< Otra Laiku 28 >
1 Ahazs bija divdesmit gadus vecs, kad palika par ķēniņu, un valdīja Jeruzālemē sešpadsmit gadus, un nedarīja, kas Tam Kungam labi patika, kā viņa tēvs Dāvids.
ಆಹಾಜನು ಆಳಲು ಆರಂಭಿಸಿದಾಗ ಇಪ್ಪತ್ತು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಆದರೆ ಅವನು ತನ್ನ ತಂದೆಯಾದ ದಾವೀದನ ಹಾಗೆ ನಡೆಯದೆ, ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಲಿಲ್ಲ.
2 Bet viņš staigāja Israēla ķēniņu ceļos un taisīja arī tēlus Baāliem,
ಆಹಾಜನು ಇಸ್ರಾಯೇಲಿನ ಅರಸರ ಮಾರ್ಗದಲ್ಲಿ ನಡೆದು, ಆರಾಧಿಸುವುದಕ್ಕಾಗಿ ಬಾಳನ ಎರಕ ಹೊಯ್ದ ವಿಗ್ರಹಗಳನ್ನು ಮಾಡಿಸಿದನು.
3 Un kvēpināja BenHinnoma ielejā un sadedzināja savus dēlus ugunī, pēc to pagānu negantības, ko Tas Kungs bija izdzinis Israēla bērnu priekšā.
ಇದಲ್ಲದೆ ಆಹಾಜನು ಬೆನ್ ಹಿನ್ನೋಮ್ ತಗ್ಗಿನಲ್ಲಿ ಧೂಪವನ್ನರ್ಪಿಸಿ, ಯೆಹೋವ ದೇವರು ಇಸ್ರಾಯೇಲರ ಎದುರಿನಿಂದ ಓಡಿಸಿಬಿಟ್ಟ ಇತರ ಜನಾಂಗಗಳ ಅಸಹ್ಯಕರವಾದ ಆಚಾರಗಳನ್ನು ಅನುಸರಿಸಿ ಅವನು ತನ್ನ ಮಗನನ್ನೇ ಬೆಂಕಿಯಲ್ಲಿ ಯಜ್ಞವಾಗಿ ಅರ್ಪಿಸಿದನು.
4 Viņš upurēja un kvēpināja kalnos un pakalnos un apakš visiem zaļiem kokiem.
ಇದಲ್ಲದೆ ಅವನು ಪೂಜಾಸ್ಥಳಗಳ ಮೇಲೆಯೂ ಬೆಟ್ಟಗಳ ಮೇಲೆಯೂ ಎಲ್ಲಾ ಹಸಿರಾದ ಮರಗಳ ಕೆಳಗೂ ಬಲಿಗಳನ್ನೂ ಧೂಪವನ್ನೂ ಅರ್ಪಿಸಿದನು.
5 Tādēļ Tas Kungs, viņa Dievs, to nodeva rokā Sīrijas ķēniņam, un tie viņu sita un no tā aizveda lielu pulku cietumā, un tos noveda uz Damasku. Viņš tapa arī nodots Israēla ķēniņa rokā; tas viņu kāva lielā kaušanā.
ಆದ್ದರಿಂದ ಆಹಾಜನ ದೇವರಾದ ಯೆಹೋವ ದೇವರು ಅರಾಮಿನ ಅರಸನ ಕೈಯಲ್ಲಿ ಅವನನ್ನು ಒಪ್ಪಿಸಿದರು. ಅರಾಮ್ಯರು ಅವನನ್ನು ಹೊಡೆದು, ಅವರಲ್ಲಿ ಅನೇಕರನ್ನು ಸೆರೆಹಿಡಿದು, ದಮಸ್ಕಕ್ಕೆ ತೆಗೆದುಕೊಂಡು ಹೋದರು. ಇದಲ್ಲದೆ ಆಹಾಜನು ಇಸ್ರಾಯೇಲಿನ ಅರಸನ ಕೈವಶವಾಗಿ, ಅವನಿಂದಲೂ ಕಠಿಣವಾಗಿ ಸೋತು ಹೋದನು.
6 Un Peka, Remalijas dēls, kāva iekš Jūda vienā dienā simts divdesmit tūkstošus, kas visi bija kara vīri, tāpēc ka tie bija atstājuši To Kungu, savu tēvu Dievu.
ಯೆಹೂದ್ಯರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಬಿಟ್ಟುಬಿಟ್ಟದ್ದರಿಂದ, ರೆಮಲ್ಯನ ಮಗ ಪೆಕಹನು ಒಂದೇ ದಿವಸದೊಳಗೆ ಅವರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಂದುಹಾಕಿದನು. ಇವರೆಲ್ಲರು ಪರಾಕ್ರಮಶಾಲಿಗಳಾಗಿದ್ದರು.
7 Un Sihrus, varonis no Efraīma, nokāva Maāseju, ķēniņa dēlu, un Asrikamu, (ķēniņa) nama pārvaldnieku, un Elkanu, otro no ķēniņa.
ಇದಲ್ಲದೆ ಎಫ್ರಾಯೀಮ್ಯನಾಗಿರುವ ಪರಾಕ್ರಮಶಾಲಿಯಾದ ಜಿಕ್ರಿಯು ಅರಸನ ಮಗ ಮಾಸೇಯನನ್ನೂ, ಅರಮನೆಯ ನಾಯಕನಾದ ಅಜ್ರೀಕಾಮನನ್ನೂ, ಅರಸನಿಗೆ ಎರಡನೆಯವನಾದ ಎಲ್ಕಾನನನ್ನೂ ಕೊಂದುಹಾಕಿದನು.
8 Un Israēla bērni aizveda no saviem brāļiem divsimt tūkstošus, sievas, dēlus un meitas, un ņēma arī daudz laupījuma no tiem, un veda to laupījumu uz Samariju.
ಇಸ್ರಾಯೇಲರು ತಮ್ಮ ಸಹೋದರರಲ್ಲಿ ಎರಡು ಲಕ್ಷಮಂದಿ ಸ್ತ್ರೀಯರನ್ನೂ, ಪುತ್ರಪುತ್ರಿಯರನ್ನೂ ಸೆರೆಯಾಗಿ ತೆಗೆದುಕೊಂಡು ಹೋದರು. ಅವರಿಂದ ಬಹು ಕೊಳ್ಳೆಯನ್ನೂ ತೆಗೆದುಕೊಂಡು ಸಮಾರ್ಯಕ್ಕೆ ಬಂದರು.
9 Un tur bija Tā Kunga pravietis Odeds vārdā, tas izgāja pretī tam kara spēkam, kas uz Samariju nāca, un uz tiem sacīja: redzi, bardzībā par Jūdu, Tas Kungs, jūsu tēvu Dievs, tos ir devis jūsu rokā, un jūs tos esat nokāvuši tādā bardzībā, kas sniedzās līdz debesīm.
ಯೆಹೋವ ದೇವರ ಪ್ರವಾದಿ ಒಬ್ಬನು ಅಲ್ಲಿ ಇದ್ದನು. ಅವನ ಹೆಸರು ಓದೇದನು. ಅವನು ಸಮಾರ್ಯಕ್ಕೆ ಬಂದ ಸೈನ್ಯಕ್ಕೆದುರಾಗಿ ಹೊರಟುಹೋಗಿ ಅವರಿಗೆ, “ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ಯೆಹೂದದ ಮೇಲೆ ಕೋಪಗೊಂಡದ್ದರಿಂದ, ದೇವರು ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿದ್ದಾರೆ. ನೀವು ಆಕಾಶಕ್ಕೆ ಮುಟ್ಟುವ ಉಗ್ರತೆಯಿಂದ ಅವರನ್ನು ಕೊಂದುಹಾಕಿದ್ದೀರಿ.
10 Nu jūs arī domājat Jūda un Jeruzālemes bērnus sev padarīt par vergiem un kalponēm; vai tas jums nav par grēku pret To Kungu, savu Dievu?
ಈಗ ನಿಮಗೆ ದಾಸರೂ, ದಾಸಿಯರೂ ಆಗಿರುವ ಹಾಗೆ ಯೆಹೂದದ ಮತ್ತು ಯೆರೂಸಲೇಮಿನ ಮಕ್ಕಳನ್ನು ನಿಮ್ಮ ವಶಮಾಡಬೇಕೆಂದು ಇದ್ದೀರಿ. ಆದರೆ ನಿಮ್ಮಲ್ಲಿಯೇ ನಿಮ್ಮ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಅಪರಾಧಗಳು ಇಲ್ಲವೋ?
11 Nu tad, klausiet mani, vediet atpakaļ tos cietumniekus, ko jūs no saviem brāļiem esat aizveduši cietumā, jo Tā Kunga bardzība pret jums ir iekarsusi.
ಆದ್ದರಿಂದ ನೀವು ನನ್ನ ಮಾತು ಕೇಳಿ ನಿಮ್ಮ ನಿಮ್ಮ ಸಹೋದರರಲ್ಲಿ ನೀವು ಸೆರೆಯಾಗಿ ತೆಗೆದುಕೊಂಡ ಸೆರೆಯವರನ್ನು ಬಿಟ್ಟುಬಿಡಿರಿ. ಏಕೆಂದರೆ ಯೆಹೋವ ದೇವರ ಕೋಪಾಗ್ನಿಯು ನಿಮ್ಮ ಮೇಲೆ ಇರುವುದು,” ಎಂದನು.
12 Tad no Efraīma bērnu virsniekiem šie vīri, Azarija, Jehohanana dēls, Bereķija, Mezilemota dēls, un Jeīsķija, Šaluma dēls, un Amasa, Adlaja dēls, cēlās pret tiem, kas no tā karaspēka nāca,
ಆಗ ಎಫ್ರಾಯೀಮ್ಯರಲ್ಲಿ ಮುಖಂಡರಾಗಿದ್ದ ಯೆಹೋಹಾನಾನನ ಮಗ ಅಜರ್ಯನೂ, ಮೆಷಿಲ್ಲೇಮೋತನ ಮಗ ಬೆರೆಕ್ಯನೂ, ಶಲ್ಲೂಮನ ಮಗ ಹಿಜ್ಕೀಯನೂ, ಹದ್ಲೈಯನ ಮಗ ಅಮಾಸನೂ ಯುದ್ಧದಿಂದ ಬಂದವರಿಗೆ ವಿರೋಧವಾಗಿ ಎದ್ದು
13 Un uz tiem sacīja: nevediet šurp tos cietumniekus, jo jūs tikai gribat, lai apgrēkojamies pret To Kungu, vairot mūsu grēkus un noziegumus, jebšu mūsu noziegums liels un bardzība pret Israēli ir iedegusies.
ಅವರಿಗೆ, “ನೀವು ಸೆರೆಯವರನ್ನು ಇಲ್ಲಿಗೆ ತರಬೇಡಿರಿ. ಏಕೆಂದರೆ ನಾವು ಯೆಹೋವ ದೇವರಿಗೆ ವಿರೋಧವಾಗಿ ಅಪರಾಧ ಮಾಡಿದ್ದೇವೆ. ನೀವು ನಮ್ಮ ಪಾಪಗಳನ್ನೂ, ನಮ್ಮ ಅಪರಾಧಗಳನ್ನೂ ಹೆಚ್ಚಿಸಬೇಕೆಂದಿದ್ದೀರಿ. ನಿಶ್ಚಯವಾಗಿ ನಮ್ಮ ಅಪರಾಧವು ದೊಡ್ಡದಾಗಿದೆ. ಇಸ್ರಾಯೇಲಿನ ಮೇಲೆ ಯೆಹೋವ ದೇವರ ಉಗ್ರಕೋಪವು ಉಂಟಾಯಿತು,” ಎಂದರು.
14 Tad tie apbruņotie atstāja tos cietumniekus un to laupījumu virsnieku un visas draudzes priekšā.
ಆಗ ಸೈನ್ಯದವರು ಸೆರೆಯವರನ್ನೂ, ಕೊಳ್ಳೆಯನ್ನೂ ಪ್ರಧಾನರ ಮುಂದೆಯೂ, ಸಮಸ್ತ ಕೂಟದ ಮುಂದೆಯೂ ಬಿಟ್ಟುಬಿಟ್ಟರು.
15 Un tie vīri, kas ar vārdu minēti, cēlās un ņēma tos cietumniekus un apģērba no tā laupījuma visus plikos viņu starpā un tiem deva drēbes un kurpes un ēst un dzert, un tos svaidīja un lika uz ēzeļiem visus, kas bija noguruši, un tos noveda uz Jēriku, to palmu pilsētu, pie viņu brāļiem, un griezās atpakaļ uz Samariju.
ಆಗ ಎಫ್ರಾಯೀಮ್ಯರಲ್ಲಿ ಮುಖಂಡರಾಗಿದ್ದವರು ಎದ್ದು ಸೆರೆಯವರನ್ನು ತೆಗೆದುಕೊಂಡು, ಅವರಲ್ಲಿ ಬೆತ್ತಲೆಯಾದವರಿಗೆ ಕೊಳ್ಳೆಯ ವಸ್ತ್ರಗಳನ್ನು ಉಡಿಸಿ ತೊಡಿಸಿ, ಅವರಿಗೆ ಕೆರಗಳನ್ನು ಕೊಟ್ಟು ಉಣ್ಣುವುದಕ್ಕೂ, ಕುಡಿಯುವುದಕ್ಕೂ ಕೊಟ್ಟು, ಅವರ ತಲೆಗಳಿಗೆ ಎಣ್ಣೆಯನ್ನು ಹಚ್ಚಿ, ಅವರಲ್ಲಿ ಇರುವ ಬಲಹೀನರನ್ನು ಕತ್ತೆಗಳ ಮೇಲೆ ಏರಿಸಿ, ಯೆರಿಕೋವೆಂಬ ಖರ್ಜೂರದ ಪಟ್ಟಣಕ್ಕೆ ಅವರ ಸಹೋದರರ ಬಳಿಗೆ ತೆಗೆದುಕೊಂಡು ಬಂದರು. ಆಗ ಅವರು ಸಮಾರ್ಯಕ್ಕೆ ಹಿಂದಿರುಗಿದರು.
16 Tanī laikā ķēniņš Ahazs sūtīja pie Asīrijas ķēniņiem pēc palīdzības.
ಅದೇ ಕಾಲದಲ್ಲಿ ಅರಸನಾದ ಆಹಾಜನು ಅಸ್ಸೀರಿಯದ ಅರಸರ ಬಳಿಗೆ ಕಳುಹಿಸಿ ಸಹಾಯ ಬೇಡಿಕೊಂಡನು.
17 Tad vēl arī Edomieši nāca un kāva Jūdu un aizveda cietumniekus.
ಏಕೆಂದರೆ ಎದೋಮ್ಯರು ತಿರುಗಿಬಂದು ಯೆಹೂದದವರನ್ನು ಸಂಹರಿಸಿ, ಕೆಲವರನ್ನು ಸೆರೆಯಾಗಿ ತೆಗೆದುಕೊಂಡು ಹೋದರು.
18 Arī Fīlisti ielauzās ielejas pilsētās un Jūda dienvidu pusē un uzņēma BetŠemesu un Ajalonu un Ģederotu un Zoku un viņas miestus, un Timnu un viņas miestus, un Ģimzu un viņas miestus, un tie tur apmetās.
ಇದಲ್ಲದೆ ಫಿಲಿಷ್ಟಿಯರು ತಗ್ಗಿನ ದೇಶದ ಪಟ್ಟಣಗಳಲ್ಲಿಯೂ, ಯೆಹೂದದ ದಕ್ಷಿಣ ಪ್ರಾಂತದಲ್ಲಿಯೂ ನುಗ್ಗಿ, ಬೇತ್ ಷೆಮೆಷ್, ಅಯ್ಯಾಲೋನ್, ಗೆದೇರೋತ್, ಸೋಕೋ ಅದರ ಗ್ರಾಮಗಳನ್ನೂ, ತಿಮ್ನಾ ಅದರ ಗ್ರಾಮಗಳನ್ನೂ, ಗಿಮ್ಜೋ ಅದರ ಗ್ರಾಮಗಳನ್ನೂ ತೆಗೆದುಕೊಂಡು ಅಲ್ಲಿ ವಾಸವಾಗಿದ್ದರು.
19 Jo Tas Kungs pazemoja Jūdu Ahaza, Israēla ķēniņa, dēļ, jo tas bija bezdievīgi dzīvojis iekš Jūda un ļoti noziedzies pret To Kungu.
ಇಸ್ರಾಯೇಲಿನ ಅರಸನಾದ ಆಹಾಜನ ನಿಮಿತ್ತ ಯೆಹೋವ ದೇವರು ಯೆಹೂದ್ಯ ಪ್ರಾಂತ್ಯವನ್ನು ತಗ್ಗಿಸಿದರು. ಏಕೆಂದರೆ ಅವನು ಯೆಹೂದ್ಯರನ್ನು ಅಧರ್ಮಕ್ಕೆ ಪ್ರಚೋದಿಸಿ, ಯೆಹೋವ ದೇವರಿಗೆ ಮಹಾ ದ್ರೋಹ ಮಾಡಿದನು. ಯೆಹೋವ ದೇವರಿಗೆ ಅತ್ಯಂತ ಅಪನಂಬಿಗಸ್ತನಾಗಿದ್ದನು.
20 Un Tiglat Pilnezers, Asīrijas ķēniņš, nāca pret viņu, un viņu spieda un tam nepalīdzēja.
ಆಗ ಅಸ್ಸೀರಿಯದ ಅರಸ ತಿಗ್ಲತ್ಪಿಲೆಸರನು ಅವನ ಬಳಿಗೆ ಬಂದು, ಅವನಿಗೆ ನೆರವಾಗುವುದಕ್ಕೆ ಬದಲಾಗಿ ಬಾಧೆಪಡಿಸಿದನು.
21 Jebšu Ahazs iztukšoja Tā Kunga namu un ķēniņa namu un to lielkungu namu, un deva dāvanas Asīrijas ķēniņam, tomēr tas viņam nepalīdzēja.
ಆಹಾಜನು ಯೆಹೋವ ದೇವರ ಆಲಯದಿಂದಲೂ, ಅರಮನೆಯಿಂದಲೂ, ಪ್ರಧಾನರಿಂದಲೂ ಆಸ್ತಿಯ ಒಂದು ಪಾಲನ್ನು ತೆಗೆದುಕೊಂಡು, ಅಸ್ಸೀರಿಯದ ಅರಸನಿಗೆ ಕಾಣಿಕೆಯಾಗಿ ಕೊಟ್ಟನು, ಆದರೂ ಅವನು ಆಹಾಜನಿಗೆ ಸಹಾಯ ಮಾಡಲಿಲ್ಲ.
22 Un tai laikā, kad to spieda, viņš pret To Kungu vēl vairāk apgrēkojās; tāds bija ķēniņš Ahazs.
ಇದಲ್ಲದೆ ಈ ಅರಸನಾದ ಆಹಾಜನು ತನ್ನ ಇಕ್ಕಟ್ಟಿನ ಕಾಲದಲ್ಲಿ ಇನ್ನೂ ಅಧಿಕವಾಗಿ ಯೆಹೋವ ದೇವರಿಗೆ ಅಪನಂಬಿಗಸ್ತನಾದನು.
23 Un viņš upurēja Damaskus dieviem, kas viņu bija situši, un sacīja: tāpēc ka Sīriešu ķēniņu dievi tiem palīdz, tad es tiem upurēšu, lai tie arī man palīdz; bet tie tam bija par krišanu, ir visam Israēlim.
ಕೊನೆಗೆ ಆಹಾಜನು, “ಅರಾಮಿನ ಅರಸರ ದೇವರುಗಳು ಅವರಿಗೆ ಸಹಾಯ ಕೊಟ್ಟದ್ದರಿಂದ, ಅವು ನನಗೆ ಸಹ ಸಹಾಯ ಕೊಡುವ ಹಾಗೆ ನಾನು ಅವುಗಳಿಗೆ ಬಲಿಯನ್ನು ಅರ್ಪಿಸುತ್ತೇನೆ,” ಎಂದುಕೊಂಡು ತನ್ನನ್ನು ಸೋಲಿಸಿದ ದಮಸ್ಕದವರ ದೇವರುಗಳಿಗೆ ಬಲಿಗಳನ್ನು ಅರ್ಪಿಸಿದನು. ಆದರೆ ಆ ದೇವರುಗಳು ಅವನನ್ನೂ, ಸಮಸ್ತ ಇಸ್ರಾಯೇಲರನ್ನೂ ಬೀಳುವಂತೆ ಮಾಡಿದವು.
24 Un Ahazs ņēma Dieva nama traukus un sasita Dieva nama traukus un aizslēdza Tā Kunga nama durvis un taisīja sev altārus visos Jeruzālemes kaktos.
ಇದಲ್ಲದೆ ಆಹಾಜನು ದೇವರ ಮನೆಯ ಸಲಕರಣೆಗಳನ್ನು ಕೂಡಿಸಿ, ದೇವರ ಆಲಯದ ಸಾಮಗ್ರಿಗಳನ್ನು ಚೂರುಚೂರು ಮಾಡಿ ಕತ್ತರಿಸಿ, ಯೆಹೋವ ದೇವರ ಮನೆಯ ಬಾಗಿಲುಗಳನ್ನು ಮುಚ್ಚಿಬಿಟ್ಟು, ಯೆರೂಸಲೇಮಿನ ಸಮಸ್ತ ಮೂಲೆಗಳಲ್ಲಿ ಬಲಿಪೀಠಗಳನ್ನು ಕಟ್ಟಿಸಿದನು.
25 Viņš taisīja arī ikkatrā Jūda pilsētā altārus, svešiem dieviem kvēpināt, - tā viņš apkaitināja To Kungu, savu tēvu Dievu.
ಯೆಹೂದದ ಸಮಸ್ತ ಪಟ್ಟಣಗಳಲ್ಲಿ ಅನ್ಯ ದೇವರುಗಳಿಗೆ ಧೂಪ ಸುಡುವುದಕ್ಕೆ ಎತ್ತರ ಸ್ಥಳಗಳನ್ನು ಕಟ್ಟಿಸಿ, ತನ್ನ ಪಿತೃಗಳ ದೇವರಾದ ಯೆಹೋವ ದೇವರಿಗೆ ಕೋಪವನ್ನೆಬ್ಬಿಸಿದನು.
26 Un kas vēl par viņu stāstāms, un visi viņa ceļi, gan pirmie, gan pēdējie, redzi tie ir rakstīti Jūda un Israēla ķēniņu grāmatā.
ಅವನ ಆಳ್ವಿಕೆಯಲ್ಲಿಯ ಇತರ ಕ್ರಿಯೆಗಳೂ, ಅವನ ಸಕಲ ಮಾರ್ಗಗಳೂ, ಮೊದಲನೆಯವುಗಳೂ, ಕಡೆಯವುಗಳೂ ಯೆಹೂದದ ಮತ್ತು ಇಸ್ರಾಯೇಲರ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.
27 Un Ahazs aizmiga pie saviem tēviem, un viņu apraka Jeruzālemes pilsētā. Bet viņu neveda Israēla ķēniņu kapenēs. Un viņa dēls Hizkija palika par ķēniņu viņa vietā.
ಆಹಾಜನು ಮೃತನಾಗಿ ತನ್ನ ಪಿತೃಗಳ ಬಳಿಯಲ್ಲಿ ಸೇರಿದನು. ಆದರೆ ಅವನನ್ನು ಇಸ್ರಾಯೇಲಿನ ಅರಸರ ಸಮಾಧಿಯ ಸ್ಥಳದಲ್ಲಿ ಹೂಣಿಡದೆ ಯೆರೂಸಲೇಮ್ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗ ಹಿಜ್ಕೀಯನು ಅರಸನಾದನು.