< Psalmorum 68 >
1 in finem David psalmus cantici exsurgat Deus et dissipentur inimici eius et fugiant qui oderunt eum a facie eius
೧ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು. ದಾವೀದನ ಕೀರ್ತನೆ; ಹಾಡು. ದೇವರು ಎದ್ದು ಹೊರಡುವಾಗ, ಆತನ ವೈರಿಗಳು ಚದರಿಹೋಗಲಿ; ಆತನ ಹಗೆಗಾರರು ಆತನ ಎದುರಿನಿಂದ ಓಡಿಹೋಗಲಿ.
2 sicut deficit fumus deficiant sicut fluit cera a facie ignis sic pereant peccatores a facie Dei
೨ಹೊಗೆಯು ಗಾಳಿಯಿಂದ ಹೇಗೋ, ಹಾಗೆ ಅವರು ಆತನಿಂದ ಹಾರಿಹೋಗಲಿ; ಬೆಂಕಿಯ ಮುಂದೆ ಮೇಣವು ಕರಗಿ ಲಯವಾಗಿ ಹೋಗುವಂತೆ, ದೇವರ ಎದುರಿನಲ್ಲಿ ದುಷ್ಟರು ನಾಶವಾಗಿ ಹೋಗಲಿ.
3 et iusti epulentur exultent in conspectu Dei delectentur in laetitia
೩ನೀತಿವಂತರಾದರೋ ದೇವರ ಸನ್ನಿಧಿಯಲ್ಲಿ ಹರ್ಷಿಸಲಿ; ಉಲ್ಲಾಸಿಸಲಿ, ಆನಂದಧ್ವನಿಮಾಡಲಿ.
4 cantate Deo psalmum dicite nomini eius iter facite ei qui ascendit super occasum Dominus nomen illi et exultate in conspectu eius turbabuntur a facie eius
೪ದೇವರಿಗೆ ಗಾಯನಮಾಡಿರಿ; ಆತನ ನಾಮವನ್ನು ಭಜಿಸಿರಿ; ಅರಣ್ಯದಲ್ಲಿ ಸವಾರಿಮಾಡುತ್ತಾ ಬರುವಾತನಿಗೆ ರಾಜಮಾರ್ಗವನ್ನು ಸಿದ್ಧಮಾಡಿರಿ. ಆತನ ನಾಮಧೇಯ ಯಾಹು; ಆತನ ಸನ್ನಿಧಿಯಲ್ಲಿ ಉಲ್ಲಾಸಿಸಿರಿ.
5 patris orfanorum et iudicis viduarum Deus in loco sancto suo
೫ಪರಿಶುದ್ಧ ವಾಸಸ್ಥಾನದಲ್ಲಿರುವ ದೇವರು ದಿಕ್ಕಿಲ್ಲದವರಿಗೆ ತಂದೆಯೂ, ವಿಧವೆಯರಿಗೆ ಸಹಾಯಕನೂ ಆಗಿದ್ದಾನೆ.
6 Deus inhabitare facit unius moris in domo qui educit vinctos in fortitudine similiter eos qui exasperant qui habitant in sepulchris
೬ಒಬ್ಬೊಂಟಿಗರನ್ನು ಸಂಸಾರಿಕರಾಗುವಂತೆ ಮಾಡುತ್ತಾನೆ; ಸೆರೆಯಲ್ಲಿರುವವರನ್ನು ಬಿಡಿಸಿ ಸುಖಾವಸ್ಥೆಗೆ ತರುತ್ತಾನೆ. ದ್ರೋಹಿಗಳಾದರೋ ಮರುಭೂಮಿಯಲ್ಲಿ ಉಳಿಯಬೇಕಾಗುವುದು.
7 Deus cum egredereris in conspectu populi tui cum pertransieris in deserto diapsalma
೭ದೇವರೇ, ನೀನು ನಿನ್ನ ಪ್ರಜೆಯ ಮುಂದೆ ಹೊರಟು, ಅರಣ್ಯಮಾರ್ಗವಾಗಿ ಪ್ರಯಾಣ ಮಾಡುತ್ತಾ ಬರುವಾಗ, (ಸೆಲಾ)
8 terra mota est etenim caeli distillaverunt a facie Dei Sinai a facie Dei Israhel
೮ದೇವರು ಪ್ರತ್ಯಕ್ಷನಾಗಿದ್ದಾನೆಂದು ಭೂಮಿಯು ಕಂಪಿಸಿತು; ಮೇಘಮಂಡಲವು ಮಳೆಸುರಿಸಿತು. ಇಸ್ರಾಯೇಲರ ದೇವರು ಪ್ರತ್ಯಕ್ಷನಾಗಿದ್ದಾನೆಂದು, ಆ ಸೀನಾಯ್ ಬೆಟ್ಟವು ಕದಲಿತು.
9 pluviam voluntariam segregabis Deus hereditati tuae et infirmata est tu vero perfecisti eam
೯ದೇವರೇ, ನೀನು ಹೇರಳವಾಗಿ ಮಳೆಸುರಿಸಿ, ಬಾಯ್ದೆರೆದಿದ್ದ ನಿನ್ನ ಸ್ವತ್ತನ್ನು ಶಾಂತಪಡಿಸಿದಿ.
10 animalia tua habitant in ea parasti in dulcedine tua pauperi Deus
೧೦ನಿನ್ನ ಪ್ರಜಾಮಂಡಲಿಯು ಅದರಲ್ಲಿ ವಾಸಮಾಡಿತು. ದೇವರೇ, ನೀನು ದಯಾಪರನಾಗಿ ದರಿದ್ರರಿಗೆ ಬೇಕಾದದ್ದೆಲ್ಲವನ್ನು ಒದಗಿಸಿಕೊಟ್ಟಿ.
11 Dominus dabit verbum evangelizantibus virtute multa
೧೧ಕರ್ತನು ಆಜ್ಞಾಪಿಸಿದನು; ಶುಭವಾರ್ತೆಯನ್ನು ಪ್ರಸಿದ್ಧಪಡಿಸುವ ಸ್ತ್ರೀಸಮೂಹವು ಎಷ್ಟೋ ದೊಡ್ಡದು.
12 rex virtutum dilecti dilecti; et speciei domus dividere spolia
೧೨ಓಡಿ ಹೋಗುತ್ತಾರೆ; ಸೈನ್ಯದೊಡನೆ ಅರಸುಗಳು ಓಡಿ ಹೋಗುತ್ತಾರೆ; ಮನೆಯಲ್ಲಿದ್ದ ಸ್ತ್ರೀಯರು ಕೊಳ್ಳೆಯನ್ನು ಹಂಚುತ್ತಾರೆ.
13 si dormiatis inter medios cleros pinnae columbae deargentatae et posteriora dorsi eius in pallore auri
೧೩ನೀವು ಕುರಿಹಟ್ಟಿಗಳಲ್ಲಿ ಮಲಗಿಕೊಂಡಿರುವುದೇನು? ಪಾರಿವಾಳದ ರೆಕ್ಕೆಗಳು ಬೆಳ್ಳಿಯಿಂದಲೂ, ಅದರ ಗರಿಗಳು ಬಂಗಾರದಿಂದಲೂ ಥಳಥಳಿಸುತ್ತವೆ.
14 dum discernit Caelestis reges super eam nive dealbabuntur in Selmon
೧೪ಸರ್ವಶಕ್ತನು ಅಲ್ಲಿ ರಾಜರನ್ನು ಚದುರಿಸಿದಾಗ, ಸಲ್ಮೋನಿನ ಮೇಲೆ ಹಿಮವು ಬಿದ್ದಿತು.
15 mons Dei mons pinguis mons coagulatus mons pinguis
೧೫ಬಾಷಾನಿನ ಪರ್ವತವು ಮಹೋನ್ನತವಾಗಿದೆ; ಆ ಬಾಷಾನ್ ಗಿರಿಯು ಶಿಖರಗಳುಳ್ಳದ್ದೇ.
16 ut quid suspicamini montes coagulatos mons in quo beneplacitum est Deo habitare in eo etenim Dominus habitabit in finem
೧೬ಎಲೈ, ಶಿಖರೋನ್ನತಪರ್ವತಗಳೇ, ದೇವರು ತನ್ನ ನಿವಾಸಕ್ಕಾಗಿ ಆರಿಸಿಕೊಂಡಿರುವ ಈ ಪರ್ವತವನ್ನು ನೀವು ಓರೆಗಣ್ಣಿನಿಂದ ನೋಡುವುದೇಕೆ? ಯೆಹೋವನು ಸದಾಕಾಲವೂ ಇದರಲ್ಲೇ ವಾಸಿಸುವನು.
17 currus Dei decem milibus multiplex milia laetantium Dominus in eis in Sina in sancto
೧೭ದೇವರಿಗೆ ಸಹಸ್ರಾರು ಮಾತ್ರವಲ್ಲ ಲಕ್ಷಾಂತರ ರಥಗಳು ಇವೆ. ಕರ್ತನಾದ ಯೆಹೋವನು ಅವುಗಳ ಸಮೇತವಾಗಿ, ಸೀನಾಯ್ ಬೆಟ್ಟದಿಂದ ಪವಿತ್ರಾಲಯಕ್ಕೆ ಬಂದಿದ್ದಾನೆ.
18 ascendisti in altum cepisti captivitatem accepisti dona in hominibus etenim non credentes inhabitare Dominum Deus
೧೮ನೀನು ಜಯಿಸಿದ ಬಹು ಜನರನ್ನು ಸೆರೆಹಿಡಿದುಕೊಂಡು ಹೋಗಿ, ನಿನಗೆ ದ್ರೋಹಿಗಳಾದ ಮನುಷ್ಯರಿಂದಲೇ ಕಪ್ಪಗಳನ್ನು ಸಂಗ್ರಹಿಸಿ, ದೇವನಾದ ಯಾಹುವು ಅಲ್ಲೇ ವಾಸಿಸುವಂತೆ, ಉನ್ನತಸ್ಥಾನಕ್ಕೆ ಏರಿದ್ದೀ.
19 benedictus Dominus die cotidie prosperum iter faciet nobis Deus salutarium nostrorum diapsalma
೧೯ಅನುದಿನವೂ ನಮ್ಮ ಭಾರವನ್ನು ಹೊರುತ್ತಿರುವ ಕರ್ತನಿಗೆ ಸ್ತೋತ್ರವಾಗಲಿ. ನಮ್ಮನ್ನು ರಕ್ಷಿಸುವ ದೇವರು ಆತನೇ. (ಸೆಲಾ)
20 Deus noster Deus salvos faciendi et Domini Domini exitus mortis
೨೦ನಮ್ಮ ದೇವರು ನಮ್ಮನ್ನು ವಿಮೋಚಿಸುವುದಕ್ಕೋಸ್ಕರ ದೇವರಾಗಿದ್ದಾನೆ; ಕರ್ತನಾದ ಯೆಹೋವನು ಮರಣಕ್ಕೆ ತಪ್ಪಿಸ ಶಕ್ತನಾಗಿದ್ದಾನೆ.
21 verumtamen Deus confringet capita inimicorum suorum verticem capilli perambulantium in delictis suis
೨೧ಆಹಾ, ಆತನು ತನ್ನ ವೈರಿಗಳ ಶಿರಸ್ಸುಗಳನ್ನೂ, ಸ್ವೇಚ್ಛೆಯಿಂದ ಪಾಪದಲ್ಲಿ ಪ್ರವರ್ತಿಸುವವರ ತುಂಬುಗೂದಲಿನ ತಲೆಗಳನ್ನೂ ಒಡೆದು ನಿರ್ಮೂಲ ಮಾಡುವನು.
22 dixit Dominus ex Basan convertam convertam in profundis maris
೨೨ಕರ್ತನು, “ನಾನು ಅವರನ್ನು ಬಾಷಾನಿನಿಂದಲೂ, ಸಮುದ್ರ ತಳದಿಂದಲೂ ಹಿಡಿದು ತರುವೆನು.
23 ut intinguatur pes tuus in sanguine lingua canum tuorum ex inimicis ab ipso
೨೩ಆಗ ನೀನು ನಿನ್ನ ಶತ್ರುಗಳ ರಕ್ತದಲ್ಲಿ ಕಾಲಾಡಿಸುವಿ. ನಿನ್ನ ನಾಯಿಗಳ ನಾಲಿಗೆಗಳಿಗೆ ವೈರಿಗಳ ದೇಹದಲ್ಲಿ ಪಾಲುಸಿಕ್ಕುವುದು” ಎಂದು ನುಡಿದನು.
24 viderunt ingressus tui Deus ingressus Dei mei regis mei qui est in sancto
೨೪ದೇವರೇ, ನಿನ್ನ ಮೆರವಣಿಗೆ ಶೋಭಿಸುತ್ತದೆ; ನನ್ನ ಅರಸನಾದ ದೇವರು ತನ್ನ ಪರಿಶುದ್ಧಾಲಯಕ್ಕೆ ಮೆರವಣಿಗೆಯಾಗಿ ಪ್ರವೇಶಿಸುತ್ತಾನೆ.
25 praevenerunt principes coniuncti psallentibus in medio iuvencularum tympanistriarum
೨೫ಮುಂಭಾಗದಲ್ಲಿ ಹಾಡುವವರೂ, ಹಿಂಭಾಗದಲ್ಲಿ ವಾದ್ಯಬಾರಿಸುವವರೂ, ಸುತ್ತಲೂ ದಮ್ಮಡಿಬಡಿಯುವ ಸ್ತ್ರೀಯರೂ ಹೋಗುತ್ತಾ,
26 in ecclesiis benedicite Deum Dominum de fontibus Israhel
೨೬“ಇಸ್ರಾಯೇಲ್ ವಂಶಸ್ಥರೇ, ಸಮೂಹವಾಗಿ ದೇವರಾದ ಕರ್ತನನ್ನು ಕೊಂಡಾಡಿರಿ” ಎಂದು ಹಾಡುತ್ತಾರೆ.
27 ibi Beniamin adulescentulus in mentis excessu principes Iuda duces eorum principes Zabulon principes Nepthali
೨೭ಅಲ್ಲಿ ಎಲ್ಲರಿಗೆ ನಾಯಕರಾಗಿರುವ ಬೆನ್ಯಾಮೀನ್ ಎಂಬ ಸಣ್ಣ ಗೋತ್ರದವರೂ, ಗುಂಪಾಗಿ ಬರುವ ಯೆಹೂದ ಕುಲದ ಪ್ರಭುಗಳೂ, ಜೆಬುಲೂನ್, ನಫ್ತಾಲಿ ಗೋತ್ರಗಳ ಪ್ರಧಾನರೂ ಇದ್ದಾರೆ.
28 manda Deus virtutem tuam confirma Deus hoc quod operatus es nobis
೨೮ದೇವರೇ, ನಿನ್ನ ಪ್ರತಾಪವನ್ನು ಆಜ್ಞಾಪಿಸು. ನಿನ್ನ ಮಂದಿರದಲ್ಲಿ ಆಸೀನನಾಗಿ ನಮಗೋಸ್ಕರ ಮಹತ್ಕಾರ್ಯಗಳನ್ನು ನಡೆಸಿದ ದೇವರೇ, ನಿನ್ನ ಬಲವನ್ನು ಪ್ರಕಟಿಸು.
29 a templo tuo in Hierusalem tibi adferent reges munera
೨೯ಅರಸುಗಳು ಯೆರೂಸಲೇಮ್ ಪಟ್ಟಣಕ್ಕೆ ನಿನಗೋಸ್ಕರ ಕಾಣಿಕೆಗಳನ್ನು ತಂದು ಸಮರ್ಪಿಸಲಿ.
30 increpa feras harundinis congregatio taurorum in vaccis populorum ut excludant eos qui probati sunt argento dissipa gentes quae bella volunt
೩೦ಆಪಿನೊಳಗೆ ವಾಸಿಸುವ ನೀರಾನೆ, ಕರುಗಳ ಸಹಿತವಾದ ಹೋರಿಗಳ ಗುಂಪು, ಇವುಗಳಂತಿರುವ ಶತ್ರುಜನಾಂಗಗಳನ್ನು ಬೆದರಿಸು. ಅವು ಬೆಳ್ಳಿಗಟ್ಟಿಗಳನ್ನು ತಂದು ನಿನಗೆ ಅಡ್ಡಬೀಳಲಿ. ಯುದ್ಧಾಸಕ್ತ ಜನಾಂಗಗಳನ್ನು ಚದುರಿಸಿಬಿಡು.
31 venient legati ex Aegypto Aethiopia praeveniet manus eius Deo
೩೧ಐಗುಪ್ತ ದೇಶದಿಂದ ರಾಯಭಾರಿಗಳು ಬರುವರು; ಕೂಷ್ ದೇಶದವರ ಕೈಗಳು ದೇವರಿಗೆ ಕಾಣಿಕೆಗಳನ್ನು ನೀಡಲಿಕ್ಕೆ ಅವಸರಪಡುವವು.
32 regna terrae cantate Deo psallite Domino diapsalma psallite Deo
೩೨ಭೂರಾಜ್ಯಗಳೇ, ದೇವರಿಗೆ ಗಾಯನಮಾಡಿರಿ; ಕರ್ತನನ್ನು ಸಂಕೀರ್ತಿಸಿರಿ. (ಸೆಲಾ)
33 qui ascendit super caelum caeli ad orientem ecce dabit voci suae vocem virtutis
೩೩ಅನಾದಿಕಾಲದಿಂದಿರುವ ಮಹೋನ್ನತಾಕಾಶದಲ್ಲಿ ವಾಹನಾರೂಢನಾಗಿ ಇರುವಾತನನ್ನು ಸ್ತುತಿಸಿರಿ. ಕೇಳಿರಿ; ಆತನ ಗರ್ಜನೆಯು ಮಹಾಘೋರವಾದದ್ದು.
34 date gloriam Deo super Israhel magnificentia eius et virtus eius in nubibus
೩೪ದೇವರ ಪ್ರತಾಪವನ್ನು ಕೊಂಡಾಡಿರಿ. ಆತನ ಗಾಂಭೀರ್ಯವು ಇಸ್ರಾಯೇಲರ ಆಶ್ರಯವಾಗಿದೆ; ಆತನ ಶಕ್ತಿಯು ಮೇಘಮಾರ್ಗದಲ್ಲೆಲ್ಲಾ ವ್ಯಾಪಿಸಿದೆ.
35 mirabilis Deus in sanctis suis Deus Israhel ipse dabit virtutem et fortitudinem plebi suae benedictus Deus
೩೫ದೇವರೇ, ಪರಿಶುದ್ಧಾಲಯದಲ್ಲಿರುವ ನೀನು ಮಹಾಭಯಂಕರನು. ಇಸ್ರಾಯೇಲರ ದೇವರು ತನ್ನ ಪ್ರಜೆಗೆ ಬಲಪರಾಕ್ರಮಗಳನ್ನು ದಯಪಾಲಿಸುವನು. ದೇವರಿಗೆ ಸ್ತೋತ್ರ.