< Psalmi 105 >
1 Pateiciet Tam Kungam, piesauciet Viņa Vārdu, dariet zināmus starp tiem ļaudīm Viņa darbus.
೧ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ; ಆತನ ನಾಮದ ಮಹತ್ವವನ್ನು ವರ್ಣಿಸಿರಿ; ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಪಡಿಸಿರಿ.
2 Dziediet Viņam, slavējiet Viņu ar dziesmām, pārdomājiet visus Viņa brīnumus.
೨ಆತನನ್ನು ಕೀರ್ತಿಸಿರಿ, ಭಜಿಸಿರಿ; ಆತನ ಅದ್ಭುತಕೃತ್ಯಗಳನ್ನೆಲ್ಲಾ ಧ್ಯಾನಿಸಿರಿ.
3 Slavējiet Viņa svēto vārdu; lai tās sirdis priecājās, kas To Kungu meklē.
೩ಆತನ ಪರಿಶುದ್ಧ ನಾಮದಲ್ಲಿ ಹಿಗ್ಗಿರಿ; ಯೆಹೋವನ ದರ್ಶನವನ್ನು ಕೋರುವವರ ಹೃದಯವು ಹರ್ಷಿಸಲಿ.
4 Vaicājiet pēc Tā Kunga un pēc Viņa spēka, meklējiet vienmēr Viņa vaigu.
೪ಯೆಹೋವನನ್ನೂ, ಆತನ ಬಲವನ್ನೂ ಆಶ್ರಯಿಸಿರಿ; ನಿತ್ಯವೂ ಆತನ ದರ್ಶನವನ್ನು ಅಪೇಕ್ಷಿಸಿರಿ.
5 Pieminiet Viņa brīnumus, ko Viņš ir darījis, Viņa brīnuma darbus un Viņa mutes tiesas, -
೫ಆತನು ಮಾಡಿದ ಅದ್ಭುತಕೃತ್ಯ, ಆತನ ಮಹತ್ಕಾರ್ಯ, ಆತನ ಬಾಯಿಂದ ಹೊರಟ ನ್ಯಾಯನಿರ್ಣಯ ಇವುಗಳನ್ನು,
6 Tu Ābrahāma, Viņa kalpa dzimums, jūs Jēkaba bērni, Dieva izredzētie!
೬ಆತನ ಸೇವಕನಾದ ಅಬ್ರಹಾಮನ ಸಂತತಿಯವರೇ, ಆತನು ಆರಿಸಿಕೊಂಡ ಯಾಕೋಬನ ವಂಶದವರೇ, ನೀವು ನೆನಪುಮಾಡಿಕೊಳ್ಳಿರಿ.
7 Viņš ir Tas Kungs, mūsu Dievs; Viņa tiesas iet pār visu zemi.
೭ಯೆಹೋವನೆಂಬಾತನೇ ನಮ್ಮ ದೇವರು; ಆತನ ನ್ಯಾಯವಿಧಿಗಳು ಭೂಲೋಕದಲ್ಲೆಲ್ಲಾ ಇವೆ.
8 Viņš piemin Savu derību mūžam, to vārdu, ko Viņš ir iecēlis tūkstošiem dzimumiem,
೮ಆತನು ತನ್ನ ವಾಗ್ದಾನವನ್ನು ಸಾವಿರ ತಲೆಗಳವರೆಗೂ, ತನ್ನ ಒಡಂಬಡಿಕೆಯನ್ನು ನಿತ್ಯವೂ ನೆನಪಿನಲ್ಲಿಟ್ಟುಕೊಳ್ಳುತ್ತಾನೆ.
9 Ko Viņš ar Ābrahāmu derējis un ko zvērējis Īzakam.
೯ಆತನು ಆ ಒಡಂಬಡಿಕೆಯನ್ನು ಅಬ್ರಹಾಮನ ಸಂಗಡ ಮಾಡಿಕೊಂಡನು; ಇಸಾಕನಿಗೆ ತನ್ನ ವಾಗ್ದಾನಗಳನ್ನು ಕೊಟ್ಟನು.
10 To Viņš arī Jēkabam ir iecēlis par likumu, Israēlim par mūžīgu derību,
೧೦ಅದು ರಾಜಶಾಸನದಂತೆ ಇರುವುದೆಂದು ಇಸ್ರಾಯೇಲನಿಗೂ ಮಾತುಕೊಟ್ಟನು.
11 Sacīdams: tev Es došu Kanaāna zemi, jūsu mantības daļu;
೧೧ಅವರಲ್ಲಿ ಸ್ವಲ್ಪ ಜನರು ಕಾನಾನ್ ದೇಶದಲ್ಲಿ ಪ್ರವಾಸಿಗಳಾಗಿ ಇರುವಾಗಲೇ,
12 Kad tie vēl bija mazs pulciņš, ne daudz, un svešinieki iekš tās,
೧೨ಆತನು, “ನಿಮಗೆ ಈ ದೇಶವನ್ನು ಕೊಡುವೆನು; ಅದು ನಿಮ್ಮ ಸಂತತಿಯವರಿಗೆ ಸ್ವತ್ತಾಗಿರುವುದು” ಎಂದು ಹೇಳಿದನು.
13 Un staigāja no vienas tautas pie otras, no vienas valsts pie otras valsts ļaudīm,
೧೩ಅವರು ದೇಶದಿಂದ ದೇಶಕ್ಕೂ, ರಾಜ್ಯದಿಂದ ರಾಜ್ಯಕ್ಕೂ ಹೋಗುತ್ತಿರುವಾಗ,
14 Viņš nevienam neļāva tos apbēdināt, Viņš arī ķēniņus sodīja viņu dēļ:
೧೪ಅವರಿಗೆ ಯಾರಿಂದಲೂ ಅನ್ಯಾಯವಾಗಗೊಡಿಸಲಿಲ್ಲ. ಆತನು ಅವರ ವಿಷಯದಲ್ಲಿ ಅರಸರನ್ನೂ ಗದರಿಸಿ,
15 Neaizskariet Manus svaidītos un nedariet ļauna Maniem praviešiem!
೧೫“ನಾನು ಅಭಿಷೇಕಿಸಿದವರನ್ನು ಮುಟ್ಟಬಾರದು, ನನ್ನ ಪ್ರವಾದಿಗಳಿಗೆ ಯಾವ ಕೇಡನ್ನೂ ಮಾಡಬಾರದು” ಎಂದು ಹೇಳಿದನು.
16 Viņš aicināja badu pār zemi, Viņš atņēma visu maizes padomu.
೧೬ಅನಂತರ ಆತನು ಐಗುಪ್ತ ದೇಶದಲ್ಲಿ ಕ್ಷಾಮವನ್ನು ಬರಮಾಡಿ, ಆಹಾರವನ್ನು ನಾಶಮಾಡಿಬಿಟ್ಟನು.
17 Viņš sūtīja viņu priekšā vienu vīru; Jāzeps tapa pārdots par kalpu.
೧೭ಆತನು ಅವರ ಮುಂದಾಗಿ ಒಬ್ಬನನ್ನು ಕಳುಹಿಸಿದನು; ದಾಸತ್ವಕ್ಕೆ ಮಾರಲ್ಪಟ್ಟ ಯೋಸೇಫನೇ ಅವನು.
18 Viņa kājas tapa spaidītas siekstā, viņa miesas nāca dzelzīs,
೧೮ಅವನ ಕಾಲುಗಳು ಬೇಡಿಗಳಿಂದ ಕಟ್ಟಲ್ಪಟ್ಟವು; ಕಬ್ಬಿಣದ ಕೊರಳಪಟ್ಟಿಯಿಂದ ಅವನು ಬಂಧಿತನಾದನು.
19 Tiekams viņa vārds notika, un Tā Kunga sludinājums to pārbaudīja.
೧೯ಅವನು ತನ್ನ ಮಾತು ನೆರವೇರುವ ತನಕ ಯೆಹೋವನ ವಾಕ್ಯದಿಂದ ಶೋಧಿತನಾದನು.
20 Tas ķēniņš sūtīja un lika to atraisīt, tas ļaužu valdītājs to atlaida vaļā.
೨೦ಅರಸನು ಅಪ್ಪಣೆಮಾಡಿ ಅವನನ್ನು ತಪ್ಪಿಸಿದನು; ಜನಾಧಿಪತಿಯು ಅವನನ್ನು ಬಿಡಿಸಿದನು.
21 Viņš to iecēla par kungu savam namam un par valdnieku visai savai mantai.
೨೧ಅವನನ್ನು ತನ್ನ ಮನೆಗೆ ಯಜಮಾನನನ್ನಾಗಿಯೂ, ತನ್ನ ಆಸ್ತಿಗೆಲ್ಲಾ ಅಧಿಕಾರಿಯನ್ನಾಗಿಯೂ ಮಾಡಿದನು.
22 Ka tas saistītu viņa lielkungus pēc sava prāta un mācītu gudrību viņa vecākajiem.
೨೨ತನ್ನ ಪ್ರಧಾನರನ್ನು ಇಷ್ಟಾನುಸಾರವಾಗಿ ಬಂಧಿಸುವುದಕ್ಕೂ, ತನ್ನ ಮಂತ್ರಿಗಳಿಗೆ ಬುದ್ಧಿಕಲಿಸುವುದಕ್ಕೂ ಅವನಿಗೆ ಅಧಿಕಾರಕೊಟ್ಟನು.
23 Tā Israēls nāca Ēģiptes zemē un Jēkabs piemita Hama zemē.
೨೩ಆಗ ಇಸ್ರಾಯೇಲನು ಐಗುಪ್ತಕ್ಕೆ ಬಂದನು; ಯಾಕೋಬನು ಹಾಮನ ದೇಶದಲ್ಲಿ ಪ್ರವಾಸಿಯಾದನು.
24 Un Viņš Saviem ļaudīm lika augumā augt un tos darīja jo varenus nekā viņu pretiniekus.
೨೪ದೇವರು ತನ್ನ ಜನರನ್ನು ಬಹಳವಾಗಿ ವೃದ್ಧಿಮಾಡಿ, ಅವರು ಶತ್ರುಗಳಿಗಿಂತ ಬಲಿಷ್ಠರಾಗುವಂತೆ ಮಾಡಿದನು.
25 Viņš pārvērsa viņu sirdi, ienīdēt Viņa ļaudis un ar viltu glūnēt uz Viņa kalpiem.
೨೫ಆತನು ಆ ದೇಶದವರ ಹೃದಯವನ್ನು ಮಾರ್ಪಡಿಸಿದ್ದರಿಂದ, ಅವರು ಆತನ ಜನರನ್ನು ದ್ವೇಷಿಸಿ, ಆತನ ಸೇವಕರನ್ನು ಕುಯುಕ್ತಿಯಿಂದ ನಡೆಸಿದರು.
26 Viņš sūtīja Mozu, Savu kalpu, un Āronu, ko Viņš bija izredzējis.
೨೬ಆಗ ಆತನು ತನ್ನ ಸೇವಕನಾದ ಮೋಶೆಯನ್ನೂ, ತಾನು ಆರಿಸಿಕೊಂಡ ಆರೋನನನ್ನೂ ಕಳುಹಿಸಿದನು.
27 Tie darīja viņu starpā Dieva brīnumus un brīnuma zīmes Hama zemē.
೨೭ಅವರು ಹಾಮನ ದೇಶದವರ ಮಧ್ಯದಲ್ಲಿ, ಆತನು ಆಜ್ಞಾಪಿಸಿದ ವಿವಿಧ ಮಹತ್ಕಾರ್ಯಗಳನ್ನೂ, ಅದ್ಭುತಗಳನ್ನೂ ನಡೆಸಿದರು.
28 Viņš sūtīja tumsu, tad kļuva tumšs; un tie Viņa Vārdam neturējās pretī.
೨೮ಆತನು ಕತ್ತಲೆಯನ್ನು ಕಳುಹಿಸಲು ಕತ್ತಲೆಯಾಯಿತು. ಐಗುಪ್ತ್ಯರು ಆತನ ಆಜ್ಞೆಗಳನ್ನು ಅನುಸರಿಸಲಿಲ್ಲ.
29 Viņš pārvērsa viņu ūdeņus par asinīm un nokāva viņu zivis.
೨೯ಆತನು ಐಗುಪ್ತ್ಯರ ನೀರನ್ನು ರಕ್ತಮಾಡಿ, ಮೀನುಗಳನ್ನು ಸಾಯಿಸಿದನು.
30 Viņu zeme mudžēja no vardēm viņu ķēniņu kambaros.
೩೦ಅವರ ದೇಶದಲ್ಲೆಲ್ಲಾ ಕಪ್ಪೆಗಳು ತುಂಬಿಕೊಂಡವು; ಅರಮನೆಯಲ್ಲಿಯೂ ವ್ಯಾಪಿಸಿಕೊಂಡವು.
31 Viņš runāja, tad nāca kukaiņi, utis visās viņu robežās.
೩೧ಆತನು ಆಜ್ಞಾಪಿಸಲು ಅವರ ಎಲ್ಲಾ ಪ್ರಾಂತ್ಯಗಳಲ್ಲಿ, ವಿಷದ ಹುಳಗಳೂ, ಹೇನುಗಳೂ ಉಂಟಾದವು.
32 Viņš tiem deva krusu lietus vietā, uguns liesmas viņu zemē,
೩೨ಆತನು ಅವರ ದೇಶದಲ್ಲಿ ಕಲ್ಮಳೆಯನ್ನು, ಅಗ್ನಿಜ್ವಾಲೆಯನ್ನು ಬರಮಾಡಿ,
33 Un sasita viņu vīna kokus un viņu vīģes kokus un salauzīja kokus viņu robežās.
೩೩ಅವರ ದ್ರಾಕ್ಷಾಲತೆಗಳನ್ನು, ಅಂಜೂರದ ಗಿಡಗಳನ್ನು ನಾಶಮಾಡಿ, ಅವರ ಪ್ರಾಂತ್ಯಗಳಲ್ಲಿದ್ದ ಮರಗಳನ್ನು ಮುರಿದುಬಿಟ್ಟನು.
34 Viņš runāja, tad nāca siseņi un vaboles neizskaitāmā pulkā,
೩೪ಆತನು ಆಜ್ಞಾಪಿಸಲು ಮಿಡತೆಗಳೂ, ಲೆಕ್ಕವಿಲ್ಲದಷ್ಟು ಜಿಟ್ಟೆಹುಳಗಳೂ ಬಂದು,
35 Kas apēda visu zāli viņu zemē, un norija viņu zemes augļus.
೩೫ಅವರ ದೇಶದಲ್ಲಿದ್ದ ಎಲ್ಲಾ ಪೈರುಗಳನ್ನು, ಭೂಮಿಯ ಬೆಳೆಗಳನ್ನು ತಿಂದುಬಿಟ್ಟವು.
36 Viņš kāva arī visus pirmdzimtos viņu zemē un visu viņu pirmo stiprumu.
೩೬ಅವನು ಆ ದೇಶದವರ ವೀರ್ಯಕ್ಕೆ ಪ್ರಥಮಫಲವಾಗಿದ್ದ, ಚೊಚ್ಚಲ ಮಕ್ಕಳನ್ನು ಸಂಹರಿಸಿದನು.
37 Un tos izveda ar sudrabu un zeltu, un neviena gurdena nebija viņu ciltīs.
೩೭ಇಸ್ರಾಯೇಲರನ್ನು ಬೆಳ್ಳಿ, ಬಂಗಾರಗಳ ಸಹಿತವಾಗಿ ಹೊರಗೆ ಬರಮಾಡಿದನು; ಅವರ ಕುಲಗಳಲ್ಲಿ ಎಡವುವವನು ಒಬ್ಬನಾದರೂ ಇರಲಿಲ್ಲ.
38 Ēģiptes zeme priecājās, kad tie izgāja, jo viņu bailes uz tiem bija kritušas.
೩೮ಐಗುಪ್ತ್ಯರು ಅವರ ವಿಷಯದಲ್ಲಿ ಹೆದರಿಕೆಯುಳ್ಳವರಾದ್ದರಿಂದ, ಅವರು ಹೊರಟು ಹೋದದ್ದಕ್ಕೆ ಸಂತೋಷಿಸಿದರು.
39 Viņš deva padebesi par apsegu, un uguni naktī par gaismu.
೩೯ಅವರಿಗೆ ಹಗಲಲ್ಲಿ ನೆರಳಿಗೋಸ್ಕರ ಮೋಡವನ್ನು, ಇರುಳಲ್ಲಿ ಬೆಳಕಿಗೋಸ್ಕರ ಬೆಂಕಿಯನ್ನು ಮೇಲೆ ಹರಡಿದನು.
40 Tie lūdza un viņš lika nākt paipalām un tos ēdināja ar debes'maizi.
೪೦ಅವರು ಬೇಡಿಕೊಳ್ಳಲು ಲಾವಕ್ಕಿಗಳನ್ನು ಬರಮಾಡಿದನು; ದಿವ್ಯ ಆಹಾರದಿಂದ ಅವರನ್ನು ತೃಪ್ತಿಗೊಳಿಸಿದನು.
41 Viņš pāršķēla klinti, tad ūdens iztecēja, un upes skrēja tuksnesī.
೪೧ಆತನು ಬಂಡೆಯನ್ನು ಸೀಳಲು ನೀರು ಚಿಮ್ಮಿ ಬಂದು, ಅರಣ್ಯದಲ್ಲಿ ನದಿಯಾಗಿ ಹರಿಯಿತು.
42 Jo Viņš pieminēja Savu svēto vārdu un Ābrahāmu, Savu kalpu.
೪೨ಹೀಗೆ ಆತನು ತನ್ನ ಪರಿಶುದ್ಧ ವಚನವನ್ನೂ, ತನ್ನ ಸೇವಕನಾದ ಅಬ್ರಹಾಮನನ್ನೂ ನೆನಪುಮಾಡಿಕೊಂಡು
43 Tā Viņš izveda Savus ļaudis ar prieku un Savus izredzētos ar gavilēšanu,
೪೩ತನ್ನ ಪ್ರಜೆಯು ಉಲ್ಲಾಸದಿಂದಲೂ, ತಾನು ಆರಿಸಿಕೊಂಡವರು ಉತ್ಸಾಹಧ್ವನಿಯಿಂದಲೂ ಹೊರಗೆ ಬರುವಂತೆ ಮಾಡಿದನು.
44 Un tiem deva pagānu zemes; tie iemantoja tautu sviedrus,
೪೪ಆತನು ಅವರಿಗೆ ಪರಜನಾಂಗಗಳ ದೇಶವನ್ನು ಕೊಟ್ಟನು; ಅನ್ಯಜನಾಂಗಗಳ ಕಷ್ಟಾರ್ಜಿತವು ಅವರ ಕೈ ಸೇರಿತು.
45 Lai turētu Viņa likumus un sargātu Viņa bauslību. Alleluja.
೪೫ಅವರು ತನ್ನ ವಿಧಿಗಳನ್ನು ಕೈಕೊಂಡು, ತನ್ನ ಧರ್ಮಶಾಸ್ತ್ರವನ್ನು ಅನುಸರಿಸಬೇಕೆಂಬುದೇ ಆತನ ಉದ್ದೇಶವಾಗಿತ್ತು. ಯೆಹೋವನಿಗೆ ಸ್ತೋತ್ರ!