< Pirmā Laiku 17 >
1 Un notikās, kad Dāvids savā namā dzīvoja, tad Dāvids sacīja uz pravieti Nātanu: redzi, es dzīvoju ciedru namā, bet Tā Kunga derības šķirsts mīt starp telts deķiem.
೧ದಾವೀದನು ತನ್ನ ಅರಮನೆಯಲ್ಲಿ ವಾಸಿಸುತ್ತಿದ್ದಾಗ ಒಂದು ದಿನ ಅವನು ಪ್ರವಾದಿಯಾದ ನಾತಾನನನ್ನು ಬರಲು ಹೇಳಿ, “ನೋಡು, ನಾನು ದೇವದಾರುಮರದ ಅರಮನೆಯಲ್ಲಿ ವಾಸವಾಗಿದ್ದೇನೆ. ಯೆಹೋವನ ಒಡಂಬಡಿಕೆ ಮಂಜೂಷವಾದರೋ ಬಟ್ಟೆಯ ಮನೆಯಲ್ಲಿ ಇರುತ್ತದೆ” ಎಂದು ಹೇಳಿದನು.
2 Tad Nātans sacīja uz Dāvidu: dari visu, kas ir tavā sirdī, jo Dievs ir ar tevi.
೨ನಾತಾನನು ದಾವೀದನಿಗೆ, “ನಿನಗೆ ಮನಸ್ಸಿದ್ದಂತೆ ಮಾಡು, ದೇವರು ನಿನ್ನ ಸಂಗಡ ಇರುತ್ತಾನೆ” ಎಂದನು.
3 Bet tai pašā naktī Dieva vārds notika uz Nātanu sacīdams:
೩ಅದೇ ರಾತ್ರಿಯಲ್ಲಿ ದೇವರು ನಾತಾನನಿಗೆ ಆಜ್ಞಾಪಿಸಿದ್ದೇನೆಂದರೆ,
4 Ej un saki manam kalpam Dāvidam: tā saka Tas Kungs: tev nebūs Man namu celt par mājas vietu.
೪“ಹೋಗಿ ನನ್ನ ಸೇವಕನಾದ ದಾವೀದನಿಗೆ, ‘ನೀನು ನನಗೆ ಆಲಯವನ್ನು ಕಟ್ಟಬಾರದು.
5 Jo Es namā neesmu mitis no tās dienas, kad Israēli esmu izvedis, līdz šai dienai, bet Es esmu gājis no telts uz telti un no dzīvokļa uz dzīvokli.
೫ನಾನು ಇಸ್ರಾಯೇಲರನ್ನು ಐಗುಪ್ತದೇಶದಿಂದ ಬರಮಾಡಿದಂದಿನಿಂದ ಇಂದಿನ ವರೆಗೂ ಮನೆಯಲ್ಲಿ ವಾಸಮಾಡಲಿಲ್ಲ. ಗುಡಾರಗಳಲ್ಲಿ ವಾಸಿಸುತ್ತಾ ಇದ್ದೆನು.
6 Visu to laiku, kad Es ar visu Israēli esmu staigājis, vai esmu vārdu runājis uz kādu no Israēla soģiem, kam Es pavēlējis Savus ļaudis ganīt, sacīdams: kāpēc jūs Man neuztaisiet ciedru namu?
೬ನಾನು ಇಸ್ರಾಯೇಲರ ಮಧ್ಯದಲ್ಲಿ ಸಂಚರಿಸುತ್ತಿದ್ದಾಗೆಲ್ಲಾ ನನ್ನ ಜನರಾದ ಇಸ್ರಾಯೇಲರನ್ನು ಪಾಲಿಸುವುದಕ್ಕೋಸ್ಕರ ನನ್ನಿಂದ ನೇಮಿಸಲ್ಪಟ್ಟ ಯಾವ ನ್ಯಾಯಸ್ಥಾಪಕನ್ನಾದರೂ ನೀವು ನನಗೋಸ್ಕರ ದೇವದಾರುಮರದ ಮನೆಯನ್ನು ಏಕೆ ಕಟ್ಟಲಿಲ್ಲ ಎಂದು ಕೇಳಿದೆನೋ ಎಂಬುದಾಗಿ ಯೆಹೋವನು ಅನ್ನುತ್ತಾನೆ’” ಎಂದು ಹೇಳು ಎಂದನು.
7 Tad nu saki tā uz Manu kalpu Dāvidu: tā saka Tas Kungs Cebaot: Es tevi esmu ņēmis no ganības, no sīkiem lopiem, lai tu Maniem Israēla ļaudīm būtu par valdnieku.
೭ಇದಲ್ಲದೆ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನೆಂದರೆ, “ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ, ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ಅಡವಿಯಿಂದ ಕರೆದುಕೊಂಡು ಬಂದು ನನ್ನ ಪ್ರಜೆಗಳಾದ ಇಸ್ರಾಯೇಲರಿಗೆ ನಾಯಕನನ್ನಾಗಿ ನೇಮಿಸಿದೆನು.
8 Un Es ar tevi esmu bijis visur, kur tu esi gājis, un esmu izdeldējis visus tavus ienaidniekus tavā priekšā un tev cēlis augstu vārdu, kā tiem lieliem kungiem vārds ir virs zemes.
೮ನೀನು ಹೋದಲ್ಲೆಲ್ಲಾ ನಾನು ನಿನ್ನ ಸಂಗಡ ಇದ್ದೆನು. ನಿನ್ನ ಶತ್ರುಗಳನ್ನೆಲ್ಲಾ ನಿನ್ನೆದುರಿನಲ್ಲಿಯೇ ಸಂಹರಿಸಿಬಿಟ್ಟೆನು. ಲೋಕದ ಮಹಾಪುರುಷರ ಹೆಸರಿನಂತೆ ನಿನ್ನ ಹೆಸರನ್ನೂ ಪ್ರಸಿದ್ಧಪಡಿಸುವೆನು.
9 Un Saviem Israēla ļaudīm Es esmu gādājis vietu un tos dēstījis, ka tie savā vietā dzīvo un vairs netop šaubīti, un netikli ļaudis tos vairs nespaida, kā senāk,
೯ನನ್ನ ಪ್ರಜೆಗಳಾದ ಇಸ್ರಾಯೇಲರಿಗೆ ಒಂದು ಸ್ಥಳವನ್ನು ಕೊಟ್ಟು ಅದರಲ್ಲಿ ಅವರನ್ನು ನೆಲೆಗೊಳಿಸುವೆನು. ಅವರು ಇನ್ನು ಮೇಲೆ ಯಾವ ಭಯವೂ ಇಲ್ಲದೆ ಅಲ್ಲಿ ವಾಸಮಾಡುವರು.
10 Un no tās dienas, kad Es soģus iecēlu pār Saviem Israēla ļaudīm. Un visus tavus ienaidniekus Es esmu pazemojis un tev daru zināmu, ka Tas Kungs tev cels namu.
೧೦ಪೂರ್ವಕಾಲದಲ್ಲೂ, ನಾನು ನನ್ನ ಜನರಾದ ಇಸ್ರಾಯೇಲರಿಗಾಗಿ ನೇಮಿಸಿದ ನ್ಯಾಯಸ್ಥಾಪಕರ ಕಾಲದಿಂದೀಚೆಗೆ ದುಷ್ಟರು ಅವರನ್ನು ಕುಗ್ಗಿಸಿದಂತೆ ಇನ್ನು ಕುಗ್ಗಿಸುವುದಿಲ್ಲ. ನಿನ್ನ ಶತ್ರುಗಳನ್ನು ನಿನಗೆ ಅಧೀನಮಾಡುವೆನು. ಇದಲ್ಲದೆ ಯೆಹೋವನಾದ ನಾನು ನಿನಗೋಸ್ಕರ ಒಂದು ಮನೆಯನ್ನು ಕಟ್ಟುವೆನು ಎಂದು ಮಾತುಕೊಡುತ್ತೇನೆ.
11 Un notiks, kad tavs laiks būs pagājis, kad tu pie saviem tēviem iesi, tad Es pamodināšu tavu dzimumu pēc tevis, kas būs no taviem bērniem, un apstiprināšu viņa valstību.
೧೧ನಿನ್ನ ಆಯುಷ್ಕಾಲವು ಮುಗಿದು ನೀನು ಪೂರ್ವಿಕರ ಬಳಿಗೆ ಸೇರಿದ ಮೇಲೆ, ನಿನ್ನ ಮಕ್ಕಳಲ್ಲಿ ಒಬ್ಬನನ್ನು ಅಭಿವೃದ್ಧಿಪಡಿಸಿ, ಅವನ ರಾಜ್ಯವನ್ನು ಸ್ಥಿರಪಡಿಸುವೆನು.
12 Tas Man uztaisīs namu un Es apstiprināšu viņa goda krēslu mūžīgi.
೧೨ಅವನು ನನಗಾಗಿ ಒಂದು ಮನೆಯನ್ನು ಕಟ್ಟುವನು. ನಾನು ಅವನ ಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು.
13 Es tam būšu par tēvu un tas Man būs par dēlu, un Savu žēlastību Es no viņa neatraušu, kā Es to esmu atrāvis no tā, kas bija tavā priekšā.
೧೩ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು. ನನ್ನ ಕೃಪೆಯನ್ನು ನಿನಗಿಂತ ಮುಂಚೆ ಇದ್ದವನಿಂದ ತೆಗೆದು ಹಾಕಿದ ಹಾಗೆ ಅವನಿಂದ ತೆಗೆಯುವುದಿಲ್ಲ.
14 Bet Es to Manā namā un Manā valstībā iecelšu mūžīgi, ka viņa goda krēsls pastāv mūžīgi.
೧೪ಅವನನ್ನು ನನ್ನ ಮನೆಯಲ್ಲಿಯೂ, ನನ್ನ ರಾಜ್ಯದಲ್ಲಿಯೂ ಸದಾ ಸ್ಥಿರಗೊಳಿಸುವೆನು. ಅವನ ಸಿಂಹಾಸನವು ಶಾಶ್ವತವಾಗಿರುವುದು” ಎಂಬುದೇ.
15 Un kad Nātans pēc visiem šiem vārdiem un pēc šīs parādīšanas ar Dāvidu bija runājis,
೧೫ನಾತಾನನು ತನಗುಂಟಾದ ದರ್ಶನದ ಈ ಎಲ್ಲಾ ಮಾತುಗಳನ್ನು ದಾವೀದನಿಗೆ ಹೇಳಿದನು.
16 Tad ķēniņš Dāvids nāca un palika Tā Kunga priekšā un sacīja: kas es esmu, Kungs Dievs, un kas ir mans nams, ka Tu mani līdz šejienei esi vadījis?
೧೬ಆಗ ಅರಸನಾದ ದಾವೀದನು ಹೋಗಿ ಯೆಹೋವನ ಸನ್ನಿಧಿಯಲ್ಲಿ ಕುಳಿತುಕೊಂಡು ಹೇಳಿದ್ದೇನೆಂದರೆ, “ದೇವರೇ, ಯೆಹೋವನೇ, ನನ್ನಂಥವನಿಗೆ ಈ ಪದವಿಯನ್ನು ಅನುಗ್ರಹಿಸಿದ್ದಿ, ನಾನೆಷ್ಟರವನು? ನನ್ನ ಮನೆ ಎಷ್ಟರದು?
17 Un tas Tev vēl bijis maz, ak Dievs! Bet Tu vēl uz Sava kalpa namu esi runājis par nākošiem ilgiem laikiem un mani esi uzlūkojis pēc cilvēka vīzes, Tu Dievs Kungs augstībā.
೧೭ದೇವರೇ, ಇದು ಸಾಲದೆಂದೆಣಿಸಿ, ನಿನ್ನ ಸೇವಕನ ಮುಂಬರುವ ಸಂತಾನದ ವಿಷಯವಾಗಿಯೂ ನನಗೆ ವಾಗ್ದಾನಮಾಡಿರುವೆ. ದೇವರೇ, ಯೆಹೋವನೇ, ನಾನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ನೀನು ನನ್ನನ್ನು ಕಟಾಕ್ಷಿಸಿದ್ದೀ.
18 Un ko lai Dāvids vēl uz Tevi saka par Tava kalpa godību? Bet Tu gan pazīsti Savu kalpu.
೧೮ನೀನು ನಿನ್ನ ಸೇವಕನಾದ ದಾವೀದನನ್ನು ಬಲ್ಲೆ. ಅವನು ತನಗುಂಟಾದ ಘನತೆಯನ್ನು ಕುರಿತು ಇನ್ನೇನು ಹೇಳಾನು.
19 Kungs, Tava kalpa labad un pēc Tavas sirds Tu visas šās lielās lietas esi darījis, un visas šās augstās lietas darījis zināmas.
೧೯ಯೆಹೋವನೇ, ನಿನ್ನ ಸೇವಕನ ಮೇಲಿಗಾಗಿಯೂ, ನಿನ್ನ ಚಿತ್ತಾನುಸಾರವಾಗಿಯೂ ಈ ಎಲ್ಲಾ ಮಹತ್ಕಾರ್ಯಗಳನ್ನು ನಡೆಸಿ, ನಿನ್ನ ಸತ್ಯ ಮಹತ್ವವನ್ನು ತೋರ್ಪಡಿಸಿರುವೆ.
20 Kungs, neviens nav kā Tu, un neviena dieva nav, kā Tu vien, pēc visa, ko mēs savām ausīm esam dzirdējuši.
೨೦ಯೆಹೋವನೇ, ನಿನಗೆ ಸಮಾನರು ಯಾರೂ ಇಲ್ಲ. ನಾವು ಕೇಳಿದವುಗಳನ್ನೆಲ್ಲಾ ಆಲೋಚಿಸಿ ನೋಡಿದರೆ ನಿನ್ನ ಹೊರತು ಬೇರೆ ದೇವರೇ ಇಲ್ಲವೆಂಬುದು ನಿಶ್ಚಯ.
21 Un kur gan ir kāda tauta virs zemes kā Tavi Israēla ļaudis, ko Dievs gājis atpestīt Sev par ļaudīm, un Sev celt lielu un bijājamu vārdu, pagānus izdzīdams Savu ļaužu priekšā, ko Tu no Ēģiptes izglābis?
೨೧ನಿನ್ನ ಇಸ್ರಾಯೇಲ್ ಪ್ರಜೆಗೆ ಸಮಾನವಾದ ಜನಾಂಗವು ಭೂಲೋಕದಲ್ಲಿ ಯಾವುದಿರುತ್ತದೆ? ದೇವರಾದ ನೀನೇ ಚಿತ್ತೈಯಿಸಿ, ಅದನ್ನು ವಿಮೋಚಿಸಿ, ಸ್ವಪ್ರಜೆಯಾಗಿ ಮಾಡಿಕೊಂಡಿ. ಭಯಂಕರವಾದ ಮಹತ್ಕಾರ್ಯಗಳಿಂದ ನಿನ್ನ ಹೆಸರನ್ನು ಪ್ರಸಿದ್ಧಿಪಡಿಸಿದಿ. ನೀನು ಐಗುಪ್ತರ ಕೈಯೊಳಗಿಂದ ತಪ್ಪಿಸಿ ರಕ್ಷಿಸಿದ ನಿನ್ನ ಪ್ರಜೆಯ ಎದುರಿನಿಂದ ಅನ್ಯಜನಾಂಗಗಳನ್ನು ಹೊರಡಿಸಿಬಿಟ್ಟಿ.
22 Un Tu Savus Israēla ļaudis Sev esi cēlis par tautu mūžīgi, un Tu Kungs tiem esi palicis par Dievu.
೨೨ಇಸ್ರಾಯೇಲರು ಸದಾಕಾಲವು ನಿನ್ನ ಪ್ರಜೆಗಳಾಗಿರಬೇಕೆಂದು ನಿರ್ಣಯಿಸಿದ್ದೀ. ಯೆಹೋವನೇ, ನೀನು ಅವರಿಗೆ ದೇವರಾಗಿದ್ದಿ.
23 Tad nu, Kungs, lai tas vārds, ko Tu esi runājis par Savu kalpu un par viņa namu, tiešām tā notiek mūžīgi, un dari, kā Tu esi runājis!
೨೩ಯೆಹೋವನೇ, ನೀನು ನಿನ್ನ ಸೇವಕನನ್ನೂ ಅವನ ಮನೆಯನ್ನೂ ಕುರಿತು ಮಾಡಿದ ವಾಗ್ದಾನವನ್ನು ಶಾಶ್ವತಪಡಿಸಿ ನೆರವೇರಿಸು. ಅದು ಸದಾ ಸ್ಥಿರವಾಗಿರಲಿ.
24 Tiešām, lai tā notiek, ka Tavs vārds top paaugstināts mūžīgi, lai saka: Tas Kungs Cebaot, Israēla Dievs, ir Dievs pār Israēli, un Tava kalpa Dāvida nams lai pastāv Tavā priekšā.
೨೪ಜನರು ‘ಸೇನಾಧೀಶ್ವರನಾದ ಯೆಹೋವನು ಇಸ್ರಾಯೇಲ್ ದೇವರೂ, ಶರಣನೂ ಆಗಿದ್ದಾನೆ. ತನ್ನ ಸೇವಕನಾದ ದಾವೀದನ ಮನೆಯನ್ನು ತನ್ನ ಸನ್ನಿಧಿಯಲ್ಲಿ ಸ್ಥಿರವಾಗಿ ಇಟ್ಟುಕೊಳ್ಳುತ್ತಾನೆ’ ಎಂದು ನಿನ್ನ ನಾಮವನ್ನು ಕೊಂಡಾಡಲಿ.
25 Jo tu, mans Dievs, sava kalpa ausi esi atvēris, ka tu tam gribi namu uztaisīt, tādēļ tavs kalps ir iedrošinājies pielūgt tava vaiga priekšā.
೨೫ನನ್ನ ದೇವರೇ, ನೀನು ನಿನ್ನ ಸೇವಕನಿಗೆ, ‘ನಾನು ನಿನಗೊಂದು ಮನೆಯನ್ನು ಕಟ್ಟುವೆನು’ ಎಂದು ವಾಗ್ದಾನ ಮಾಡಿದ್ದರಿಂದ ಅವನು ನಿನ್ನನ್ನು ಪ್ರಾರ್ಥಿಸುವುದಕ್ಕೆ ಧೈರ್ಯಗೊಂಡನು.
26 Tad nu, Kungs, Tu esi Dievs, un esi runājis uz Savu kalpu šo labumu.
೨೬ಯೆಹೋವನೇ, ನಿನ್ನ ಸೇವಕನಿಗೆ ಈ ಶ್ರೇಷ್ಠ ವಾಗ್ದಾನಗಳನ್ನು ಮಾಡಿದ ನೀನು ನನ್ನ ದೇವರಾಗಿರುತ್ತೀ.
27 Un nu tas ir Tavs prāts, svētīt Sava kalpa namu, ka tas mūžīgi paliek Tavā priekšā; jo ko Tu, Kungs, svētī, tas paliek svētīts mūžīgi.
೨೭ಈಗ ನೀನು ನಿನ್ನ ಸೇವಕನ ಮನೆಯನ್ನು ಆಶೀರ್ವದಿಸಿ, ಅದನ್ನು ಸದಾಕಾಲವೂ ನಿನ್ನ ಆಶ್ರಯದಲ್ಲಿಟ್ಟುಕೊಳ್ಳಬೇಕೆಂದು ಮನಸ್ಸು ಮಾಡಿದ್ದೀ. ಯೆಹೋವನೇ, ನೀನು ಅದನ್ನು ಆಶೀರ್ವದಿಸಿದ್ದೀ. ಅದು ನಿತ್ಯವೂ ಸೌಭಾಗ್ಯದಿಂದಿರುವುದು” ಎಂದು ಪ್ರಾರ್ಥಿಸಿದನು.