< Otra Mozus 36 >
1 Un Becaleēls un Aholiabs lai strādā un ikviens, kam samanīga sirds, kam Tas Kungs devis gudrību un saprašanu, zināt visādu darbu pie svētās vietas kalpošanas, tā kā Tas Kungs bija pavēlējis.
೧“ಬೆಚಲೇಲನು ಹಾಗೂ ಒಹೋಲೀಯಾಬನು ಮತ್ತು ಬೇರೆ ಜ್ಞಾನಿಗಳೆಲ್ಲರು ಅಂದರೆ ಯೆಹೋವನಿಂದ ಜ್ಞಾನವಿವೇಕಗಳನ್ನು ಹೊಂದಿ ಪವಿತ್ರ ದೇವಮಂದಿರವನ್ನು ನಿರ್ಮಾಣ ಮಾಡುವ ಕೆಲಸಕ್ಕಾಗಿ ಬೇಕಾದ ಸಕಲವಿಧವಾದ ವಸ್ತುಗಳನ್ನು ಮಾಡುವ ಕ್ರಮ ತಿಳಿದಿರುವವರು, ಯೆಹೋವನು ಆಜ್ಞಾಪಿಸಿದ ಪ್ರಕಾರವೇ ಎಲ್ಲವನ್ನೂ ಮಾಡುವರು” ಅಂದನು.
2 Un Mozus aicināja Becaleēli un Aholiabu, un ikvienu, kam bija gudra sirds, kam Tas Kungs bija devis gudrību sirdī, visus, kam sirds nesās, pie tā darba iet un to darīt.
೨ಬೆಚಲೇಲನನ್ನೂ ಒಹೋಲೀಯಾಬನನ್ನೂ ಮತ್ತು ಯಾರ ಹೃದಯದಲ್ಲಿ ಯೆಹೋವನು ಜ್ಞಾನವನ್ನು ಕೊಟ್ಟಿದ್ದನೋ, ಯಾರಾರಿಗೆ ಈ ಕೆಲಸಮಾಡುವುದಕ್ಕೆ ಹೃದಯದಲ್ಲಿ ಪ್ರೇರಣೆಯಾಯಿತೋ ಅಂಥ ಜ್ಞಾನಿಗಳೆಲ್ಲರನ್ನೂ ಮೋಶೆಯು ತನ್ನ ಹತ್ತಿರಕ್ಕೆ ಕರೆಯಿಸಿದನು.
3 Un tie ņēma no Mozus visu to cilājamo upuri, ko Israēla bērni bija atnesuši priekš tā darba pie svētās vietas taisīšanas, ka tie to darītu, un tie atnesa vēl ik rītu pie viņa upurus no laba prāta.
೩ಅವರು ದೇವಮಂದಿರವನ್ನು ನಿರ್ಮಿಸುವ ಕೆಲಸಕ್ಕೆ ಇಸ್ರಾಯೇಲ್ಯರು ತಂದಿದ್ದ ಕಾಣಿಕೆಗಳನ್ನೆಲ್ಲಾ ಮೋಶೆಯಿಂದ ಪಡೆದುಕೊಂಡರು. ಇಸ್ರಾಯೇಲರು ಪ್ರತಿದಿನ ಹೊತ್ತಾರೆಯಲ್ಲಿ ಮೋಶೆಯ ಬಳಿಗೆ ಬಂದು ಕಾಣಿಕೆಗಳನ್ನು ಮನಃಪೂರ್ವಕವಾಗಿ ಕೊಡುತ್ತಿದ್ದರು.
4 Tāpēc visi tie gudrie nāca, kas svētās vietas darbu darīja, ikviens savu darbu, kas tam bija jādara, un runāja uz Mozu sacīdami:
೪ಆಗ ದೇವಮಂದಿರದ ಕೆಲಸವನ್ನು ಮಾಡುತ್ತಿದ್ದ ಆ ಜ್ಞಾನಿಗಳೆಲ್ಲರು,
5 Tie ļaudis pienes daudz vairāk, nekā vajag pie tā darba darīšanas, ko Tas Kungs ir pavēlējis darīt.
೫ತಮ್ಮ ತಮ್ಮ ಕೆಲಸವನ್ನು ಬಿಟ್ಟು ಮೋಶೆಯ ಬಳಿಗೆ ಬಂದು ಅವನಿಗೆ, “ಯೆಹೋವನು ಆಜ್ಞಾಪಿಸಿದ ಕೆಲಸಕ್ಕೆ ಬೇಕಾಗಿರುವುದಕ್ಕಿಂತಲೂ ಬಹಳ ಹೆಚ್ಚಾಗಿ ಜನರು ಕಾಣಿಕೆಗಳನ್ನು ತರುತ್ತಿದ್ದಾರೆ ಎಂದು” ಹೇಳಿದರು.
6 Tad Mozus pavēlēja pa lēģeri izsaukt un sacīt: vīri un sievas, nenesat vairs cilājamu upuri priekš tā darba svētā vietā.
೬ಆಗ ಮೋಶೆಯು ಇದನ್ನು ಗಮನಿಸಿ, “ದೇವಮಂದಿರದ ಕೆಲಸಕ್ಕಾಗಿ ಯಾವ ಪುರುಷನಾಗಲಿ, ಸ್ತ್ರೀಯಾಗಲಿ ಇನ್ನು ಮುಂದೆ ಕಾರ್ಯಗಳನ್ನೂ ಮಾಡಬಾರದು” ಎಂದು ಅಪ್ಪಣೆಮಾಡಿ ಅದನ್ನು ಪಾಳೆಯದಲ್ಲಿ ಪ್ರಕಟಿಸಿದನು. ಜನರು ಕಾಣಿಕೆಗಳನ್ನು ತರುವುದನ್ನು ನಿಲ್ಲಿಸಿಬಿಟ್ಟರು.
7 Tad tie ļaudis mitējās nest, jo bija diezgan priekš visa tā darba vajadzības, kas bija jādara, un vēl atlikās.
೭ಏಕೆಂದರೆ ಕೆಲಸವನ್ನೆಲ್ಲಾ ಮಾಡುವುದಕ್ಕೆ ಸಾಕಾಗುವುದಕ್ಕಿಂತಲೂ ಹೆಚ್ಚು ಸಾಮಗ್ರಿಗಳಿದ್ದವು.
8 Tā visi tie gudrie starp tiem darba strādniekiem taisīja to dzīvokli no desmit deķiem, no šķetinātām smalkām dzijām un ziluma un purpura un karmezīna ar ķerubiem, - izrotātu darbu viņi to taisīja.
೮ಆ ಕೆಲಸ ಮಾಡುತ್ತಿದ್ದ ಜ್ಞಾನಿಗಳೆಲ್ಲರು ಹೊಸೆದ ನಾರಿನ ಹತ್ತು ಪರದೆಗಳಿಂದ ಗುಡಾರವನ್ನು ಮಾಡಿ ಆ ಪರದೆಗಳಲ್ಲಿ ನೀಲಿ, ನೇರಳೆ ಮತ್ತು ಕಡುಗೆಂಪು ವರ್ಣಗಳ ದಾರಗಳಿಂದ ನೇಯ್ಗೆಯವರಂತೆ ಕೆರೂಬಿಗಳನ್ನು ಮಾಡಿ ಅದಕ್ಕೆ ಚಮತ್ಕಾರವಾಗಿ ಕಸೂತಿ ಹಾಕಿ ಮಾಡಿದರು.
9 Viena deķa garums bija divdesmit astoņas olektis un platums bija četras olektis; visiem tiem deķiem bija vienāds mērs.
೯ಪ್ರತಿಯೊಂದು ಪರದೆಯು ಇಪ್ಪತ್ತೆಂಟು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇದ್ದವು. ಎಲ್ಲಾ ಪರದೆಗಳು ಸಮಾನ ಅಳತೆಯಲ್ಲಿದ್ದವು.
10 Un viņš salika piecus deķus vienu pie otra, un atkal piecus deķus viņš salika vienu pie otra.
೧೦ಐದೈದು ಪರದೆಗಳನ್ನು ಒಂದೊಂದಾಗಿ ಜೋಡಿಸಿದರು.
11 Pēc tam viņš taisīja cilpas no ziluma pie viena deķa vīles tai malā, kur tas tapa pielaists; tā viņš darīja arī pie otra deķa vīles, kur atkal tas tapa pielaists.
೧೧ಈ ಎರಡು ಜೋಡಣೆಗಳಲ್ಲಿ ಒಂದೊಂದರ ಕೊನೆಯ ಪರದೆಯ ಅಂಚಿನಲ್ಲಿ
12 Piecdesmit cilpas viņš taisīja pie viena deķa, un piecdesmit cilpas viņš taisīja pie otra deķa pielaižamās malas, šās cilpas vienu otrai pretim.
೧೨ನೀಲಿ ದಾರದಿಂದ ಕುಣಿಕೆಗಳನ್ನು ಮಾಡಿದರು; ಆ ಕುಣಿಕೆಗಳನ್ನು ಐವತ್ತೈವತ್ತರ ಮೇರೆಗೆ ಒಂದಕ್ಕೊಂದು ಎದುರಾಗಿ ಇರಿಸಿದರು.
13 Un viņš taisīja arī piecdesmit zelta kāsīšus un salika tos deķus vienu pie otra ar tiem kāsīšiem, ka tas tapa par vienu dzīvokli.
೧೩ಅದಲ್ಲದೆ ಐವತ್ತು ಚಿನ್ನದ ಕೊಂಡಿಗಳನ್ನು ಮಾಡಿ ಆ ಪರದೆಗಳನ್ನು ಒಂದಕ್ಕೊಂದು ಜೋಡಿಸಿದರು; ಹೀಗೆ ಅದು ಒಂದೇ ಗುಡಾರ ಆಯಿತು.
14 Un viņš taisīja deķus no kazu spalvas telts pārklāju, pāri pār to dzīvokli; no vienpadsmit deķiem viņš to taisīja.
೧೪ಬೆಚಲೇಲನು ಗುಡಾರದ ಮೇಲೆ ಹೊದಿಸುವುದಕ್ಕಾಗಿ ಉಣ್ಣೆಯ ಹನ್ನೊಂದು ಪರದೆಗಳಿಂದ ಆ ಗುಡಾರಕ್ಕೆ ಮೇಲಣ ಡೇರೆಯನ್ನು ಮಾಡಿದನು.
15 Viena deķa garums bija trīsdesmit olektis un viena deķa platums četras olektis; šiem vienpadsmit deķiem bija vienāds mērs.
೧೫ಒಂದೊಂದು ಪರದೆಯು ಮೂವತ್ತು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇದ್ದವು; ಎಲ್ಲಾ ಪರದೆಗಳೂ ಒಂದೇ ಅಳತೆಯಾಗಿದ್ದವು.
16 Un viņš salika piecus deķus sevišķi un atkal sešus deķus sevišķi.
೧೬ಐದು ಪರದೆಗಳನ್ನು ಒಂದಾಗಿ ಜೋಡಿಸಿ ಮಿಕ್ಕ ಆರು ಪರದೆಗಳನ್ನೂ ಒಂದಾಗಿ ಜೋಡಿಸಿದರು.
17 Un viņš taisīja piecdesmit cilpas pie tā pēdīgā(malējā) deķa vīles, kur tas tapa pielaists, un viņš taisīja piecdesmit cilpas pie tā deķa otras pielaižamās malas.
೧೭ಒಂದೊಂದರ ಕೊನೆಯ ಪರದೆಯ ಅಂಚಿನಲ್ಲಿ ಐವತ್ತೈವತ್ತು ಕುಣಿಕೆಗಳನ್ನು ಮಾಡಿದರು.
18 Un viņš taisīja arī piecdesmit vara kāsīšus priekš telts salikšanas, ka tā vienā kopā saietu.
೧೮ಒಂದೇ ಡೇರೆಯಾಗುವಂತೆ ಸಮಸ್ತವನ್ನು ಜೋಡಿಸುವುದಕ್ಕಾಗಿ ತಾಮ್ರದ ಐವತ್ತು ಕೊಂಡಿಗಳನ್ನು ಮಾಡಿದರು.
19 Viņš taisīja arī telts segu no pasarkanām aunu ādām, un tur virsū segu no roņu ādām.
೧೯ಅದಲ್ಲದೆ ಹದಮಾಡಿರುವ ಟಗರಿನ ತೊಗಲುಗಳಿಂದ ಒಂದು ಮೇಲ್ಹೊದಿಕೆಯನ್ನೂ, ಕಡಲಪ್ರಾಣಿಯ ತೊಗಲುಗಳಿಂದ ಮತ್ತೊಂದು ಮೇಲ್ಹೊದಿಕೆಯನ್ನೂ ಮಾಡಿದರು.
20 Viņš taisīja arī stāvošus dēļus pie tā dzīvokļa no akācijas koka.
೨೦ಗುಡಾರಕ್ಕೆ ಜಾಲೀಮರದಿಂದ ನೆಟ್ಟಗೆ ನಿಂತಿರುವ ಹಲಗೆಗಳಿಂದ ಚೌಕಟ್ಟುಗಳನ್ನು ಮಾಡಿದರು.
21 Ikkatra dēļa garums bija desmit olektis, un ikkatra dēļa platums pusotras olekts.
೨೧ಪ್ರತಿಯೊಂದು ಚೌಕಟ್ಟೂ ಹತ್ತು ಮೊಳ ಉದ್ದವಾಗಿಯೂ ಒಂದುವರೆ ಮೊಳ ಅಗಲವಾಗಿಯೂ ಇತ್ತು;
22 Divas tapas bija vienam dēlim, ar ko viens ar otru tapa salaists.
೨೨ಪ್ರತಿಯೊಂದು ಚೌಕಟ್ಟೂ ಅಡ್ಡಪಟ್ಟಿಗಳಿಂದ ಜೋಡಿಸಲ್ಪಟ್ಟ ಎರಡು ನಿಲುವುಪಟ್ಟಿಗಳುಳ್ಳದ್ದಾಗಿತ್ತು; ಗುಡಾರದ ಎಲ್ಲಾ ಚೌಕಟ್ಟುಗಳನ್ನೂ ಹಾಗೆ ಮಾಡಿಸಿದರು.
23 Tā viņš darīja ar visiem dzīvokļa dēļiem; viņš taisīja arī tā dzīvokļa dēļus dienvidu pusē, divdesmit dēļus,
೨೩ಗುಡಾರದ ದಕ್ಷಿಣದಿಕ್ಕಿನಲ್ಲಿ ಇಪ್ಪತ್ತು ಚೌಕಟ್ಟುಗಳನ್ನು ಮಾಡಿದರು;
24 Un taisīja četrdesmit sudraba kājas apakš tiem divdesmit dēļiem, divas kājas apakš viena dēļa pie viņa divām tapām, un divas kājas apakš otra dēļa pie viņa divām tapām.
೨೪ನಲ್ವತ್ತು ಬೆಳ್ಳಿಯ ಗದ್ದಿಗೆಕಲ್ಲುಗಳನ್ನು ಮಾಡಿ ಆ ಇಪ್ಪತ್ತು ಚೌಕಟ್ಟುಗಳ ಕೆಳಗೆ ಇಟ್ಟರು; ಒಂದೊಂದು ಚೌಕಟ್ಟಿನಲ್ಲಿರುವ ಎರಡು ನಿಲುವುಪಟ್ಟಿಗಳ ಕೆಳಗೆ ಒಂದೊಂದು ಗದ್ದಿಗೆಕಲ್ಲನ್ನು ಇಟ್ಟರು.
25 Viņš taisīja divdesmit dēļus arī otrā dzīvokļa pusē pret ziemeli,
೨೫ಹಾಗೆಯೇ ಗುಡಾರದ ಉತ್ತರದಿಕ್ಕಿನಲ್ಲಿ ಇಪ್ಪತ್ತು ಚೌಕಟ್ಟುಗಳನ್ನು
26 Ar viņu četrdesmit sudraba kājām, divas kājas apakš viena dēļa, un divas kājas apakš otra dēļa.
೨೬ಮತ್ತು ಪ್ರತಿಯೊಂದು ಚೌಕಟ್ಟಿಗೆ ಎರಡೆರಡು ಗದ್ದಿಗೆಕಲ್ಲುಗಳ ಮೇರೆಗೆ ನಲ್ವತ್ತು ಬೆಳ್ಳಿಯ ಗದ್ದಿಗೆಕಲ್ಲಗಳನ್ನು ಮಾಡಿದರು.
27 Bet dzīvokļa galā pret vakariem viņš taisīja sešus dēļus.
೨೭ಗುಡಾರದ ಹಿಂಭಾಗಕ್ಕೆ ಅಂದರೆ ಪಶ್ಚಿಮದಿಕ್ಕಿನಲ್ಲಿ ಆರು ಚೌಕಟ್ಟುಗಳನ್ನು ಮಾಡಿದರು.
28 Viņš taisīja arī divus dēļus par stūru dēļiem dzīvokļa galā.
೨೮ಗುಡಾರದ ಹಿಂಭಾಗದ ಎರಡು ಮೂಲೆಗಳಿಗೆ ಬೇರೆ ಎರಡು ಚೌಕಟ್ಟುಗಳನ್ನು ಮಾಡಿದರು.
29 Un tie bija apakšgalā pa diviem salikti, un bija arī virsgalā kā dvīņi salikti ar vienu riņķi; tā viņš darīja ar tiem abiem abējos stūros.
೨೯ಅವು ಬುಡದಿಂದ ತುದಿಯವರೆಗೂ ಅಂದರೆ ಮೊದಲನೆಯ ಬಳೆಯವರೆಗೂ ಜೋಡಿಸಿದ್ದವು; ಹಾಗೆ ಎರಡು ಮೂಲೆಗಳಿಗೂ ಮಾಡಿದರು.
30 Tā bija astoņi dēļi ar savām sudraba kājām, sešpadsmit kājas, divas kājas apakš ikviena dēļa.
೩೦ಹೀಗೆ ಎಂಟು ಚೌಕಟ್ಟುಗಳೂ ಮತ್ತು ಪ್ರತಿಯೊಂದು ಚೌಕಟ್ಟಿಗೆ ಎರಡೆರಡು ಬೆಳ್ಳಿಯ ಗದ್ದಿಗೆಕಲ್ಲುಗಳೂ ಒಟ್ಟು ಹದಿನಾರು ಗದ್ದಿಗೆಕಲ್ಲುಗಳಿದ್ದವು.
31 Viņš taisīja arī kārtis no akācijas koka, piecas pie tiem dēļiem vienā dzīvokļa pusē,
೩೧ಜಾಲೀಮರದಿಂದ ಅಗುಳಿಗಳನ್ನು ಮಾಡಿದರು.
32 Un piecas kārtis pie tiem dēļiem otrā dzīvokļa pusē, un piecas kārtis pie tiem gala dēļiem pret vakariem.
೩೨ಗುಡಾರದ ಎರಡು ಕಡೆಗಳ ಚೌಕಟ್ಟುಗಳಿಗೂ ಅದರ ಹಿಂದುಗಡೆಯ ಅಂದರೆ ಪಶ್ಚಿಮ ಕಡೆಯ ಚೌಕಟ್ಟುಗಳಿಗೂ ಐದೈದು ಅಗುಳಿಗಳನ್ನು ಮಾಡಿದರು.
33 Un viņš taisīja to vidēju kārti cauršaujamu gar dēļu vidu no viena gala līdz otram.
೩೩ಚೌಕಟ್ಟುಗಳ ನಟ್ಟನಡುವೆಯಲ್ಲಿರುವ ಅಗುಳಿಯು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೂ ಮುಟ್ಟುವಂತೆ ಮಾಡಿದರು.
34 Un viņš tos dēļus apvilka ar zeltu, un viņu riņķus (priekš tām kārtīm) viņš taisīja no zelta, tās kārtis viņš arī apvilka ar zeltu.
೩೪ಆ ಚೌಕಟ್ಟುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿ ಅವುಗಳಲ್ಲಿ ಆ ಅಗುಳಿಗಳಿಗಾಗಿ ಚಿನ್ನದ ಬಳೆಗಳನ್ನು ಮಾಡಿದರು. ಆ ಅಗುಳಿಗಳನ್ನೂ ಚಿನ್ನದ ತಗಡುಗಳಿಂದ ಹೊದಿಸಿದರು.
35 Pēc tam viņš taisīja priekškaramo no ziluma un purpura un karmezīna un smalkām šķetinātām dzijām, viņš to izauda izrotātu darbu ar ķerubiem.
೩೫ನಯವಾಗಿ ಹೊಸೆದ ನಾರಿನ ಪರದೆಯಲ್ಲಿ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದ ಕೆರೂಬಿಗಳಿಗೆ ಚಮತ್ಕಾರವಾಗಿ ಕಸೂತಿಹಾಕಿ ಒಂದು ತೆರೆಯನ್ನು ಮಾಡಿದರು.
36 Un viņš tam taisīja četrus stabus no akācijas koka un tos apvilka ar zeltu; viņu kāsīši bija no zelta, un viņš tiem lēja četras sudraba kājas.
೩೬ಅದಕ್ಕೆ ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿ ಚಿನ್ನದ ತಗಡುಗಳನ್ನು ಹೊದಿಸಿದರು; ಅವುಗಳಿಗೆ ಚಿನ್ನದ ಕೊಂಡಿಗಳನ್ನು ಮಾಡಿ ನಾಲ್ಕು ಬೆಳ್ಳಿಯ ಗದ್ದಿಗೆಕಲ್ಲುಗಳನ್ನು ಎರಕಹೊಯಿಸಿದರು.
37 Viņš taisīja arī priekš telts durvīm segu no ziluma un purpura un karmezīna un smalkām šķetinātām dzijām raibi austu,
೩೭ಡೇರೆಯ ಬಾಗಿಲಿಗೆ ಹುರಿ ನಾರಿನ ಪರದೆಯಲ್ಲಿ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದ ಕಸೂತಿಹಾಕಿ ಪರದೆಯನ್ನು ಮಾಡಿದರು.
38 Un viņa piecus stabus un viņa kāsīšus, un viņš apvilka viņu virsgalus un viņu stīpas ar zeltu, un viņu piecas kājas bija no vara.
೩೮ಆ ಪರದೆಯನ್ನು ತೂಗು ಹಾಕುವುದಕ್ಕಾಗಿ ಐದು ಕಂಬಗಳನ್ನೂ ಅವುಗಳ ಕೊಂಡಿಗಳನ್ನೂ ಮಾಡಿ ಅವುಗಳ ಸುತ್ತಲ ಮೆಟ್ಟಿಲುಗಳಿಗೂ, ಕಟ್ಟುಗಳಿಗೂ ಚಿನ್ನದ ತಗಡುಗಳನ್ನು ಹೊದಿಸಿದರು. ಅವುಗಳ ಐದು ತಳಭಾಗಗಳನ್ನು ತಾಮ್ರದಿಂದ ಮಾಡಿದರು.