< Ījaba 36 >
1 Un Elihus vēl runāja un sacīja:
೧ಆಮೇಲೆ ಎಲೀಹು ಮತ್ತೆ ಹೀಗೆಂದನು,
2 Pagaidi man vēl maķenīt, es tev mācīšu, jo no Dieva puses vēl kas jāsaka.
೨“ಸ್ವಲ್ಪ ತಾಳು, ನಾನು ತಿಳಿಸುತ್ತೇನೆ, ದೇವರ ಪರವಾಗಿ ಹೇಳತಕ್ಕ ಮಾತುಗಳು ಇನ್ನೂ ಕೆಲವು ಉಂಟು.
3 Es meklēšu savu atzīšanu no tālienes un gādāšu savam radītājam taisnību.
೩ದೂರದಿಂದ ಸಂಪಾದಿಸಿದ ನನ್ನ ತಿಳಿವಳಿಕೆಯ ಪ್ರಕಾರ, ನನ್ನ ಸೃಷ್ಟಿಕರ್ತನನ್ನು ಧರ್ಮಸ್ವರೂಪನೆಂದು ಹೊಗಳುವೆನು.
4 Jo tiešām, mana valoda nav meli; tavā priekšā ir, kam atzīšanas netrūkst.
೪ನನ್ನ ಮಾತುಗಳು ಸುಳ್ಳಲ್ಲವೆಂಬುದು ನಿಶ್ಚಯ, ನಿನ್ನ ಬಳಿಯಲ್ಲಿ ಜ್ಞಾನಪೂರ್ಣನೊಬ್ಬನು ಇದ್ದಾನೆ.
5 Redzi, Dievs ir varens un tomēr neatmet, Viņš ir varens gudrības spēkā.
೫ಇಗೋ, ದೇವರು ಮಹಾಶಕ್ತನಾಗಿದ್ದರೂ ಯಾರನ್ನೂ ತಿರಸ್ಕರಿಸುವುದಿಲ್ಲ, ಆತನ ಬುದ್ಧಿ ಸಾಮರ್ಥ್ಯವು ಅಪಾರವಾಗಿದೆ.
6 Viņš bezdievīgam neliek dzīvot, un bēdīgam nes tiesu.
೬ಆತನು ದುಷ್ಟರ ಪ್ರಾಣವನ್ನು ಉಳಿಸುವುದಿಲ್ಲ, ಗತಿಹೀನರ ನ್ಯಾಯವನ್ನು ಸ್ಥಾಪಿಸುವನು.
7 Viņš nenovērš savas acis no taisnā, bet pie ķēniņiem uz goda krēsla, tur Viņš tiem liek sēdēt mūžam, ka top paaugstināti.
೭ನೀತಿವಂತರಿಂದ ತನ್ನ ಕಟಾಕ್ಷವನ್ನು ತಿರುಗಿಸದೆ, ಅರಸರೊಂದಿಗೆ ಸಿಂಹಾಸನದ ಮೇಲೆ ಶಾಶ್ವತವಾಗಿ ಕುಳಿತುಕೊಳ್ಳುವ, ಉನ್ನತಪದವಿಗೆ ಅವರನ್ನು ತರುವನು.
8 Un kur cietuma ļaudis ir ķēdēs un top turēti bēdu saitēs,
೮ಅವರು ಒಂದು ವೇಳೆ ಬಂಧನಕ್ಕೆ ಸಿಕ್ಕಿಕೊಂಡು, ಬಾಧೆಗಳೆಂಬ ಹಗ್ಗಗಳಿಂದ ಕಟ್ಟಲ್ಪಟ್ಟಿದ್ದರೆ,
9 Tur Viņš tiem dara zināmu viņu darbu un viņu pārkāpumus, ka cēlušies lepnībā.
೯ಆತನು ಅವರ ದುಷ್ಕೃತ್ಯವನ್ನೂ, ಸೊಕ್ಕಿನ ದ್ರೋಹಗಳನ್ನೂ ಅವರಿಗೆ ತೋರಿಸುವನು.
10 Viņš tiem atdara ausi mācībai, un saka, lai atgriežas no netaisnības.
೧೦ಇದಲ್ಲದೆ ಶಿಕ್ಷಣವನ್ನು ಕೇಳುವಂತೆ ಅವರ ಕಿವಿಗಳನ್ನು ತೆರೆದು, ಅಧರ್ಮವನ್ನು ಬಿಟ್ಟುಬಿಡಬೇಕೆಂದು ಅವರಿಗೆ ಆಜ್ಞಾಪಿಸುವನು.
11 Ja tie nu klausa un Viņam kalpo, tad tie pavada savas dienas labumā un savus gadus laimē.
೧೧ಅವರು ಅದನ್ನು ಕೇಳಿ ಆತನನ್ನು ಸೇವಿಸಿದರೆ, ತಮ್ಮ ದಿನಗಳನ್ನು ಸುಖದಲ್ಲಿಯೂ, ವರ್ಷಗಳನ್ನು ಸಂತೋಷದಲ್ಲಿಯೂ ಕಳೆಯುವರು.
12 Un ja tie neklausa, tad tie krīt caur zobenu un mirst bez atzīšanas.
೧೨ಕೇಳದಿದ್ದರೆ ದೈವಾಸ್ತ್ರದಿಂದ ಅಳಿದುಹೋಗುವರು, ಜ್ಞಾನಹೀನರಾಗಿಯೇ ಪ್ರಾಣಬಿಡುವರು.
13 Bet kam neskaidra sirds, tie kurn, tie nepiesauc, kad Viņš tos saistījis.
೧೩ದೇವರನ್ನು ಹೃದಯದಲ್ಲಿ ನಂಬದಿರುವವರು ಸಿಟ್ಟುಗೊಂಡಿರುವರು, ಆತನು ಅವರನ್ನು ಬಂಧಿಸುವಾಗಲೂ ಆತನಿಗೆ ಮೊರೆಯಿಡುವುದಿಲ್ಲ.
14 Tā tad viņu dvēsele mirst jaunībā, un viņu dzīvība paiet ar mauciniekiem.
೧೪ಯೌವನದಲ್ಲೇ ಸಾಯುವರು. ಅವರ ಜೀವವು ಪುರಷಗಾಮಿಗಳ ಜೀವದಂತೆ ಕ್ಷಯಿಸುವುದು.
15 Bet bēdīgo Viņš izpestī viņa bēdās, un atver viņa ausis bēdu laikā.
೧೫ಬಾಧೆಪಡುವವರನ್ನು ಅವರ ಬಾಧೆಗಳ ಮೂಲಕವೇ ರಕ್ಷಿಸುವನು, ಅವರು ಅನುಭವಿಸುವ ಹಿಂಸೆಯಿಂದಲೇ ಅವರ ಕಿವಿಯನ್ನು ತೆರೆಯುವನು.
16 Tāpat Viņš tevi izraus no bēdu rīkles uz klaju vietu, kur bēdu nav, un tavs galds būs pilns ar treknumu.
೧೬ಇದೇ ಮೇರೆಗೆ ನಿನ್ನನ್ನೂ ಕಷ್ಟದೊಳಗಿಂದ ತಪ್ಪಿಸಿ, ಇಕ್ಕಟ್ಟಿಲ್ಲದ ವಿಶಾಲ ಸ್ಥಳಕ್ಕೆ ಬರಮಾಡಬೇಕೆಂದೂ, ನಿನ್ನ ಮೇಜಿನ ಆಹಾರಗಳು ತುಪ್ಪದಿಂದ ತುಂಬಿರಬೇಕೆಂಬುದು ಆತನ ಉದ್ದೇಶವಾಗಿದೆ.
17 Bet ja tu esi pilns bezdievīgas tiesāšanās, tad tiesa un sodība tevi ķers.
೧೭ನೀನಾದರೋ ದುಷ್ಟನಿರ್ಣಯಗಳಿಂದ ತುಂಬಿದವನಾಗಿ, ನ್ಯಾಯವಿಚಾರಣೆಗೂ, ನ್ಯಾಯತೀರ್ಪಿಗೂ ಒಳಗಾಗಿದ್ದಿ.
18 Lai sirds rūgtums tev jel neskubina zaimot, un tā lielā pārbaudīšana lai tevi nenovērš.
೧೮ನಿನ್ನ ಸಿಟ್ಟು ನಿನ್ನನ್ನು ಮರುಳುಗೊಳಿಸಿ ಕುಚೋದ್ಯಕ್ಕೆ ನೂಕದಂತೆ ನೋಡಿಕೋ! ಕೊಡಬೇಕಾದ ಈಡು ದೊಡ್ಡದೆಂದು ಹಿಂದೆಗೆಯಬೇಡ!
19 Vai tu ar brēkšanu no bēdām tiksi vaļā, vai cīnīdamies ar visu spēku?
೧೯ಕಷ್ಟಾನುಭವವಿಲ್ಲದೆ ನಿನ್ನ ಐಶ್ವರ್ಯವೂ, ಧನಸಾಮರ್ಥ್ಯವೂ ನಿನಗೆ ಈಡಾಗುವುದೇ?
20 Neilgojies pēc tās nakts, kas noceļ tautas no savas vietas.
೨೦ಜನಾಂಗಗಳು ತಟ್ಟನೆ ನಿರ್ಮೂಲವಾಗುವಾಗ ಅವರ ವಿರುದ್ಧ ಪಾಪಮಾಡದಂತೆ, ರಾತ್ರಿಯನ್ನು ಬಯಸಬೇಡ.
21 Sargies, negriezies pie netaisnības, jo tā tev vairāk patīk nekā pacietība.
೨೧ಎಚ್ಚರಿಕೆಯಾಗಿರು, ಅಧರ್ಮದ ಕಡೆಗೆ ಕಾಲಿಡಬೇಡ. ಕಷ್ಟವನ್ನು ಅನುಭವಿಸಲೊಲ್ಲದೆ ಅಧರ್ಮವನ್ನೇ ಆರಿಸಿಕೊಂಡಿದ್ದಿ.
22 Redzi, Dievs ir augsts savā spēkā; kur ir tāds mācītājs, kā Viņš?
೨೨ಇಗೋ, ದೇವರು ತನ್ನ ಶಕ್ತಿಯಿಂದ ಉನ್ನತ ಕಾರ್ಯಗಳನ್ನು ನಡೆಸುವನು, ಆತನಂತಹ ಉಪದೇಶಕನು ಯಾರು?
23 Kas Viņam raudzīs uz Viņa ceļu, vai kas uz Viņu sacīs: Tu dari netaisnību?
೨೩ಆತನ ಮಾರ್ಗವನ್ನು ಆತನಿಗೆ ಯಾರು ನೇಮಿಸಿದರು? ‘ನೀನು ಅನ್ಯಾಯವನ್ನು ನಡೆಸಿದಿ’ ಎಂದು ಯಾರು ಹೇಳಬಲ್ಲರು?
24 Piemini, ka arī tu paaugstini Viņa darbu, par ko ļaudis dzied.
೨೪ಮನುಷ್ಯರು ಕೀರ್ತಿಸುವ, ಆತನ ಕೆಲಸವನ್ನು ಹೊಗಳಲು ಮರೆಯಬೇಡ.
25 Visi ļaudis to skatās ar prieku, cilvēks to ierauga no tālienes.
೨೫ಎಲ್ಲಾ ಮನುಷ್ಯರೂ ಅದನ್ನು ಕಂಡಿದ್ದಾರೆ; ಆದರೆ ನರನು ದೂರದಿಂದ ನೋಡುತ್ತಾನಷ್ಟೆ.
26 Redzi, Dievs ir augsts un neizmanāms, Viņa gadu pulku nevar izdibināt.
೨೬ಆಹಾ, ದೇವರು ಮಹೋನ್ನತನಾಗಿದ್ದಾನೆ, ನಾವು ಆತನನ್ನು ಅರಿಯಲಾರೆವು; ಆತನ ವರ್ಷಗಳು ಅಸಂಖ್ಯಾತವಾಗಿವೆ.
27 Viņš savelk ūdens lāsītes, un lietus līst no viņa miglas.
೨೭ನೀರಿನ ಹನಿಗಳನ್ನು ಎಳೆದುಕೊಳ್ಳುವನು, ಅವು ತಿಳಿಮಳೆಯಾಗಿ ಆತನ ಮಂಜಿನಿಂದ ಉದುರುವವು.
28 Tas līst no padebešiem un pil uz daudz cilvēkiem.
೨೮ಮೋಡಗಳು ಅದನ್ನು ಸುರಿಸಿ ಸಮೃದ್ಧಿಯಾಗಿ ಜನರ ಮೇಲೆ ಚಿಮುಕಿಸುವುದು.
29 Vai var izprast, kā padebeši izplešas, un kā Viņa dzīvoklis rīb?
೨೯ಆಹಾ, ಮೇಘಗಳ ಹರಡುವಿಕೆಯನ್ನೂ, ಆತನ ಗುಡಾರದಲ್ಲಿನ ಗರ್ಜನೆಗಳನ್ನೂ ಯಾರು ಗ್ರಹಿಸಬಲ್ಲರು?
30 Redzi, Viņš ģērbjas zibeņu spīdumā un apklājās ar jūras dziļumiem.
೩೦ಇಗೋ, ತನ್ನ ಪ್ರಕಾಶವನ್ನು ಸುತ್ತಲು ಹರಡಿಕೊಂಡು, ಅದನ್ನು ಜಲಸಮೂಹಗಳಿಂದ ಮುಚ್ಚಿಕೊಳ್ಳುವನು.
31 Jo tā Viņš soda tautas un dod barības papilnam.
೩೧ಮೋಡಗಳ ಮುಖಾಂತರವಾಗಿಯೇ ಜನಾಂಗಗಳಿಗೆ ನ್ಯಾಯವನ್ನು ವಿಧಿಸಿ, ಆಹಾರವನ್ನು ಧಾರಾಳವಾಗಿ ದಯಪಾಲಿಸುವನಷ್ಟೆ.
32 Viņa abējās rokās spīdumi, un Viņš tiem rāda, kur lai sper.
೩೨ಕೈತುಂಬಾ ಸಿಡಿಲನ್ನು ಹಿಡಿದು ನೀನು ವೈರಿಯನ್ನು ಹೊಡೆದು ಗುರಿಮುಟ್ಟುಲು ಬಿಡುವನು.
33 Pērkona balss sludina Viņu nākam, un ganāmi pulki, ka Viņš tuvu.
೩೩ಅದರ ಆರ್ಭಟವು ಆತನ ವಿಷಯವಾಗಿ ಪ್ರಕಟಿಸುವುದು, ದನಕರುಗಳೂ ಸಹ ಆತನ ಆಗಮನವನ್ನು ತಿಳಿಯುವವು.”