< 2 Bakonzi 4 >
1 Mwasi moko kati na basi ya bayekoli ya basakoli abondelaki Elize: — Mosali na yo, mobali na ngai, akufa. Oyebi malamu ete azalaki kotosa Yawe. Kasi moto oyo adefisaki ye niongo ayei mpo na kozwa bana na ngai mibale ya mibali mpo ete bakoma bawumbu na ye.
೧ಒಂದು ದಿನ ಪ್ರವಾದಿ ಮಂಡಳಿಯಲ್ಲಿನ ಒಬ್ಬನ ಹೆಂಡತಿಯು ಎಲೀಷನ ಹತ್ತಿರ ಬಂದು ಅವನಿಗೆ, “ನಿನ್ನ ಸೇವಕನಾದ ನನ್ನ ಗಂಡನು ಮರಣಹೊಂದಿದನು. ಅವನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿದ್ದನು ಎಂಬುದು ನಿನಗೆ ಗೊತ್ತಿದೆಯಲ್ಲಾ. ಸಾಲಕೊಟ್ಟವನು, ನನ್ನ ಇಬ್ಬರು ಮಕ್ಕಳನ್ನು ದಾಸರನ್ನಾಗಿ ಕರೆದುಕೊಂಡು ಹೋಗುವುದಕ್ಕೆ ಬಂದಿದ್ದಾನೆ” ಎಂದು ಮೊರೆಯಿಟ್ಟಳು.
2 Elize azongiselaki ye: — Ndenge nini nakoki kosunga yo? Yebisa ngai eloko oyo ozali na yango kati na ndako na yo. Azongisaki: — Mwasi mowumbu na yo azali na eloko moko te, longola kaka mwa mafuta.
೨ಎಲೀಷನು ಆಕೆಗೆ, “ನಾನು ನಿನಗೇನು ಮಾಡಬೇಕೆನ್ನುತ್ತೀ? ನಿನ್ನ ಮನೆಯಲ್ಲಿ ಏನಿರುತ್ತದೆ? ಹೇಳು ಎಂದನು.” ಅದಕ್ಕೆ ಆಕೆಯು, “ನಿನ್ನ ದಾಸಿಯ ಮನೆಯಲ್ಲಿ ಒಂದು ಮೊಗೆ ಎಣ್ಣೆ ಹೊರತಾಗಿ ಏನೂ ಇಲ್ಲ” ಎಂದು ಉತ್ತರ ಕೊಟ್ಟಳು.
3 Elize alobaki: — Kende kosenga na baninga na yo nyonso bambeki ya pamba, kosenga moke te.
೩ಆಗ ಎಲೀಷನು ಆಕೆಗೆ, “ಹೋಗಿ, ನಿನ್ನ ನೆರೆಯವರಿಂದ ಸಿಕ್ಕುವಷ್ಟು ಬರಿದಾದ ಪಾತ್ರೆಗಳನ್ನು ಕೇಳಿ ತೆಗೆದುಕೊಂಡು ಬಾ.
4 Sima, zonga na ndako na yo, kanga ekuke sima na yo elongo na bana na yo ya mibali; sopa mafuta kati na mbeki moko na moko, mpe tia pembeni mbeki oyo etondi.
೪ಅನಂತರ, ನೀನು, ನಿನ್ನ ಮಕ್ಕಳನ್ನು ಒಳಗೆ ಕರೆದುಕೊಂಡು ಬಾಗಿಲನ್ನು ಮುಚ್ಚಿ, ಎಣ್ಣೆಯನ್ನು ಪಾತ್ರೆಗಳಲ್ಲಿ ಹೊಯ್ದು ತುಂಬಿದವುಗಳನ್ನೆಲ್ಲಾ ಒಂದು ಕಡೆಯಿಡು” ಎಂದು ಹೇಳಿದನು.
5 Atikaki Elize mpe akangaki ekuke sima na ye elongo na bana na ye ya mibali. Bana na ye bazalaki kopesa ye bambeki, mpe azalaki kotondisa yango na mafuta.
೫ಆಕೆಯು ಹೋಗಿ ಮಕ್ಕಳನ್ನು ಒಳಗೆ ಕರೆದುಕೊಂಡು, ಬಾಗಿಲನ್ನು ಮುಚ್ಚಿ, ಅವರು ಮುಂದಿಟ್ಟ ಪಾತ್ರೆಗಳಲ್ಲೆಲ್ಲಾ ಎಣ್ಣೆ ಹೊಯ್ದಳು.
6 Tango bambeki nyonso etondaki, alobaki na moko kati na bana na ye ya mibali: — Pesa ngai lisusu mbeki moko. Kasi mwana yango azongiselaki ye: — Bambeki nyonso esili. Kaka na tango yango, mafuta etikaki kobima.
೬ಪಾತ್ರೆಗಳೆಲ್ಲಾ ತುಂಬಿದಾಗ ಆಕೆಯು ಮಗನಿಗೆ, “ಇನ್ನೊಂದು ಪಾತ್ರೆಯನ್ನು ತಂದಿಡು” ಎನ್ನಲು ಅವನು, “ಪಾತ್ರೆಗಳೆಲ್ಲ ಮುಗಿದು ಹೋದವು” ಎಂದು ಉತ್ತರಕೊಟ್ಟನು. ಕೂಡಲೇ ಎಣ್ಣೆ ಉಕ್ಕುವುದು ನಿಂತುಹೋಯಿತು.
7 Mwasi yango akendeki koyebisa moto na Nzambe. Mpe moto na Nzambe alobaki na ye: — Kende, teka mafuta yango mpe futa niongo na yo; bongo, yo elongo na bana na yo ya mibali, bokobika na oyo ekotikala.
೭ತರುವಾಯ ಆಕೆಯು ದೇವರ ಮನುಷ್ಯನ ಹತ್ತಿರ ಬಂದು ನಡೆದದ್ದನ್ನೆಲ್ಲಾ ತಿಳಿಸಿದಳು. ಅವನು ಆಕೆಗೆ, “ಹೋಗಿ, ಎಣ್ಣೆಯನ್ನು ಮಾರಿ ಸಾಲತೀರಿಸು. ಉಳಿದ ಹಣದಿಂದ ನೀನೂ, ನಿನ್ನ ಮಕ್ಕಳು ಜೀವನಮಾಡಿರಿ” ಎಂದನು.
8 Mokolo moko, Elize akendeki na Sunemi. Mpe kuna, mwasi moko ya bomengo atungisaki ye mpo na kosenga na ye ete andima kolia na ndako na ye. Boye, tango nyonso Elize azalaki kolekela na Sunami, azalaki kotelema na ndako ya mwasi yango mpo na kolia.
೮ಒಂದು ಸಾರಿ ಎಲೀಷನು ಶೂನೇಮಿಗೆ ಹೋದನು. ಅಲ್ಲಿ ಒಬ್ಬ ಕುಲೀನ ಸ್ತ್ರೀಯು ಅವನನ್ನು ತನ್ನ ಮನೆಯಲ್ಲಿ ಊಟಮಾಡಬೇಕೆಂದು ಒತ್ತಾಯಪಡಿಸಿದಳು. ಅಂದಿನಿಂದ ಅವನು ಆ ಮಾರ್ಗದಿಂದ ಹೋಗುವಾಗೆಲ್ಲಾ ಆ ಮನೆಯಲ್ಲೇ ಊಟಮಾಡುತ್ತಿದ್ದನು.
9 Mwasi yango alobaki na mobali na ye: « Nayebi ete moto oyo ayaka mbala mingi epai na biso azali mobulami ya Nzambe.
೯ಆ ಸ್ತ್ರೀಯು ತನ್ನ ಗಂಡನಿಗೆ, “ಯಾವಾಗಲೂ ಈ ದಾರಿಯಲ್ಲಿ ಹೋಗುತ್ತಾ ಬರುತ್ತಾ ಇರುವ ಆ ಮನುಷ್ಯನು ಪರಿಶುದ್ಧನೂ, ದೇವರ ಮನುಷ್ಯನೂ ಆಗಿರುತ್ತಾನೆ ಎಂದು ನನಗೆ ಗೊತ್ತಾಯಿತು.
10 Nabondeli yo, tika ete tobongisela ye shambre ya moke na likolo ya ndako mpe totia kati na yango mbeto, mesa, kiti mpe mwinda. Boye, tango nyonso akoya epai na biso, akoki kovanda kuna. »
೧೦ಆದುದರಿಂದ ನಾವು ಅವನಿಗಾಗಿ ಮಾಳಿಗೆಯ ಮೇಲೆ ಒಂದು ಸಣ್ಣ ಕೋಣೆಯನ್ನು ಕಟ್ಟಿಸಿ ಅದರಲ್ಲಿ ಒಂದು ಮಂಚ, ಮೇಜು, ಕುರ್ಚಿ, ದೀಪಸ್ತಂಭ ಇವುಗಳನ್ನು ಇಡೋಣ. ಅವನು ಇಲ್ಲಿ ಬಂದಾಗಲೆಲ್ಲಾ ಅದರಲ್ಲಿ ಹೋಗಿ ಉಳಿದುಕೊಳ್ಳಲಿ” ಎಂದು ಹೇಳಿದಳು.
11 Mokolo moko, Elize ayaki na Sunami, amataki na shambre na ye mpe alalaki kuna.
೧೧ಒಂದು ದಿನ ಎಲೀಷನು ಅಲ್ಲಿಗೆ ಬಂದು ಆ ಕೋಣೆಯೊಳಗೆ ಪ್ರವೇಶಿಸಿ ದಣಿವಾರಿಸಿಕೊಂಡನು.
12 Bongo alobaki na mosali na ye, Geazi: « Benga mwasi oyo ya Sunami. » Geazi abengaki mwasi ya Sunami, mpe mwasi yango ayaki kotelema liboso ya Elize.
೧೨ಅನಂತರ, “ಆ ಶೂನೇಮ್ಯಳನ್ನು ಕರೆಯಿರಿ” ಎಂದು ತನ್ನ ಸೇವಕನಾದ ಗೇಹಜಿಗೆ ಆಜ್ಞಾಪಿಸಿದನು. ಅವನು ಹೋಗಿ ಆಕೆಯನ್ನು ಕರೆಯಲು, ಆಕೆಯು ಬಂದು ಅವನ ಮುಂದೆ ನಿಂತಳು.
13 Elize alobaki na Geazi: — Loba na ye: « Omitungisi mingi mpo na biso. Eloko nini tokoki sik’oyo kosalela yo? Tolobela yo epai ya mokonzi to epai ya mokonzi ya basoda? » Mwasi ya Sunami azongisaki: — Navandaka na kimia kati na bato na ngai.
೧೩ಆಗ ಎಲೀಷನು ಗೇಹಜಿಗೆ “ನೀನು ಆಕೆಗೆ ಹೇಳು, ‘ನೀನು ಕಷ್ಟಪಟ್ಟು ನಮಗೆ ಇಷ್ಟೆಲ್ಲಾ ಉಪಕಾರ ಮಾಡಿರುವೆ ನಾನು ನಿನಗೆ ಯಾವ ಪ್ರತ್ಯುಪಕಾರ ಮಾಡಲಿ? ನಿನಗೋಸ್ಕರ ಅರಸನ ಬಳಿ ಅಥವಾ ಸೇನಾಧಿಪತಿಯ ಬಳಿಯಾಗಲಿ ಮಾತನಾಡಬೇಕೋ’ ಎಂದು ಕೇಳಲು” ಆಕೆಯು, “ನಾನು ಸ್ವಕುಲದವರ ಮಧ್ಯದಲ್ಲಿ ವಾಸವಾಗಿದ್ದೇನೆ” ಎಂದು ಉತ್ತರಕೊಟ್ಟಳು.
14 Elize atunaki mosali na ye, Geazi: — Eloko nini tokoki kosala mpo na ye? Geazi azongisaki: — Azali na mwana te, mpe mobali na ye azali mobange.
೧೪ಆ ಮೇಲೆ ಎಲೀಷನು ಗೇಹಜಿಗೆ, “ನಾವು ಆಕೆಗೆ ಯಾವ ಉಪಕಾರವನ್ನು ಮಾಡಬಹುದು” ಎಂದು ಕೇಳಲು ಅವನು, “ಆಕೆಗೆ ಮಗನಿಲ್ಲ, ಗಂಡನು ಮುದುಕನಾಗಿದ್ದಾನೆ” ಎಂದನು.
15 Elize alobaki: — Benga ye! Geazi abengaki ye, mpe ayaki kotelema na ekuke.
೧೫ಇದನ್ನು ಕೇಳಿ ಎಲೀಷನು, “ಆ ಸ್ತ್ರೀಯನ್ನು ಕರೆ” ಎಂದು ಆಜ್ಞಾಪಿಸಿದನು. ಅವನು ಹೋಗಿ ಕರೆಯಲು, ಆಕೆಯು ಬಂದು ಬಾಗಿಲಿನ ಹತ್ತಿರ ನಿಂತಳು.
16 Elize alobaki: — Na mobu oyo ekoya, na eleko oyo, maboko na yo ekosimba mwana mobali. Mwasi ya Sunami agangaki: — Te, nkolo na ngai, moto na Nzambe, kopesa na ngai mwasi mosali na yo elikya ya lokuta te!
೧೬ಎಲೀಷನು ಆಕೆಗೆ, “ನೀನು ಬರುವ ವರ್ಷ, ಇದೇ ಕಾಲದಲ್ಲಿ, ಒಬ್ಬ ಮಗನನ್ನು ನಿನ್ನ ಮಡಿಲಲ್ಲಿ ಹೊಂದಿರುವಿ” ಎಂದು ಹೇಳಿದನು. ಅದಕ್ಕೆ ಆಕೆಯು, “ದೇವರ ಮನುಷ್ಯನೇ, ಒಡೆಯನೇ, ಹೀಗೆ ನಿನ್ನ ದಾಸಿಗೆ ಸುಳ್ಳನ್ನು ಹೇಳಬೇಡ” ಎಂದು ನುಡಿದಳು.
17 Nzokande, mwasi ya Sunami akomaki na zemi. Mpe na mobu oyo elandaki, na eleko yango kaka, abotaki mwana mobali, ndenge kaka Elize alobaki na ye.
೧೭ಆದರೆ ಆ ಸ್ತ್ರೀಯು ಗರ್ಭಿಣಿಯಾಗಿ ಎಲೀಷನು ಹೇಳಿದಂತೆ, ಮುಂದಿನ ವರ್ಷ ಅದೇ ಕಾಲದಲ್ಲಿ, ಒಬ್ಬ ಮಗನನ್ನು ಹೆತ್ತಳು.
18 Mwana akolaki. Mokolo moko, mwana akendeki epai ya tata na ye, oyo azalaki elongo na babuki mbuma.
೧೮ಹುಡುಗನು ದೊಡ್ಡವನಾದ ಮೇಲೆ ಒಂದು ದಿನ, ಹೊಲದಲ್ಲಿ ಬೆಳೆ ಕೊಯ್ಯುವವರ ಸಂಗಡ ಇದ್ದ ತನ್ನ ತಂದೆಯ ಬಳಿಗೆ ಹೋದನು.
19 Alobaki na tata na ye: — Moto pasi! Moto pasi! Tata na ye alobaki na mosali moko: — Zongisa ye epai ya mama na ye!
೧೯ಅಲ್ಲಿದ್ದಾಗ ಅವನು ಪಕ್ಕನೆ, “ಅಪ್ಪಾ, ನನ್ನ ತಲೆ, ನನ್ನ ತಲೆ” ಎಂದು ಕೂಗಲು, ತಂದೆಯು ಒಬ್ಬ ಸೇವಕನನ್ನು ಕರೆದು ಅವನಿಗೆ, “ಇವನನ್ನು ತಾಯಿಯ ಹತ್ತಿರ ಕರೆದುಕೊಂಡು ಹೋಗು” ಎಂದು ಆಜ್ಞಾಪಿಸಿದನು.
20 Mosali amemaki ye mpe akomisaki ye epai ya mama na ye. Mwana mobali avandaki na makolo ya mama na ye kino na midi mpe, na sima, akufaki.
೨೦ಸೇವಕನು ಹುಡುಗನನ್ನು ಅವನ ತಾಯಿಗೆ ತಂದು ಒಪ್ಪಿಸಿದನು. ಹುಡುಗನು ಮಧ್ಯಾಹ್ನದವರೆಗೂ ತಾಯಿಯ ತೊಡೆಯ ಮೇಲೆಯೇ ಇದ್ದು ಅನಂತರ ಸತ್ತನು.
21 Mama na ye amataki na shambre ya mosakoli, alalisaki ye na mbeto ya moto na Nzambe, akangaki ekuke mpe abimaki.
೨೧ಕೂಡಲೆ ಆಕೆಯು ಅವನನ್ನು ದೇವರ ಮನುಷ್ಯನ ಕೋಣೆಗೆ ತೆಗೆದುಕೊಂಡು ಹೋಗಿ ಅವನ ಮಂಚದ ಮೇಲೆ ಮಗನನ್ನು ಮಲಗಿಸಿ ಬಾಗಿಲು ಮುಚ್ಚಿದಳು.
22 Bongo abengaki mobali na ye mpe alobaki na ye: — Nabondeli yo, tindela ngai elenge moko kati na basali mpe ane moko ya mwasi, mpo ete nakende noki epai ya moto na Nzambe mpe nazonga mbala moko.
೨೨ಗಂಡನನ್ನು ಕರೆಯಿಸಿ ಅವನಿಗೆ, “ದಯವಿಟ್ಟು, ನನಗೋಸ್ಕರ ಒಬ್ಬ ಸೇವಕನನ್ನೂ, ಒಂದು ಕತ್ತೆಯನ್ನೂ ಕಳುಹಿಸು. ನಾನು ಬೇಗನೆ ದೇವರ ಮನುಷ್ಯನ ಬಳಿಗೆ ಹೋಗಿಬರುತ್ತೇನೆ” ಎಂದು ಹೇಳಿದಳು.
23 Mobali na ye atunaki: — Mpo na nini olingi kokende epai na ye lelo? Lelo ezali ebandeli ya sanza te! Ezali mpe mokolo ya Saba te! Azongisaki: — Komitungisa te! Nyonso ezali malamu.
೨೩ಅದಕ್ಕೆ ಅವನು, “ಇದು ಅಮಾವಾಸ್ಯೆಯಲ್ಲ, ಸಬ್ಬತ್ತಲ್ಲ. ಈ ಹೊತ್ತು ಯಾಕೆ ಹೋಗುತ್ತೀ?” ಎಂದನು. ಅದಕ್ಕೆ ಆಕೆಯು, “ಎಲ್ಲವು ಸರಿಯೇ” ಎಂದು ಹೇಳಿದಳು.
24 Mwasi ya Sunami abongisaki ane mpe alobaki na elenge mosali na ye: « Tokeyi! Tambolisa ane; kotelema na nzela te soki nalobi na yo te. »
೨೪ನಂತರ ಆಕೆಯು ಕತ್ತೆಗೆ ತಡಿ ಹಾಕಿಸಿ, ಅದರ ಮೇಲೆ ಕುಳಿತುಕೊಂಡು ಸೇವಕನಿಗೆ, “ಬೇಗ ಓಡಿಸು, ನಾನು ಅಪ್ಪಣೆಕೊಡುವವರೆಗೆ ನಿಲ್ಲಿಸಬೇಡ” ಎಂದು ಆಜ್ಞಾಪಿಸಿದಳು.
25 Boye, akendeki mpe akomaki na ngomba Karimeli epai wapi moto na Nzambe azalaki kovanda. Tango Elize amonaki ye na mosika, alobaki na mosali na ye, Geazi: — Tala! Ezali mwasi ya Sunami!
೨೫ಹೀಗೆ ಆಕೆಯು ಪ್ರಯಾಣ ಮಾಡಿ ಕರ್ಮೆಲ್ ಬೆಟ್ಟದ ಮೇಲಿದ್ದ ದೇವರ ಮನುಷ್ಯನ ಬಳಿಗೆ ಬಂದಳು. ದೇವರ ಮನುಷ್ಯನು ಆಕೆಯನ್ನು ದೂರದಿಂದಲೇ ಕಂಡು ತನ್ನ ಸೇವಕನಾದ ಗೇಹಜಿಗೆ, “ಅಗೋ, ಅಲ್ಲಿ ಶೂನೇಮ್ಯಳು ಬರುತ್ತಿದ್ದಾಳೆ”
26 Nabondeli yo, pota mbangu sik’oyo mpo na kokutana na ye, mpe tuna ye: « Boni, kimia ezali? Ozali malamu? Mobali na yo azali malamu? Mwana na yo azali malamu? » Azongisaki: — Nyonso ezali malamu.
೨೬ನೀನು, ದಯವಿಟ್ಟು ಓಡಿಹೋಗಿ ಆಕೆಯನ್ನು ಎದುರುಗೊಂಡು, “ನಿನಗೂ, ನಿನ್ನ ಗಂಡನಿಗೂ, ಮಗನಿಗೂ ಕ್ಷೇಮವೋ?” ಎಂದು ವಿಚಾರಿಸು ಎಂಬುದಾಗಿ ಆಜ್ಞಾಪಿಸಿ ಕಳುಹಿಸಿದನು. ಆಕೆಯು ಆ ಸೇವಕನಿಗೆ, “ಕ್ಷೇಮ” ಎಂದು ಉತ್ತರ ಕೊಟ್ಟು,
27 Boye akobaki nzela na ye kino akomaki na ngomba, epai ya moto na Nzambe. Mpe amibwakaki na makolo na ye. Geazi apusanaki mpo na kolongola ye na makolo ya Elize, kasi moto na Nzambe alobaki: — Tika ye bongo! Azali na pasi makasi kati na motema na ye, kasi Yawe abombeli ngai yango mpe atalisi ngai te tina na yango.
೨೭ಬೆಟ್ಟದ ಮೇಲಿದ್ದ ದೇವರ ಮನುಷ್ಯನ ಬಳಿಗೆ ಬಂದು, ಅವನ ಪಾದಗಳನ್ನು ಹಿಡಿದಳು. ಗೇಹಜಿಯು ಆಕೆಯನ್ನು ದೂರ ಮಾಡುವುದಕ್ಕಾಗಿ ಹತ್ತಿರ ಬರಲು, ದೇವರ ಮನುಷ್ಯನು ಅವನಿಗೆ, “ಬಿಡು, ಆಕೆಯ ಮನಸ್ಸಿನಲ್ಲಿ ಬಹು ದುಃಖವಿರುವ ಹಾಗೆ ತೋರುತ್ತದೆ. ಯೆಹೋವನು ಆಕೆಯ ದುಃಖವನ್ನು ನನಗೆ ಪ್ರಕಟಿಸದೆ, ಮರೆಮಾಡಿದ್ದಾನೆ” ಎಂದು ಹೇಳಿದನು.
28 Mwasi ya Sunami alobaki: — Boni, nasengaki mwana epai ya nkolo na ngai? Te! Kutu, nalobaki na yo: « Kopesa ngai elikya ya lokuta te! »
೨೮ಆಕೆಯು ದೇವರ ಮನುಷ್ಯನಿಗೆ, “ನನಗೆ ಮಗನು ಬೇಕೆಂದು ಸ್ವಾಮಿಯಾದ ನಿನ್ನನ್ನು ನಾನು ಬೇಡಿಕೊಂಡೆನೇ? ‘ವಂಚಿಸಬಾರದೆಂದು’ ಮೊರೆಯಿಟ್ಟೆನಲ್ಲವೇ?” ಎಂದಳು.
29 Elize alobaki na Geazi: — Lata mokaba na yo, kamata nzete na ngai na loboko na yo mpe kende. Soki okutani na moto na nzela, kopesa ye mbote te. Mpe soki moto apesi yo mbote, kozongisa te. Okotia nzete na ngai na elongi ya mwana mobali.
೨೯ಆಗ ಎಲೀಷನು ಗೇಹಜಿಗೆ, “ನೀನು ನಡುಕಟ್ಟಿಕೊಂಡು, ನನ್ನ ಕೋಲನ್ನು ತೆಗೆದುಕೊಂಡು ಹೋಗಿ ಹುಡುಗನ ಮುಖದ ಮೇಲಿಡು, ಹೋಗುವಾಗ ದಾರಿಯಲ್ಲಿ ಯಾರನ್ನೂ ವಂದಿಸಬೇಡ, ಯಾರ ಅವರ ವಂದನೆಯನ್ನು ಸ್ವೀಕರಿಸಬೇಡ” ಎಂದು ಹೇಳಿ ಕಳುಹಿಸಿದನು.
30 Kasi mama ya mwana alobaki: — Na Kombo na Yawe mpe na kombo na yo, nakotika yo te. Boye Elize atelemaki mpe alandaki mwasi ya Sunami.
೩೦ಆದರೂ ಹುಡುಗನ ತಾಯಿ, “ಯೆಹೋವನಾಣೆ, ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಟ್ಟುಹೋಗುವುದಿಲ್ಲ” ಎಂದು ಹೇಳಿದ್ದರಿಂದ ಎಲೀಷನು ಆಕೆಯ ಜೊತೆಯಲ್ಲಿ ಹೊರಟನು.
31 Geazi akendeki liboso na bango mpe atiaki nzete na elongi ya mwana mobali, kasi ata eloko moko te esalemaki, ezala mongongo to koningana. Geazi azongaki mpo na kokutana na Elize mpe alobaki na ye: — Mwana alamuki te.
೩೧ಅವರ ಮುಂದಾಗಿ ಹೋದ ಗೇಹಜಿಯು ಕೋಲನ್ನು ಹುಡುಗನ ಮುಖದ ಮೇಲಿಟ್ಟರೂ ಹುಡುಗನು ಮಾತನಾಡಲಿಲ್ಲ, ಎಚ್ಚರಗೊಳ್ಳಲೂ ಇಲ್ಲ. ಆದುದರಿಂದ ಅವನು ಹಿಂದಿರುಗಿ ಹೋಗಿ ಎಲೀಷನನ್ನು ಎದುರುಗೊಂಡು ಅವನಿಗೆ, “ಹುಡುಗನು ಎಚ್ಚರವಾಗಲಿಲ್ಲ” ಎಂದನು.
32 Tango Elize akomaki na ndako, akutaki ebembe ya mwana mobali elali na mbeto na ye.
೩೨ಎಲೀಷನು ಆ ಮನೆಯನ್ನು ತಲುಪಿದಾಗ, ಸತ್ತ ಹುಡುಗನನ್ನು ತನ್ನ ಮಂಚದ ಮೇಲೆ ಮಲಗಿಸಿರುವುದನ್ನು ಕಂಡನು.
33 Elize akotaki, amikangelaki na shambre elongo na mwana mobali, mpe asambelaki Yawe.
೩೩ಎಲೀಷನು ಒಳಗೆ ಹೋಗಿ ಕೋಣೆಯ ಬಾಗಿಲನ್ನು ಮುಚ್ಚಿಕೊಂಡು ಯೆಹೋವನನ್ನು ಪ್ರಾರ್ಥಿಸಿದನು.
34 Bongo Elize amataki na mbeto mpe alalelaki mwana mobali, atutisaki monoko na ye na monoko ya mwana, miso na ye na miso ya mwana, mpe maboko na ye na maboko ya mwana. Lokola amitandaki bongo na likolo ya mwana mobali, nzoto ya mwana mobali ekomaki moto.
೩೪ಅನಂತರ ಹುಡುಗನ ಮೇಲೆ ಬೋರಲುಬಿದ್ದು ತನ್ನ ಬಾಯಿ, ಕಣ್ಣು, ಕೈಗಳನ್ನು ಅವನ ಬಾಯಿ, ಕಣ್ಣು, ಕೈಗಳಿಗೆ ಮುಟ್ಟಿಸಿದ್ದರಿಂದ ಹುಡುಗನ ದೇಹವು ಬೆಚ್ಚಗಾಯಿತು.
35 Elize alongwaki, atambolaki na bangambo nyonso ya shambre; bongo amataki lisusu na mbeto mpe amitandaki na likolo ya mwana. Mbala moko, mwana akosolaki mbala sambo mpe afungolaki miso.
೩೫ಆಮೇಲೆ ಹುಡುಗನನ್ನು ಬಿಟ್ಟು ಎದ್ದು ಮನೆಯಲ್ಲಿ ತುಸುಹೊತ್ತು ಅತ್ತಿತ್ತ ಅಡ್ಡಾಡಿ ತಿರುಗಿ ಅವನ ಮೇಲೆ ಬೋರಲು ಬೀಳಲು ಹುಡುಗನು ಏಳು ಸಾರಿ ಸೀನಿ ಕಣ್ದೆರೆದನು.
36 Elize abengaki Geazi mpe alobaki na ye: — Benga mwasi ya Sunami! Geazi abengaki ye. Tango ayaki epai ya Elize, Elize alobaki: — Zwa mwana na yo!
೩೬ಆಗ ಎಲೀಷನು ಗೇಹಜಿಗೆ, “ಶೂನೇಮ್ಯಳನ್ನು ಕರೆ” ಎಂದು ಆಜ್ಞಾಪಿಸಲು ಅವನು ಆಕೆಯನ್ನು ಕರೆದನು. ಆಕೆಯು ಬಂದಾಗ, ಎಲೀಷನು ಆಕೆಗೆ, “ನಿನ್ನ ಮಗನನ್ನು ತೆಗೆದುಕೋ” ಎಂದು ಹೇಳಿದನು.
37 Mwasi ya Sunami apusanaki, akweyaki na makolo ya Elize mpe agumbamaki kino na se; bongo azwaki mwana na ye mpe abimaki.
೩೭ಆಕೆಯು ಹತ್ತಿರ ಬಂದು, ಅವನ ಪಾದಗಳಿಗೆ ಬಿದ್ದು ಸಾಷ್ಟಾಂಗನಮಸ್ಕಾರ ಮಾಡಿ, ಮಗನನ್ನು ಕರೆದುಕೊಂಡು ಹೋದಳು.
38 Elize azongaki na Giligali. Nzokande etuka yango ezalaki kati na nzala makasi. Wana bayekoli ya basakoli bavandaki na mayangani elongo na Elize, alobaki na mosali na ye: « Tia nzungu ya monene na moto mpe lamba elubu mpo na basakoli oyo. »
೩೮ಎಲೀಷನು ತಿರುಗಿ ಗಿಲ್ಗಾಲಿಗೆ ಹೋದನು. ಆಗ ದೇಶದಲ್ಲಿ ಬರವಿದ್ದಿತು. ಪ್ರವಾದಿಮಂಡಳಿಯವರು ತನ್ನ ಮುಂದೆ ಒಟ್ಟಿಗೆ ಸೇರಿ ಬರಲು ಅವನು ತನ್ನ ಸೇವಕನಿಗೆ, “ದೊಡ್ಡ ಪಾತ್ರೆಯನ್ನು ತೆಗೆದುಕೊಂಡು ಇವರಿಗೋಸ್ಕರ ಅಡಿಗೆ ಮಾಡು” ಎಂದು ಆಜ್ಞಾಪಿಸಿದನು.
39 Moko kati na bango akendeki na bilanga mpo na kobuka ndunda, mpe amonaki nzete ya vino ya zamba. Abukaki na nzete yango ndambo ya bakolokente mpe atondisaki yango na elamba na ye. Tango azongaki, akataki yango mike-mike mpe atiaki yango kati na nzungu ya elubu; moto moko te ayebaki soki ezali nini.
೩೯ಒಬ್ಬನು ಯಾವುದಾದರೊಂದು ತರಕಾರಿ ಸಿಕ್ಕೀತೆಂದು ಕಾಡಿಗೆ ಹೋಗಿ ಅಲ್ಲಿ ಒಂದು ಕಾಡುಬಳ್ಳಿಯನ್ನು ಕಂಡು ಅದನ್ನು ಕಿತ್ತು ಉಡಿಯಲ್ಲಿ ತುಂಬಿಕೊಂಡು, ಅದರ ಕಾಯಿಗಳನ್ನು ಕಿತ್ತುಕೊಂಡು ಬಂದು ತುಂಡು ತುಂಡು ಮಾಡಿ ಆ ಪಾತ್ರೆಯೊಳಗೆ ಹಾಕಿದನು. ಅದು ಎಂಥ ಕಾಯಿಯೆಂಬುದು ಯಾರಿಗೂ ಗೊತ್ತಿರಲಿಲ್ಲ.
40 Bakabolelaki bato elubu. Tango kaka babandaki kolia yango, bagangaki: — Moto na Nzambe, kufa ezali kati na nzungu oyo! Mpe bakokaki lisusu te kolia yango.
೪೦ಜನರಿಗೆ ಅದನ್ನೇ ಊಟಕ್ಕೆ ಬಡಿಸಿದರು. ಅವರು ಅದನ್ನು ಬಾಯೊಳಗೆ ಹಾಕಿದ ಕೂಡಲೆ ತಿನ್ನಲಾರದೆ, “ದೇವರ ಮನುಷ್ಯನೇ ಪಾತ್ರೆಯಲ್ಲಿ ವಿಷ” ಎಂದು ಕೂಗಿದರು. ಅದನ್ನು ತಿನ್ನಲಾರದೆ ಹೋದರು.
41 Elize alobaki: — Bomemela ngai farine! Atiaki farine kati na nzungu mpe alobaki: — Bokabolela yango bato mpo ete balia. Mpe kati na elubu oyo ezalaki kati na nzungu, ezalaki lisusu na eloko moko te ya mabe.
೪೧ಆಗ ಎಲೀಷನು, “ಹಿಟ್ಟನ್ನು ತಂದು ಕೊಡಿರಿ” ಎಂದು ಹೇಳಿದನು. ಅವರು ತಂದಾಗ, ಅದನ್ನು ಆ ಪಾತ್ರೆಯೊಳಗೆ ಹಾಕಿ, “ಈಗ ಇದನ್ನು ಬಡಿಸಬಹುದು. ಜನರು ಇದನ್ನು ಊಟಮಾಡಲಿ” ಎಂದನು. ಕೂಡಲೇ ಪಾತ್ರೆಯಲ್ಲಿದ್ದ ವಿಷವೆಲ್ಲಾ ಹೋಯಿತು.
42 Moto moko awutaki na Bala-Shalisha, amemelaki moto na Nzambe mapa tuku mibale ya orje oyo ewutaki na bambuma ya liboso ya elanga, elongo na saki moko ya bambuma ya ble. Elize alobaki na mosali na ye: — Pesa yango na bato mpo ete balia!
೪೨ಒಂದು ದಿನ ಬಾಳ್ ಷಾಲಿಷಾ ಊರಿನ ಒಬ್ಬ ಮನುಷ್ಯನು ಇಪ್ಪತ್ತು ಜವೆಗೋದಿಯ ರೊಟ್ಟಿಗಳನ್ನೂ, ಒಂದು ಚೀಲದ ತುಂಬಾ ಹಸೀ ತೆನೆಗಳನ್ನೂ, ಪ್ರಥಮಫಲದ ಕಾಣಿಕೆಯಾಗಿ ತೆಗೆದುಕೊಂಡು ಬಂದು ದೇವರ ಮನುಷ್ಯನಿಗೆ ಸಮರ್ಪಿಸಿದನು. ಎಲೀಷನು ತನ್ನ ಸೇವಕನಿಗೆ, “ಇದನ್ನು ಜನರಿಗೆ ಕೊಡು ಅವರು ಊಟಮಾಡಲಿ” ಎಂದು ಹೇಳಿದನು.
43 Mosali na ye atunaki: — Nakokoka ndenge nini kokabola mapa oyo na bato nkama moko? Elize alobaki lisusu: — Kabolela yango bato nyonso mpo ete balia, pamba te tala Liloba oyo Yawe alobi: « Bakolia, bakotonda mpe bakotika mosusu. »
೪೩ಅದಕ್ಕೆ ಅವನು, “ಇಷ್ಟನ್ನು ನೂರು ಮಂದಿಗೆ ಹೇಗೆ ಬಡಿಸಲಿ” ಎಂದನು. ಎಲೀಷನು ಅವನಿಗೆ, “ಇರಲಿ, ಕೊಡು. ಅವರು ಊಟಮಾಡಲಿ. ಅವರು ಅದನ್ನು ಊಟಮಾಡಿ ತೃಪ್ತರಾಗಿ ಇನ್ನೂ ಉಳಿಸಿಕೊಳ್ಳುವರೆಂದು ಯೆಹೋವನು ಎನ್ನುತ್ತಾನೆ” ಎಂದು ಹೇಳಿದನು.
44 Boye mosali akabolelaki bango mapa yango. Baliaki mpe batikaki mosusu, kolanda Liloba na Yawe.
೪೪ಸೇವಕರು ಬಡಿಸಲು, ಯೆಹೋವನ ಮಾತಿನಂತೆ ಜನರು ಊಟಮಾಡಿ, ತೃಪ್ತರಾಗಿ, ಇನ್ನೂ ಉಳಿಸಿಕೊಂಡರು.