< Psalmorum 114 >

1 alleluia in exitu Israhel de Aegypto domus Iacob de populo barbaro
ಇಸ್ರಾಯೇಲರು ಐಗುಪ್ತ ದೇಶವನ್ನೂ, ಯಾಕೋಬನ ಮನೆತನದವರು ಅನ್ಯಜನಾಂಗವನ್ನು ಬಿಟ್ಟ ಮೇಲೆ,
2 facta est Iudaea sanctificatio eius Israhel potestas eius
ಯೆಹೂದವು ದೇವರ ಪರಿಶುದ್ಧ ವಾಸಸ್ಥಾನವೂ, ಇಸ್ರಾಯೇಲ್ ಆತನ ರಾಜ್ಯವೂ ಆಯಿತು.
3 mare vidit et fugit Iordanis conversus est retrorsum
ಸಮುದ್ರವು ಕಂಡು ಓಡಿಹೋಯಿತು; ಯೊರ್ದನ್ ಹೊಳೆಯು ಹಿಂದಿರುಗಿತು.
4 montes exultaverunt ut arietes colles sicut agni ovium
ಪರ್ವತಗಳು ಟಗರುಗಳಂತೆಯೂ, ಗುಡ್ಡಗಳು ಕುರಿಮರಿಗಳಂತೆಯೂ ಹಾರಾಡಿದವು.
5 quid est tibi mare quod fugisti et tu Iordanis quia conversus es retrorsum
ಸಮುದ್ರವೇ, ನಿನಗೇನಾಯಿತು? ಏಕೆ ಓಡಿ ಹೋಗುತ್ತೀ? ಯೊರ್ದನೇ, ಏಕೆ ಹಿಂದಿರುಗುತ್ತೀ?
6 montes exultastis sicut arietes et colles sicut agni ovium
ಪರ್ವತಗಳೇ, ನೀವು ಟಗರುಗಳಂತೆಯೂ, ಗುಡ್ಡಗಳೇ, ನೀವು ಕುರಿಮರಿಗಳಂತೆಯೂ ಏಕೆ ಹಾರಾಡುತ್ತೀರಿ?
7 a facie Domini mota est terra a facie Dei Iacob
ಭೂಲೋಕವೇ, ಕರ್ತನು ಪ್ರತ್ಯಕ್ಷನಾಗಿದ್ದಾನೆ, ಯಾಕೋಬನ ದೇವರು ನಿನ್ನ ಮುಂದೆ ಇದ್ದಾನೆ, ಕಂಪಿಸು.
8 qui convertit petram in stagna aquarum et rupem in fontes aquarum
ಆತನು ಬಂಡೆಯನ್ನು ಕೆರೆಯನ್ನಾಗಿಯೂ, ಶಿಲೆಯನ್ನು ಬುಗ್ಗೆಯನ್ನಾಗಿಯೂ ಮಾರ್ಪಡಿಸುತ್ತಾನೆ.

< Psalmorum 114 >