inmaculata erant lepra volatilis et vaga debet igne conburi
೫೭ಆ ಮೇಲೆಯೂ ಕುಷ್ಠದ ಮಚ್ಚೆ ಆ ಬಟ್ಟೆಯಲ್ಲಾಗಲಿ, ಹಾಸಿನಲ್ಲಾಗಲಿ, ಹೆಣಿಗೆಯಲ್ಲಾಗಲಿ ಅಥವಾ ತೊಗಲಿನ ಸಾಮಾನಿನಲ್ಲಾಗಲಿ ಕಂಡು ಬಂದರೆ ಕುಷ್ಠರೋಗವು ಇನ್ನು ಅದರಲ್ಲಿ ಉಂಟೆಂದು ತಿಳಿದುಕೊಳ್ಳಬೇಕು. ಆ ಮಚ್ಚೆ ಇರುವ ವಸ್ತುವನ್ನೇ ಬೆಂಕಿಯಿಂದ ಸುಟ್ಟುಬಿಡಬೇಕು.
58 si cessaverit lavabit ea quae pura sunt secundo et munda erunt
೫೮ಆ ಬಟ್ಟೆಯನ್ನಾಗಲಿ, ಹಾಸನ್ನಾಗಲಿ, ಹೆಣಿಗೆಯನ್ನಾಗಲಿ ಅಥವಾ ತೊಗಲಿನ ಸಾಮಾನನ್ನಾಗಲಿ ತೊಳೆದನಂತರ ಆ ಮಚ್ಚೆ ಕಾಣದೆಹೋದರೆ ಅದನ್ನು ಎರಡನೆಯ ಸಾರಿ ತೊಳೆಯಬೇಕು; ಆಗ ಅದು ಶುದ್ಧವಾಗುವುದು.
59 ista est lex leprae vestimenti lanei et linei staminis atque subteminis omnisque supellectilis pelliciae quomodo mundari debeat vel contaminari
೫೯“ಉಣ್ಣೇ ಬಟ್ಟೆಯಲ್ಲಾಗಲಿ, ನಾರಿನ ಬಟ್ಟೆಯಲ್ಲಾಗಲಿ, ಹಾಸಿನಲ್ಲಾಗಲಿ, ಹೆಣಿಗೆಯಲ್ಲಾಗಲಿ ಅಥವಾ ತೊಗಲಿನ ಸಾಮಾನಿನಲ್ಲಾಗಲಿ ಕಂಡುಬಂದ ಕುಷ್ಠರೋಗದ ಗುರುತಿನ ವಿಷಯವಾದ ನಿಯಮ ಇದೇ. ಅದು ಶುದ್ಧವೆಂದು ನಿರ್ಣಯಿಸಬೇಕೋ ಅಥವಾ ಅಶುದ್ಧವೆಂದು ನಿರ್ಣಯಿಸಬೇಕೋ ಎಂಬುದು ಇದರಿಂದ ತಿಳಿಯುವುದು” ಎಂದು ಹೇಳಿದನು.